ದ.ಕ-ಉಡುಪಿ ಸ್ಥಳೀಯಾಡಳಿತ ವಿಧಾನ ಪರಿಷತ್‌ ಚುನಾವಣೆ, ಶೇ. 99.55 ಮತದಾನ

Friday, December 10th, 2021
kota-srinivasa-poojary

ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ವಿಧಾನ ಪರಿಷತ್‌ನ  ಚುನಾವಣೆ ಇಂದು ಶಾಂತಿಯುತವಾಗಿ ನಡೆದಿದ್ದು, ಶೇ. 99.55 ಮತದಾನವಾಗಿದೆ. ದ.ಕ. ಜಿಲ್ಲೆಯ 231 ಹಾಗೂ ಉಡುಪಿ ಜಿಲ್ಲೆಯ 158 ಸಹಿತ ಉಭಯ ಜಿಲ್ಲೆಗಳ ಒಟ್ಟು 389 ಮತಗಟ್ಟೆಗಳಲ್ಲಿ ಒಟ್ಟು 6040 ಮತದಾರರಲ್ಲಿ ಸಂಜೆ 4 ಗಂಟೆಯ ವೇಳೆಗೆ 6013 ಮಂದಿ ಮತದಾನ ಮಾಡಿದ್ದಾರೆ. ದ.ಕ. ಜಿಲ್ಲೆಯ 3290 ಗ್ರಾ.ಪಂ. ಸದಸ್ಯರು, ಮಂಗಳೂರು ಮಹಾನಗರ ಪಾಲಿಕೆಯ 60 ಸದಸ್ಯರು, ನಗರ ಸಭೆಯ 62, ಪುರಸಭೆಯ 50, ಪಟ್ಟಣ […]

ದ.ಕ. ಜಿಲ್ಲೆಯಿಂದ ಪರಿಷತ್ ಚುನಾವಣೆಗೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿಗೆ ಟಿಕೆಟ್

Friday, November 19th, 2021
srinivas Poojary

ಮಂಗಳೂರು :ವಿಧಾನ ಪರಿಷತ್  ಚುನಾವಣೆಗೆ ದ.ಕ. ಜಿಲ್ಲೆಯಿಂದ ಬಿಜೆಪಿಯಿಂದ ಹಾಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರು ಟಿಕೆಟ್ ಪಡೆದುಕೊಂಡಿದ್ದಾರೆ. ದ.ಕ. ಜಿಲ್ಲೆಯಲ್ಲಿ ಎರಡು ಸ್ಥಾನಗಳಲ್ಲಿ ಬಿಜೆಪಿಯಿಂದ ಒಂದು ಸ್ಥಾನವನ್ನು ಕೋಟ ಶ್ರೀನಿವಾಸ್ ಪೂಜಾರಿಯವರು  ಪಡೆದಿದ್ದು , ಈ ಹಿಂದೆಯೂ ಕೂಡ ಅವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಒಂದು ಸ್ಥಾನಕ್ಕೆ ಅವರನ್ನೇ ಆಯ್ಕೆ ಮಾಡಲಾಗಿದ್ದು, ಗೆಲುವು ಬಹುತೇಕ ಫಿಕ್ಸ್ ಆಗಿದೆ. ಇನ್ನೊಂದೆಡೆ ಕೋಟ ಶ್ರೀನಿವಾಸ್ ಪೂಜಾರಿ ಈ ಹಿಂದೆ ಸಿಎಂ ಆಗಿದ್ದ ಬಿಎಸ್ ಯಡಿಯೂರಪ್ಪನವರ […]

ದ.ಕ. ಜಿಲ್ಲೆಯಲ್ಲಿ ಮೇ 3 ರವರೆಗೆ ಲಾಕ್ ಡೌನ್ ಯಥಾ ಸ್ಥಿತಿಯಲ್ಲಿ ಮುಂದುವರಿಕೆ

Thursday, April 23rd, 2020
Kota Poojary

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮೇ 3 ರವರೆಗೆ ಹಾಲಿ‌ ನಿರ್ಬಂಧಗಳನ್ನು ಯಥಾ ಸ್ಥಿತಿಯಲ್ಲಿ ಮುಂದುವರಿಸಲು ನಿರ್ಧರಿಸಲಾಗಿದೆ. ಲಾಕ್ ಡೌನ್ ಸಡಿಲಿಕೆ ಇಲ್ಲ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸ್ಪಷ್ಟಪಡಿಸಿದ್ದಾರೆ. ಇಂದು ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದ.ಕ. ಜಿಲ್ಲೆಯಲ್ಲಿ ಅಂಗಡಿ, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಅಂಗಡಿ ಬೆಳಿಗ್ಗೆ 7 ರಿಂದ 12 ರವರೆಗೆ ತೆರೆಯಲಿವೆ. ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ಸಂಬಂಧಿಸಿದಂತೆ ಬುಧವಾರದಂದು ಸಿಎಂ ಬಿ.ಎಸ್. ಯಡಿಯೂರಪ್ಪ ಆದೇಶ […]

ನಗರದ ಜನತೆ ಶಾಂತಿ ಕಾಪಾಡುವಂತೆ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಮನವಿ

Friday, December 20th, 2019
Kota-srinivasa-poojary

ಮಂಗಳೂರು : ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ನಗರದ ಜನತೆಯಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಯಾರೂ ಕೂಡ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಮಹಾನಗರದ ಜನತೆ ಶಾಂತಿಯನ್ನು ಕಾಪಾಡಬೇಕು. ಶಾಂತಿ ಸುವ್ಯವಸ್ಥೆ, ನೆಮ್ಮದಿಯ ಜೀವನಕ್ಕೆ ಅವಕಾಶ ನೀಡಬೇಕು ಎಂದು ಮಹಾನಗರದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ದ.ಕ. ಜಿಲ್ಲೆಯಲ್ಲಿ ಸೌಹಾರ್ದತೆಯಿಂದ ಇದ್ದಂತಹ ಇತಿಹಾಸವಿದೆ. ಆದ್ದರಿಂದ ಶಾಂತಿ ಸುವ್ಯವಸ್ಥೆಯಿಂದ ಜನತೆ ಬಾಳಬೇಕೆಂದರು. ಇನ್ನು ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಹಾಗೂ ಎಚ್ಚರಿಕೆಯ ಹೆಜ್ಜೆ ಇಡುವಂತೆ ಸೂಚನೆ ನೀಡಲಾಗಿದೆ […]

ತೆರಿಗೆ ಪಾವತಿಸದ ಮೊಬೈಲ್ ಟವರ್-ನೋಟಿಸ್ ಜಾರಿಗೊಳಿಸಿ- ಕೋಟ ಶ್ರೀನಿವಾಸ್ ಪೂಜಾರಿ

Thursday, October 17th, 2019
minister-Pujary

ಮಂಗಳೂರು : ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಮೊಬೈಲ್ ಫೋನ್ ಟವರ್ ಕಂಪೆನಿಗಳು ಗ್ರಾಮ ಪಂಚಾಯತಿಗೆ ತೆರಿಗೆ ಪಾವತಿ ಮಾಡುತ್ತಿಲ್ಲ ಎಂಬ ದೂರುಗಳು ಹೆಚ್ಚು ಬಂದಿವೆ ಹಾಗಾಗಿ ಅಂತಹ ಕಂಪೆನಿಗಳ ವಿರುದ್ಧ ನೋಟಿಸ್ ನೀಡಿ ತೆರಿಗೆ ಕಟ್ಟುವಂತೆ ಆದೇಶ ನೀಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೆರ್ಮುದೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ […]

ಬಂಟ್ವಾಳಕ್ಕೆ ಆಗಮಿಸಿದ ಶ್ರೀನಿವಾಸ್ ಪೂಜಾರಿ

Thursday, August 22nd, 2019
shreenivas

ಬಂಟ್ವಾಳ : ಸಂಪುಟ ದರ್ಜೆಯ ಸಚಿವರಾಗಿ ಬಂಟ್ವಾಳಕ್ಕೆ ಮೊದಲ ಬಾರಿ ಆಗಮಿಸಿದ ಕೋಟ ಶ್ರೀನಿವಾಸ್ ಪೂಜಾರಿ ಯವರನ್ನು ಬಂಟ್ವಾಳ ಬಿಜೆಪಿ ವತಿಯಿಂದ ಬಿ.ಸಿ ರೋಡ್ ನಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ನೇತೃತ್ವದಲ್ಲಿ ಬುಧವಾರ ರಾತ್ರಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷರಾದ ಬಿ. ದೇವದಾಸ್ ಶೆಟ್ಟಿ, ಎ.ಗೋವಿಂದ ಪ್ರಭು, ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಮತ್ತು ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.