ಅಣ್ಣಾ ಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಶಶಿಕಲಾ ನಟರಾಜನ್ ಆಯ್ಕೆ

Thursday, December 15th, 2016
Shashikala

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ನಿಧನದ ನಂತರ ತೆರವಾಗಿದ್ದ ಅಣ್ಣಾ ಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನ ನಿರೀಕ್ಷೆಯಂತೆ ಜಯಾ ಪರಮಾಪ್ತ ಗೆಳತಿ ಶಶಿಕಲಾ ನಟರಾಜನ್ ಅವರನ್ನು ಆಯ್ಕೆ ಮಾಡಲಾಗಿದೆ. ಹೌದು ವಿಕೆ ಶಶಿಕಲಾ ಅವರು ಆಡಳಿತಾರೂಢ ಎಐಎಡಿಎಂಕೆ ಪಕ್ಷದ ಸಾರಥ್ಯ ವಹಿಸಲಿದ್ದಾರೆ ಎಂದು ಪಕ್ಷದ ವಕ್ತಾರ ಸಿ.ಪೊನ್ನೈಯನ್ ಎಎನ್ಐಗೆ ತಿಳಿಸಿದ್ದಾರೆ. ಜಯಲಲಿತಾ ಅವರ ನಿಕಟವರ್ತಿ ವಿಕೆ ಶಶಿಕಲಾ ಅವರು ಎಐಎಡಿಎಂಕೆ ಪಕ್ಷದ ಮುಂದಿನ ಪ್ರಧಾನ ಕಾರ್ಯದರ್ಶಿ ಹುದ್ದೆ ಅಲಂಕರಿಸಲಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಶಶಿಕಲಾ […]

ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ವಿಧಿವಶ 

Tuesday, December 6th, 2016
jayalalitha

ಚೆನ್ನೈ : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿದ್ದಾಗಲೇ ಜೆ ಜಯಲಲಿತಾ ಅವರು ಮೃತಪಟ್ಟಿದ್ದಾರೆ. ಡಿಸೆಂಬರ್ 05, 2016ರ ರಾತ್ರಿ 11.30 ರ ಸುಮಾರಿಗೆ ಹೃದಯಾಘಾತಕ್ಕೊಳಗಾಗಿ ಇಹಲೋಕ ವ್ಯಾಪಾರ ಮುಗಿಸಿದ್ದಾರೆ. 68 ವರ್ಷ ವಯಸ್ಸಿನ ಜಯಲಲಿತಾ ಅವರು ಸಾವಿನಲ್ಲೂ ತನ್ನ ಗುರುವಿನ ಹಾದಿಯನ್ನು ತುಳಿದಿದ್ದಾರೆ. ಅಧಿಕಾರದಲ್ಲಿದ್ದಾಗಲೇ ಜನಪ್ರಿಯ ಮುಖ್ಯಮಂತ್ರಿಯೊಬ್ಬರನ್ನು ಕಳೆದುಕೊಳ್ಳುವುದು ತಮಿಳುನಾಡಿನ ಜನತೆ ಪಾಲಿಗೆ ದುರಂತ ಸಂಗತಿಯಾಗಿ ಪರಿಣಮಿಸಿದೆ. ಮೊದಲಿಗೆ ಸಿ.ಎನ್ ಅಣ್ಣಾದೊರೈ ಅವರು ಕ್ಯಾನ್ಸರಿಗೆ ಬಲಿಯಾದರೆ, ನಂತರ ಎಐಎಡಿಎಂಕೆಯ ನಾಯಕ, ನಟ ಎಂಜಿ ರಾಮಚಂದ್ರನ್ ಅವರು ಹಾಗೂ ಈಗ […]

ಸೆ. 30 ರ ವರೆಗೆ 6000 ಕ್ಯೂಸೆಕ್ ನೀರು: ಸುಪ್ರೀಂ ಕೋರ್ಟ್ ಆದೇಶ ವಿರೋಧಿಸಿ ಕನ್ನಡ ಪರ ಸಂಘಟನೆಗಳ ಉಗ್ರ ಪ್ರತಿಭಟನೆ

Wednesday, September 28th, 2016
kaveri-protest

ಮೈಸೂರು: ಸೆ. 30 ರ ವರೆಗೆ ನಿತ್ಯ 6000 ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ವಿರೋಧಿಸಿ ಮಂಗಳವಾರ ನಗರದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಉಗ್ರ ಪ್ರತಿಭಟನೆ ನಡೆಸಿದವು. ನಗರದ ನ್ಯಾಯಾಲಯದ ಎದುರು ಕನ್ನಡ ಚಳವಳಿಗಾರರ ಸಂಘದಿಂದ ಖಾಲಿ ತಟ್ಟೆ, ಪಾತ್ರೆ, ಲೋಟಗಳನ್ನಿಡಿದು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಮ್ಮ ರಾಜ್ಯದ ಶತ್ರುವಿನಂತೆ ವರ್ತಿಸುತ್ತಿದ್ದಾರೆ. ಕಾವೇರಿ ಭಾಗದ ಜಲಾಶಯಗಳಲ್ಲಿ ಕುಡಿಯಲು ನೀರಿಲ್ಲ. ಆದರೂ ಸುಪ್ರೀಂ ಕೋರ್ಟ್‌ ಮೂಲಕ ಸಾಂಬಾ ಬೆಳೆಗೆ ನೀರು ಕೇಳುತ್ತಿರುವುದು […]

ಜಯಲಲಿತಾ ದೋಷಿ : ಕೋರ್ಟ್‌ ತೀರ್ಪು

Saturday, September 27th, 2014
Jayalalitha

ಬೆಂಗಳೂರು : ದೇಶಾದ್ಯಂತ ಕುತೂಹಲ ಕೆರಳಿಸಿರುವ, ಸುಮಾರು 18 ವರ್ಷಗಳಿಂದ ವಿಚಾರಣೆ ನಡೆಯುತ್ತಿರುವ ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಅಂತಿಮ ತೀರ್ಪು ಹೊರ ಬಿದ್ದಿದ್ದು ಅವರನ್ನು ದೋಷಿ ಎಂದು ಶನಿವಾರ ನ್ಯಾಯಾಲಯ ಹೇಳಿದೆ. ಬೆಂಗಳೂರಿನ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಾನ್‌ ಮೈಕಲ್‌ ಕುನ್ಹಾ ಅವರು ಜಯಲಲಿತಾ ಅವರ ವಿರುದ್ದ ಮಾಡಲಾಗಿರುವ ಆರೋಪ ಭೃಷ್ಟಾಚಾರ ತಡೆ ಖಾಯ್ದೆ ಸೆಕ್ಷನ್‌ 13(1)ಇ ಅಡಿ ಸಾಬೀತಾಗಿದೆ ಎಂದು ತೀರ್ಪು ಪ್ರಕಟಿಸಿದ್ದಾರೆ. ಆರೋಪ ಸಾಬೀತಾಗಿರುವ ಹಿನ್ನಲೆಯಲ್ಲಿ ಜಯಲಲಿತಾ ಅವರನ್ನು ಪೊಲೀಸರು ತಮ್ಮ […]

ರಾಜೀವ್ ಹಂತಕರ ಬಿಡುಗಡೆ ಸದ್ಯಕ್ಕಿಲ್ಲ

Friday, February 21st, 2014
P.-Sathasivam

ನವದೆಹಲಿ/ಚೆನ್ನೈ: ಸದ್ಯಕ್ಕೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹಂತಕರಿಗೆ ಬಿಡುಗಡೆ ಭಾಗ್ಯ ಇಲ್ಲ… ತಮಿಳುನಾಡು ಸರ್ಕಾರದ ನಿರ್ಧಾರ ಮತ್ತು ರಾಜೀವ್ ಹಂತಕರ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಇಳಿಕೆ ಮಾಡಿದ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ಕುರಿತಂತೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತಮಿಳುನಾಡು ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿದೆ. ‘ಕೈದಿಗಳ ಬಿಡುಗಡೆ ಸಂಬಂಧ ತಮಿಳುನಾಡು ಸರ್ಕಾರ ಸೂಕ್ತ ವಿಧಿ ವಿಧಾನಗಳನ್ನು ಅನುಸರಿಸಿಲ್ಲ. ಹೀಗಾಗಿ ಕೋರ್ಟ್ ಜಯಲಲಿತಾ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿದೆ’ […]

‘ರಾಜೀವ್’ ಹಂತಕರ ಬಿಡುಗಡೆಗೆ ಪ್ರಧಾನಿ ಆಕ್ಷೇಪ

Thursday, February 20th, 2014
Manmohan-Singh

ನವದೆಹಲಿ: ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಹಂತಕರನ್ನು ಮೂರು ದಿನಗಳೊಳಗೆ ಬಿಡುಗಡೆ ಮಾಡಲು ಮುಂದಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಿರ್ಧಾರಕ್ಕೆ ಪ್ರಧಾನಿ ಮನಮೋಹನ್ ಸಿಂಗ್ ಅವರು ಗುರುವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡದಂತೆ ತಮಿಳುನಾಡು ಸಿಎಂಗೆ ಒತ್ತಾಯಿಸಿದ್ದಾರೆ. ಅಲ್ಲದೆ ತಾವು ತೆಗೆದುಕೊಂಡಿರುವ ನಿರ್ಧಾರವನ್ನು ಹಿಂಪಡೆಯುವಂತೆ ಜಯಲಲಿತಾಗೆ ಪ್ರಧಾನಿ ಆಗ್ರಹಿಸಿದ್ದಾರೆ. ಮಾಜಿ ಪ್ರಧಾನಿ ಅವರನ್ನು ಹತ್ಯೆ ಮಾಡಿರುವುದು ಸಣ್ಣ ವಿಷಯವಲ್ಲ. […]

ರಾಜೀವ್ ಹಂತಕರ ಬಿಡುಗಡೆ ಏಕೆ?

Thursday, February 20th, 2014
Rahul-Gandhi

ನವದೆಹಲಿ/ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರನ್ನು ಮೂರು ದಿನಗಳೊಳಗೆ ಬಿಡುಗಡೆ ಮಾಡುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಿರ್ಧಾರಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕಿಡಿಕಿಡಿಯಾಗಿದ್ದಾರೆ. ಪ್ರಧಾನಮಂತ್ರಿಗಳ ಹಂತಕರನ್ನೇ ಬಿಡುಗಡೆ ಮಾಡಿದರೆ ಇನ್ನು ಜನಸಾಮಾನ್ಯರಿಗೆ ಹೇಗೆ ನ್ಯಾಯ ಸಿಗಲು ಸಾಧ್ಯ? ನಮ್ಮ ದೇಶದಲ್ಲಿ ಪ್ರಧಾನಿಗೂ ನ್ಯಾಯ ಸಿಗುವುದಿಲ್ಲವೇ? ನನ್ನ ತಂದೆಯ ಹಂತಕರಿಗೆ ಗಲ್ಲುಶಿಕ್ಷೆಯಾಗಬೇಕೆಂದು ನಾನೇನು ಆಗ್ರಹಿಸುತ್ತಿಲ್ಲ. ಅದರಿಂದ ನನ್ನ ತಂದೆ ಹಿಂತಿರುಗಿ ಬರುವುದೂ ಇಲ್ಲ. ಇದು ಇಡೀ ದೇಶಕ್ಕೆ ಸಂಬಂಧಪಟ್ಟ ವಿಚಾರ. ತಮಿಳುನಾಡು ಸರ್ಕಾರದ ಈ ನಿರ್ಧಾರದಿಂದ […]