ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಅವ್ಯವಹಾರ ; ತನಿಖೆಯು ಪಾರದರ್ಶಕವಾಗಿಸಲು ಆಗ್ರಹ

Saturday, March 20th, 2021
Dharmika Maha Sangha

ಉಡುಪಿ  : ಸರಕಾರವು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಅವ್ಯವಹಾರಗಳ ಬಗ್ಗೆ ಕೂಡಲೇ ತನಿಖೆ ಮಾಡಲು ನೀಡಿದ ಆದೇಶಕ್ಕೆ ದೇವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘವು ಅಭಿನಂದನೆಗಳನ್ನು ವ್ಯಕ್ತಪಡಿಸುತ್ತದೆ. ಆದರೆ ಕೇವಲ ಒಂದು ದಿನದ ತನಿಖೆಯಿಂದ ಇಲ್ಲಿಯವರೆಗೆ ನಡೆದ ಎಲ್ಲಾ ಅವ್ಯವಹಾರಗಳ ಪೂರ್ಣ ತನಿಖೆ ಮಾಡಲು ಸಾಧ್ಯವಾಗುವುದಿಲ್ಲ. ಆದರೂ ಮಾನ್ಯ ಸಚಿವರು ಕೂಡಲೇ ಸಕಾರಾತ್ಮಕ ಕೃತಿ ಮಾಡಿದ್ದು ನಿಜವಾಗಿ ಸ್ತುತ್ಯಾರ್ಹವಾಗಿದ್ದು, ಈ ಬಗ್ಗೆ ಮಾನ್ಯ ಧಾರ್ಮಿಕ ದತ್ತಿ ಸಚಿವರಾದ ಶ್ರೀ ಕೋಟಾ ಶ್ರೀನಿವಾಸ ಪೂಜಾರಿಯವರಿಗೂ ನಾವು ಅಭಿನಂದನೆಯನ್ನು ಸಲ್ಲಿಸುತ್ತೇವೆ […]

ರಾಜ್ಯದ ಶ್ರೀಮಂತ ದೇಗುಲಗಳಲ್ಲಿ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ ನಂಬರ್ ಒನ್ ..!

Thursday, June 28th, 2018
subramanya

ಮಂಗಳೂರು: ರಾಜ್ಯದ ಶ್ರೀಮಂತ ದೇಗುಲಗಳ ಪಟ್ಟಿ ಬಿಡುಗಡೆಯಾಗಿದ್ದು, ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ ನಂಬರ್ ಒನ್ ಸ್ಥಾನದಲ್ಲಿದೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಎರಡನೇ ಸ್ಥಾನದಲ್ಲಿದ್ದು, ಮೈಸೂರಿನ ಚಾಮುಂಡೇಶ್ವರಿ ದೇವಾಲಯ ತೃತೀಯ ಸ್ಥಾನದಲ್ಲಿದೆ. ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ನಾಲ್ಕನೇ ಸ್ಥಾನದಲ್ಲಿದೆ. ಕರಾವಳಿ ಜಿಲ್ಲೆಗಳ ದೇಗುಲಗಳು ಮೊದಲ ಸ್ಥಾನದಲ್ಲಿದ್ದು, ಮುಜರಾಯಿ ಇಲಾಖೆ ಈ ಕ್ರೆಡಿಟ್ ಕೊಟ್ಟಿದೆ.