ಗಡಿಭಾಗಗಳಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ: ಸಚಿವ ಡಾ.ಕೆ.ಸುಧಾಕರ್

Tuesday, August 31st, 2021
Sudhakar

ಚಿಕ್ಕಬಳ್ಳಾಪುರ :  ಕೇರಳದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಒಂದು ವಾರ ಸಾಂಸ್ಥಿಕ ಕ್ವಾರಂಟೈನ್ ಮಾಡಲು ಮುಖ್ಯಮಂತ್ರಿಗಳ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ ಜಿಲ್ಲೆಗಳಲ್ಲಿ ಯಾವ ರೀತಿ ನಿಯಮ ಪಾಲಿಸಬೇಕೆಂದು ಚರ್ಚಿಸಬೇಕಿದೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಲಾಗುವುದು. ಪ್ರತಿ ದಿನ ಗಡಿ ಜಿಲ್ಲೆಗಳಿಗೆ ಬರುವ ಜನರಿಗೆ ಯಾವ ರೀತಿ ನಿಯಮ ಪಾಲಿಸಬೇಕೆಂದು ಚರ್ಚಿಸಲಾಗುವುದು ಎಂದರು. ಕೇರಳದಿಂದ […]

ವಾರಾಂತ್ಯ ಕರ್ಫ್ಯೂ ಹಿನ್ನೆಲೆ: ಪರೀಕ್ಷೆಗಳ ಮುಂದೂಡಿಕೆ

Thursday, August 12th, 2021
Exam

ಮಂಗಳೂರು: ರಾಜ್ಯ ಸರ್ಕಾರ ಗಡಿ ಜಿಲ್ಲೆಗಳಲ್ಲಿ ಕೊವಿಡ್‌- 19 ನಿಯಂತ್ರಣಕ್ಕಾಗಿ ಜಾರಿಗೆ ತಂದಿರುವ ವಾರಾಂತ್ಯ ಕರ್ಫ್ಯೂ ನಿಂದ ಸಾರ್ವಜನಿಕ ಸಾರಿಗೆಯಲ್ಲಿ ವ್ಯತ್ಯಯವಾಗಿರುವ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಆಗಸ್ಟ್‌ 14 ಮತ್ತು ಆಗಸ್ಟ್‌ 28 ರ ಶನಿವಾರಗಳಂದು ನಿಗದಿಪಡಿಸಿದ್ದ ಸ್ನಾತಕ/ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಕ್ಷೆಗಳ ದಿನಾಂಕಗಳನ್ನು ಮರುನಿಗದಿಪಡಿಸಿ, ಪರೀಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ಇ-ಮೇಲ್‌ ಮೂಲಕ ಕಳಿಸಿಕೊಡಲಾಗುವುದು ಮತ್ತು ವಿಶ್ವವಿದ್ಯಾನಿಲಯದ ಅಧಿಕೃತ ಜಾಲತಾಣ (www.mangaloreuniversity.co.in) ದಲ್ಲಿ ಇಂದು (ಗುರುವಾರ) ಪ್ರಕಟಿಸಲಾಗುವುದು ಎಂದು, ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ ಎಲ್‌ […]

ಗಡಿ ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಸರ್ಕಾರದಿಂದ ಅಗತ್ಯ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Thursday, August 12th, 2021
Bommai-Progress-Meeting2

ಮಂಗಳೂರು : ಕೋವಿಡ್ ಪಾಸಿಟಿವಿಟಿಯಲ್ಲಿ ಕಳೆದ ಕೆಲವು ದಿನಗಳಿಂದ ಏರಿಕೆ ಕಂಡುಬರುತ್ತಿರುವ ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಕೊರೋನಾ ಸೋಂಕು ನಿಯಂತ್ರಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ರಾಜ್ಯ ಸರ್ಕಾರದಿಂದ ಕೈಗೊಳ್ಳಲಾಗುತ್ತಿದೆ ರಾಜ್ಯದ ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಯಿ ಅವರು ತಿಳಿಸಿದರು. ಅವರು ಆಗಸ್ಟ್ 12ರ ಗುರುವಾರ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಬಾಂಗಣದಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹೋಂ ಐಸೋಲೇಷನ್‍ನಲ್ಲಿರುವ ಸೋಂಕಿತರ ನಿರ್ವಹಣೆ, ಕೋವಿಡ್ ಕೇರ್ ಸೆಂಟರ್‍ಗೆ ದಾಖಲಾಗುವ, […]

ಕೋವಿಡ್ ಸೋಂಕು ಹೆಚ್ಚಿರುವ ಗಡಿ ಜಿಲ್ಲೆಗಳಿಗೆ ಭೇಟಿ

Monday, August 9th, 2021
Basavaraja Bommai

ಬೆಂಗಳೂರು: ಸೋಂಕು ಹೆಚ್ಚಾಗಿರುವ ರಾಜ್ಯದ ಎಲ್ಲಾ ಗಡಿ ಜಿಲ್ಲೆಗಳಿಗೆ ಭೇಟಿ ನೀಡಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಇಂದು ತಮ್ಮ ನಿವಾಸದ ಬಳಿ ಮೈಸೂರಿಗೆ ತೆರಳುವ ಮುನ್ನ ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು. ನಾನು ಇಂದು ಮೈಸೂರಿಗೆ ಭೇಟಿ ನೀಡುತ್ತಿದ್ದೇನೆ. ಮೈಸೂರು ಜಿಲ್ಲೆಯಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸುತ್ತೇನೆ. ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಶೀಲನೆ ನಡೆಸುತ್ತೇನೆ. ಕೋವಿಡ್ ಸೋಂಕು ಹೆಚ್ಚಾಗಿರುವ ಎಲ್ಲಾ ಗಡಿ ಜಿಲ್ಲೆಗಳಿಗೆ ಭೇಟಿ ನೀಡಲು […]