ಚಾಮರಾಜನಗರ ದುರಂತ ಸಂತ್ರಸ್ತರಿಗೆ ಪರಿಹಾರ ಮಂಜೂರು

Saturday, May 22nd, 2021
chamaraja Nagar

ಬೆಂಗಳೂರು : ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ಸರ್ಕಾರ ಪರಿಹಾರ ಧನ ಮಂಜೂರು ಮಾಡಿದೆ. ಕೋವಿಡ್ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 24 ಜನ ಆಮ್ಲಜನಕದ ಅಭಾವದಿಂದ ಸಾವು ಸಂಭವಿಸಿರಬಹುದಾದ ಹಿನ್ನೆಲೆಯಲ್ಲಿ ಸರ್ಕಾರವು ನ್ಯಾಯಾಲಯಕ್ಕೆ ವಾಗ್ದಾನ ನೀಡಿದಂತೆ ದುರಂತ ಸಂತ್ರಸ್ತರಿಗೆ ತಲಾ ರೂ.2 ಲಕ್ಷದಂತೆ ಒಟ್ಟು 24 ವ್ಯಕ್ತಿಗಳ ಕುಟುಂಬಸ್ಥರಿಗೆ ರೂ. 48 ಲಕ್ಷಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಚಾಮರಾಜನಗರ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲು ಮಂಜೂರಾತಿ ನೀಡಿ ಆದೇಶಿಸಲಾಗಿದೆ. ವರದಿ : ಶಂಭು. ಮೆಗಾಮೀಡಿಯಾ […]

ಮನೆ ಕಟ್ಟುವ ವಿಚಾರವಾಗಿ ಜಗಳವಾಡಿ ಇಬ್ಬರು ಮಕ್ಕಳ ಜೊತೆ ಕಾಲುವೆಗೆ ಜಿಗಿದ ಪ್ರೌಢಶಾಲೆಯ ಶಿಕ್ಷಕಿ

Tuesday, October 13th, 2020
sri Devi

ದಾವಣಗೆರೆ: ಮನೆ ಕಟ್ಟುವ ವಿಚಾರವಾಗಿ ಪತಿಯ ಜೊತೆ ಜಗಳ ಮಾಡಿಕೊಂಡ ಮಹಿಳೆಯೊಬ್ಬರು ಇಬ್ಬರು ಮಕ್ಕಳ ಜೊತೆ ತುಂಗಭದ್ರಾ ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ಶ್ರೀದೇವಿ (38), ಅನುಷಾ (10), ನೂತನ್ (08) ಆತ್ಮಹತ್ಯೆಗೆ ಶರಣಾದ ತಾಯಿ ಮಕ್ಕಳು. ದಾವಣಗೆರೆ ನಗರದ ಹೊರವಲಯದ ಎಚ್ ಕಲ್ಪನಹಳ್ಳಿ ಬಳಿ ತುಂಗಭದ್ರ ಕಾಲುವೆಯಲ್ಲಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಾವಣಗೆರೆಯ ಜಯನಗರದಲ್ಲಿ ವಾಸವಾಗಿದ್ದ ಶ್ರೀದೇವಿ  ವೃತ್ತಿಯಲ್ಲಿ ಪ್ರೌಢಶಾಲೆಯ ಶಿಕ್ಷಕಿಯಾಗಿದ್ದರು. ಪತಿ ಜೊತೆ ಮನೆ ಕಟ್ಟುವ ವಿಚಾರವಾಗಿ ಜಗಳ ಮಾಡಿಕೊಂಡಿ ಆತ್ಮಹತ್ಯೆಯ ನಿರ್ಧಾರಕ್ಕೆ ಮುಂದಾಗಿದ್ದರು. […]

ದಾವಣಗೆರೆಯಲ್ಲಿ ಕೊರೋನಾ ವೈರಸ್ ಗೆ ಮೊದಲ ಬಲಿ, ಮನೆ ಮಂದಿಗೆಲ್ಲ ಹರಡಿದ ಸೋಂಕು

Friday, May 1st, 2020
Davanagere

ದಾವಣಗೆರೆ:  ದಾವಣಗೆರೆಯಲ್ಲಿ ಮಾರಕ ಕೊರೋನಾ ವೈರಸ್ ಗೆ ಮೊದಲ ಬಲಿಯಾಗಿದ್ದು, 69 ವರ್ಷದ ವೃದ್ಧರೊಬ್ಬರು ಶುಕ್ರವಾರ ಮೃತಪಟ್ಟಿದ್ದಾರೆ. ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ (ರೋಗಿ ಸಂಖ್ಯೆ 556) ಇಂದು ರಾತ್ರಿ ಸಾವನ್ನಪ್ಪಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಜಾಲಿನಗರದ ನಿವಾಸಿಯಾಗಿದ್ದ ವ್ಯಕ್ತಿ ಮೂರು ದಿನಗಳ ಹಿಂದೆ ಉಸಿರಾಟದ ಸಮಸ್ಯೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ಈ ವ್ಯಕ್ತಿಗೆ ಕೊರೋನಾ ಹೇಗೆ ಬಂದಿದೆ ಎನ್ನುವುದು ತಿಳಿದಿಲ್ಲ. ವೃದ್ಧನ ಟ್ರಾವೆಲ್ ಹಿಸ್ಟರಿಯನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ. ಈ […]

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸಾವು!

Thursday, September 20th, 2018
accident

ಚಿಕ್ಕಮಗಳೂರು: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರೊಂದು 300 ಅಡಿ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಲ್ಲುದೇವರ ಎಸ್ಟೇಟ್ನಲ್ಲಿ ನಡೆದಿದೆ. ಕಾರಿನಲ್ಲಿದ್ದ ಲಕ್ಕಪ್ಪ(60) ಎಂಬಾತ ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಕ್ಕಪ್ಪ ಚಿಕ್ಕಮಗಳೂರು ತಾಲೂಕಿನ ಹರಿಹರದ ಹಳ್ಳಿ ನಿವಾಸಿಯಾಗಿದ್ದಾರೆ. ಗಂಭೀರವಾಗಿ ಗಾಯಾಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.