ಸರಳವಾಗಿ ಗಾಂಧಿ ಜಯಂತಿ ಆಚರಣೆ

Saturday, October 2nd, 2021
Gandhi Jayanthi

ಮಂಗಳೂರು : ಕೋವಿಡ್ ಸೋಂಕು ಹಿನ್ನಲೆಯಲ್ಲಿ ಜಿಲ್ಲಾಡಳಿತ ಹಾಗೂ ಭಾರತ್ ಸೇವಾದಳದ ವತಿಯಿಂದ ನಗರದ ಗಾಂಧಿ ಪಾಕ್೯ನಲ್ಲಿ ಅ.2 ರ ಶನಿವಾರ ರಾಷ್ಟ್ರಪಿತ ಮಹಾತ್ಮ ಗಾಂಧಿಜೀಯವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಗಾಂಧಿ ಪ್ರತಿಮೆಗೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ,  ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಎಸ್ಪಿ ಋಷಿಕೇಷ್ ಭಗವಾನ್ ಸೋನಾವಣೆ, ಪ್ರಭಾರ ಎಡಿಸಿ ಮಾಣಿಕ್ಯ, ಎಸಿ ಮದನ್ ಮೋಹನ್, […]

ಕನ್ನಡದ ಹಿರಿಯ ನಟಿ ‘ಅಭಿನವ ಶಾರದೆ’ ಜಯಂತಿ ನಿಧನ

Monday, July 26th, 2021
Jayanthi died

ಬೆಂಗಳೂರು : ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ, ಅಭಿನಯ ಶಾರದೆ ಎಂದು ಪ್ರೀತಿಯಿಂದ ಅಭಿಮಾನಿಗಳಿಂದ ಕರೆಸಿಕೊಳ್ಳುತ್ತಿದ್ದ ಜಯಂತಿ ನಿಧನರಾಗಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಅವರು ಸೋಮವಾರ ನಸುಕಿನ ಜಾವ ಕೊನೆಯುಸಿರೆಳೆದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ವರ್ಷಗಳಿಂದ ಅಸ್ತಮಾ, ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ನಟಿ ಕಳೆದ ವರ್ಷ ಕೋವಿಡ್-19 ಸಮಯದಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ 40 ದಿನಗಳ ಕಾಲ ಇದ್ದು ಚೇತರಿಸಿಕೊಂಡು ಮನೆಗೆ ಹಿಂತಿರುಗಿದ್ದರು. ಆದರೆ ಇಂದು ಕೊನೆಯುಸಿರೆಳೆದಿದ್ದಾರೆ. ಕನ್ನಡ […]

ನಟಿ ಜಯಂತಿ ಆರೋಗ್ಯ ವಿಚಾರಿಸಿದ‌ ಸಿಎಂ ಸಿದ್ದರಾಮಯ್ಯ

Thursday, March 29th, 2018
jayanthi

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟಿ ಜಯಂತಿ ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾರೈಸಿದ್ದಾರೆ. ಮೈಸೂರು‌ ಪ್ರವಾಸಕ್ಕೂ ಮುನ್ನ ನಗರದ ವಿಕ್ರಮ್‌‌‌ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಯಂತಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ನಂತರ ಪುತ್ರ ಕೃಷ್ಣಕುಮಾರ್ ಹಾಗೂ ವೈದ್ಯರಿಂದ ಚಿಕಿತ್ಸೆ ಮತ್ತು ಆರೋಗ್ಯದ ಪರಿಸ್ಥಿತಿ ಕುರಿತು ಮಾಹಿತಿ ಪಡೆದು ಜಯಂತಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಹಿರಿಯ ನಟಿ ಜಯಂತಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Monday, March 26th, 2018
jayanthi

ಬೆಂಗಳೂರು: ಅಭಿನಯ ಶಾರದೆ ಎಂದೇ ಹೆಸರಾಗಿರುವ ಹಿರಿಯ ನಟಿ ಜಯಂತಿ ತೀವ್ರ ಅಸ್ವಸ್ಥಗೊಂಡಿದ್ದು ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಜಯಂತಿಯನ್ನು ಅವರ ಪುತ್ರ ಕೃಷ್ಣಕುಮಾರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದು ಅವರ ಆರೋಗ್ಯ ಬಹಳ ಸೂಕ್ಷವಾಗಿದೆ ಎಂದು ವಿಕ್ರಂ ಆಸ್ಪತ್ರೆ ವೈದ್ಯ ಡಾ. ಸತೀಶ್ ಹೇಳಿಕೆ ನೀಡಿದ್ದಾರೆ. ಜಯಂತಿ ಅವರನ್ನು ವೆಂಟಿಲೇಟರ್‌‌ನಲ್ಲಿ ಇರಿಸಲಾಗಿದ್ದು ಮುಂದಿನ 24 ಗಂಟೆ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುವುದು. ನಾಳೆ ಬೆಳಗಿನವರೆಗೂ ಅವರ ಆರೋಗ್ಯದ ಬಗ್ಗೆ […]