ವಿವಿ ಕಾಲೇಜು: ರಾಷ್ಟ್ರೀಯ ಮತದಾರರ ದಿನಾಚರಣೆ

Wednesday, January 26th, 2022
Voters day

ಮಂಗಳೂರು: ಭಾರತೀಯ ಚುನಾವಣಾ ಆಯೋಗದ ಆಶಯಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಮಂಗಳವಾರ ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 12 ನೇ ರಾಷ್ಟ್ರೀಯ ಮತದಾರರ ದಿನ ಆಚರಿಸಲಾಯಿತು. ಚುನಾವಣೆಯನ್ನು ‘ಎಲ್ಲರೂ ಒಳಗೊಳ್ಳುವ, ಸುಗಮ ಮತ್ತು ಪ್ರತಿಯೊಬ್ಬರೂ ಭಾಗವಹಿಸುವ ಪ್ರಕ್ರಿಯೆಯಾಗಿ ಮಾಡುವʼ ಆಶಯದೊಂದಿಗೆ ನಡೆದ ಈ ಬಾರಿಯ ಆಚರಣೆಗೆ ಪ್ರಾಂಶುಪಾಲೆ ಡಾ. ಅನಸೂಯ ರೈ ಚಾಲನೆ ನೀಡಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಲತಾ ಎ. ಪಂಡಿತ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ವಿದ್ಯಾರ್ಥಿಗಳು ತಮ್ಮ ಬಲಗೈ […]

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆ ಅಗಸ್ಟ ತಿಂಗಳಲ್ಲೇ ಬಹುತೇಕ ಖಚಿತ

Tuesday, August 3rd, 2021
Hubli-Dharwada

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆ ಪ್ರಸಕ್ತ ಅಗಸ್ಟ ತಿಂಗಳಲ್ಲೇ ನಡೆಯುವುದು ಬಹುತೇಕ ಖಚಿತವಾಗಿದ್ದು, ಎಲ್ಲ ಸಿದ್ಧತೆಗಳು ಭರದಿಂದ ಸಾಗಿವೆ. ಜಿಲ್ಲಾಧಿಕಾರಿ ನಿತೇಶ ಪಾಟೀಲ ಶುಕ್ರವಾರ ಚುನಾವಣಾ ಆಯೋಗದೊಂದಿಗೆ ಚರ್ಚೆ ನಡೆಸಿದ ನಂತರ ಅಲ್ಲಿ ಚರ್ಚಿಸಲಾದ ವಿಷಯದಂತೆ ಎಲ್ಲ ಅವಶ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಪಾಲಿಕೆ ಆಯುಕ್ತರಿಗೆ ಆದೇಶ ನೀಡಿದ್ದು, ನಾಡಿದ್ದು ದಿ.೫ರಂದು ಘೋಷಣೆಯಾಗುವ ಸಾಧ್ಯತೆಗಳು ದಟ್ಟವಾಗಿವೆ. ಅಲ್ಲದೇ ಪ್ರತಿ ಐದು ವಾರ್ಡಗೊಂದರ0ತೆ ಚುನಾವಣಾ ಅಧಿಕಾರಿ (ಆರ್‌ಓ) ಹಾಗೂ ಸಹಾಯಕ ಚುನಾವಣಾಧಿಕಾರಿ (ಎಆರ್‌ಓ) ನೇಮಕ ಮಾಡಿ ಚುನಾವಣೆ ಆಯೋಗಕ್ಕೆ […]

ಡಿಸೆಂಬರ್ 22, 27 ರಂದು ಕರ್ನಾಟಕ ಗ್ರಾಮ ಪಂಚಾಯತಿ ಚುನಾವಣೆ

Monday, November 30th, 2020
Basavaaraj

ಬೆಂಗಳೂರು : ಕರ್ನಾಟಕ ಗ್ರಾಮ ಪಂಚಾಯತಿ ಚುನಾವಣೆ ಯ ದಿನಾಂಕಗಳು ಪ್ರಕಟಗೊಂಡಿದ್ದು ಮೊದಲ ಹಂತದ ಮತದಾನ ಡಿಸೆಂಬರ್ 22ರಂದು ನಡೆಯಲಿದೆ. ಎರಡನೇ ಹಂತದ ಮತದಾನ ಡಿ.27ರಂದು ನಡೆಯಲಿದೆ. ರಾಜ್ಯದ 30 ಜಿಲ್ಲೆಗಳ ಗ್ರಾಮ ಪಂಚಾಯತಿಗೆ ಚುನಾವಣೆ ನಡೆಯಲಿದೆ. 5762 ಗ್ರಾಮ ಪಂಚಾಯತಿಗೆ ಚುನಾವಣೆ ನಡೆಯಲಿದೆ. 92,121 ಸದಸ್ಯರಿಗೆ ಚುನಾವಣೆ ನಡೆಯಲಿದೆ. ರಾಜ್ಯ ಚುನಾವಣಾ ಆಯೋಗವು ಸೋಮವಾರ  ಸುದ್ದಿಗೋಷ್ಠಿ ನಡೆಸಿ ಗ್ರಾ.ಪಂ.ಚುನಾವಣೆ ನಡೆಯುವ ದಿನಾಂಕವನ್ನು ಘೋಷಿಸಿದೆ.  ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆ ತನಕ ಮತದಾನ ನಡೆಯಲಿದೆ. […]

ನಳಿನ್ ಟ್ವೀಟ್‌ ಮಾಡಿದಕ್ಕೆ ಐವನ್ ಗರಂ

Wednesday, March 13th, 2019
Ivan souza

ಮಂಗಳೂರು : ಮೋದಿ -ಮತ್ತೊಮ್ಮೆ ’ಎಂದು ಟ್ವೀಟ್‌ಗೈದ ಸಂಸದ ನಳಿನ್ ಕುಮಾರ್ ಕಟೀಲು ವಿರುದ್ಧ ಚುನಾವಣಾ ಆಯೋಗವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಆಗ್ರಹಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರವಿವಾರ ಸಂಜೆ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಆದರೆ ಸಂಸದ ನಳಿನ್ ಮಾರ್ಚ್ 11ರ 10:16ಕ್ಕೆ ಇಂತಹ ಟ್ವೀಟ್ ಮಾಡುವ ಮೂಲಕ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಅಲ್ಲದೆ, ದೇಶದ […]

ವಾಟ್ಸ್ಆ್ಯಪ್, ಫೇಸ್‌ಬುಕ್, ಇನ್ಸ್ಟಾಗ್ರಾಂ ಮೇಲೆ ಚುನಾವಣಾ ಆಯೋಗ ಕಣ್ಣು

Monday, March 11th, 2019
DC-shenthil

ಮಂಗಳೂರು : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಾಧ್ಯಮಗಳಲ್ಲಿ ಅಭ್ಯರ್ಥಿ ಪರ ಪೇಯ್ಡ್ ನ್ಯೂಸ್ ಸೇರಿದಂತೆ ಪ್ರಚಾರದ ಮೇಲೆ ಈಗಾಗಲೇ ನಿಗಾ ಇರಿಸುತ್ತಿದ್ದ ಚುನಾವಣಾ ಆಯೋಗ ಇದೀಗ ಸಾಮಾಜಿಕ ಜಾಲತಾಣಗಳ ಮೇಲೂ ಕಣ್ಣಿಡುವ ಸೂಚನೆ ನೀಡಿದೆ. ವಾಟ್ಸ್ಆ್ಯಪ್, ಫೇಸ್‌ಬುಕ್, ಇನ್ಸ್ಟಾಗ್ರಾಂ, ಶೇರ್‌ಚಾಟ್ ಮೊದಲಾದವುಗಳಲ್ಲಿ ಆನ್‌ಲೈನ್‌ನಲ್ಲಿ ತಮ್ಮ ಕೈಯ್ಯಲ್ಲಿರುವ ಸ್ಮಾರ್ಟ್ ಫೋನ್‌ಗಳ ಮೂಲಕ ಕ್ಷಿಪ್ರಗತಿಯಲ್ಲಿ ಸಂದೇಶಗಳನ್ನು ಹಂಚಿಕೊಳ್ಳಬಹುದು. ಈಗ ಇವುಗಳ ಮೂಲಕ ಮಾಡುವ ಪ್ರಚಾರವೂ ಮಾಧ್ಯಮ (ದೃಶ್ಯ ಮತ್ತು ಪತ್ರಿಕೆ, ವೆಬ್‌ಸೈಟ್) ಗಳಲ್ಲಿ ಪ್ರಸಾರವಾಗುವ ಪ್ರಚಾರ ಜಾಹೀರಾತಿನ ವ್ಯಾಪ್ತಿಗೆ ಒಳಪಡುವುದಾಗಿ ಆಯೋಗ ಸ್ಪಷ್ಟಪಡಿಸಿದೆ. […]

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ: ಜುಲೈನಲ್ಲಿ ವಿಶೇಷ ಆಂದೋಲನ, ದ.ಕ. ಜಿಲ್ಲೆಯಲ್ಲಿ 16.37 ಲಕ್ಷ ಮತದಾರರು

Friday, June 30th, 2017
Jagadeesha

ಮ೦ಗಳೂರು : ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಗಳಲ್ಲಿ ಹೆಸರು ಬಿಟ್ಟು ಹೋಗಿರುವವರ ಹಾಗೂ 18-21 ವರ್ಷ ಪ್ರಾಯ ತುಂಬಿರುವ ಸಾರ್ವಜನಿಕರ ಹೆಸರನ್ನು ಮತದಾರರ ಪಟ್ಟಿಗಳಲ್ಲಿ ನೋಂದಾಯಿಸುವ ಬಗ್ಗೆ ವಿಶೇಷ ಆಂದೋಲನವನ್ನು ಜುಲೈ 1ರಿಂದ 31ರವರೆಗೆ ಹಮ್ಮಿಕೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ಕುಮಾರ್ ತಿಳಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ಪಡೆದ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 01.01.17 ರ ಅರ್ಹತಾ ದಿನಾಂಕದಂತೆ ಈಗಾಗಲೇ ತಯಾರಿಸಿ ಪ್ರಕಟ ಪಡಿಸಿರುವ ಮತದಾರರ […]

ಜಿಲ್ಲಾ ವಾರ್ತ ಇಲಾಖೆಯಲ್ಲಿ ದಿನದ ೨೪ ಗಂಟೆ ಕಾರ್ಯನಿರ್ವಹಿಸುವ ಎಂಸಿಎಂಸಿ ಸಮಿತಿ ಸ್ಥಾಪನೆ

Monday, April 8th, 2013
MCMC

ಮಂಗಳೂರು : ಸ್ಥಳೀಯ ಕೇಬಲ್‌ ಟಿ.ವಿ. ಚಾನೆಲ್‌ಗ‌ಳಲ್ಲಿ ಪ್ರಸಾರವಾಗುವ ಚುನಾವಣಾ ಸಂಬಂಧಿತ ವರದಿ ಹಾಗು ಜಾಹಿರಾತುಗಳ ಬಗ್ಗೆ ಗಮನ ಹರಿಸಲು ಮೀಡಿಯಾ ಸರ್ಟಿಫಿಕೇಶನ್ ಅಂಡ್ ಮಾನಿಟರಿಂಗ್ ಕಮಿಟಿ (ಎಂಸಿಎಂಸಿ) ಯೊಂದನ್ನು ಜಾರಿಗೆ ತರಲಾಗಿದೆ. ಮಂಗಳೂರಿನ ಜಿಲ್ಲಾ ವಾರ್ತ ಇಲಾಖೆ ಕಛೇರಿ ಸಭಾಂಗಣದಲ್ಲಿ ಪ್ರಾರಂಭಗೊಂಡಿರುವ ಈ ವ್ಯವಸ್ಥೆ ದಿನದ 24 ಗಂಟೆಗಳ ಕಾಲವೂ ಕಾರ್ಯಾಚರಿಸಲಿದ್ದು,  ತಾತ್ಕಾಲಿಕ ಎರವಲು ಸೇವೆಯಲ್ಲಿ ಬೇರೆ ಬೇರೆ ಇಲಾಖೆಗಳ ಸಿಬ್ಬಂದಿಗಳನ್ನು ಈ ಕಮಿಟಿಯಲ್ಲಿ ಕಾರ್ಯನಿರ್ವಹಿಸಲು ನೇಮಕ ಮಾಡಲಾಗಿದೆ. ಈ ಕಮಿಟಿಯಲ್ಲಿನ ಸಿಬ್ಬಂದಿಗಳು ಮಂಗಳೂರಿನಲ್ಲಿ ಸ್ಥಳೀಯವಾಗಿ […]

ಚುನಾವಣೆ ನೀತಿ ಸಂಹಿತೆ ಕಟ್ಟುನಿಟ್ಟಿನ ಪಾಲನೆಗೆ ಸೂಚನೆ

Saturday, March 2nd, 2013
dco election

ಮಂಗಳೂರು : ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಚುನಾವಣಾ ಆಯೋಗ ರೂಪಿಸಿದ್ದು, ಇವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ದ.ಕ. ಜಿಲ್ಲಾಧಿಕಾರಿ ಎನ್.ಪ್ರಕಾಶ್ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕೋರ್ಟ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಪ್ರಚಾರಕ್ಕಾಗಿ ಉಪಯೋಗಿಸುವ ವಾಹನಗಳ ನೋಂದಣಿ ಸಂಖ್ಯೆಯನ್ನು ಸಂಬಂಧಪಟ್ಟ ಚುನಾವಣಾಧಿಕಾರಿಗೆ ನೀಡಿ ಅವರಿಂದ ಅನುಮತಿ ಪತ್ರ ಬರೆದು ಅದನ್ನು ಉಪಯೋಗಿಸುತ್ತಿರುವ ವಾಹನದಲ್ಲಿ ಅಂಟಿಸಿ ಚುನಾವಣಾ ಪ್ರಚಾರ ಮಾಡಲು ಅವಕಾಶವಿದೆ, ಚುನಾವಣಾ ಪ್ರಚಾರಕ್ಕಾಗಿ ಅನುಮತಿ ಪಡೆದ ಧ್ವನಿ ವರ್ಧಕಗಳನ್ನು […]