ಸಂಘಟನಾತ್ಮಕ ಕರಾವಳಿ ಜಿಲ್ಲೆಗೆ ಪ್ರಮುಖ ಖಾತೆ ಬಿಜೆಪಿ ಹರ್ಷ : ಸುದರ್ಶನ ಎಂ.

Saturday, August 7th, 2021
Sudarshana-M

ಮಂಗಳೂರು  : ಬಿಜೆಪಿ ಕಾರ್ಯಕರ್ತರ ಪಾರ್ಟಿ. ಪ್ರಾಮಾಣಿಕತೆ, ನಿಷ್ಠೆಯಿಂದ ಕಾರ್ಯ ಮಾಡುವವರನ್ನು ಯಾವತ್ತೂ ಬಿಜೆಪಿ ಕೈ ಬಿಡುವುದಿಲ್ಲ. ರಾಜ್ಯ ಸರ್ಕಾರಕ್ಕೆ 29 ಶಾಸಕರುಗಳನ್ನು ನೀಡಿದ ಕರಾವಳಿ ಜಿಲ್ಲೆಗೆ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೂಕ್ತ ಸ್ಥಾನಮಾನ ನೀಡಿದ್ದು ದಕ್ಷಿಣ ಕನ್ನಡ ಬಿಜೆಪಿ ಕಾರ್ಯಕರ್ತರಿಗೆ ಹರ್ಷ ತಂದಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರು ಸುದರ್ಶನ ಎಂ. ತಿಳಿಸಿದರು. ಎಸ್. ಅಂಗಾರರವರಿಗೆ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಖಾತೆ, ಕೋಟಾ ಶ್ರೀನಿವಾಸ ಪೂಜಾರಿಯವರಿಗೆ ಸಮಾಜಕಲ್ಯಾಣ ಮತ್ತು ಹಿಂದುಳಿದ ವರ್ಗ ಅಭಿವೃದ್ದಿ ಖಾತೆ, ವಿ.ಸುನಿಲ್ […]

ಜಿಲ್ಲಾ ಉಸ್ತುವಾರಿ ಸಚಿವರಿಂದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಟರ್ಪಾಲ್ ಗಳ ವಿತರಣೆ

Saturday, July 3rd, 2021
Shillekyata

ಮಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು, ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರು ಜು.3ರ ಶನಿವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ 20 ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳಿಗೆ ಟರ್ಪಾಲ್ ಗಳನ್ನು  ವಿತರಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎದುರಾದ ತೌಖ್ಯ ಚಂಡಮಾರುತದ ಪ್ರಭಾವದಿಂದಾಗಿ ಅಲೆಮಾರಿ ಶಿಳ್ಳಕ್ಯಾತ ಕುಟುಂಬದ ಗುಡಿಸಲುಗಳ ಟರ್ಪಾಲ್ ಗಳು ತೀವ್ರವಾಗಿ ಹಾನಿಯಾಗಿದ್ದವು. ಜಿಲ್ಲೆಯಲ್ಲಿ ಮುಂಗಾರು ಮಳೆಯೂ ಪ್ರಾರಂಭವಾಗಿರುವ ಹಿನ್ನಲೆಯಲ್ಲಿ ಈ ಸಮುದಾಯದವರಿಗೆ 20*30 […]

ಸಲಹೆ, ಸೂಚನೆ ಹಾಗೂ ಚಿಕಿತ್ಸೆಗೆ ಇ-ಸಂಜೀವಿನಿ ಆ್ಯಪ್ ಬಳಸಿ ಜಿಲ್ಲಾ ಉಸ್ತುವಾರಿ ಸಚಿವ – ಕೋಟಾ ಶ್ರೀನಿವಾಸ ಪೂಜಾರಿ

Tuesday, September 29th, 2020
esanjeevini

ಮಂಗಳೂರು :  ಸಾಮಾನ್ಯ ಕೆಮ್ಮು, ನೆಗಡಿ, ಜ್ವರ ಅಲ್ಲದೇ ಇತರ ಆರೋಗ್ಯ ಸಮಸ್ಯೆಗಳಿಗೆ ಮನೆಯಲ್ಲಿಯೇ ಕುಳಿತು ಸಾರ್ವಜನಿಕರು ವೈದ್ಯರಿಂದ ಸಲಹೆ ಪಡೆಯಲು ಸರ್ಕಾರ ಇ-ಸಂಜೀವಿನಿ ಆ್ಯಪ್ ಬಿಡುಗಡೆ ಮಾಡಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಮಂಗಳೂರು ಜಿಲ್ಲೆಯಲ್ಲಿ 24 ತಜ್ಞ ವೈದ್ಯರು ಈಗಾಗಲೇ ಆ್ಯಪ್ ನಲ್ಲಿ ಸೇವೆ ನೀಡುತ್ತಿದ್ದಾರೆ. ಹೊರೆ ಜಿಲ್ಲೆಯ 100ಕ್ಕೂ ಅಧಿಕ ರೋಗಿಗಳಿಗೆ ವಿಡೀಯೊ ಮೂಲಕ ಸಂಪರ್ಕಿಸಿ ಚಿಕಿತ್ಸೆ ನೀಡಲಾಗಿದೆ. ಈ ಆ್ಯಪ್‍ನಲ್ಲಿ ಕರ್ನಾಟಕದಲ್ಲಿ ಇರುವ ಉತ್ತಮ ವೈದ್ಯ ತಂಡವು ಕಾರ್ಯನಿರ್ವಹಿಸುತ್ತಿದ್ದು, ರಾಜ್ಯ ಯಾವುದೇ […]

ಮುಜರಾಯಿ ಸಿಬ್ಬಂದಿಗೆ ಐದು ಲಕ್ಷ, ವಿಮೆ ಮತ್ತು 10 ಲಕ್ಷ ಜೀವ ವಿಮೆ : ಕೋಟಾ ಶ್ರೀನಿವಾಸ ಪೂಜಾರಿ

Sunday, July 26th, 2020
srinivas-poojary

ಮಂಗಳೂರು:  ರಾಜ್ಯದ ಸಹಸ್ರಾರು ಮುಜಾರಾಯಿ ದೇವಾಲಯಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಮಾರಕ ಕೊರೋನಾ ವರೈಸ್ ಸಾಂಕ್ರಾಮಿಕದ ಭದ್ರತೆಗೆ ವಿಮಾ ಸೌಲಭ್ಯ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಟ್ಟಿರುವ ಎಲ್ಲಾ ದೇವಾಲಯಗಳಲ್ಲಿ ಕಾರ್ಯ ನಿರ್ವಹಿಸುವ ಎಲ್ಲಾ ದರ್ಜೆಯ ಸಿಬ್ಬಂದಿಗೆ ವಿಮಾ ಸೌಲಭ್ಯ ಒದಗಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ. ‘ಅರ್ಚಕರ ಮನವಿಗೆ ಸ್ಪಂದಿಸಿ ಮುಂದಿನ ದಿನಗಳಲ್ಲಿ ಐದು ಲಕ್ಷ ರೂ. ಮೊತ್ತದ ಆರೋಗ್ಯ ವಿಮೆ ಮತ್ತು […]

ಮಂಗಳೂರು : ಸಾರ್ವಜನಿಕರಿಗೆ ತೊಂದರೆಯಾಗದಂತೆ ಮರಳು ಪೂರೈಕೆ; ಕೋಟಾ ಶ್ರೀನಿವಾಸ ಪೂಜಾರಿ

Tuesday, December 17th, 2019
kota

ಮಂಗಳೂರು : ಸಾರ್ವಜನಿಕರಿಗೆ ಯಾವ ರೀತಿಯ ತೊಂದರೆ ಇಲ್ಲದೆ ಸುಲಭ ರೀತಿಯಲ್ಲಿ ಮರಳು ಪೂರೈಕೆ ಆಗಬೇಕು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ಸರ್ಕಾರದಿಂದ ನೀಡಬೇಕಾದ ಸೌಲಭ್ಯ ಒದಗಿಸಿ, ಸರ್ಕಾರಿ ಕಾಮಗಾರಿಗಳಿಗೆ ಸಕಾಲದಲ್ಲಿ ಮರಳು ಪೂರೈಕೆಯಾಗಿ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ತಿಗೊಳಿಸುವಂತೆ ನೋಡಿಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಲ್ಲಿ 4.62 ಕೋಟಿ ರೂ. ಮೊತ್ತ ಲಭ್ಯವಿದ್ದು, ಇದನ್ನು ಗಣಿಗಾರಿಕೆಯಿಂದ ತೊಂದರೆಗೀಡಾದ ಪ್ರದೇಶಗಳ ಅಭಿವೃದ್ಧಿಗೆ ಬಳಸಲಾಗುವುದು. ಆಯಾ […]

ಬಜ್ಪೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ

Wednesday, October 23rd, 2019
bajpe

ಮಂಗಳೂರು : ರಾಜ್ಯದ ಪ್ರತಿಯೊಂದು ಪ್ರಜೆಯ ಆರೋಗ್ಯ ಕಾಪಾಡುವುದು ಸರಕಾರದ ಜವಾಬ್ದಾರಿಯಾಗಿದೆ ಎಂದು ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬಜ್ಪೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ ನಡೆಸಿ ಮಾತನಾಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ಮೂಲಕ ಈ ಭಾಗದ ಜನತೆಯ ಆರೋಗ್ಯ ಸಮಸ್ಯೆಗೆ ಪರಿಹಾರ ಸಿಗಬೇಕು. ಸಿಬ್ಬಂದಿ ಕೊರತೆ, ಲ್ಯಾಬ್ ಇನ್ನಿತರ ಮೂಲಭೂತ ಕೊರತೆಗಳಿದ್ದ್ದರೆ ಅಥವಾ […]

ಕಟೀಲು ಮೇಳ ಸರಕಾರೀಕರಣ, ಕಲಾವಿದರಿಗೆ ಸರಕಾರಿ ಸೌಲಭ್ಯಗಳು ?

Saturday, October 19th, 2019
Kateelu-mela

ಮಂಗಳೂರು : ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳವನ್ನು ಸರ್ಕಾರದ ವಶಕ್ಕೆ ಪಡೆದು  ಈಗಿರುವ ಗೊಂದಲವನ್ನು ಕಿತ್ತುಹಾಕುವ ಬಗ್ಗೆ ಸರಕಾರ ಯೋಚಿಸುತ್ತಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮುಜರಾಯಿ ಖಾತೆ ಸಚಿವ ಹಾಗೂ ದಕ್ಷಿಣ ಕನ್ನಡದ ಉಸ್ತುವಾರಿ ಕೋಟಾ ಶ್ರೀನಿವಾಸ ಪೂಜಾರಿ ನವೆಂಬರ್‌ನಲ್ಲಿ ‌ಕಟೀಲು ಮೇಳ ಹೊರಡುವ ಮೊದಲೇ ಈ ಬಗ್ಗೆ ಅಂತಿಮ ನಿರ್ಧಾರಕ್ಕೆ ಬರುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಕಟೀಲು ಯಕ್ಷಗಾನ ಮೇಳದ ವಿರುದ್ಧ ಕೆಲವರು ‌ನ್ಯಾಯಾಲಯಕ್ಕೆ ಹೋಗಿದ್ದಾರೆ. ಈ ಬಗ್ಗೆ ಹೈಕೋರ್ಟ್ ಮೇಳವನ್ನುಏಲಂ ಪ್ರಕ್ರಿಯೆಯಲ್ಲಿ ಪಾರದರ್ಶಕವಾಗಿ ಮಾಡಬೇಕು ಎಂದು ಆದೇಶಿಸಿತ್ತು. ಹೀಗಾಗಿ ನ್ಯಾಯಾಲಯ […]

ಸಿಆರ್​​​ಝಡ್ ವಲಯದ ಮರಳು ಸಮಸ್ಯೆ ಪರಿಹರಿಸಲು ಕೋಟಾ ಶ್ರೀನಿವಾಸ ಪೂಜಾರಿ ಸೂಚನೆ

Friday, September 27th, 2019
CRZ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಾವಳಿ ನಿಯಂತ್ರಣ ವಲಯ (ಸಿ.ಆರ್.ಝಡ್) ನಲ್ಲಿ ಮರಳು ಪರವಾನಗಿ ನೀಡಲಾಗಿದ್ದರೂ ಕೆಲವು ಸ್ಥಳಗಳಲ್ಲಿ ಮರಳುಗಾರಿಕೆ ನಡೆಸಲು ತೊಡಕಾಗಿರುವ ಸ್ಥಳೀಯ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸಿ.ಆರ್.ಝಡ್ ವಲಯದಲ್ಲಿ ಮರಳು ತೆಗೆಯಲು 105 ತಾತ್ಕಾಲಿಕ ಪರವಾನಗಿ ನೀಡಲಾಗಿದೆ. ಇದರಲ್ಲಿ ಅಂದಾಜು 11 ಲಕ್ಷ ಮೆಟ್ರಿಕ್ ಟನ್ ಮರಳು ಎತ್ತಬಹುದು. ಆದರೆ […]