ಗೌರಿ ಲಂಕೇಶ್ ಹತ್ಯೆ ಪ್ರಕರಣ : ಬಂಧನಕ್ಕೆ ಒಳಗಾಗಿದ್ದ ಆರೋಪಿ 15 ದಿನಗಳ ಕಾಲ ಎಸ್​ಐಟಿ ವಶಕ್ಕೆ

Monday, January 13th, 2020
gowri

ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಇತ್ತೀಚೆಗಷ್ಟೇ ಎಸ್ಐಟಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಆರೋಪಿ ರಿಷಿಕೇಶ್ನನ್ನು 15 ದಿನಗಳ ಕಾಲ ಎಸ್ಐಟಿ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿದೆ. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೂವರೆ ವರ್ಷದ ಬಳಿಕ ಮತ್ತೊಬ್ಬ ಆರೋಪಿ ರಿಷಿಕೇಶ್ ದೇವಾಡಿಕರ್ ಅಲಿಯಾಸ್ ಮುರಳಿ ಎಂಬಾತನನ್ನು ಎಸ್ಐಟಿ ಪೊಲೀಸರು ಮೂರು ದಿನಗಳ ಹಿಂದೆ ಜಾರ್ಖಂಡ್ನಲ್ಲಿ ಬಂಧಿಸಿದ್ದರು. ಬಂಧಿತ ಆರೋಪಿ ಕೃತ್ಯಕ್ಕೆ ಬಳಸಿದ್ದ ಪಿಸ್ತೂಲ್ಗಳನ್ನು ನಾಶ ಮಾಡಿದ್ದ ಎನ್ನಲಾಗಿದೆ. ಹೀಗಾಗಿ […]

ಗೌರಿ ಲಂಕೇಶ್​ಗೆ ಫ್ರಾನ್ಸ್​​ನಿಂದ ಮರಣೋತ್ತರ ಪ್ರಶಸ್ತಿ

Wednesday, September 5th, 2018
gouri-journalist

ಬೆಂಗಳೂರು: ಕಳೆದ ವರ್ಷ ಸೆ. 5 ರಂದು ನಗರದಲ್ಲಿ ಹತ್ಯೆಗೀಡಾಗಿದ್ದ ಪತ್ರಕರ್ತೆ ಗೌರಿ ಲಂಕೇಶ್ ಮರಣೋತ್ತರವಾಗಿ ಫ್ರಾನ್ಸ್ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಹಂತಕರ ಗುಂಡೇಟಿಗೆ ಬಲಿಯಾಗಿದ್ದ ಗೌರಿ ಲಂಕೇಶ್ ಗೆ ಮರಣೋತ್ತರವಾಗಿ ದಿ ಬೇಯಕ್ಸ್ ಕಲ್ವಾಡೊಸ್ ಪ್ರಶಸ್ತಿ ನೀಡಲಾಗ್ತಿದೆ. ಅಕ್ಟೋಬರ್ 8 ರಂದು ಫ್ರಾನ್ಸ್ ನಲ್ಲಿ ಪ್ರಶಸ್ತಿ ವಿತರಿಸಲಾಗುತ್ತಿದ್ದು, ಈ ಪ್ರಶಸ್ತಿಯನ್ನ ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್ ಸ್ವೀಕರಿಸಲಿದ್ದಾರೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣ..ಮತ್ತಿಬ್ಬರ ಆರೋಪಿಗಳ ಬಂಧನ!

Monday, July 23rd, 2018
gouri-lankesh

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹುಬ್ಬಳ್ಳಿ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ಹುಬ್ಬಳ್ಳಿ ನಿವಾಸಿಗಳಾದ ಅಮಿತ್ ರಾಮಚಂದ್ರ ಮತ್ತು ಗಣೇಶ್ ಮಿಸ್ಕಿ ಬಂಧಿತ ಆರೋಪಿಗಳು. ಇಬ್ಬರನ್ನೂ ಎಸ್ಐಟಿ ಕಚೇರಿಯಲ್ಲಿ ಅಧಿಕಾರಿಗಳು ವಿಚಾರಣೆಗಾಗಿ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದರು. ವಿಚಾರಣೆ ವೇಳೆ ಗೌರಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳು ಭಾಗಿಯಾಗಿರುವ ಬಗ್ಗೆ ಎಸ್ಐಟಿ ಅಧಿಕಾರಿಗಳಿಗೆ ಖಚಿತಪಟ್ಟ ಹಿನ್ನೆಲೆಯಲ್ಲಿ ಇಬ್ಬರನ್ನೂ ಬಂಧನಕ್ಕೊಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. […]

ಗೌರಿ ಲಂಕೇಶ್ ಹತ್ಯೆ ಪ್ರಕರಣ..ಓರ್ವ ವಶಕ್ಕೆ!

Friday, July 20th, 2018
gouri-lankesh

ಮಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಎಸ್ಐಟಿ ತಂಡ ದಕ್ಷಿಣ ಕನ್ನಡ ಜಿಲ್ಲೆಯ ಓರ್ವನನ್ನು ವಶಕ್ಕೆ ತೆಗೆದುಕೊಂಡಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಸುಳ್ಯ ತಾಲೂಕಿನ ಸಂಪಾಜೆ ನಿವಾಸಿ ಮೋಹನ್ ನಾಯ್ಕ್ ಎಂಬಾತನನ್ನು ಎಸ್ಐಟಿ ವಶಕ್ಕೆ ತೆಗೆದುಕೊಂಡಿದೆ ಎಂದು ಮಾಹಿತಿ ಲಭ್ಯವಾಗಿದೆ. ಈತ ಹತ್ಯೆ ಆರೋಪಿಗೆ ಗನ್ ನೀಡಿದ್ದ ಎಂಬ ಆರೋಪ ಹಿನ್ನೆಲೆಯಲ್ಲಿ ಎಸ್ಐಟಿ ತಂಡ ವಶಕ್ಕೆ ಪಡೆದಿದೆ. ಮಡಿಕೇರಿಯಲ್ಲಿ ಗನ್ ವ್ಯಾಪಾರ ನಡೆಸುತ್ತಿದ್ದ ಮೋಹನ್ ನಾಯ್ಕ್ನನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಕಿ ವಶಕ್ಕೆ ಎಸ್ಐಟಿ ಅಧಿಕಾರಿಗಳು […]

ಹಿಂದೂ ಸಂಘಟನೆಗಳ ವತಿಯಿಂದ ಮಂಗಳೂರಿನಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ

Monday, July 16th, 2018
hindu

ಮಂಗಳೂರು: ಹಿಂದೂ ಜನಜಾಗೃತಿ ಸಮಿತಿ ಹಾಗೂ ಇತರ ಹಿಂದೂ ಸಂಘಟನೆಗಳ ವತಿಯಿಂದ ಶನಿವಾರ ಮಹಾನಗರದ ಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಗೌರಿ ಲಂಕೇಶ್ ಹತ್ಯಾ ಪ್ರಕರಣದಲ್ಲಿ ಅಮಾಯಕ ಯುವಕರನ್ನು ಬಂಧಿಸಿ ಚಿತ್ರಹಿಂಸೆ ನೀಡಿ ಹೇಳಿಕೆಯನ್ನು ಪಡೆಯುವ ವಿಶೇಷ ತನಿಖಾ ದಳದ ತನಿಖೆಯನ್ನು ಖಂಡಿಸಿ ಮತ್ತು ನಿಷ್ಪಕ್ಷಪಾತವಾಗಿ ತನಿಖೆ ಮಾಡುವಂತೆ, ’ಹಜ್ ಹೌಸ್’ ಗೆ ಹಿಂದೂಗಳ ಮೇಲೆ ಅಪರಿಮಿತ ಅತ್ಯಾಚಾರ ಮಾಡಿರುವ ಟಿಪ್ಪು ಸುಲ್ತಾನನ ಹೆಸರನ್ನು ಕೊಟ್ಟು ಅವನ ಉದಾತ್ತೀಕರಣ ಮಾಡುವ ನಿರ್ಣಯವನ್ನು ಸರ್ಕಾರವು ರದ್ದು ಪಡಿಸಬೇಕು […]

ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆಯಲ್ಲಿ ಬಿಜೆಪಿ ಪಾತ್ರವಿಲ್ಲ: ಜಗದೀಶ್ ಶೆಟ್ಟರ್

Thursday, June 14th, 2018
jagadish-shetter

ಹುಬ್ಬಳ್ಳಿ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆಯಲ್ಲಿ ಬಿಜೆಪಿ ಪಾತ್ರವಿಲ್ಲ. ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ನಿಜವಾದ ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸದ್ಯ ಎಸ್‌ಐಟಿ ಅಧಿಕಾರಿಗಳು ಕೆಲವರನ್ನು ಬಂಧಿಸಿದ್ದಾರೆ. ಇನ್ನು ಅವರ ಮೇಲೆ ತನಿಖೆಯಾಗಬೇಕು. ತನಿಖೆ ನಂತರ ತಪ್ಪಿತಸ್ಥರು ಯಾರೆಂದು ಗೊತ್ತಾಗಲಿದೆ. ತಪ್ಪು ಯಾರೇ ಮಾಡಿದ್ರು ಅವರಿಗೆ ಶಿಕ್ಷೆಯಾಗಲಿ ಎಂದರು. ಇದೇ ವೇಳೆ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಾವು […]

ಖ್ಯಾತ ವಿಚಾರವಾದಿ ಪ್ರೊ.ನರೇಂದ್ರ ನಾಯಕ್ ಕೊಲೆಗೆ ಸಂಚು ?

Thursday, June 14th, 2018
narendra-nayak

ಮಂಗಳೂರು: ವಿಚಾರವಾದಿ ಪ್ರೊ. ಕಲ್ಬುರ್ಗಿ ಹಾಗೂ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಬಳಿಕ ಮಂಗಳೂರು ಮೂಲದ ವಿಚಾರವಾದಿಯೊಬ್ಬರ ಕೊಲೆಗೆ ಸಂಚು ರೂಪಿಸಲಾಗಿದೆಯೇ? ಇಂತಹದೊಂದು ಸಂಶಯ ಇದೀಗ ಕಾಡಲಾರಂಭಿಸಿದೆ. ಮಂಗಳೂರು ಮೂಲದ ಖ್ಯಾತ ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಅವರ ಹತ್ಯೆಗೆ ಸಂಚು ರೂಪಿಸಿರುವ ಅನುಮಾನ ಈಗ ಮೂಡಲಾರಂಭಿಸಿದೆ. ಜೂನ್ 12 ರ ಮಧ್ಯಾಹ್ನ ಅಪರಿಚಿತ ವ್ಯಕ್ತಿಯೊಬ್ಬ ಪ್ರೊ.ನರೇಂದ್ರ ನಾಯಕ್ ಅವರು ವಾಸಿಸುವ ಮಂಗಳೂರಿನ ಹ್ಯಾಟ್ ಹಿಲ್ ನಲ್ಲಿರುವ ನೋಯಲ್ ಪಾರ್ಕ್ ಫ್ಲ್ಯಾಟ್ ಗೆ ಬಂದಿದ್ದು, ತನ್ನ […]

ಗೌರಿ ಲಂಕೇಶ್‌ ಹತ್ಯೆ ಪ್ರಕರಣ… ವಿಜಯಪುರ ಜಿಲ್ಲೆಯಲ್ಲಿ ಮತ್ತಿಬ್ಬರು ಎಸ್‌ಐಟಿ ವಶಕ್ಕೆ?

Tuesday, June 12th, 2018
gauri-lankesh

ವಿಜಯಪುರ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಎಸ್‌ಐಟಿ ತಂಡ ವಶಕ್ಕೆ ಪಡೆದು ವಿಚಾರಣೆಗಾಗಿ ಬೆಂಗಳೂರಿಗೆ ಕರೆದುಕೊಂಡು ಹೋಗಿದೆ ಎನ್ನಲಾಗ್ತಿದೆ. ಗೌರಿ ಲಂಕೇಶ್‌ ಹತ್ಯೆ ಸಂಬಂಧ, 15 ದಿನಗಳ ಹಿಂದೆ ವಿಜಯಪುರ ಜಿಲ್ಲೆಯಿಂದ ವಿಜಯ ಕಾಳೆ ಎಂಬುವನನ್ನು ಬಂಧಿಸಿದ್ದ ಎಸ್‌ಐಟಿ ಅಧಿಕಾರಿಗಳು ಆತನನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ವಿಜಯಪುರ ಜಿಲ್ಲೆಯ ಕೆಲವು ಕಡೆ ತನಗೆ ಸಹಾಯ ಮಾಡಿದ್ದ ಇಬ್ಬರ ಬಗ್ಗೆ ಮಾಹಿತಿ ನೀಡಿದ್ದ ಎಂದು ಹೇಳಲಾಗ್ತಿದೆ. ಇದರ ಆಧಾರದ ಮೇಲೆ ಜಿಲ್ಲೆ ಸಿಂಧಗಿ […]

ಮೋದಿಯನ್ನು ಟೀಕಿಸಲು ಆರಂಭಿಸಿದ ನಂತರ ನನಗೆ ಆಫರ್‌ ನೀಡುವುದನ್ನೇ ಬಾಲಿವುಡ್ ನಿಲ್ಲಿಸಿದೆ: ಪ್ರಕಾಶ್ ರೈ

Friday, May 4th, 2018
bollywood

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ಟೀಕಿಸಲು ಆರಂಭಿಸಿದ ನಂತರ ನನಗೆ ಯಾವುದೇ ಪಾತ್ರಗಳ ಆಫರ್‌ ನೀಡುವುದನ್ನೇ ಬಾಲಿವುಡ್ ನಿಲ್ಲಿಸಿದೆ ಎಂದು ನಟ ಪ್ರಕಾಶ್ ರೈ ಹೇಳಿದ್ದಾರೆ. ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಪ್ರಶ್ನಿಸಿ ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಮೊದಲ ಬಾರಿಗೆ ಟೀಕಿಸಿದ ಬಳಿಕ ತಮ್ಮನ್ನು ಹಿಂದಿ ಸಿನಿಮಾರಂಗ ಮೂಲೆಗುಂಪು ಮಾಡಿತು ಎಂದು ಸಂದರ್ಶನವೊಂದರಲ್ಲಿ ರೈ ದೂರಿದ್ದಾರೆ. ಆದರೆ, ದಕ್ಷಿಣ ಭಾರತದ ಸಿನಿಮಾರಂಗದಲ್ಲಿ ಯಾವುದೇ ಸಮಸ್ಯೆ […]

ಪಬ್ ದಾಳಿ ಆರೋಪಿಗಳ ಖುಲಾಸೆಯಲ್ಲಿ ಕಾಂಗ್ರೆಸ್‌ನದ್ದೂ ತಪ್ಪಿದೆ: ಪ್ರಕಾಶ್ ರೈ

Wednesday, March 14th, 2018
prakash-rai

ಮಂಗಳೂರು: ಪಬ್ ದಾಳಿ ಪ್ರಕರಣದಲ್ಲಿ ಆರೋಪಿಗಳು ಖುಲಾಸೆ ಆಗುವಲ್ಲಿ ಕಾಂಗ್ರೆಸ್‌ ಪಕ್ಷದ್ದೂ ತಪ್ಪಿದೆ ಎಂದು ಬಹುಭಾಷಾ ನಟ ಪ್ರಕಾಶ್ ರೈ ಹೇಳಿದರು. ಮಂಗಳೂರು ಪ್ರೆಸ್ ಕ್ಲಬ್ ಬುಧವಾರ ಆಯೋಜಿಸಿರುವ ಸಂವಾದದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಪೊಲೀಸರು ತಪ್ಪು ಮಾಡಿರಬಹುದು. ಕೋಮುವಾದದ ವಿರುದ್ಧ ಇದ್ದೇನೆ ಎಂದು ಹೇಳಿಕೊಂಡ ಕಾಂಗ್ರೆಸ್ ಈ ಪ್ರಕರಣದ ತನಿಖೆ ಕುರಿತು ಎಚ್ಚರ ವಹಿಸಬೇಕಿತ್ತಲ್ಲವೇ ಎಂದು ಅವರು ಪ್ರಶ್ನಿಸಿದರು. ‘ವಿಧಾನಸಭೆ ಚುನಾವಣೆಯಲ್ಲಿ ನಾನು ಯಾವ ಪಕ್ಷದ ಪರವೂ ಇರುವುದಿಲ್ಲ. ಆದರೆ, […]