ರಾಜ್ಯದಲ್ಲಿ 5 ದಿನಗಳ ಕಾಲ ಗಣೇಶೋತ್ಸವ ಆಚರಣೆಗೆ ಅನುಮತಿ

Sunday, September 5th, 2021
Ganapathy

ಬೆಂಗಳೂರು: ರಾಜ್ಯದಲ್ಲಿ 5 ದಿನಗಳ ಕಾಲ ಗಣೇಶೋತ್ಸವ ಆಚರಣೆಗೆ ಕರ್ನಾಟಕ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ. ರಾಜ್ಯದಾದ್ಯಂತ ಐದು ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಭಾನುವಾರ ನಡೆದ ಕೋವಿಡ್‌ ನಿರ್ವಹಣೆಗೆ ಸಂಬಂಧಿಸಿದ ಉನ್ನತಮಟ್ಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಪೊಲೀಸ್‌ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು ವಿಧಿಸುವ ಷರತ್ತುಗಳನ್ನು ಪಾಲಿಸಿಕೊಂಡು ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಮೆರವಣಿಗೆ ಮತ್ತು ಸಾಂಸ್ಕೃತಿಕ […]

ಸ್ಟಾಫ್ ನರ್ಸ್ ಗಳ ಕೋವಿಡ್ ನಿರ್ವಹಣೆಯಲ್ಲಿ ಶುಶ್ರೂಷಕರ ಸೇವೆಗೆ ಮುಖ್ಯಮಂತ್ರಿ ಶ್ಲಾಘನೆ

Monday, May 31st, 2021
nurse

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕೋವಿಡ್ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧ ಜಿಲ್ಲೆಗಳ ಸ್ಟಾಫ್ ನರ್ಸ್ ಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕೋವಿಡ್ 19ರ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಅಪಾಯವನ್ನು ಲೆಕ್ಕಿಸದೆ, ಸೋಂಕಿತರ ಶುಶ್ರೂಷೆಯಲ್ಲಿ ನಿರತರಾಗಿರುವ ಎಲ್ಲ ಸ್ಟಾಫ್ ನರ್ಸ್‍ಗಳನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. ವೈಯಕ್ತಿಕ ಕಷ್ಟ-ನಷ್ಟಗಳನ್ನು ಬದಿಗೊತ್ತಿ, ಕುಟುಂಬದವರಿಂದ ಅಂತರ ಕಾಯ್ದುಕೊಂಡು ಕಾರ್ಯ ನಿರ್ವಹಿಸುತ್ತಿರುವ ಶುಷ್ರೂಷಕರ ಕರ್ತವ್ಯ ಪ್ರಜ್ಞೆ ಅನುಕರಣೀಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಪ್ರಸ್ತುತ ರಾಜ್ಯದಲ್ಲಿ […]

ಸೋಂಕಿನ ಪ್ರಮಾಣ ಇಳಿಸಲು ಗ್ರಾ.ಪಂ. ಕಾರ್ಯಪಡೆಗಳನ್ನು ಮತ್ತಷ್ಟು ಬಲಪಡಿಸಲು ಕ್ರಮ ಕೈಗೊಳ್ಳಿ : ಸಿಎಂ

Friday, May 28th, 2021
Tumkuru Covid

ಬೆಂಗಳೂರು / ತುಮಕೂರು : ಗ್ರಾಮೀಣ ಪ್ರದೇಶಗಳಲ್ಲಿಯೂ ಹೆಚ್ಚಾಗಿ ಹರಡುತ್ತಿರುವ ಕೋವಿಡ್19 ಎರಡನೇ ಅಲೆ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡುವುದರೊಂದಿಗೆ ಹಳ್ಳಿಗಳ ಕೋವಿಡ್ ನಿರ್ವಹಣೆಗೆ ಗ್ರಾಮ ಪಂಚಾಯ್ತಿ ಕಾರ್ಯಪಡೆಗಳನ್ನು ಮತ್ತಷ್ಟು ಬಲಪಡಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಕೋವಿಡ್-19 ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸೋಂಕಿನ ಪಾಸಿಟಿವ್ ಪ್ರಮಾಣದ ಇಳಿಕೆಗೂ ಸೂಚನೆ ನೀಡಿದರು. ಕೋವಿಡ್ 19 ಎರಡನೇ ಅಲೆ ರಾಜ್ಯವನ್ನು ತೀವ್ರವಾಗಿ ಬಾಧಿಸಿದೆ. ಬೆಂಗಳೂರಿನ ನೆರೆಯ ಜಿಲ್ಲೆಯಾದ […]