1 ಟನ್‌ಗೆ 100 ರೂ. ನಂತೆ ಮರಳು ವಿತರಿಸಲು ಯೋಜನೆ : ಸಚಿವ ಮುರುಗೇಶ ನಿರಾಣಿ

Friday, April 9th, 2021
nirani

ಮಂಗಳೂರು : ರಾಜ್ಯದಲ್ಲಿ ಹೊಸ ಗಣಿ ನೀತಿಯ ಕರಡು ಸಿದ್ಧವಾಗಿದ್ದು ಅತ್ಯಂತ ಕಡಿಮೆ ದರದಲ್ಲಿ ಮರಳು ದೊರಕಿಸುವ ಉದ್ದೇಶದಿಂದ  1 ಟನ್‌ಗೆ 100 ರೂ. ನಂತೆ ಮರಳು ವಿತರಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ರಾಜ್ಯ ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಮುರುಗೇಶ ನಿರಾಣಿ ತಿಳಿಸಿದ್ದಾರೆ. ದ.ಕ.ಜಿಲ್ಲಾಧಿಕಾರಿಯ ಕಚೇರಿಯಲ್ಲಿ ಗುರುವಾರ ಇಲಾಖೆಯ ಪ್ರಗತಿ ಪರಿಶೀಲನೆಯ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಈ ಬಗ್ಗೆ ವಿವಿಧ ಕ್ಷೇತ್ರದ ತಜ್ಞರ ಅಭಿಪ್ರಾಯ ಪಡೆದು ಈ ತಿಂಗಳಾಂತ್ಯದೊಳಗೆ ಬಿಡುಗಡೆಗೊಳಿಸಲು ಉದ್ದೇಶಿಸಲಾಗಿದೆ. ಈ […]

ಬಿಜೆಪಿ ಶಾಸಕರೊಬ್ಬರ ಸಂಬಂಧಿ ಮುಡಿಪು ಬಳಿ ಗಣಿಗಾರಿಕೆ ನಡೆಸುತ್ತಿರುವುದು ವಿಪರ್ಯಾಸ : ರಮಾನಾಥ ರೈ

Sunday, October 18th, 2020
Ramanatha Rai

ಮಂಗಳೂರು: ಮುಡಿಪು ಸಮೀಪ ನಡೆಯುತ್ತಿರುವ ಅಕ್ರಮ ರೆಡ್ ಬಾಕ್ಸೈಟ್ ಗಣಿಗಾರಿಕೆಯ ತನಿಖೆಯನ್ನು ರಾಜ್ಯದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ನೇತೃತ್ವದಲ್ಲಿ ಸಮಿತಿ ರಚಿಸಿ, ತನಿಖೆ ಕೈಗೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಬಿ ರಮಾನಾಥ ರೈ  ಹೇಳಿದ್ದಾರೆ . ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಅವರು  ಮುಡಿಪು, ಬಾಳೆಪುಣಿ, ಇನೋಳಿ ಸೇರಿದಂತೆ ಕೇರಳದ ಗಡಿ ಭಾಗದ ರೆಡ್ ಬಾಕ್ಸೈಟ್ ಗಣಿಗಾರಿಕೆಯಲ್ಲಿ ಸ್ಥಳೀಯರೊಂದಿಗೆ ಕೇರಳ, ತಮಿಳುನಾಡು, ಆಂಧ್ರ ಪ್ರದೇಶದ ಧಂದೆಕೋರರು ಇದ್ದಾರೆ. ಇವರು ಅಧಿಕಾರಿಗಳ ಮೇಲೆ […]

ಮೈಸೂರು ಕೆಆರ್​ಎಸ್​ ಅಣೆಕಟ್ಟಿನ ಸುತ್ತಮುತ್ತಲಿನ ಗಣಿಗಾರಿಕೆ ನಿಲ್ಲಿಸಲು ಸಿಎಂ ಬಿಎಸ್​ವೈ ಆದೇಶ

Monday, January 6th, 2020
KSR

ಬೆಂಗಳೂರು : ಮೈಸೂರಿನ ಕೃಷ್ಣ ರಾಜ ಸಾಗರ ಅಣೆಕಟ್ಟು ಹಾಗೂ ಬೃಂದಾವನ ಉದ್ಯಾನದ ಪರಿಸರದಲ್ಲಿ ಗಣಿಗಾರಿಕೆ ನಿಲ್ಲಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕೆಆರ್ಎಸ್ ಡ್ಯಾಮ್ ಸಮೀಪದ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಯುತ್ತಿದೆ. ಇದರಿಂದ ಅಣೆಕಟ್ಟಿನ ಭದ್ರತೆಗೆ ಧಕ್ಕೆಯಾಗುತ್ತಿದೆ ಎನ್ನಲಾಗುತ್ತಿದೆ. ಹೀಗಾಗಿ, ಗಣಿಗಾರಿಕೆ ನಿಲ್ಲಿಸುವಂತೆ ಸ್ಥಳೀಯರು ಒತ್ತಡ ಹೇರುತ್ತಿದ್ದಾರೆ. ಈ ವಿಚಾರವಾಗಿ ಭಾರೀ ಪ್ರತಿಭಟನೆಗಳು ಕೂಡ ನಡೆದಿವೆ. ಆದರೆ, ಗಣಿಗಾರಿಕೆ ನಿಲ್ಲುವ ಯಾವುದೇ ಲಕ್ಷಣ ಗೋಚರವಾಗುತ್ತಿಲ್ಲ. ಅಣೆಕಟ್ಟಿನ ಭದ್ರತೆಗೆ ಧಕ್ಕೆಯಾಗುತ್ತಿದೆ. ಹೀಗಾಗಿ […]

ಮಂಗಳೂರು : ಸಾರ್ವಜನಿಕರಿಗೆ ತೊಂದರೆಯಾಗದಂತೆ ಮರಳು ಪೂರೈಕೆ; ಕೋಟಾ ಶ್ರೀನಿವಾಸ ಪೂಜಾರಿ

Tuesday, December 17th, 2019
kota

ಮಂಗಳೂರು : ಸಾರ್ವಜನಿಕರಿಗೆ ಯಾವ ರೀತಿಯ ತೊಂದರೆ ಇಲ್ಲದೆ ಸುಲಭ ರೀತಿಯಲ್ಲಿ ಮರಳು ಪೂರೈಕೆ ಆಗಬೇಕು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ಸರ್ಕಾರದಿಂದ ನೀಡಬೇಕಾದ ಸೌಲಭ್ಯ ಒದಗಿಸಿ, ಸರ್ಕಾರಿ ಕಾಮಗಾರಿಗಳಿಗೆ ಸಕಾಲದಲ್ಲಿ ಮರಳು ಪೂರೈಕೆಯಾಗಿ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ತಿಗೊಳಿಸುವಂತೆ ನೋಡಿಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಲ್ಲಿ 4.62 ಕೋಟಿ ರೂ. ಮೊತ್ತ ಲಭ್ಯವಿದ್ದು, ಇದನ್ನು ಗಣಿಗಾರಿಕೆಯಿಂದ ತೊಂದರೆಗೀಡಾದ ಪ್ರದೇಶಗಳ ಅಭಿವೃದ್ಧಿಗೆ ಬಳಸಲಾಗುವುದು. ಆಯಾ […]

ಕೆಂಪು ಕಲ್ಲು ಅಗೆದು ಹಣ ಮಾಡುತ್ತಿದ್ದ ಮೂವರ ಬಂಧನ ; 31 ಲಕ್ಷ ರೂ. ವಸ್ತು ವಶ

Friday, July 5th, 2019
Redstone

ಮಂಗಳೂರು: ನಗರದ ಉತ್ತರ ಉಪ ವಿಭಾಗದ ರೌಡಿ ನಿಗ್ರಹ ದಳವು ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಬಡಗ ಮಿಜಾರು ಗ್ರಾಮದ ಪದಮಲೆ ಮತ್ತು ಮಂಜನಬೈಲು ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಕೆಂಪು ಕಲ್ಲು ಅಗೆದು ಹಣ ಮಾಡುತ್ತಿದ್ದ ಗಣಿಗಾರಿಕೆ ಅಡ್ಡೆ ಮೇಲೆ ದಾಳಿ ಮಾಡಿ ಸುಮಾರು 31 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಜೋಕಿಂ ಕೊರೆಯ ಮತ್ತು ಹೇಮಚಂದ್ರ, ಜಗದೀಶ್ ಎಂಬುವವರು ಯಾವುದೇ ಪರವಾನಿಗೆ ಇಲ್ಲದೆ ಅನಧಿಕೃತವಾಗಿ ಕೆಂಪು ಕಲ್ಲಿನ ಗಣಿಗಾರಿಕೆಯನ್ನು ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಬಂದ […]

ರಾಜ್ಯಾದ್ಯಂತ ಕಬ್ಬಿಣ ಅದಿರು ರಪ್ತು ನಿಷೇಧ : ಯಡಿಯೂರಪ್ಪ

Saturday, August 21st, 2010
ರಾಜ್ಯಾದ್ಯಂತ ಕಬ್ಬಿಣ ಅದಿರು ರಪ್ತು ನಿಷೇಧ : ಯಡಿಯೂರಪ್ಪ

ಬೆಂಗಳೂರು : ಅಕ್ರಮ ಗಣಿಗಾರಿಕೆ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿರುವ ಬೆನ್ನಲ್ಲೇ,  ರಾಜ್ಯಾದ್ಯಂತ ಕಬ್ಬಿಣ ಅದಿರು ರಫ್ತಿಗೆ ನಿಷೇಧ ಹೇರಲು ರಾಜ್ಯ ಸರಕಾರ ಮುಂದಾಗುವ ಮೂಲಕ ರೆಡ್ಡಿ ಸಹೋದರರಿಗೆ ದೊಡ್ಡ ಹೊಡೆತ ಬಿದ್ದಂತಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅದಿರು ಸಾಗಾಟ ರಫ್ತು ಪರ್ಮಿಟ್ ರದ್ದು ಮಾಡಿರುವುದಾಗಿ ತಿಳಿಸಿದ್ದು, ಅಕ್ರಮ ಗಣಿಗಾರಿಕೆ ಕುರಿತಂತೆ ಲೋಕಾಯುಕ್ತ ವರದಿ ಸಲ್ಲಿಕೆಯಾಗುವವರೆಗೂ ಈ ತಡೆಯಾಜ್ಞೆ ಮುಂದುವರಿಯಲಿದೆ. ಆ ನಿಟ್ಟಿನಲ್ಲಿ ರಾಜ್ಯಾದ್ಯಂತ ಕಬ್ಬಿಣ ಅದಿರು ರಫ್ತಿಗೆ ಸಂಪೂರ್ಣ ನಿಷೇಧ ಹೇರಿ ರಾಜ್ಯ […]