ಧಾರವಾಡ ಜಿಲ್ಲೆಯಲ್ಲಿ ವೀಕ್ ಎಂಡ್ ಲಾಕ್ ಡೌನ್ ವಿಸ್ತರಣೆ

Sunday, May 23rd, 2021
shetter

ಹುಬ್ಬಳ್ಳಿ : ಧಾರವಾಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹಬ್ಬುತ್ತಿರುವ ಕೊರೊನಾ ಸರಪಳಿ ಕಟ್ ಮಾಡಲು ಸರ್ಕಾರ ಹೊರಡಿಸಿರುವ ಲಾಕಡೌನ್ ಮಾರ್ಗಸೂಚಿಗಳನ್ನು ಹೊರತುಪಡಿಸಿ ಧಾರವಾಡ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿಯಮಾವಳಿಗಳನ್ನು ಜಾರಿಗೆ ತಂದಿದೆ. ಇಂದು ಹುಬ್ಬಳ್ಳಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು, ವಾರದಲ್ಲಿ ಐದು ದಿನ ಕಟ್ಟುನಿಟ್ಟಿನ ಲಾಕಡೌನ್ ಜಾರಿ ಮಾಡಿದ್ದಾರೆ. ಮೇ.27 ಹಾಗೂ 28 ರಂದು ಬೆಳಿಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ […]

ಎಸ್​ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಪ್ರಯೋಗಾಲಯ

Sunday, July 19th, 2020
sdm dharwad

ಧಾರವಾಡ: ಕೋವಿಡ್ ನಿಯಂತ್ರಣಕ್ಕೆ ಸರ್ಕಾರದ ಪ್ರಯತ್ನಗಳೊಂದಿಗೆ ಖಾಸಗಿ ಆಸ್ಪತ್ರೆಗಳು ಮತ್ತು ಸಾರ್ವಜನಿಕರ ಸಹಕಾರವೂ ಮುಖ್ಯ. ಲಾಕ್ಡೌನ್ಗಿಂತ ಸ್ವಯಂ ನಿರ್ಬಂಧ ಹೆಚ್ಚು ಪರಿಣಾಮಕಾರಿಯಾದುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು. ಎಸ್ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಪ್ರಯೋಗಾಲಯ ಎಸ್ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಪ್ರಯೋಗಾಲಯ ಸತ್ತೂರಿನ ಎಸ್ಡಿಎಂ ಆಸ್ಪತ್ರೆಯಲ್ಲಿ ಸಂಜೆ ಕೋವಿಡ್ ತಪಾಸಣೆ ವೈರಾಲಜಿ ಪ್ರಯೋಗಾಲಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕೋವಿಡ್ ಸೋಂಕಿತರ ತ್ವರಿತ ಪತ್ತೆಗೆ ಮತ್ತೊಂದು ಪ್ರಯೋಗಾಲಯ ಪ್ರಾರಂಭವಾಗುತ್ತಿರುವುದು ನೆರವಾಗಲಿದೆ. ಕೊರೊನಾ ವಾರಿಯರ್ಗಳಾಗಿರುವ […]

ಜಗದೀಶ ಶೆಟ್ಟರ್‌, ಜೋಶಿ ಮುಖ್ಯಮಂತ್ರಿ ಮಾಡಲು ತಂತ್ರ !

Sunday, May 31st, 2020
satish-jakkaraholi

ಹುಬ್ಬಳ್ಳಿ : ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಧಾರವಾಡ ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಪ್ರಹ್ಲಾದ ಜೋಶಿ ಮತ್ತು ಮಾಜಿ ಮುಖ್ಯಮಂತ್ರಿ ಹಾಗೂ ಸರಕಾರದಲ್ಲಿ ಸಚಿವರಾಗಿರುವ ಜಗದೀಶ ಶೆಟ್ಟರ್‌ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಹುನ್ನಾರ ನಡೆದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಬೆಳಗಾವಿಯಲ್ಲಿ ಹೇಳಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಹೆಚ್ಚಿಸಿದೆ. ಬೆಳಗಾವಿಯಲ್ಲಿ ಈ ಕುರಿತು ಮಾತನಾಡಿರುವ ಜಾರಕಿಹೊಳಿ, ಬಿಜೆಪಿಯ ಕೆಲ ನಾಯಕರೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ. ಈ ಬಗ್ಗೆ ಬಿಜೆಪಿಯ […]

ಸಿದ್ದರಾಮಯ್ಯಗೆ ಸನ್ಮಾನ ಮಾಡಿದ ಮುಸ್ಲಿಂ ಧಾರ್ಮಿಕ ಮುಖಂಡರು..!

Saturday, November 10th, 2018
siddaramaih

ಬೆಂಗಳೂರು: ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಮುಸ್ಲಿಂ ಧಾರ್ಮಿಕ ಮುಖಂಡರು ಅಭಿನಂದಿಸಿದ್ದಾರೆ. ಇಂದು ಬೆಂಗಳೂರಿನ ಸಿದ್ದರಾಮಯ್ಯ ನಿವಾಸ ಕಾವೇರಿಗೆ ಸಚಿವ ಜಮೀರ್ ಅಹಮದ್ ನೇತೃತ್ವದಲ್ಲಿ ತೆರಳಿದ ಹಲವು ಮುಸ್ಲಿಂ ಧರ್ಮಗುರುಗಳು, ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಇದೇ ವೇಳೆ ಸಿದ್ದರಾಮಯ್ಯರನ್ನು ಧರ್ಮಗುರುಗಳು ಸನ್ಮಾನಿಸಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದ ಸಮಯದಲ್ಲಿ ಟಿಪ್ಪು ಜಯಂತಿಯನ್ನು ಆರಂಭಿಸಿದ್ದರು. ಹಾಗಾಗಿ ಅವರ ಕಾರ್ಯವನ್ನು ಗೌರವಿಸುವ ನಿಟ್ಟಿನಲ್ಲಿ ಈ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆ ಸಿದ್ದರಾಮಯ್ಯ ಚಿತ್ರದುರ್ಗಕ್ಕೆ ತೆರಳುವ […]