ಸುಳ್ಯದಲ್ಲಿ ಪ್ರಾಕೃತಿಕ ವಿಕೋಪ ಪರಿಹಾರ ಯೋಜನೆಯಡಿ ಫಲಾನುಭವಿಗಳಿಗೆ ಚೆಕ್ ವಿತರಣೆ

Thursday, July 8th, 2021
S Angara

ಸುಳ್ಯ  : ಪ್ರಾಕೃತಿಕ ವಿಕೋಪ ಪರಿಹಾರ ಯೋಜನೆ ಮತ್ತು ರಾಷ್ಟೀಯ ಕುಟುಂಬ ನೆರವು ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಚೆಕ್ ವಿತರಣೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆಯಿತು. ಸಚಿವ ಎಸ್.ಅಂಗಾರ ಫಲಾನುಭವಿಗಳಿಗೆ ಚೆಕ್ ವಿತರಿಸಿ ಮಾತನಾಡಿ ಕೋವಿಡ್ ಕಾಲದಲ್ಲಿ ಜನರು ಎಚ್ಚರಿಕೆಯಿಂದ ಇರಬೇಕಾಗಿದೆ. ಕೊರೋನಾ ನಿಯಮಗಳನ್ನು ಪಾಲನೆ ಮಾಡುವ ಮೂಲಕ ಕೋವಿಡ್ ಮುಕ್ತ ತಾಲೂಕುವನ್ನಾಗಿ ಮಾಡಬೇಕು. ಗ್ರಾಮ ಪಂಚಾಯಿತಿಗಳ ಮೂಲಕ ಲಸಿಕೆ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ಸಭೆಯಲ್ಲಿ ಹರೀಶ್ ಕಂಜಿಪಿಲಿ, ವೆಂಕಟ್ ವಳಲಬೆ, ತಹಸೀಲ್ದಾರ್ […]

ಅಲ್ಪಸಂಖ್ಯಾತರ ನಿಗಮದಲ್ಲಿ ಸ್ವಾವಲಂಬನಾ ಸಾಲ ಚೆಕ್‍ಗಳ ವಿತರಣೆ

Thursday, April 6th, 2017
Minority

ಮಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ದ.ಕ.ಜಿಲ್ಲೆ 2016-17ನೇ ಸಾಲಿನಲ್ಲಿ ಮಂಗಳೂರು ದಕ್ಷಿಣ ವಿಧಾನ ಸಭಾಕ್ಷೇತ್ರದ ವ್ಯಾಪ್ತಿಯಲ್ಲಿ ಸ್ವಾವಲಂಬನಾ ಸಾಲ ಯೋಜನೆಯಡಿ ಮಂಜೂರಾದ ಚೆಕ್‍ಗಳನ್ನು ಶಾಸಕ ಜೆ.ಆರ್. ಲೋಬೋ ಇತ್ತೀಚೆಗೆ ವಿತರಿಸಿದರು. ಸುಮಾರು 47 ಫಲಾನುಭವಿಗಳಿಗೆ ಚೆಕ್‍ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾಲವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಜೀವನದಲ್ಲಿ ಮುಂದೆ ಬರಬೇಕು ಎಂದು ಕರೆ ನೀಡಿದರು. ಕೆಎಂಡಿಸಿ ಪ್ರಭಾರ ಜಿಲ್ಲಾ ವ್ಯವಸ್ಥಾಪಕ ಸಫ್‍ವಾನ್ ಉಪಸ್ಥಿತರಿದ್ದರು.

ಪೆರ್ನೆಯಲ್ಲಿ ಸಂಭವಿಸಿದ ಅನಿಲ ದುರಂತದ ಸಂತ್ರಸ್ತರಿಗೆ 43.2 ಲಕ್ಷ ಮೊತ್ತದ ಚೆಕ್ ವಿತರಣೆ

Monday, July 22nd, 2013
Perne Accident

ಬಂಟ್ವಾಳ: ಹಿಂದೂಸ್ಥಾನ್ ಪೆಟ್ರೋಲಿಯಂ ಕಂಪೆನಿಯಿಂದ  ಪೆರ್ನೆಯಲ್ಲಿ ಸಂಭವಿಸಿದ ಅನಿಲ ದುರಂತದ ಸಂತ್ರಸ್ತರಿಗೆ ಒಟ್ಟು 43.2 ಲಕ್ಷ ಮೊತ್ತದ ಚೆಕ್ಕನ್ನು ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಭಾನುವಾರ ಬಿ.ಸಿ.ರೋಡ್ ನ ಸಚಿವರ ಕಚೇರಿಯಲ್ಲಿ ವಿತರಿಸಿದರು. ಒಟ್ಟು 14 ಮಂದಿಗೆ ಪರಿಹಾರ ಧನವಾಗಿ 43.2 ಲಕ್ಷ ಮೊತ್ತದ ಚೆಕ್ ನ್ನು ವಿತರಿಸಲಾಯಿತು. ದುರಂತದಲ್ಲಿ ಜೀವಹಾನಿ ಮತ್ತು  ಮನೆ ಅಪಾರ ಆಸ್ತಿ ನಷ್ಟ ಉಂಟಾಗಿತ್ತು.  ಸ್ಥಳೀಯ ನಿವಾಸಿಗಳಾದ ಸಂದರ ರೈ ಅವರಿಗೆ 7.43 ಲಕ್ಷ, […]