ಗೋವಿನ ಮಹತ್ವವನ್ನು ಮನೆಮನೆಗೆ ತಲುಪಿಸಿ ಜನಜಾಗೃತಿ ಮೂಡಿಸುವುದರಿಂದ ಗೋರಕ್ಷಣೆ ಸಾಧ್ಯ: ಸಿದ್ಧಾರ್ಥ ಗೋಯೆಂಕಾ

Monday, September 26th, 2016
siddartha-goyenka

ಉಡುಪಿ: ಗೋವಿನೊಂದಿಗಿರುವ ಭಾವನಾತ್ಮಕ ಸಂಬಂಧದ ಜೊತೆಗೆ ಗೋವಿನಿಂದ ಸಿಗುವ ವಾಣಿಜ್ಯ ಉಪಯೋಗ ಹಾಗೂ ಔಷಧಿಯುಕ್ತ ವಸ್ತುಗಳ ಮಹತ್ವವನ್ನು ಮನೆಮನೆಗೆ ತಲುಪಿಸಿ ಜನಜಾಗೃತಿ ಮೂಡಿಸುವುದರಿಂದ ಗೋರಕ್ಷಣೆ ಸಾಧ್ಯ ಎಂದು ಬಿಜೆಪಿ ಗೋ ಸಂರಕ್ಷಣಾ ಪ್ರಕೋಷ್ಠದ ರಾಜ್ಯ ಸಂಚಾಲಕ ಸಿದ್ಧಾರ್ಥ ಗೋಯೆಂಕಾ ಹೇಳಿದರು. ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜರುಗಿದ ಗೋಸಂರಕ್ಷಣಾ ಪ್ರಕೋಷ್ಠದ ಸಭೆ ಉದ್ದೇಶಿಸಿ ಮಾತನಾಡಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅವರು ಅಕ್ರಮ ಗೋ ಸಾಗಾಟ ಮತ್ತು ಗೋ ಹತ್ಯೆ ನಿಯಂತ್ರಿಸಬೇಕು ಎಂದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೈಕಾಡಿ […]

ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ಎಸಗುವ ಮತೀಯ ಶಕ್ತಿಗಳ ವಿರುದ್ಧ ಜಾಗೃತರಾಗಬೇಕು: ರಮಾನಾಥ ರೈ

Wednesday, August 24th, 2016
Rai

ಮಂಗಳೂರು: ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ಎಸಗುವ ಮತೀಯ ಶಕ್ತಿಗಳ ವಿರುದ್ಧ ಪ್ರಜ್ಞಾವಂತರು ಜಾಗೃತರಾಗಬೇಕು ಹಾಗೂ ಅವರನ್ನು ದೂರವಿಡಬೇಕು ಎಂದು ರಾಜ್ಯ ಅರಣ್ಯ, ಪರಿಸರ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೇಳಿದರು. ನಗರದ ಸರ್ಕಿಟ್‌ ಹೌಸ್‌ನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಉಭಯ ಜಿಲ್ಲೆಗಳಲ್ಲಿ, ಧರ್ಮ, ದೇವರು, ದೇಶಪ್ರೇಮ, ಗೋರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರ ನೋವು ತರುವ ವಿಚಾರ. ಕೆಂಜೂರಿನಲ್ಲಿ ನಡೆದಿರುವ ಪ್ರವೀಣ್‌ ಪೂಜಾರಿ ಹತ್ಯೆ ಗೋರಕ್ಷಕರ […]

ಸರ್ಕಿಟ್‌ ಹೌಸ್ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

Monday, August 22nd, 2016
Amit-against-protest

ಮಂಗಳೂರು: ಗೋರಕ್ಷಣೆಯ ಹೆಸರಿನಲ್ಲಿ ಅಮಾಯಕರ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಕೊಲೆ ಪ್ರಕರಣಗಳನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಇಂದು ನಗರಕ್ಕೆ ಆಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ತಂಗಿದ್ದ ಸರ್ಕಿಟ್‌ ಹೌಸ್ ಮುಂದೆ ಅಧ್ಯಕ್ಷ ಮಿಥುನ್ ರೈ ನೇತೃತ್ವದಲ್ಲಿ ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಗೋ ಮಾತೆಯ ಹೆಸರಿನಲ್ಲಿ ನಕಲಿ ಗೋರಕ್ಷಕರು ಅಮಾಯಕರನ್ನು ಹತ್ಯೆ ಮಾಡುತ್ತಿದ್ದಾರೆ. ಶಾಂತಿ, ನೆಮ್ಮದಿಯಿಂದ ಇದ್ದ ಅವಿಭಜಿತ ದಕ್ಷಿಣ ಕನ್ನಡ […]