ಪತ್ರಕರ್ತರ ಗ್ರಾಮ ವಾಸ್ತವ್ಯ‌ ಕಾರ್ಯಕ್ರಮ ರಾಜ್ಯಕ್ಕೆ ಮಾದರಿ-ಸ್ಪೀಕರ್ ಯು.ಟಿ.ಖಾದರ್

Monday, February 12th, 2024
Journalist

ಕೊಲ್ಲಮೊಗ್ರ: ತಮ್ಮ ಒತ್ತಡದ ಕೆಲಸದ ಮಧ್ಯೆಯೂ ಗ್ರಾಮ ವಾಸ್ಯವ್ಯ ಮಾಡಿ ಆ ಊರಿನ ಸಮಸ್ಯೆಗಳನ್ನು ಅರಿತು ಪರಿಹಾರಕ್ಕಾಗಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಪತ್ರಕರ್ತರು ಮಾಡಿದ ಗ್ರಾಮ ವಾಸ್ತವ್ಯ ರಾಜ್ಯಕ್ಕೆ ಮಾದರಿಯಾಗಿದೆ ಎಂದು ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯತ್, ದ.ಕ.ಪೊಲೀಸ್ ಇಲಾಖೆ, ಸುಳ್ಯ ತಾಲೂಕು ಆಡಳಿತ, ಹರಿಹರ, ಕೊಲ್ಲಮೊಗರು […]

ಗ್ರಾಮೀಣ ಭಾಗದ ಮೂಲಭೂತ ಅಭಿವೃದ್ಧಿಗೆ ಸರಕಾರದ‌ ಆದ್ಯತೆ- ಸಚಿವ ಎಸ್.ಅಂಗಾರ

Tuesday, January 11th, 2022
madappady

  ಸುಳ್ಯ : ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ದೇಶದ ಗ್ರಾಮೀಣ‌ ಭಾಗದ ಅಭಿವೃದ್ಧಿ ಇನ್ನೂ ಆಗಿಲ್ಲ. ಗ್ರಾಮಗಳ ಅಭಿವೃದ್ಧಿ ಆಗಬೇಕು ಎಂಬ ಹಿನ್ನಲೆಯಲ್ಲಿ ಗ್ರಾಮೀಣ ಭಾಗದ ಅಭಿವೃದ್ಧಿಗೆ ಸರಕಾರವು ಇಚ್ಛಾಶಕ್ತಿಯಿಂದ ಕೆಲಸ ಮಾಡುತಿದೆ. ರಸ್ತೆ, ಸೇತುವೆಗಳು ಸೇರಿದಂತೆ ಗ್ರಾಮೀಣ ಭಾಗದ ಬೇಡಿಕೆಗಳನ್ನು ಆದ್ಯತೆಯ ಮೇರೆಗೆ ಪೂರ್ತಿ ಮಾಡಲಾಗುವುದು ಎಂದು ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಹಾಗು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ […]

ಮುಖ್ಯಮಂತ್ರಿಯವರು ಗ್ರಾಮ ವಾಸ್ತವ್ಯದ ಹೆಸರಲ್ಲಿ 1.20 ಕೋಟಿ ರೂ. ಖರ್ಚು ಮಾಡಿದ್ದಾರೆ : ಶ್ರೀನಿವಾಸ ಪೂಜಾರಿ

Tuesday, June 25th, 2019
srinivas-poojary

ಮಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿಯವರು ಗ್ರಾಮ ವಾಸ್ತವ್ಯದ  ಹೆಸರಲ್ಲಿ 1.20 ಕೋಟಿ ರೂ. ಖರ್ಚು ಮಾಡಿ ಸಾಧನೆ ಮಾಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಲೇವಡಿ ಮಾಡಿದ್ದಾರೆ. ಮಂಗಳೂರಲ್ಲಿ ಮಂಗಳವಾರ  ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು,  2006ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಗ್ರಾಮ ವಾಸ್ತವ್ಯ ಮಾಡಿರುವ 43 ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಆಗಿದೆಯೇ, ಎಷ್ಟು ಶಾಲೆಗಳ ಅಭಿವೃದ್ಧಿ ಆಗಿದೆ, ಎಷ್ಟು ಬಡವರ ಕಲ್ಯಾಣ ಯೋಜನೆಯ ಅನುಷ್ಠಾನ ಆಗಿದೆ ಎಂಬುವುದನ್ನು ಗಮನದಲ್ಲಿಟ್ಟುಕೊಂಡು ಮತ್ತೊಮ್ಮೆ ಗ್ರಾಮವಾಸ್ತವ್ಯ ಮಾಡಿ […]

ಇಂದಿರಾ ಗಾಂಧಿಯವರ 100ನೆ ಹುಟ್ಟುಹಬ್ಬದ ಪ್ರಯುಕ್ತ ಗ್ರಾಮ ವಾಸ್ತವ್ಯ

Saturday, November 18th, 2017
Mahilla-Congress

ಮಂಗಳೂರು :  ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 100ನೆ ಹುಟ್ಟುಹಬ್ಬದ ಪ್ರಯುಕ್ತ  ನ.18ರ ರಾತ್ರಿಯಿಂದ ನ.19ರ ಸಂಜೆಯವರೆಗೆ ರಾಜ್ಯಾದ್ಯಂತ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ದ.ಕ. ಜಿಲ್ಲೆಯ 12 ಬ್ಲಾಕ್‌ಗಳಲ್ಲಿ ಈ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ ತಿಳಿಸಿದರು. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 12 ಬ್ಲಾಕ್‌ಗಳಲ್ಲಿಯೂ ಬಡ, ಹಿಂದುಳಿದ ಮಹಿಳೆಯನ್ನು ಹೊಂದಿದ ಮನೆಗಳಲ್ಲಿ ಈ ಗ್ರಾಮ […]