ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Tuesday, September 7th, 2021
JDS membership

ಮಂಗಳೂರು  : ದ.ಕ.ಜಿಲ್ಲಾ ಜೆಡಿಎಸ್ ಪಕ್ಷದ ಸದಸ್ಯತ್ವ 2021-22ನೇ ಸಾಲಿನ ನೊಂದಾವಣಿ ಚಾಲನೆಯ ಕಾರ್ಯಕ್ರಮವು ಜಿಲ್ಲಾ ಉಸ್ತುವಾರಿ ಶ್ರೀ ಸುಧಾಕರ್ ಶೆಟ್ಟಿಯವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀಯುತರು ಮಾತನಾಡಿ ಪಕ್ಷದ ಸದಸ್ಯತ್ವ ಹಾಗೂ ಕ್ರಿಯಾತ್ಮಕ ಸದಸ್ಯತ್ವ ಮೂಲಕ ಪಕ್ಷದ ಸದಸ್ಯರನ್ನು ನೊಂದಾವಣಿ ಮಾಡಿ ನಂತರ ಭೂತ್ ಮಟ್ಟದಿಂದ ತಾಲೂಕು ಮಟ್ಟದ ಪದಾಧಿಕಾರಿಗಳನ್ನು ಹಾಗೂ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಿ ಆನಂತರ ಜಿಲ್ಲಾ ಪದಾಧಿಕಾರಿಗಳನ್ನು ನೇಮಕ ಮಾಡಲಾಗುವುದು. ಇದೀಗ ಕೆಲವೇ ದಿನಗಳಲ್ಲಿ ಜಿಲ್ಲಾ ಅಡಾಹಕ್ ಸಮಿತಿಯನ್ನು […]

ಕಲ್ಲೋಳ ಬ್ಯಾರೇಜ್ ನಿರ್ಮಾಣ ಪ್ರಸ್ತಾವಕ್ಕೆ ಶೀಘ್ರ ಮಂಜೂರಾತಿ: ಗೋವಿಂದ ಕಾರಜೋಳ

Sunday, July 18th, 2021
Karjojala

ಬೆಳಗಾವಿ : ನಲವತ್ತು ವರ್ಷಗಳಷ್ಟು ಹಳೆಯದಾಗಿರುವ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬ್ಯಾರೇಜ್ ಹೊಸದಾಗಿ ನಿರ್ಮಿಸುವ 35 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವಕ್ಕೆ ತಕ್ಷಣವೇ ಮಂಜೂರಾತಿ ನೀಡಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಲಜೀವನ ಮಿಷನ್, ಬಹುಗ್ರಾಮ ಕುಡಿಯುವ ನೀರು, ಕೋವಿಡ್ ನಿಯಂತ್ರಣ ಮತ್ತಿತರ ವಿಷಯಗಳ ಕುರಿತು ನಗರದ ಪ್ರವಾಸಿಮಂದಿರದಲ್ಲಿ ಭಾನುವಾರ (ಜು.18) ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. 1980 ರಲ್ಲಿ […]

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಪೊನ್ನುರಾಜ್‌ ಮತ್ತೆ ಜಿಲ್ಲೆಗೆ

Friday, May 1st, 2020
v-ponnuraj

ಮಂಗಳೂರು: ಕೋವಿಡ್‌-19 ನಿಯಂತ್ರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಗೆ ನಿಯೋಜನೆಗೊಂಡಿರುವ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಪೊನ್ನುರಾಜ್‌ ಅವರು ಜಿಲ್ಲೆಗೆ ಮರಳಿ ಬಂದಿದ್ದು, ಜಿಲ್ಲೆಯ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌-19 ಪ್ರಕರಣ ವರದಿಯಾಗುತ್ತಿದ್ದಂತೆ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ರೋಗ ಹರಡ ದಂತೆ ಜಿಲ್ಲಾಡಳಿತದ ಜತೆ ಮೇಲಿಂದ ಮೇಲೆ ಸಭೆಗಳನ್ನು ನಡೆಸಿ ಕೆಲವೊಂದು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದ ಪೊನ್ನುರಾಜ್‌ ಬಳಿಕ ಜಿಲ್ಲೆಯಲ್ಲಿ ಕಾಣಿಸಿ ಕೊಂಡಿರಲಿಲ್ಲ. ಕೋವಿಡ್‌-19 ದಿಂದ ಎರಡು ಸಾವು ಸಂಭವಿಸಿ ಅಂತ್ಯಕ್ರಿಯೆಗೆ ಜಿಲ್ಲಾಡಳಿತ ಹೆಣಗಾಡುವ ಪರಿಸ್ಥಿತಿ […]

ವಿಟಿಯುವಿನ ಸಮಸ್ಯೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Wednesday, September 25th, 2019
vtu

ಮಂಗಳೂರು  : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ನ 2015 ನೇ ಸ್ಕೀಮಿನ ಅಡಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಇರುವ‌ ನಿಯಮದಿಂದ ಪದೇ ಪದೇ ಆಗುತ್ತಿರುವ ತೊಂದರೆಯ ಬಗ್ಗೆ‌ ಹಾಗು ಮೊದಲನೆಯ ವರ್ಷದ ಒಂದು ವಿಷಯ ಇದ್ದರೆ ಆ ವಿದ್ಯಾರ್ಥಿ ನಾಲ್ಕನೆ ವರ್ಷಕ್ಕೆ ಹೋಗಲು ಅನರ್ಹನೆಂಬ ನಿಯಮವನ್ನು ಬದಲಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ವಿದ್ಯಾರ್ಥಿಗಳು  ಮನವಿ ಮಾಡಿದರು. ಮುಖಂಡರಾದ ಅಕ್ಷಯ್ ಆಳ್ವ, ಚರಣ್ ರಾಜ್, ಸಾಕ್ಷತ್ ಶೆಟ್ಟಿ, […]

26 ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ

Tuesday, July 31st, 2018
Incharge

ಬೆಂಗಳೂರು :  ಕಾಂಗ್ರೆಸ್ ಮತ್ತು ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ತಿಂಗಳ ನಂತರ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿದ್ದಾರೆ. ಖಾತೆ ಹಂಚಿಕೆ ಬಳಿಕ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದರಿಂದ ಮತ್ತು ಸಚಿವ ಸ್ಥಾನ ಪಡೆದುಕೊಂಡ ಸಚಿವರಲ್ಲೂ ಹಲವರು ಗೊಂದಲ ಹೊಂದಿದ್ದರಿಂದ ಸಿಎಂ ಕುಮಾರಸ್ವಾಮಿ ಅವರು ಜಿಲ್ಲಾ ಉಸ್ತುವಾರಿ ಸಚಿವರ ನೇಮಕವನ್ನು ಮುಂದೂಡುತ್ತಾ ಬಂದಿದ್ದರು. ಇಂದು ಸಂಜೆ ಕೊನೆಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿ, ಪಟ್ಟಿ […]

ಆರು ತಿಂಗಳೊಳಗೆ ಕಸವಿಭಜನೆ ಮನೆಗಳಿಂದ ಆರಂಭವಾಗಲಿ: ಭರತ್ಲಾಲ್ ಮೀನ

Saturday, August 17th, 2013
Bharath-Lal-Meena

ಮಂಗಳೂರು : ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇಯನ್ನು ಯಶಸ್ವಿಯಾಗಿಸಲು ಮುಂದಿನ ಆರು ತಿಂಗಳೊಳಗಾಗಿ ಪ್ರತಿಯೊಂದು ಮನೆಯಿಂದ ಕಸವಿಭಜಿಸಿ ಸಂಗ್ರಹ ಆರಂಭವಾಗಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರರ್ಶಿಗಳಾದ ಶ್ರೀ ಭರತ್ ಲಾಲ್ ಮೀನಾ ಅವರು ಸೂಚಿಸಿದರು. ಆರು ತಿಂಗಳೊಳಗೆ ಶೇ 80 ಪ್ರಗತಿ ದಾಖಲಿಸಬೇಕೆಂದ ಉಸ್ತುವಾರಿ ಕಾರ್ಯದರರ್ಶಿಗಳು, ಈ ಸಂಬಂಧ ಪ್ರತೀ ವಾರಕ್ಕೊಮ್ಮೆ ಪ್ರಗತಿಯನ್ನು ತಮಗೆ ಕಳುಹಿಸಿಕೊಡಬೇಕೆಂದು ಮಹಾನಗರಪಾಲಿಕೆ ಆಯುಕ್ತರಿಗೆ ಸೂಚಿಸಿದರು. ಮೂಡಬಿದ್ರೆಯಲ್ಲಿ ಕಸವಿಭಜಿಸಿ ಸಂಗ್ರಹಿಸುವ ಕಾರ್ಯ ಯಶಸ್ವಿಯಾಗಿದ್ದು, ಈ ಯಶೋಗಾಥೆ ಉಳಿದವರಿಗೆ ಪ್ರೇರಪಣೆ ನೀಡುವಂತೆ ಇಂತಹ ಮಾದರಿಗಳ ಬಗ್ಗೆ […]