ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೇರಲಾಗಿದ್ದ ವಾರಾಂತ್ಯದ ಕರ್ಫ್ಯೂ ಸಡಲಿಕೆಯಾಗಲಿದೆ : ಶಾಸಕ ವೇದವ್ಯಾಸ್ ಕಾಮತ್

Thursday, September 9th, 2021
Vedavyas Kamath

ಮಂಗಳೂರು  : ಕೋವಿಡ್ ನಿಯಂತ್ರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೇರಲಾಗಿದ್ದ ವಾರಾಂತ್ಯದ ಕರ್ಫ್ಯೂ ಸಡಲಿಕೆಯಾಗಲಿದೆ. ಈ ವಾರದಿಂದಲೇ ಕ್ರಮ ಜಾರಿಗೊಳಿಸಲಾಗುತ್ತದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತಿದ್ದ ಕೋವಿಡ್ ನಿಯಂತ್ರಿಸಲು ಹೇರಲಾಗಿದ್ದ ವಾರಾಂತ್ಯದ ಕರ್ಫ್ಯೂ ಸಡಿಲಗೊಳಿಸುವುದರಿಂದ ಸಾರ್ವಜನಿಕರ ಚಟುವಟಿಕೆಗಳಿಗೆ ಸಹಕಾರವಾಗಲಿದೆ. ಎಲ್ಲಾ ವರ್ಗದ ಜನರಿಗೂ ಸಹಕಾರವಾಗುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ವಾರಾಂತ್ಯದ ಕರ್ಫ್ಯೂ ಸಡಿಸಿದರೂ ಸಾರ್ವಜನಿಕರು ತಮ್ಮ ಆರೋಗ್ಯದ ಸುರಕ್ಷತಾ ದೃಷ್ಟಿಯಿಂದ ಜಾಗರೂಕರಾಗಿರಬೇಕು. ಮಾಸ್ಕ್ […]

ಮಂಗಳೂರು ನೆಹರೂ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ

Sunday, August 15th, 2021
S angara

ಮಂಗಳೂರು : ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನ ದಲ್ಲಿ  ಆ.15ರ ಭಾನುವಾರ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ನಮ್ಮ ದೇಶವಿಂದು ಇಡೀ ವಿಶ್ವದಲ್ಲೇ ಒಂದು ಚಾರಿತ್ರಿಕ ಕಾಲಘಟ್ಟದಲ್ಲಿದ್ದೇವೆ. ದೇಶಕ್ಕೆ ಸ್ವಾತಂತ್ರ್ಯ  ದೊರೆತು ೭೫ವರ್ಷ ತುಂಬಿತು. ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಇದನ್ನು ಅಮೃತ ಮಹೋತ್ಸವ ಎನ್ನಲಾಗುತ್ತಿದೆ. ಸನ್ಮಾನ್ಯ ಪ್ರಧಾನ […]

ಗಡಿ ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಸರ್ಕಾರದಿಂದ ಅಗತ್ಯ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Thursday, August 12th, 2021
Bommai-Progress-Meeting2

ಮಂಗಳೂರು : ಕೋವಿಡ್ ಪಾಸಿಟಿವಿಟಿಯಲ್ಲಿ ಕಳೆದ ಕೆಲವು ದಿನಗಳಿಂದ ಏರಿಕೆ ಕಂಡುಬರುತ್ತಿರುವ ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಕೊರೋನಾ ಸೋಂಕು ನಿಯಂತ್ರಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ರಾಜ್ಯ ಸರ್ಕಾರದಿಂದ ಕೈಗೊಳ್ಳಲಾಗುತ್ತಿದೆ ರಾಜ್ಯದ ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಯಿ ಅವರು ತಿಳಿಸಿದರು. ಅವರು ಆಗಸ್ಟ್ 12ರ ಗುರುವಾರ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಬಾಂಗಣದಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹೋಂ ಐಸೋಲೇಷನ್‍ನಲ್ಲಿರುವ ಸೋಂಕಿತರ ನಿರ್ವಹಣೆ, ಕೋವಿಡ್ ಕೇರ್ ಸೆಂಟರ್‍ಗೆ ದಾಖಲಾಗುವ, […]

ದ.ಕ. ಜಿಲ್ಲೆಯಲ್ಲಿ ಮೇ 7 ರಿಂದ ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಮ, ಮೇ 15ರ ಬಳಿಕ ಸಂಪೂರ್ಣ ಬಂದ್

Thursday, May 6th, 2021
Rajendra

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮೇ 7 ರಿಂದ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲು ಜಿಲ್ಲಾಡಳಿತ ಮುಂದಾಗಿದ್ದು, ಈ ಅವಧಿಯಲ್ಲಿ ಅಗತ್ಯ ಸೇವೆಗಳು ಬೆಳಿಗ್ಗೆ 6 ರಿಂದ  9 ರವರೆಗೆ ಮಾತ್ರ ಲಭ್ಯವಿದೆ ಮತ್ತು ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರಲಿದೆ.  ಮೇ 15ರ ಬಳಿಕ ಮದುವೆ ಸಮಾರಂಭಗಳಿವೆ ಅವಕಾಶವಿಲ್ಲ ಎಂದು ಜಿಲ್ಲಾಡಳಿತದ ಗುರುವಾರದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಶನಿವಾರ ಹಾಗೂ ರವಿವಾರದಂದು ಜಿಲ್ಲೆಯಲ್ಲಿ ಕರ್ಫ್ಯೂ ಜಾರಿಯಲ್ಲಿರಲಿದ್ದು, ಎಲ್ಲಾ ಚಟುವಟಿಕೆಗಳು ಸ್ತಬ್ಧವಾಗಿರಲಿವೆ. ಈ ಅವಧಿಯಲ್ಲಿ ಆಸ್ಪತ್ರೆಗಳು ಹಾಗೂ ಮೆಡಿಕಲ್ ಗಳ ಸೇವೆ ಲಭ್ಯ ಇರಲಿದೆ. […]