ಅಂತ್ಯಕ್ರಿಯೆಯನ್ನು ನಡೆಸಲು ಒಂದು ಲಕ್ಷ ರೂ. ಇಟ್ಟು ಆತ್ಮಹತ್ಯೆ ಮಾಡಿಕೊಂಡ ದಂಪತಿ

Tuesday, August 17th, 2021
chitrapura-suicide

ಮಂಗಳೂರು  :  ದಂಪತಿಗಳಿಬ್ಬರು ಡೆತ್ ನೋಟ್ ಬರೆದಿಟ್ಟು, ಮಂಗಳೂರು ಪೊಲೀಸ್ ಕಮಿಷನರ್ ಗೆ ಫೋನ್ ಮಾಡಿ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಕುಳಾಯಿ ಚಿತ್ರಾಪುರಯಲ್ಲಿ ರೆಹಜಾ ಅಪಾರ್ಟ್ ಮೆಂಟ್ ನಲ್ಲಿ ಮಂಗಳವಾರ ಬೆಳಗ್ಗೆ  ನಡೆದಿದೆ. ಮೃತರನ್ನು ರಮೇಶ್ ಸುವರ್ಣ ಮತ್ತು ಗುಣವತಿ ಸುವರ್ಣ ಎಂದು ಗುರುತಿಸಲಾಗಿದೆ. ಕೋವಿಡ್-19 ಸೋಂಕು ಮತ್ತು ಬ್ಲ್ಯಾಕ್ ಫಂಗಸ್ ಗೆ ಹೆದರಿ ಮೊದಲು ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮೊದಲು ಪತಿ ರಮೇಶ್ ಸುವರ್ಣ ಮಂಗಳೂರು ಪೊಲೀಸ್ ಆಯುಕ್ತ […]

ಎರಡು ದಿನ ವಾರಾಂತ್ಯ ಕರ್ಫ್ಯೂ, ಸರಳವಾಗಿರಲಿದೆ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ

Friday, August 13th, 2021
KV-Rajendra

ಮಂಗಳೂರು : ದೇಶದಾದ್ಯಂತ 2021ರ ಆಗಸ್ಟ್ 15 ರಂದು 75 ನೇ ವರ್ಷದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವವನ್ನು ಆಚರಿಸಲಾಗುತ್ತಿದೆ. ಕೋವಿಡ್-19 ಸೋಂಕು ಕಾರಣ ಜಿಲ್ಲೆಯಲ್ಲಿ ಕೋವಿಡ್ 19 ಮಾರ್ಗಸೂಚಿಗಳು ಜಾರಿಯಲ್ಲಿದ್ದು, ಆಗಸ್ಟ್ 15 ರಂದು ವಾರಾಂತ್ಯ ಕರ್ಫ್ಯೂ ಕೂಡ ಜಾರಿಯಲ್ಲಿರುತ್ತದೆ. ಆದ ಕಾರಣ ಈ ಬಾರಿಯ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಆಚರಣೆ ಹಿನ್ನಲೆಯಲ್ಲಿ ಜಿಲ್ಲಾಡಳಿತ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಸಾರ್ವಜನಿಕರು ಪಾಲಿಸಲು ಸೂಚಿಸಲಾಗಿದೆ. ಕಾರ್ಯಕ್ರಮದ ಆಯೋಜಕರು ಧ್ವಜಾರೋಹಣ ನಡೆಸುವ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರನ್ನು ಸೇರಿಸದಂತೆ, ಕೋವಿಡ್ ಸಮುಚಿತ ವರ್ತನೆಗಳನ್ನು […]

ಮಂಗಳೂರಿನ ಐವರು ವೈದ್ಯರಲ್ಲಿ ಕೋವಿಡ್-19 ಸೋಂಕು

Thursday, June 25th, 2020
doctors-corona

ಮಂಗಳೂರು:  ಮಂಗಳೂರಿನ ಐವರು ವೈದ್ಯರಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದು, ಇದು ರೋಗಿಗಳಲ್ಲಿ  ಆತಂಕಕ್ಕೆ ಕಾರಣವಾಗಿದೆ. ನಗರದ ಕೋವಿಡ್ ಆಸ್ಪತ್ರೆ, ಲೇಡಿಗೋಷನ್ ಆಸ್ಪತ್ರೆ ಮತ್ತು ಖಾಸಗಿ ಅಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಐವರು ವೈದ್ಯರಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿರುವುದು ದೃಢವಾಗಿದೆ. ಸೋಂಕಿತರ ಪೈಕಿ 28 ವರ್ಷದ ಯುವಕ, 28 ವರ್ಷದ ಇಬ್ಬರು ಯುವತಿಯರು ಮತ್ತು 27 ವರ್ಷದ ಇಬ್ಬರು ಯುವತಿಯರು ಎನ್ನಲಾಗಿದೆ. ಇವರಲ್ಲಿ ಒಬ್ಬರು ಕೋವಿಡ್ ಆಸ್ಪತ್ರೆಯಲ್ಲಿ, ಮೂವರು ಲೇಡಿಗೋಷನ್ ಹೆರಿಗೆ ಆಸ್ಪತ್ರೆ, ಒಬ್ಬರು ಕೆಎಂಸಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಈ ಐವರಿಗೆ ಕೋವಿಡ್-19 […]

ಬೆಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರಿಗೆ ಕೋವಿಡ್ 19 ಸೋಂಕು

Tuesday, May 26th, 2020
Mangalore COVID

ಮಂಗಳೂರು : ಕತಾರ್‌ನಿಂದ ಬೆಂಗಳೂರಿಗೆ ಬಂದ ವಿಮಾನದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮೂವರಿಗೆ ಕೊರೊನಾ ಪಾಸಿಟಿವ್‌ ಆಗಿದ್ದು ಅವರು ಬೆಂಗಳೂರಿನಲ್ಲಿಯೇ ಇರುವ ಕಾರಣದಿಂದಾಗಿ ಅವರನ್ನು ಅಲ್ಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದ.ಕ. ಜಿಲ್ಲೆಯವರಾದ ಮೂವರು ಕತಾರ್‌ನಿಂದ ವಂದೇ ಭಾರತ್‌ ಮಿಷನ್‌ ಅಡಿಯಲ್ಲಿ ಬೆಂಗಳೂರಿಗೆ ಬಂದ ಬಳಿಕ ಅವರನ್ನು ಅಲ್ಲೇ ಕ್ವಾರಂಟೈನ್‌ಗೆ ಒಳಪಡಿಸಲಾಗಿದ್ದು ಕೊರೊನಾ ಪರೀಕ್ಷೆ ನಡೆಸಿದಾಗ ಕೊರೊನಾ ಇರುವುದು ದೃಢಪಟ್ಟಿದೆ. ಮೇ 25 ರ ಸಂಜೆ 5 ರಿಂದ ಮೇ 26 ರ ಮಧ್ಯಾಹ್ನ 12 ರವರೆಗೆ ದಕ್ಷಿಣ […]

ಫಸ್ಟ್ ನ್ಯೂರೋ ಖಾಸಗಿ ಆಸ್ಪತ್ರೆ ನಂಟು ಕಾರ್ಕಳ ತಾಲೂಕಿನ ಇಬ್ಬರಿಗೆ ಕೋವಿಡ್-19 ಸೋಂಕು

Tuesday, May 12th, 2020
karkala Covid

ಮಂಗಳೂರು: ಇಲ್ಲಿನ ಫಸ್ಟ್ ನ್ಯೂರೋ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಮಂಗಳೂರಿನ ಶಕ್ತಿನಗರದ 80 ವರ್ಷದ ವೃದ್ಧೆ ( ಸೋಂಕಿತ ಸಂಖ್ಯೆ 507) ರ ಸಂಪರ್ಕದಿಂದ ಇಂದು ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಇಬ್ಬರಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ. ಫಸ್ಟ್ ನ್ಯೂರೋ ಆಸ್ಪತ್ರೆ ಯ ಕಾರಣದಿಂದ ಸೋಂಕಿತರಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರಿನ ತಾಯಿ ಮತ್ತು ಮಗನಿಗೆ ಸೋಂಕು ತಾಗಿದೆ. 50 ವರ್ಷದ ಮಹಿಳಗೆ ( ತಾಯಿ) ಗೆ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ […]

ಬಂಟ್ವಾಳದಲ್ಲಿ ಮತ್ತೆ ಮೂವರಿಗೆ ಕೋವಿಡ್ -19 ಸೋಂಕು, ಜಿಲ್ಲೆಯಲ್ಲಿ ಜನರಲ್ಲಿ ಮಡುಗಟ್ಟಿದ ಆತಂಕ

Saturday, May 9th, 2020
Bantwal Covid

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಒಂದೇ ಮನೆಯ ಮೂವರಿಗೆ ಇಂದು ಕೋವಿಡ್ -19 ಸೋಂಕು ದೃಢವಾಗಿದೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜನರ ಆತಂಕ ಮತ್ತಷ್ಟು ಹೆಚ್ಚಿದೆ. ಈ ಹಿಂದೆ ಸೋಂಕು ದೃಢವಾಗಿದ್ದ ಸೋಂಕಿತ ಸಂಖ್ಯೆ 578ರ ಸಂಪರ್ಕದಿಂದ ಈಗ ಮತ್ತೆ ಮೂವರಿಗೆ ಸೋಂಕು ತಾಗಿದೆ. 30 ವರ್ಷದ ಪುರುಷ, 60 ಮತ್ತು 70 ವರ್ಷದ ಇಬ್ಬರು ಮಹಿಳೆಯರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢಪಟ್ಟಿದೆ. ಇವರು ಮೊದಲು ಮೃತಪಟ್ಟಿದ್ದ ಬಂಟ್ವಾಳದ ಮಹಿಳೆಯ ಮಹಿಳೆಯ ದ್ವಿತೀಯ ಸಂಪರ್ಕದವರಾಗಿದ್ದಾರೆ. […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ ಎರಡು ಕೋವಿಡ್-19 ಸೋಂಕು ಪ್ರಕರಣ ಪತ್ತೆ

Friday, May 1st, 2020
Covid 19

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ ಎರಡು ಕೋವಿಡ್-19 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಒಬ್ಬರು ಗುರುವಾರ  ಸಾವನ್ನಪ್ಪಿದ ಮಹಿಳೆಯ ನೆರೆಮನೆಯಲ್ಲಿ ವಾಸವಿದ್ದವರು, ಇನ್ನೊಬ್ಬರು ಕೋವಿಡ್-19 ಪಾಸಿಟಿವ್ ಆಗಿದ್ದ ಮಹಿಳೆಯ ಪತಿ ಎಂದು ತಿಳಿದು ಬಂದಿದೆ. ಒಂದು ಪ್ರಕರಣ ಬಂಟ್ವಾಳದಲ್ಲಿ ದೃಢವಾದರೆ ಮತ್ತೊಂದು ಮಂಗಳೂರಿನ ಬೋಳೂರು ವ್ಯಕ್ತಿಗೆ ಸೋಂಕು ತಾಗಿರುವುದು ಖಚಿತವಾಗಿದೆ. ಬಂಟ್ವಾಳದ 69 ವರ್ಷದ ವೃದ್ಧನಿಗೆ ಸೋಂಕು ದೃಢವಾಗಿದೆ. ಇವರಿಗೆ ಸೋಂಕಿತ ಸಂಖ್ಯೆ 390ರ ಸಂಪರ್ಕದಿಂದ ಸೋಂಕು ತಾಗಿದೆ. ಏಪ್ರಿಲ್ 19ರಂದು ಕೋವಿಡ್-19 ಸೋಂಕಿಗೆ ಬಲಿಯಾದ ಮಹಿಳೆಯ ಸಂಬಂಧಿಯಾಗಿರುವ ಇವರು ಸಾವನ್ನಪ್ಪಿದ ಮಹಿಳೆಯ ನೆರೆಮನೆಯಲ್ಲಿ […]

ಮಂಗಳೂರು ನಗರದಲ್ಲಿ ಮಹಿಳೆಗೆ ಕೋವಿಡ್-19 ಸೋಂಕು ದೃಢ

Thursday, April 30th, 2020
Bolooru Covid

ಮಂಗಳೂರು: ನಗರದ ಬೋಳೂರು ಪ್ರದೇಶದ ಮಹಿಳೆಯೋರ್ವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬೋಳೂರು ಪ್ರದೇಶದ 58 ವರ್ಷದ ಮಹಿಳೆಗೆ ಕೋವಿಡ್-19 ಸೋಂಕು ಇರುವುದು ಆಕೆಯ ಗಂಟಲು ದ್ರವ ಮಾದರಿ ಪರೀಕ್ಷೆ ವರದಿಯಲ್ಲಿ ಗುರುವಾರ ದೃಢಪಟ್ಟಿದೆ. ಸೋಂಕಿತ ಸಂಖ್ಯೆ 501ರ ಸಂಪರ್ಕದಿಂದ ಈ ಮಹಿಳೆಗೆ ಸೋಂಕು ತಾಗಿರುವುದು ಖಚಿತವಾಗಿದೆ. ಬೋಳೂರಿನ ಮಹಿಳಿಗೆ ಸೋಂಕು ತಾಗಿರುವುದು ದೃಢಪಟ್ಟ ಹಿನ್ನಲೆ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗುತ್ತಿದೆ. ಬ್ಯಾರಿಕೇಡ್ ಗಳನ್ನು ತಂದು ಹಾಕಲಾಗುತ್ತಿದೆ. ರಾಜ್ಯದಲ್ಲಿ ಇದುವರೆಗೆ 557 ಸೋಂಕು […]

ದೆಹಲಿಗೆ ತೆರಳಿದ್ದ ಉಪ್ಪಿನಂಗಡಿಯ ವ್ಯಕ್ತಿಗೆ ಕೋವಿಡ್-19 ಸೋಂಕು

Friday, April 17th, 2020
covid19

ಮಂಗಳೂರು: ದೆಹಲಿಗೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ನಿವಾಸಿ ಯೋರ್ವರಿಗೆ ಕೋವಿಡ್-19 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ವೈಯಕ್ತಿಕ ಕೆಲಸದ ಹಿನ್ನೆಲೆ ಇತ್ತೀಚೆಗೆ ಈ ಯುವಕ ದೆಹಲಿಗೆ ತೆರಳಿದ್ದ ಎನ್ನಲಾಗಿದೆ. ಕಳೆದ ಮಾ.21ರಂದು ನಿಜಾಮುದ್ದೀನ್ ರೈಲಿನಲ್ಲಿ ಮಂಗಳೂರಿಗೆ ವಾಪಾಸ್ ಬಂದಿದ್ದ. ಫೋನ್ ಟವರ್ ಲೊಕೇಶನ್ ಆಧಾರದಲ್ಲಿ ಜಿಲ್ಲಾಡಳಿತ ವ್ಯಕ್ತಿಯನ್ನು ಪತ್ತೆ ಮಾಡಿ ಕ್ವಾರಂಟೈನ್ ನಲ್ಲಿ ಇಡಲಾಗಿತ್ತು. ವ್ಯಕ್ತಿಯನ್ನ ಕ್ವಾರಂಟೈನ್ ಮಾಡಿ ಗಂಟಲ ದ್ರಾವಣ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ಬಂದ ವರದಿಯಲ್ಲಿ ಯುವಕನಿಗೆ ಕೋವಿಡ್-19 ಪಾಸಿಟಿವ್ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ನಾಲ್ವರಿಗೆ ಕೋವಿಡ್-19 ಸೋಂಕು ದೃಢ

Tuesday, March 24th, 2020
corona

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ನಾಲ್ವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಇವರೆಲ್ಲರೂ ಕೇರಳ ರಾಜ್ಯದವರಾಗಿದ್ದಾರೆ. ಮಾರ್ಚ್ 23 ಮತ್ತು 24ರಂದು ಮಂಗಳೂರಿನಲ್ಲಿ ಒಟ್ಟು ನಾಲ್ಕು ಪ್ರಕರಣಗಳಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ. ಮಾರ್ಚ್ 19ರಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಏರ್ ಇಂಡಿಯಾ ( ಐಎಕ್ಸ್ 814) ಮತ್ತು ಮಾರ್ಚ್ 20ರಂದು ಆಗಮಿಸಿದ್ದ ಸ್ಪೈಸ್ ಜೆಟ್ (ಎಸ್ ಜಿ-60) ವಿಮಾನದಲ್ಲಿ ಪ್ರಯಾಣಿಸಿದ್ದ ಪ್ರಯಾಣಿಕರು ಕಡ್ಡಾಯವಾಗಿ 14 ದಿನಗಳ ಹೋಮ್ ಕ್ವಾರಂಟೈನ್ ನಲ್ಲಿ ಇರಬೇಕು ಎಂದು ಆದೇಶಿಸಿದ್ದಾರೆ. ಈ […]