ಗ್ರಾ.ಪಂ. ವ್ಯಾಪ್ತಿಯ ವಾಣಿಜ್ಯ ಕಟ್ಟಡಗಳಿಗೆ ನಿಖರ ತೆರಿಗೆ: ಕೆಡಿಪಿ ನಿರ್ಣಯ

Thursday, June 11th, 2015
KDP

ಮಂಗಳೂರು : ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲಿರುವ ಎಲ್ಲಾ ವಾಣಿಜ್ಯ ಸಂಕೀರ್ಣ ಮತ್ತು ಬೃಹತ್ ಕಟ್ಟಡಗಳ ನಿಖರ ಅಳತೆ ಮಾಡಿ, ಗ್ರಾಮ ಪಂಚಾಯತ್‌ಗಳು ಕಟ್ಟಡ ತೆರಿಗೆ ವಿಧಿಸಲು ಇಂದು ನಡೆದ ಕೆಡಿಪಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ತಿಮ್ಮಪ್ಪಗೌಡ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಜಿ.ಪಂ. ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಯಿತು. ಜಿ.ಪಂ. ಉಪಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್‌ಗಳಲ್ಲಿ ಕಟ್ಟಡ ತೆರಿಗೆಯಲ್ಲಿ ಏಕರೂಪತೆ […]

ಪ್ಲಾಸ್ಟಿಕ್ ನಿಷೇಧ ಆದೇಶ ಅನುಷ್ಠಾನಕ್ಕೆ ತನ್ನಿ: ಜಿಲ್ಲಾಧಿಕಾರಿ ಸೂಚನೆ

Saturday, March 12th, 2011
ಜಿಲ್ಲಾಧಿಕಾರಿ ಸುಬೋಧ್ ಯಾದವ್

ಮಂಗಳೂರು : ಜಿಲ್ಲೆಯಾದ್ಯಂತ ಪ್ಲಾಸ್ಟಿಕ್ ನಿಷೇಧ ಆದೇಶ ಸಮಗ್ರವಾಗಿ ಜಾರಿಗೆ ತರಲು ಮಾರ್ಚ್ 30 ಅಂತಿಮ ದಿನವಾಗಿದ್ದು, ಪರ್ಯಾಯವನ್ನು ಜನರಿಗೆ ನೀಡಿ ಆದೇಶ ಪಾಲನೆಗೆ ಸಜ್ಜಾಗಿ ಎಂದು ಜಿಲ್ಲಾಧಿಕಾರಿ ಶ್ರೀ ಸುಬೋಧ್ ಯಾದವ್ ಅವರು ಅಧಿಕಾರಿಗಳಿಗೆ ಆದೇಶಿಸಿದರು. ಇಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಜಿಲ್ಲಾಡಳಿತ ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಮತ್ತು ಪ್ಲಾಸ್ಟಿಕ್ ಮುಕ್ತ ವಾತಾವರಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು ಅಧಿಕಾರಿಗಳ ಕರ್ತವ್ಯಲೋಪಕ್ಕೆ ಕಠಿಣ […]