ಮಂಗಳೂರು ವಕೀಲರ ಸಂಘದಿಂದ ಬೃಹತ್ ಲಸಿಕಾ ಅಭಿಯಾನ: 500ಕ್ಕೂ ಹೆಚ್ಚು ಮಂದಿಗೆ ವ್ಯಾಕ್ಸೀನ್

Thursday, June 24th, 2021
Advocates-Vaccination

ಮಂಗಳೂರು: ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಮಂಗಳೂರು ವಕೀಲರ ಸಂಘದಿಂದ ಇಂದು ಬೃಹತ್ ಲಸಿಕಾ ಅಭಿಯಾನ ನಡೆಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಶ್ರೀ ಮುರಳೀಧರ ಪೈ ಅವರ ಮಾರ್ಗದರ್ಶನದಲ್ಲಿ ಬೃಹತ್ ಲಸಿಕಾ ಅಭಿಯಾನ ಯಶಸ್ವಿಯಾಗಿ ನಡೆಯಿತು. ಮಂಗಳೂರು ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ನಾಲ್ಕನೇ ಅಭಿಯಾನ ಇದಾಗಿದ್ದು, ದೊಡ್ಡ ಸಂಖ್ಯೆಯಲ್ಲಿ ಫಲಾನುಭವಿಗಳು ಲಸಿಕೆ ಪಡೆದುಕೊಂಡರು. 18 ವಯಸ್ಸಿನ ಮೇಲ್ಪಟ್ಟ ವಕೀಲರಿಗೆ, 45 ವರ್ಷ ಮೇಲ್ಪಟ್ಟ ವಕೀಲರಿಗೆ ಇದುವರೆಗೆ ಲಸಿಕಾ ಅಭಿಯಾನ ಯಶಸ್ವಿಯಾಗಿ ನಡೆದಿತ್ತು. […]

ನಿಪಾಹ್ ವೈರಸ್ ಆಯ್ತು, ಇದೀಗ ಸಾಂಕ್ರಾಮಿಕ ರೋಗಗಳ ಸರದಿ

Friday, May 25th, 2018
nipah-virus

ಮಂಗಳೂರು: ಮಂಗಳೂರಿನಲ್ಲಿ ಮಾರಣಾಂತಿಕ ನಿಪಾಹ್ ವೈರಸ್ ಅತಂಕ ದೂರವಾಗುತ್ತಿದ್ದಂತೆ, ಇನ್ನೊಂದೆಡೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಈ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣ ಕ್ರಮಕ್ಕೆ ಆರೋಗ್ಯ ಇಲಾಖೆ ಮುಂದಾಗಿದೆ. ಮಳೆಗಾಲ ಆರಂಭವಾಗುತ್ತಿದ್ದಂತೆ ಮಂಗಳೂರಿನಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಆತಂಕ ಸೃಷ್ಠಿಯಾಗುತ್ತಿದೆ. ಮಲೇರಿಯಾ, ಡೆಂಗ್ಯೂ, ಇಲಿ ಜ್ವರ ದಂತಹದ ಸಾಂಕ್ರಾಮಿಕ ರೋಗಗಳ ಪ್ರಕರಣಗಳು ಇಲ್ಲೊಂದು ಅಲ್ಲೊಂದು ಕಾಣಿಸಿಕೊಳ್ಳಲು ಆರಂಭವಾಗಿದೆ. ನಿಪಾಹ್ ವೈರಸ್ ಭೀತಿಯಿಂದ ನಿರಾಳರಾದ ಮಂಗಳೂರಿಗರು ಈ ಹಿನ್ನೆಲೆಯಲ್ಲಿ ರೋಗ ನಿಯಂತ್ರಣ […]