ಮನೆಯಲ್ಲೇ ಕಸವಿಭಜನೆಯಿಂದ ತ್ಯಾಜ್ಯ ವಿಲೇ ಸುಲಲಿತ: ಸಿಇಒ

Friday, August 9th, 2013
Tulasi-Maddineni

ಮಂಗಳೂರು : ಸುಶಿಕ್ಷಿತ ಜಿಲ್ಲೆ ದಕ್ಷಿಣ ಕನ್ನಡ; ಇಲ್ಲಿನ ಸುಶಿಕ್ಷಿತರಿಗೆ ಕಸವಿಭಜನೆ ಮೂಲಕ ಕಸ ವಿಲೇ ಹಾಗೂ ತ್ಯಾಜ್ಯದ ಬಳಕೆ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕಿದೆ. ಅರಿವಿನ ಶಿಕ್ಷಣ ಶಾಲೆಯ ಮೂಲಕವೇ ಆರಂಭವಾಗಲಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ತುಳಸಿ ಮದ್ದಿನೇನಿ ಹೇಳಿದರು. ಇಂದು ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಿಂದಿನ ಸಭೆಯ ಅನುಪಾಲನಾ ವರದಿ ಪರಿಶೀಲಿಸಿದರು. ಸ್ವಚ್ಛತೆಗಾಗಿ ಸಾಕಷ್ಟು ಬಹುಮಾನ ಪಡೆದಿರುವ […]

ಪ್ಲಾಸ್ಟಿಕ್ ನಿಷೇಧ ಆದೇಶ ಅನುಷ್ಠಾನಕ್ಕೆ ತನ್ನಿ: ಜಿಲ್ಲಾಧಿಕಾರಿ ಸೂಚನೆ

Saturday, March 12th, 2011
ಜಿಲ್ಲಾಧಿಕಾರಿ ಸುಬೋಧ್ ಯಾದವ್

ಮಂಗಳೂರು : ಜಿಲ್ಲೆಯಾದ್ಯಂತ ಪ್ಲಾಸ್ಟಿಕ್ ನಿಷೇಧ ಆದೇಶ ಸಮಗ್ರವಾಗಿ ಜಾರಿಗೆ ತರಲು ಮಾರ್ಚ್ 30 ಅಂತಿಮ ದಿನವಾಗಿದ್ದು, ಪರ್ಯಾಯವನ್ನು ಜನರಿಗೆ ನೀಡಿ ಆದೇಶ ಪಾಲನೆಗೆ ಸಜ್ಜಾಗಿ ಎಂದು ಜಿಲ್ಲಾಧಿಕಾರಿ ಶ್ರೀ ಸುಬೋಧ್ ಯಾದವ್ ಅವರು ಅಧಿಕಾರಿಗಳಿಗೆ ಆದೇಶಿಸಿದರು. ಇಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಜಿಲ್ಲಾಡಳಿತ ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಮತ್ತು ಪ್ಲಾಸ್ಟಿಕ್ ಮುಕ್ತ ವಾತಾವರಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು ಅಧಿಕಾರಿಗಳ ಕರ್ತವ್ಯಲೋಪಕ್ಕೆ ಕಠಿಣ […]