ದಕ್ಷಿಣ ಕನ್ನಡ ಜಿಲ್ಲೆಯ 5 ಅಭಿವೃದ್ಧಿ ಕಾಮಗಾರಿಗಳಿಗೆ ನಿತಿನ್ ಗಡ್ಕರಿ ಚಾಲನೆ

Saturday, December 19th, 2020
Nithin Gadkari

ಮಂಗಳೂರು : ದ.ಕ ಜಿಲ್ಲೆಯ 214.22 ಕೋಟಿ ರೂ. ವೆಚ್ಚದ 5 ಅಭಿವೃದ್ಧಿ ಕಾಮಗಾರಿಗಳಿಗೆ ರಾಷ್ಟ್ರೀಯ ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವರ್ಚುವಲ್ ಕಾರ್ಯಕ್ರಮದ ಮೂಲಕ ಚಾಲನೆ ನೀಡಿದರು. ರಾಷ್ಟ್ರೀಯ ಹೆದ್ದಾರಿ 66ರ ಕೂಳೂರಿನಲ್ಲಿರುವ ಫಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ 69.02 ಕೋಟಿ ರೂ. ವೆಚ್ಚದ ನೂತನ ಷಟ್ಪಥ ಕೂಳೂರು ಸೇತುವೆ, ರಾಷ್ಟ್ರೀಯ ಹೆದ್ದಾರಿ 275ರಲ್ಲಿರುವ ಸಂಪಾಜೆ ಘಾಟ್ನ ತಡೆಗೋಡೆ ಹಾಗೂ ರಸ್ತೆ 2.53 ಕಿ.ಮೀ. […]

ಪತ್ರಕರ್ತರ 35 ನೇ ರಾಜ್ಯ ಸಮ್ಮೇಳನದ ವೆಬ್ ಸೈಟ್ ಅನಾವರಣ

Friday, January 31st, 2020
website

ಮಂಗಳೂರು : ಪ್ರಜಾಪ್ರಭುತ್ವ ದಲ್ಲಿ ಮಾಧ್ಯಮ ಪ್ರಬಲ ಅಂಗವಾಗಿ ಬೆಳೆಯಬೇಕಾದರೆ ಪತ್ರಕರ್ತರು ಸಮಾಜದ ಒರೆಕೊರೆಗಳನ್ನು ತಿದ್ದಲು ಹೆಚ್ಚು ಗಮನಹರಿಸಬೇಕು. ಪತ್ರಕರ್ತ ಕೆಲಸದ ಕ್ಷೇತ್ರ ಪಾರದರ್ಶಕ ವಾಗಿ ಮಾಧ್ಯಮ ಕ್ಷೇತ್ರ ಇನ್ನಷ್ಟು ಪರಿಪಕ್ವವಾಗಿ ಬೆಳೆಯಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ ಪೂಜಾರಿ ಕೋಟ ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ದ. ಕ. ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯ ದಲ್ಲಿ ಮಾರ್ಚ್ 7 ಹಾಗೂ 8ರಂದು ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆಯಲಿರುವ ಪತ್ರಕರ್ತರ […]

ಮೆಸ್ಕಾಂ ನಿಂದ ರೂ.1.38ರಷ್ಟು ದರ ಹೆಚ್ಚಿಸಲು ಪ್ರಸ್ತಾವನೆ

Thursday, February 7th, 2019
mescom

ಮಂಗಳೂರು :  ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗ(ಕೆಇಆರ್‌ಸಿ)ದಿಂದ  ವಿದ್ಯುತ್‌ನ ಯುನಿಟೊಂದಕ್ಕೆ 1.38ರಷ್ಟು ದರ ಹೆಚ್ಚಿಸಬೇಕೆಂಬ ಮೆಸ್ಕಾಂ ಪ್ರಸ್ತಾವನೆಗೆ ಸಂಬಂಧಿಸಿ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿನಡೆದ ಸಾರ್ವಜನಿಕ ವಿಚಾರಣೆ ಸಂದರ್ಭ ವಿವಿಧ ಗ್ರಾಹಕ ಸಂಸ್ಥೆಗಳು ಹಾಗೂ ಸಾರ್ವಜನಿಕರಿಂ ಪ್ರಬಲ ವಿರೋಧ ವ್ಯಕ್ತವಾಯಿತು. ಆಯೋಗದ ಅಧ್ಯಕ್ಷ ಶಂಭು ದಯಾಲ್ ಮೀನ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಹಕ ಸಂಘಟನೆಯ ಸತ್ಯನಾರಾಯಣ ಉಡುಪ ಅವರು ವಿಸ್ತೃತವಾಗಿ ಹಾಗೂ ಅಂಕಿಅಂಶಗಳೊಂದಿಗೆ ವಿದ್ಯುತ್ ದರ ಏರಿಕೆಯನ್ನು ಆಕ್ಷೇಪಿಸಿದರಲ್ಲದೆ, ಮೆಸ್ಕಾಂ 1.35ರಷ್ಟು ದರ ಕಡಿತವನ್ನು ಮಾಡಲು ಅವಕಾಶವಿದೆ ಎಂದು […]

ಅಪ್ರಾಪ್ತ ಬಾಲಕಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಮುಸ್ಲಿಂ ಸಂಘಟನೆಗಳ ಪ್ರತಿಭಟನೆ..!

Thursday, July 5th, 2018
protest

ಮಂಗಳೂರು: ಮಧ್ಯಪ್ರದೇಶದ ಮಾಂಡ್ಸರ್ ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ ನೆಡೆಯಿತು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಿಲ್ಲಾ ಮುಸ್ಲಿಂ ಸಂಘಟನೆಗಳ ಕಾರ್ಯಕರ್ತರು ಮುಖಕ್ಕೆ ಕಪ್ಪು ಬಟ್ಟೆ ಕಟ್ಟಿಕೊಂಡು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯ ಬಳಿಕ ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

ಬ್ಯಾಂಕ್ ವಹಿವಾಟು, ಹವಾಲ ಚಲಾವಣೆ ಮೇಲೆ ನಿಗಾ: ಡಿಸಿ

Wednesday, April 18th, 2018
sesikanth-senthil

ಮಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಬ್ಯಾಂಕುಗಳಲ್ಲಿ ನಡೆಯುತ್ತಿರುವ ವ್ಯವಹಾರಗಳ ಮೇಲೆ ತೀವ್ರ ನಿಗಾ ವಹಿಸಲು ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಗೆ ಚುನಾವಣಾ ಆಯೋಗದಿಂದ ನೇಮಕಗೊಂಡಿರುವ ವೆಚ್ಚ ವೀಕ್ಷಕರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿ, ಜಿಲ್ಲೆಯಲ್ಲಿರುವ ಎಲ್ಲಾ ಬ್ಯಾಂಕುಗಳು ತಮ್ಮ ಶಾಖೆಗಳಲ್ಲಿ ನಡೆಯುವ ದೊಡ್ಡ ಮೊತ್ತದ ವ್ಯವಹಾರದ ಸಮಗ್ರ ವಿವರ ಪ್ರತಿನಿತ್ಯ ಜಿಲ್ಲಾ ಚುನಾವಣಾಧಿಕಾರಿಗಳಿಗೆ ನೀಡಬೇಕು. ಇದರಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯವನ್ನು ಸಹಿಸಲಾಗದು. ಯಾವುದೇ ಬ್ಯಾಂಕ್ ಮಾಹಿತಿ […]

ಪಡೀಲಿನಲ್ಲಿ ಜಿಲ್ಲಾಧಿಕಾರಿ ಕಟ್ಟಡ

Wednesday, January 3rd, 2018
padil

ಮಂಗಳೂರು: ಪಡೀಲ್‌ ನಲ್ಲಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ನಿರ್ಮಾಣ ಕುರಿತಂತೆ ಮತ್ತೆ ಪೂರ್ವಭಾವಿ ಚಟುವಟಿಕೆಗಳು ಆರಂಭಗೊಂಡಿವೆ. ಮಂಗಳೂರು ಉಪವಿಭಾಗದ ವೃಕ್ಷಾಧಿಕಾರಿ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಯಲ್ಲಿ ಜ.4 ರಂದು ಸಾರ್ವಜನಿಕ ಆಕ್ಷೇಪಣೆ ಸಭೆಯನ್ನು ನಿಗದಿಪಡಿಸಲಾಗಿದ್ದು, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣಕ್ಕೆ ನೀಡಿರುವ ನಿವೇಶನದಲ್ಲಿರುವ ಮರಗಳನ್ನು ಕಡಿಯುವ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸುವಂತೆ ಸೂಚಿಸಲಾಗಿದೆ. ತಾಲೂಕಿನ ಅಳಪೆ ಗ್ರಾಮದಲ್ಲಿ ಅರಣ್ಯ ಇಲಾಖೆಗೆ ಸೇರಿದ 5.89 ಎಕರೆ ಪ್ರದೇಶದಲ್ಲಿ 41 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾ ಕಚೇರಿಗಳ ಸಂಕೀರ್ಣ ನಿರ್ಮಾಣ ಯೋಜನೆ ಮಂಜೂರಾಗಿದ್ದು, […]

ಮೇಸ್ತ ಸಾವಿಗೆ ನ್ಯಾಯ ಸಿಗದಿದ್ದರೆ ಮಂಗಳೂರು ಬಂದ್:ಶರಣ್ ಪಂಪ್ ವೆಲ್

Thursday, December 14th, 2017
sharan-pumpwell

ಮಂಗಳೂರು: ಪರೇಶ್ ಮೇಸ್ತ ಸಾವಿಗೆ ನ್ಯಾಯ ದೊರೆಯದಿದ್ದಲ್ಲಿ ಮಂಗಳೂರು ಬಂದ್ ಗೆ ಕರೆ ನೀಡಲಾಗುವುದು ಎಂದು ಬಜರಂಗದಳ ಪ್ರಾಂತ ಸಂಚಾಲಕ ಶರಣ್ ಪಂಪ್ ವೆಲ್ ಎಚ್ಚರಿಸಿದ್ದಾರೆ. ಪ್ರಮಖ ಬೆಳವಣಿಗೆಗಳು ಮಂಗಳೂರಿನಲ್ಲಿ ಪರೇಶ್ ಮೇಸ್ತ ಸಾವಿನ ಪ್ರಕರಣ ಖಂಡಿಸಿ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಹೊನ್ನಾವರ ಗಲಭೆಯಲ್ಲಿ ಕಾಣೆಯಾಗಿದ್ದ ಅಬ್ದುಲ್ ಕಂಡ ಹಿಂದೂಗಳ ಎರಡು ಮುಖ ಹೊನ್ನಾವರದಲ್ಲಿ ಡಿಸೆಂಬರ್ 6 ರಂದು ನಡೆದಿದೆ ಎನ್ನಲಾದ ಪರೇಶ್ ಮೇಸ್ತ ಸಾವಿನ ಪ್ರಕರಣವನ್ನು ಖಂಡಿಸಿ ಬುಧವಾರ ಮಂಗಳೂರಿನಲ್ಲಿ ವಿಶ್ವ […]

ಗಾಂಜಾ ಹಣದಿಂದ ಕಾಂಗ್ರೆಸ್‌ ಸಚಿವರು ಬದುಕು :ನಳಿನ್ ಕುಮಾರ್ ಕಟೀಲ್

Friday, October 6th, 2017
naleen kumar kateel

ಮಂಗಳೂರು: ಜಿಲ್ಲೆಯ ಗಾಂಜಾ ಮಾಫಿಯಾ, ಕಾಂಗ್ರೆಸ್‌ನ ಸಚಿವರು, ಮುಖಂಡರ ನಿಯಂತ್ರಣಕ್ಕೊಳಪಟ್ಟಿದೆ. ಅದರಿಂದ ಬಂದ ಹಣದಿಂದ ಸಚಿವರು ಬದುಕು ಕಟ್ಟುತ್ತಿದ್ದಾರೆ. ಇಲ್ಲವಾಗಿದ್ದಲ್ಲಿ ಜಿಲ್ಲೆಯಲ್ಲಿ ಈ ಮಾಫಿಯಾವನ್ನು ನಿಯಂತ್ರಿಸಬಹುದಿತ್ತು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಸಂಸದರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿ ಈ ಗಂಭೀರ ಆರೋಪ ಮಾಡಿದರು.. ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ಗಾಂಜಾ ಪ್ರಕರಣಗಳು ಹೆಚ್ಚುತ್ತಾ ಸಾಗುತ್ತಿವೆ. ಆರಂಭದಲ್ಲಿಯೇ ಇದರ ನಿಯಂತ್ರಣಕ್ಕೆ ಪೊಲೀಸ್ ಇಲಾಖೆಯಿಂದ ಪಡೆಯೊಂದನ್ನು […]

ಮಂಗಳೂರಿಗೆ ಬಂದ ಅಣಕು ಇಂದಿರಾ ಕ್ಯಾಂಟೀನ್, ರೂ. 5 ಕ್ಕೆ ಚಾ, ತಿಂಡಿ

Wednesday, August 16th, 2017
Indira Canteen

ಮಂಗಳೂರು  : ರಾಜ್ಯ ಸರಕಾರ ಇಂದಿರಾ ಕ್ಯಾಂಟೀನ್‌ಗೆ ಬೆಂಗಳೂರಿನಲ್ಲಿ ಚಾಲನೆ ನೀಡುತ್ತಿದ್ದಂತೆಯೇ. ದ.ಕ.ಜಿಲ್ಲೆಯಲ್ಲೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಒತ್ತಾಯಿಸಿ ಡಿವೈಎಫ್ ಐ ನೇತೃತ್ವದಲ್ಲಿ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಬಳಿ ಬುಧವಾರ ಧರಣಿ ನಡೆಯಿತು. ಈ ಸಂದರ್ಭ ಜಿಲ್ಲಾಧಿಕಾರಿ ಕಚೇರಿ‌ ಮುಂಭಾಗ ಅಣುಕು ಇಂದಿರಾ ಕ್ಯಾಂಟೀನ್ ಪ್ರದರ್ಶನ ನಡೆಯಿತು. ಸಾರ್ವಜನಿಕರು ರೂ. 5 ಕ್ಕೆ ಚಾ, ತಿಂಡಿ ತಿಂದು ಹಸಿವು ನೀಗಿಸಿ ಕೊಂಡರು. ಖಾಸಗಿ ಹೋಟೆಲ್, ಉಪಹಾರ ಗೃಹಗಳಲ್ಲಿ ಬೆಲೆ ಏರಿಕೆ ನಿಯಂತ್ರಿಸಲು, ಮಂಗಳೂರಿಗೆ ಇಂದಿರಾ ಕ್ಯಾಂಟೀನ್ ಬರಬೇಕೆಂದು ಒತ್ತಾಯಿಸಲಾಯಿತು. ಒಂದೇ ಶ್ರೇಣಿಯ ಹೋಟೆಲ್ ಗಳಲ್ಲಿ ಒಂದೇ ರೀತಿಯ ದರವಿರಬೇಕು, […]

ರಾಜ್ಯ ಸರಕಾರದ ವಿರುದ್ಧ ಹಿಂದೂ ಹಿತ ರಕ್ಷಣಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ

Monday, November 21st, 2016
hhs

ಮಂಗಳೂರು: ಜಿಲ್ಲೆಯಾದ್ಯಂತ ನಡೆಯುತ್ತಿರುವ ಹಿಂದೂಗಳ ಮೇಲಿನ ಹಲ್ಲೆ, ಕೊಲೆ ಯತ್ನಗಳ ವಿರುದ್ಧ ಹಿಂದೂ ಹಿತ ರಕ್ಷಣಾ ಸಮಿತಿ ನೇತೃತ್ವದಲ್ಲಿ ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರನ್ನುದ್ದೇಶಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲು, ರಾಜ್ಯದ ಪೊಲೀಸ್ ಇಲಾಖೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಧಿಸಿದ್ದಾರೆ. ಆದ್ದರಿಂದ ರಾಜ್ಯದ ವಿವಿಧೆಡೆ ಕಳೆದ ಒಂದು ವರ್ಷದಲ್ಲಿ ಎಂಟು ಮಂದಿ ಹಿಂದೂ ಕಾರ್ಯಕರ್ತರ ಕೊಲೆಯಾಗಿದೆ ಎಂದು ದೂರಿದರು. ಮುಖ್ಯಮಂತ್ರಿ ರಾಜ್ಯದಲ್ಲಿ ಕೋಮು ಗಲಭೆಗೆ ಪ್ರಚೋದಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಜಿಲ್ಲೆಯಲ್ಲಿ […]