ಗುದನಾಳದಲ್ಲಿ 20,89 ಲಕ್ಷ ಮೌಲ್ಯದ ಅಕ್ರಮ ಚಿನ್ನ ಸಾಗಾಟ, ಆರೋಪಿ ವಶಕ್ಕೆ

Friday, July 2nd, 2021
Illigal Gold

ಮಂಗಳೂರು : ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 20,89,800 ರೂ. ಮೌಲ್ಯದ 430 ಗ್ರಾಂ ಅಕ್ರಮ ಚಿನ್ನ ಸಾಗಾಟವನ್ನು ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ಪತ್ತೆ ಮಾಡಿದ್ದಾರೆ. ಕಾಸರಗೋಡು ನಿವಾಸಿ ದುಬಾಯಿಂದ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ್ದು, ಈತ ಚಿನ್ನದ ಪೌಡರನ್ನು ಗಮ್ ಬೆರೆಸಿ ಗುದನಾಳದೊಳಗಿಟ್ಟು ಸಾಗಾಟ ಮಾಡಿದ್ದ. ಚಿನ್ನ ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಕಸ್ಟಮ್ಸ್‌ನ ಉಪ ಆಯುಕ್ತ ಪ್ರವೀಣ್ ಕಂಡಿ, ಅಧಿಕಾರಿಗಳಾದ ರಾಕೇಶ್‌ಕುಮಾರ್, ವಿಕಾಸ್‌ಕುಮಾರ್, ಬಿಕ್ರಮ್ […]

ಭಟ್ಕಳದ ವ್ಯಕ್ತಿಯಿಂದ ರೂ. 13,17,860 ಮೌಲ್ಯದ ಅಕ್ರಮ ಚಿನ್ನ ವಶಪಡಿಸಿಕೊಂಡ ಕಸ್ಟಮ್ ಅಧಿಕಾರಿಗಳು

Friday, May 28th, 2021
gold

ಮಂಗಳೂರು : ಕಸ್ಟಮ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಭಟ್ಕಳದ ವ್ಯಕ್ತಿಯನ್ನು ಶುಕ್ರವಾರ ಮೇ 26 ರಂದು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಸಿದ್ದಿಕ್ ಮಿಕ್ದಿಮ್ ಹುಸೈನ್ ಎಂಬಾತ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಯಾಣಿಕ. ಆತ ದುಬೈನಿಂದ ಏರ್ ಇಂಡಿಯಾ ವಿಮಾನ IX 384 ಮೂಲಕ ಆಗಮಿಸಿದ್ದ. ಈತನ ತಪಾಸಣೆ ನಡೆಸಿದಾಗ ಗುದನಾಳದಲ್ಲಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಈತನಿಂದ 24 ಕ್ಯಾರೆಟ್ ಪರಿಶುದ್ಧತೆಯ 262 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಇದರ […]

ವಿಶೇಷವಾಗಿ ವಿನ್ಯಾಸದ ಪಾದರಕ್ಷೆಯಲ್ಲಿ ಚಿನ್ನ ಸಾಗಾಟ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಬ್ಬರ ಬಂಧನ

Monday, March 29th, 2021
Gold

ಮಂಗಳೂರು : ದುಬೈನಿಂದ  ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಮಂಗಳೂರು ಕಸ್ಟಮ್ಸ್‌ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಕಾಸರಗೋಡು ನಿವಾಸಿ ಸುಕ್ಕುರ್ ಮೊಯಿದ್ದೀನ್ ಕುನ್ಹಿ (48) ಹಾಗೂ ಭಟ್ಕಳದ ಮಿಸ್ರಿ ನಸೀಮುಲ್ ಗನಿ (44) ಎಂಬವರು ವಿಶೇಷವಾಗಿ ವಿನ್ಯಾಸದ ಪಾದರಕ್ಷೆಯ ಒಳಗೆ ಚಿನ್ನವನ್ನಿಟ್ಟು ಸಾಗಾಟ ಮಾಡುತ್ತಿದ್ದರು. ಆರೋಪಿಗಳಿಂದ 18.75 ಲಕ್ಷ ರೂ ಮೌಲ್ಯದ 405 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಕಾರ್ಯಾಚರಣೆಯಲ್ಲಿ ಕಸ್ಟಮ್ಸ್ ವಿಭಾಗದ ಅಧಿಕಾರಿಗಳಾದ ಡಾ. ಕಪಿಲ್ ಗಡೆ, ರಾಕೇಶ್ ಕುಮಾರ್, ಸಂದೀಪ್ […]

ಅಕ್ರಮವಾಗಿ 67 ಲಕ್ಷ ರೂ. ಮೌಲ್ಯದ ಚಿನ್ನ ಸಾಗಾಟ, ಇಬ್ಬರ ಬಂಧನ

Thursday, January 7th, 2021
Gold

ಮಂಗಳೂರು:  ಅಕ್ರಮವಾಗಿ 67 ಲಕ್ಷ ರೂ. ಮೌಲ್ಯದ ಚಿನ್ನ ಸಾಗಾಟ ನಡೆಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ಇಲಾಖೆ ಅಧಿಕಾರಿಗಳು (ಡಿಆರ್ಐ) ಪತ್ತೆ ಹಚ್ಚಿದ್ದಾರೆ. ದುಬೈನಿಂದ ಮಂಗಳೂರಿಗೆ ನಿನ್ನೆ ಮಧ್ಯರಾತ್ರಿ 12.30ಕ್ಕೆ ಸ್ಪೈಸ್ ಜೆಟ್ ಎಸ್ಜಿ ‌146 ವಿಮಾನದಲ್ಲಿ ಆಗಮಿಸಿ, ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಭಟ್ಕಳ ಮೂಲದ ವ್ಯಕ್ತಿಯೋರ್ವನನ್ನು ಕಸ್ಟಮ್ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈತ ಅಂಟುವ ಗುಳಿಗೆಯ ಒಳಗೆ ಚಿನ್ನವನ್ನು ಮರೆಮಾಚಿ ಅದನ್ನು ತನ್ನ ಗುಪ್ತಾಂಗದಲ್ಲಿರಿಸಿ […]

ಗುದನಾಳದಲ್ಲಿ ಅಡಗಿಸಿಟ್ಟು ಚಿನ್ನ ಸಾಗಾಟ, ವ್ಯಕ್ತಿಯ ಬಂಧನ

Thursday, July 25th, 2019
gold-past

ಮಂಗಳೂರು :  ಅಕ್ರಮವಾಗಿ ಭಾರಿ ಪ್ರಮಾಣದಲ್ಲಿ ಚಿನ್ನವನ್ನು ಗುದನಾಳದಲ್ಲಿ ಅಡಗಿಸಿಟ್ಟು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಸೀಮಾ ಸುಂಕ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಜುಲೈ 24 ರಂದು ದುಬೈನಿಂದ ಆಗಮಿಸಿದ ವಿಮಾನದಲ್ಲಿದ್ದ ಪ್ರಯಾಣಿಕ ತನ್ನ ಗುದನಾಳದಲ್ಲಿ ಚಿನ್ನ ಅಡಗಿಸಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ. ವ್ಯಕ್ತಿಯನ್ನು ಪರಿಶೀಲಿಸುತ್ತಿದ್ದಾಗ 24 ಕ್ಯಾರೆಟ್ ಶುದ್ದತೆಯ 963 ಗ್ರಾಂ ಚಿನ್ನ ಪೇಸ್ಟ್ ರೂಪದಲ್ಲಿ ಸಿಕ್ಕಿದೆ. ಸುಮಾರು 34.18 ಲಕ್ಷ ರೂ‌ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡ ಕಸ್ಟಮ್ಸ್‌ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಬುರ್ಕಾದೊಳಗೆ ಚಿನ್ನ ಸಾಗಾಟ ಮಹಿಳೆ ಬಂಧನ

Monday, June 24th, 2019
gold

ಮಂಗಳೂರು:  ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿ 15.34 ಲಕ್ಷ ರೂ ಮೌಲ್ಯದ ಚಿನ್ನವನ್ನು ಕಸ್ಟಮ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜೂನ್ 23 ರಂದು ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಸ್ಪೈಸ್ ಜೆಟ್ ವಿಮಾನದ ಪ್ರಯಾಣಿಕನಿಂದ ರೂ 7.17 ಲಕ್ಷ ರೂ ಮೌಲ್ಯದ 211 ಗ್ರಾಂ ಚಿನ್ನ ವಶಪಡಿಸಿಕೊಂಡು ಪ್ರಯಾಣಿಕನನ್ನು ಬಂಧಿಸಲಾಗಿದೆ. ಆರೋಪಿಯು ಚಿನ್ನವನ್ನು ಗೇರ್ ವೀಲ್ನಲ್ಲಿ ಅಡಗಿಸಿಟ್ಟು ತಂದಿದ್ದು, ಬ್ಯಾಗ್ ತಪಾಸಣೆ ವೇಳೆ ಸಿಕ್ಕಿ ಬಿದ್ದಿದ್ದಾನೆ. ಇನ್ನು ಜೂನ್ 24 ರಂದು ಏರ್ […]

ಅಕ್ರಮವಾಗಿ ಚಿನ್ನ ಸಾಗಾಟ, ಏರ್‌ಪೋರ್ಟ್‌ನಲ್ಲಿ ವ್ಯಕ್ತಿಯ ಬಂಧನ

Tuesday, October 24th, 2017
gold dust case

ಮಂಗಳೂರು: ಅಕ್ರಮವಾಗಿ ಚಿನ್ನ ಸಾಗಾಟದ ಮತ್ತೊಂದು ಪ್ರಕರಣವನ್ನು ಮಂಗಳೂರು ಅಂತಾರಾಷ್ಟೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಯಲಿಗೆಳೆದಿದ್ದಾರೆ. ಸಿನಿಮೀಯ ರೀತಿಯಲ್ಲಿ ಚಿನ್ನವನ್ನು ಸಾಗಿಸುತ್ತಿದ್ದ ಕಾಸರಗೋಡಿನ ರಫೀಕ್ ಮೊದಿನ್ (36) ಬಂಧಿತ ವ್ಯಕ್ತಿ. ಆತನಿಂದ 31,31,689 ರೂ. ಮೌಲ್ಯದ 1.58 ಕಿ. ಗ್ರಾಂ. ಚಿನ್ನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ದುಬೈನಿಂದ ಅತ್ಯಂತ ಚಾಣಾಕ್ಷ ರೀತಿಯಲ್ಲಿ ತನ್ನ ಎರಡು ಕಾಲಿನ ಉದ್ದಕ್ಕೂ ಚಿನ್ನದ ಪುಡಿ ತುಂಬಿದ ಪ್ಲಾಸ್ಟಿಕ್ ಕವರನ್ನು ಗಮ್ ಮೂಲಕ ಅಂಟಿಸಿಕೊಂಡು ಸಾಗಿಸುತ್ತಿದ್ದ, ಈ ವೇಳೆ ಈತನ ವರ್ತನೆಯಲ್ಲಿ ಅನುಮಾನ ವ್ಯಕ್ತವಾದ […]