ಮಂಗಳೂರಲ್ಲಿ ನಕಲಿ ಅಂಕಪಟ್ಟಿ ಮಾರಾಟ: ಓರ್ವನ ಬಂಧನ
Thursday, March 15th, 2018ಮಂಗಳೂರು: ತೊಕ್ಕೊಟ್ಟು ಟಿ.ಸಿ. ರಸ್ತೆಯಲ್ಲಿರುವ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಕಲ್ ಸೈನ್ಸ್ (ಎಂಐಟಿಎಸ್) ಹೆಸರಿನ ಸಂಸ್ಥೆಯಲ್ಲಿ ನಕಲಿ ಅಂಕಪಟ್ಟಿಯನ್ನು ತಯಾರಿಸಿ ಹಣಕ್ಕಾಗಿ ಮಾರಾಟ ಮಾಡುತ್ತಿದ್ದವನನ್ನು ನಗರ ಸಿಸಿಬಿ ಪೊಲೀಸರು ಬಂಧಿಸಿ ನಕಲಿ ಅಂಕಪಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ಉಳ್ಳಾಲ ಟಿ.ಸಿ. ರಸ್ತೆಯ ಗೋಡ್ವಿನ್ ಡಿ.ಸೋಜಾ (33) ಎಂದು ಗುರುತಿಸಲಾಗಿದೆ. ನಕಲಿ ಅಂಕಪಟ್ಟಿ ಮತ್ತು ಪ್ರಮಾಣಪತ್ರವನ್ನು ತಯಾರಿಸಿ 10,000 ರಿಂದ 45,000 ರೂ.ವರೆಗೆ ಮಾರಾಟ ಮಾಡಿ ವಂಚಿಸುತ್ತಿದ್ದ. ಆರೋಪಿ ಎಂಐಟಿಎಸ್ಲ್ಲಿ ಕೆಲಸ ಮಾಡುತ್ತಿದ್ದಾನೆ. ಈತ 2016ರಿಂದ ಸಂಸ್ಥೆಯನ್ನು ನಡೆಸುತ್ತಲೇ ಎಸ್ಎಸ್ಎಲ್ಸಿ, […]