ಅಕ್ರಮವಾಗಿ ಸ್ಫೋಟಕ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಆರೋಪಿ ಬಂಧನ..!
Tuesday, September 25th, 2018ಬೆಳ್ತಂಗಡಿ: ಅಕ್ರಮವಾಗಿ ಸ್ಫೋಟಕ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಆರೋಪಿಯನ್ನು ಕೆದ್ದಲಿಕೆಯಲ್ಲಿ ಡಿಸಿಐಬಿ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಪುಂಜಾಲಕಟ್ಟೆ ಕುಕ್ಕಳ ಗ್ರಾಮದ ನಿವಾಸಿ ಚಿನ್ನಸ್ವಾಮಿ(70) ಬಂಧಿತ ಆರೋಪಿ. ಬಂಧಿತನಿಂದ 15 ಜಿಲೆಟಿನ್ ಕಡ್ಡಿ, 99 ಡಿಟೋನೇಟರ್ ಮತ್ತು ಇವುಗಳನ್ನು ಸಾಗಿಸಲು ಉಪಯೋಗಿಸಿದ ಹೊಂಡಾ ಆ್ಯಕ್ಟಿವಾ ಸಹಿತ ಒಟ್ಟು 1,05,000 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಡಿಸಿಐಬಿ ಪೊಲೀಸರು ರೌಂಡ್ಸ್ನಲ್ಲಿದ್ದ ಸಂದರ್ಭ ನೆಲ್ಲಿಗುಡ್ಡೆಯಿಂದ ಪುಂಜಾಲಕಟ್ಟೆ ಕಡೆಗೆ KA-21, S-9835 ಸಂಖ್ಯೆಯಹೋಂಡಾ ಆ್ಯಕ್ಟಿವಾದಲ್ಲಿ ಅಕ್ರಮವಾಗಿ ಸ್ಫೋಟಕಗಳನ್ನು ಸಾಗಿಸುತ್ತಿರುವುದಾಗಿ ಮಾಹಿತಿ ಬಂದಿತ್ತು. ಆಗ […]