ಮಂಗಳೂರು ಜಿಲ್ಲಾಧಿಕಾರಿಯವರ ಕಚೇರಿ ಕಟ್ಟಡದಲ್ಲಿ ಚುನಾವಣಾ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

Tuesday, April 2nd, 2024
election-staff

ಮಂಗಳೂರು : ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ದತಿ ತಂಡದ ಸದಸ್ಯರಾಗಿದ್ದರು. ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಅವರು ಇಂದು ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾಗಿದೆ. ತಕ್ಷಣ ಅವರನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ.

ಟ್ರಂಪ್ ಸೋಲು ಭಾರತ ಕ್ಕೆ ಪಾಠ – ಶಿವಸೇನೆ

Monday, November 9th, 2020
Tackrey

ಮುಂಬೈ: ಅಮೆರಿಕ ಅಧ್ಯಕ್ಷೀಯ ಚುನಾವಣಾ ಸನ್ನಿವೇಶವನ್ನು ಬಿಹಾರ ವಿಧಾನಸಭಾ ಚುನಾವಣೆಯೊಂದಿಗೆ ಹೋಲಿಸಿ ಶಿವಸೇನೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸೋಲಿನಿಂದ ಭಾರತವೂ ಪಾಠ ಕಲಿತರೆ ಒಳ್ಳೆಯದು ಎಂದು ಹೇಳಿದೆ. ಶಿವಸೇನೆ, “ಅಧ್ಯಕ್ಷ ಟ್ರಂಪ್ ಎಂದಿಗೂ ರಾಷ್ಟ್ರದ ಅಧ್ಯಕ್ಷ ಪಟ್ಟಕ್ಕೆ ಅರ್ಹರಲ್ಲ. ಅಮೆರಿಕದ ನಾಗರಿಕರು ತಾವು ನಾಲ್ಕು ವರ್ಷದ ಹಿಂದೆ ಮಾಡಿದ್ದ ತಪ್ಪನ್ನು ಸರಿಪಡಿಸಿದ್ದಾರೆ. ಟ್ರಂಪ್ ಗೆ ಒಂದೂ ಭರವಸೆ ಪೂರೈಸಲಾಗಿಲ್ಲ. ನಾವೂ ಸಹ ಟ್ರಂಪ್ ಸೋಲಿನಿಂದ ಕಲಿತರೆ ಒಳ್ಳೆಯದಾಗಲಿದೆ”  ಎಂದು  ಪಕ್ಷದ ಮುಖವಾಣಿ ಸಾಮ್ನಾದಲ್ಲಿ ಹೇಳಿಕೊಂಡಿದೆ . ಅಮೆರಿಕಾದಲ್ಲಿ […]

ನಗರ ಸ್ಥಳೀಯ ಚುನಾವಣಾ: ಯಾವುದೇ ಪಕ್ಷಕ್ಕೆ ಜನರ ಸ್ಪಷ್ಟ ಬಹುಮತ ಇಲ್ಲ

Monday, September 3rd, 2018
local-fights

ಬೆಂಗಳೂರು: ಮಿನಿ ಸಮರ ಎಂದೇ ಬಿಂಬಿತವಾಗಿರುವ ನಗರ ಸ್ಥಳೀಯ ಚುನಾವಣಾ ಫಲಿತಾಂಶ ಬಹುತೇಕ ಅಂತಿಮವಾಗಿದ್ದು ಯಾವುದೇ ಪಕ್ಷಕ್ಕೆ ಜನರು ಸ್ಪಷ್ಟ ಬಹುಮತ ಕೊಟ್ಟಿಲ್ಲ. ಹೆಚ್ಚಿನ ಕಡೆ ಅತಂತ್ರ ಫಲಿತಾಂಶ ಬಂದಿದೆ. 102 ಸ್ಥಳೀಯ ಸಂಸ್ಥೆಗಳ ಮತ ಎಣಿಕೆ ಕಾರ್ಯ ಬಹುತೇಕ ಅಂತಿಮ ಹಂತಕ್ಕೆ ಬಂದು ನಿಂತಿದೆ. ಮಹಾನಗರ ಪಾಲಿಕೆ ಒಟ್ಟು – 135 ಕಾಂಗ್ರೆಸ್ – 36 ಬಿಜೆಪಿ – 54 ಜೆಡಿಎಸ್ – 30 ಇತರರು – 15 ಪಟ್ಟಣ ಪಂಚಾಯತಿ ಒಟ್ಟು ಸ್ಥಾನ – […]

ಪ್ರಚಾರದ ವೇಳೆ ಹೆಚ್‌ಡಿಕೆ-ನಿಖಿಲ್‌ ಮುಖಾಮುಖಿ: ಭಾವುಕರಾದ ಅಪ್ಪ-ಮಗ

Tuesday, April 24th, 2018
nickil-kumar

ಬೆಂಗಳೂರು: ಚುನಾವಣಾ ಹಿನ್ನೆಲೆಯಲ್ಲಿ ದೇವೇಗೌಡರ ಕುಟುಂಬಸ್ಥರು ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ರಾಜ್ಯದ ಬೇರೆ ಬೇರೆ ಸ್ಥಳಗಳಲ್ಲಿ ಪ್ರತ್ಯೇಕವಾಗಿ ಪ್ರಚಾರ ಮಾಡುತ್ತಿದ್ದಾರೆ. ಹಾಗೆಯೇ ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಗೌಡ ಕೂಡ ಪ್ರಚಾರದಲ್ಲಿ ತೊಡಗಿದ್ದಾರೆ. ಪ್ರಚಾರದ ವೇಳೆ ಅನಿರೀಕ್ಷಿತವಾಗಿ ಕುಮಾರಸ್ವಾಮಿ ಹಾಗೂ ನಿಖಿಲ್ ಗೌಡ ಕುಣಿಗಲ್‌ನಲ್ಲಿ ಮುಖಾಮುಖಿಯಾದರು. ಈ ವೇಳೆ ಅಪ್ಪ, ಮಗ ಭಾವುಕರಾಗಿ ಅಪ್ಪಿಕೊಂಡ ಪ್ರಸಂಗ ನಡೆಯಿತು. ಇದೇ ವೇಳೆ ಕುಮಾರಸ್ವಾಮಿ ಅವರು ಮಮತೆಯಿಂದ ಮಗನ ಮುಖದ ಮೇಲೆ ಕೈಯಾಡಿಸಿದರು. ಈ ಸನ್ನಿವೇಶಕ್ಕೆ ಅಪರೂಪದ ಚಿತ್ರಗಳೇ […]

ಮೊದಲ ಪಟ್ಟಿಯ 72ರಲ್ಲಿ 68 ಕ್ಷೇತ್ರ ಗೆಲ್ತೇವೆ :ಯಡಿಯೂರಪ್ಪ

Wednesday, April 11th, 2018
yedeyurappa

ಬೆಂಗಳೂರು: ಒಂದೆರಡು ದಿನಗಳಲ್ಲಿ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಬುಧವಾರ ನಡೆದ ಬಿಜೆಪಿ ಚುನಾವಣಾ ಕಾರ್ಯಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಬಿಎಸ್‌ವೈ ಮೊದಲ ಪಟ್ಟಿಯ 72 ಅಭ್ಯರ್ಥಿಗಳ ಪೈಕಿ 68 ಅಭ್ಯರ್ಥಿಗಳು ಗೆಲ್ತಾರೆಎಂದರು. ನಾವು 130 ಸ್ಥಾನಗಳನ್ನು ನಿಶ್ಚಿತವಾಗಿ ಗೆಲ್ತೇವೆ ಎಂದು ಈ ವೇಳೆ ವಿಶ್ವಾಸ ವ್ಯಕ್ತ ಪಡಿಸಿದರು.

ಚುನಾವಣಾ ನೀತಿ ಸಂಹಿತೆ… ತಪಾಸಣಾ ಕಾರ್ಯ ಚುರುಕು

Friday, March 30th, 2018
election

ಮಂಗಳೂರು: ರಾಜ್ಯದಲ್ಲಿ ಚುನಾವಣಾ ದಿನ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ತಪಾಸಣಾ ಕಾರ್ಯ ಚುರುಕುಗೊಳಿಸಲಾಗಿದೆ. ಪ್ರಮುಖ ರಸ್ತೆಗಳಲ್ಲಿ ತಪಾಸಣಾ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಸಾರ್ವಜನಿಕ ಸ್ಥಳಗಳಲ್ಲಿರುವ ಫ್ಲೆಕ್ಸ್, ಕಟೌಟ್‌ಗಳನ್ನು ತೆರವುಗೊಳಿಸುವ ಕಾರ್ಯ ತೀವ್ರಗತಿಯಲ್ಲಿ ನಡೆಯುತ್ತಿದೆ. ಮಂಗಳೂರಿನ ತಲಪಾಡಿ ಮೂಲಕ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ತಲಪಾಡಿ ಅಂತಾರಾಜ್ಯ ಗಡಿಯಲ್ಲಿ ಕೂಡಾ ತಪಾಸಣೆಯನ್ನು ತೀವ್ರಗೊಳಿಸಿದೆ.

ಚುನಾವಣಾ ಪ್ರಕ್ರಿಯೆ : ಸಹಕರಿಸಲು ರಾಜಕೀಯ ಪಕ್ಷಗಳಿಗೆ ಡಿ.ಸಿ ಮನವಿ

Wednesday, January 17th, 2018
Election

ಮಂಗಳೂರು :ಮುಂಬರುವ ವಿಧಾನಸಭಾ ಕ್ಷೇತ್ರದ ಚುನಾವಣಾ ಹಿನ್ನೆಲೆಯಲ್ಲಿ ಚುನಾವಣಾ ಪೂರ್ವ ಪ್ರಾಥಮಿಕ ಪ್ರಕ್ರಿಯೆಗಳು ಈಗಾಗಲೇ ಆರಂಭಗೊಂಡಿದೆ. ಈ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಸರ್ವಪಕ್ಷಗಳ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಮುಂಬರುವ ಚುನಾವಣೆ ಮುಕ್ತ ಹಾಗೂ ನ್ಯಾಯ ಸಮ್ಮತ ರೀತಿಯಲ್ಲಿ ನಡೆಸಲು ಚುನಾವಣಾ ಆಯೋಗ ಕಟಿಬದ್ದವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಂದು ರಾಜಕೀಯ ಪಕ್ಷಗಳು ತಮ್ಮ ಪರವಾಗಿ ಜಿಲ್ಲಾಡಳಿತದೊಂದಿಗೆ ವ್ಯವಹರಿಸಲು ಜವಾಬ್ದಾರಿಯುತ […]

ಕುಸಿದು ಬಿದ್ದ ಬಿಎಸ್‌ವೈಗೆ ಹೃದಯಾಘಾತ!; ವೈರಲ್‌ ಆದ ಸುದ್ದಿ

Tuesday, December 19th, 2017
yedeyorappa

ಬೆಂಗಳೂರು: ‘ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ’ ಎನ್ನುವ ಸುದ್ದಿ ಸೋಮಾವಾರ ಸಂಜೆಯಿಂದ ವಾಟ್ಸಪ್‌ ಸೇರಿದಂತೆ ಸಾಮಾಜಿಕ ತಾಣಗಳಲ್ಲಿ ಸುಳ್ಳು ವೈರಲ್‌ ಆಗಿ ಹರಿದಾಡಿದೆ. ಈ ಬಗ್ಗೆ ಮಂಗಳವಾರ ಯಡಿಯೂರಪ್ಪ ಅವರ ಬಳಿ ಸುದ್ದಿಗಾರರು ಪ್ರಶ್ನಿಸಿದಾಗ’ ಏನ್ರಿ ನೀವು ಬರ್ದಿದ್ದೀರಾ… ಪ್ರತ್ಯಕ್ಷ ನೋಡ್ತಾ ಇದ್ದೀರಲ್ಲಾ’ ಎಂದರು. ‘ಗುಜರಾತ್‌ ಮತ್ತು ಹಿಮಾಚಲ ಪ್ರದೇಶ ಚುನಾವಣಾ ಫ‌ಲಿತಾಂಶ ನೋಡುತ್ತಿದ್ದ ವೇಳೆ ಬಿಎಸ್‌ವೈ ಅವರು ಹೃದಯಾಘಾತದಿಂದ ಕುಸಿದು ಬಿದ್ದಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ’ ಎಂದು ಫೋಟೋ ಸಮೇತ […]

ಇಲಾಖೆಗಳು ಪರಸ್ಪರ ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಬೇಕು : ವಿ. ಉಮೇಶ್‌

Tuesday, February 26th, 2013
SHD Principal Secretary V Umesh

ಮಂಗಳೂರು : ಹೈದರಾಬಾದ್‌ ದಾಳಿ ಹಿನ್ನೆಲೆ ಮತ್ತು ಚುನಾವಣಾ ಸಮಯದಲ್ಲಿ ರಾಷ್ಟ್ರೀಯ ಭದ್ರತೆ ನೀಡಬೇಕಿರುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ, ಸಲಹೆ ನೀಡುವ ಸಲುವಾಗಿ  ಸೋಮವಾರ ರಾಜ್ಯ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ. ಉಮೇಶ್‌  ರ ನೇತೃತ್ವದಲ್ಲಿ  ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡದ ಜಿಲ್ಲಾ ಮುಖ್ಯಸ್ಥರು, ಪೊಲೀಸ್‌, ಮೀನುಗಾರಿಕೆ ಮತ್ತು ಪ್ರವಾಸೋದ್ಯಮ, ಕೋಸ್ಟ್‌ಗಾರ್ಡ್‌ ಅಧಿಕಾರಿಗಳ ಸಭೆ ನಡೆಯಿತು. ಚುನಾವಣೆ ಸಂದರ್ಭ ದೇಶದ ಭದ್ರತೆ ದೃಷ್ಟಿಯಿಂದ ಪೊಲೀಸ್‌, ಮೀನುಗಾರಿಕೆ ಮತ್ತು  ಜಿಲ್ಲಾಡಳಿತ […]