ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ದಲ್ಲಿ ಪ್ರಮೋದ್ ಬೆಂಬಲಿಗರು ಮೌನ ಪ್ರತಿಭಟನೆ

Monday, November 30th, 2020
Udupi Convention

ಉಡುಪಿ : ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಮತ್ತು ಕಾಂಗ್ರೆಸ್ ಭವನದಲ್ಲಿ ನಡೆದ ಪ್ರಮುಖ ಸಭೆಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಗೈರು ಹಾಜರಾಗಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ರವಿವಾರ ನಡೆದ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ದಲ್ಲಿ ಪ್ರಮೋದ್ ಬೆಂಬಲಿಗರು ಮೌನ ಪ್ರತಿಭಟನೆ ನಡೆಸಿದ್ದರು. ಸಮಾವೇಶ ವನ್ನು ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್  ನಾವು ಮೊದಲು ಪಕ್ಷವನ್ನು ಸರಿಪಡಿಸಬೇಕಾಗಿದೆ. ಭಿನ್ನಾಭಿಪ್ರಾಯ ಎಂಬುದು ಎಲ್ಲ ಕಡೆಗಳಲ್ಲಿ ಇರುತ್ತದೆ. ಯಾವುದೇ ಸಮಸ್ಯೆ ಇದ್ದರೆ ನಮ್ಮಲ್ಲಿ ಹೇಳಿಕೊಂಡರೆ ಅದನ್ನು […]

ಜಿಲ್ಲಾ ಕಾಂಗ್ರೆಸ್ ನಿಲುವಿಗೆ ಜೆಡಿಎಸ್ ಆಕ್ಷೇಪ

Saturday, January 11th, 2020
ಜಿಲ್ಲಾ ಕಾಂಗ್ರೆಸ್ ನಿಲುವಿಗೆ ಜೆಡಿಎಸ್ ಆಕ್ಷೇಪ

ಮಡಿಕೇರಿ : ಕೇಂದ್ರದ ಪೌರತ್ವ ಕಾಯ್ದೆ ವಿರುದ್ಧ ಜ.11 ರಂದು ಮಡಿಕೇರಿಯಲ್ಲಿ ಜಾತ್ಯತೀತ ಮತ್ತು ಪಕ್ಷಾತೀತವಾಗಿ ಜನಾಂದೋಲನ ಸಭೆ ನಡೆಯಲಿದ್ದು, ಈ ಸಮಾವೇಶದಲ್ಲಿ ಬಿಜೆಪಿಯೇತರವಾದ ಎಲ್ಲಾ ಪಕ್ಷಗಳು ಪ್ರಮುಖ ಪಾತ್ರ ವಹಿಸಲಿವೆ. ಆದರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಕಾಂಗ್ರೆಸ್ ಪಕ್ಷ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಹೇಳಿಕೆ ನೀಡಿದ್ದು, ಇದನ್ನು ತೀವ್ರವಾಗಿ ಖಂಡಿಸುವುದಾಗಿ ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೋಮುವಾದಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯಿಂದ […]

ಮಡಿಕೇರಿ : ಡಿ.31 ರಂದು ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

Thursday, December 26th, 2019
manjunath

ಮಡಿಕೇರಿ : ಕೇಂದ್ರ ಸರ್ಕಾರದ ಸಿಎಎ ಮತ್ತು ಎನ್‌ಆರ್‌ಸಿ ಕಾಯ್ದೆ ವಿರುದ್ಧ ಡಿ.30 ಕ್ಕೆ ಬದಲಾಗಿ ಡಿ.30 ರಂದು ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ತಿಳಿಸಿದ್ದಾರೆ. ನಗರದ ಗಾಂಧಿ ಮೈದಾನದಲ್ಲಿ ಅಂದು ಬೆಳಗ್ಗೆ10.30 ಗಂಟೆಗೆ ಸಮಾವೇಶಗೊಂಡು ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಕೇಂದ್ರದ ಜನವಿರೋಧಿ ನೀತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದೆಂದು ಪತ್ರಿಕಾ ಪ್ರಕಟಣೆ […]

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿ ಜನ್ಮ ದಿನಾಚರಣೆ..!

Tuesday, November 20th, 2018
indira-gandhi-4

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಿನ್ನೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಇಂದಿರಾ ಗಾಂಧಿ ಜನ್ಮ ದಿನಾಚರಣೆಯಲ್ಲಿ ಭಾಗವಹಿಸಿ ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಸುಮಾರು ಹದಿನಾರು ವರ್ಷಗಳ ಕಾಲ ಓರ್ವ ಹೆಣ್ಣು ಮಗಳಾಗಿ ದೇಶದ ಚುಕ್ಕಾಣಿ ಹಿಡಿದು, ಉಕ್ಕಿನ ಮಹಿಳೆ ಎಂದು ಹೆಸರಾದವರು ಇಂದಿರಾ ಗಾಂಧಿ ಎಂದು ಬಣ್ಣಿಸಿದರು. ಸ್ವಾತಂತ್ರ್ಯ ಸಿಕ್ಕರೂ ದೇಶಕ್ಕೆ ಸಾಮಾಜಿಕ ಸ್ವಾತಂತ್ರ್ಯ ಬಂದಿರಲಿಲ್ಲ. ಇಂದಿರಾ ಗಾಂಧಿಯವರು ಅಧಿಕಾರಕ್ಕೆ ಬಂದು ಕಠಿಣವಾದ ನಿಲುವುಗಳ ಮೂಲಕ ಸಾಮಾಜಿಕ ನ್ಯಾಯದಿಂದ ವಂಚಿತರಾದ […]

ಮೀ ಟೂ: ನನಗೆ ಗೊತ್ತಿಲ್ಲದೇ ಇರೋ ವಿಷಯದ ಬಗ್ಗೆ ಮಾತಾಡಲ್ಲ: ಸಚಿವೆ ಜಯಮಾಲ

Monday, October 22nd, 2018
jayamala

ಶಿವಮೊಗ್ಗ: ಮೀ ಟೂ ವಿಷಯದ ಬಗ್ಗೆ ಕಾಮೆಂಟ್ ಮಾಡಲ್ಲ.‌ ನನಗೆ ಗೊತ್ತಿಲ್ಲದೇ ಇರೋ ವಿಷಯದ ಬಗ್ಗೆ ಮಾತಾಡಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಜಯಮಾಲ ತಿಳಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಮೀ ಟೂ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಆಗಿ ಉತ್ತರ ಕೊಡಿ ಎಂದಿದ್ದಕ್ಕೆ ‘ಏನ್ರೀ ಅದು’ ಎಂದರು. ಚುನಾವಣೆ, ಇಲಾಖೆ, ಅಂಗನವಾಡಿ ಮಕ್ಕಳ‌ ಬಗ್ಗೆ ಯೋಚಿಸುತ್ತಿದ್ದೇನೆ.‌ ಸಿನಿಮಾದಲ್ಲಿ ಏನಾಗ್ತಿದೆ ಎಂದು ನಂಗೆ ಗೊತ್ತಿಲ್ಲ. ಪ್ರತಿಕ್ರಿಯೆ ಬೇಕೇಬೇಕು […]

ರಾಘವೇಂದ್ರ ರಾವ್‌ ಅವರಿಗೆ ಸಮ್ಮಾನ

Thursday, December 14th, 2017
raghavendra

ಮಂಗಳೂರು : ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರಿಂದ ಕಾಂಗ್ರೆಸ್‌ ಮುಕ್ತ ಭಾರತವನ್ನು ಮಾಡಲು ಸಾಧ್ಯ ವಿಲ್ಲ. ನಾವು ನಿಮ್ಮೊಂದಿಗಿದ್ದೇವೆ ಎಂಬುದನ್ನು ಮತದಾರರು ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ತೋರಿಸಿದ್ದಾರೆ. ಬಲಿಷ್ಠ ಕಾರ್ಯಕರ್ತರ ಪಕ್ಷ ನಮ್ಮದಾಗಿದೆ ಎಂದು ಶಾಸಕ ಮೊಯಿದಿನ್‌ ಬಾವಾ ಹೇಳಿದರು. ಜಿಲ್ಲಾ ಕಾಂಗ್ರೆಸ್‌ನ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಎಪಿಎಂಪಿಸಿಯ ಮಾಜಿ ಸದಸ್ಯ ವೈ.ರಾಘವೇಂದ್ರ ರಾವ್‌ ಅವರನ್ನು ಸಮ್ಮಾನಿಸಿ ಅವರು ಮಾತನಾಡಿದರು.ಮುಂದಿನ ದಿನಗಳಲ್ಲಿ ಮೋದಿ ಹಾಗೂ ಕರ್ನಾಟಕದಲ್ಲಿ ಯಡಿಯೂರಪ್ಪ ಮುಕ್ತ ಭಾರತ ಹಾಗೂ ಆಡಳಿತವನ್ನು ಹೊಂದುವುದು ಕಾಂಗ್ರೆಸ್‌ […]

ಮೋಟರ್ ಕಾಯ್ದೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ

Saturday, February 4th, 2017
Congress-Protest

ಮಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತರಲುದ್ದೇಶಿಸಿರುವ ಮೋಟರ್ ಕಾಯ್ದೆ ವಿರೋಧಿಸಿ ನಗರದ ಆರ್‌ಟಿಓ ಕಚೇರಿ ಮುಂಭಾಗದಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದು, ಮೋಟಾರ್ ಕಾಯ್ದೆಯಿಂದ ಜನಸಾಮನ್ಯರು ಸಂಕಷ್ಟಕ್ಕೆ ಈಡಾಗಿದ್ದಾರೆ ಎಂದು ಆರೋಪಿಸಿದರು. ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹೀಮ್ ಕೋಡಿಜಾಲ್ ಅವರು ಮೋಟರ್ ಕಾಯ್ದೆಯಿಂದ ಚಾಲಕರ ಲೈಸೆನ್ಸ್ ರದ್ದಾದಲ್ಲಿ 5 ವರ್ಷಗಳವರೆಗೆ ಪರವಾನಗಿ ರದ್ದಾಗುತ್ತದೆ. ಇದರಿಂದ ಅವರ ಕುಟುಂಬದ […]

ಕರಾವಳಿಯಲ್ಲಿ ನಾವಿಕನಿಲ್ಲದ ಹಡಗಿನಂತಾದ ಕಾಂಗ್ರೆಸ್ !

Wednesday, February 13th, 2013

ಮಂಗಳೂರು : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಅಥವಾ ಕುಂದಾಪುರ ಕ್ಷೇತ್ರಗಳ ಪೈಕಿ ಯಾವುದಾದರೊಂದು ಕ್ಷೇತ್ರದಿಂದ ಸ್ಪರ್ಧಿಸುವ ಆಕಾಂಕ್ಷೆ ವ್ಯಕ್ತಪಡಿಸಿ ಭಾರೀ ಲಾಭಿ ನಡೆಸುತ್ತಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಾಜಿ ಶಾಸಕ ಗೋಪಾಲ ಪೂಜಾರಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀ ನಾಮೆ ನೀಡಿದ್ದು, ಪರಿಣಾಮವಾಗಿ ಪಕ್ಷ ಉಡುಪಿ ಜಿಲ್ಲೆಯಲ್ಲಿ ನಾವಿಕನಿಲ್ಲದ ಹಡಗಿನಂತಾಗಿದೆ ಎಂಬ ಅಭಿಪ್ರಾಯ ಪಕ್ಷದೊಳಗೆ ವ್ಯಾಪಕವಾಗಿದೆ. ಎಂ.ಎ.ಗಫೂರ್ ಕೆಪಿಸಿಸಿ ಕಾರ್ಯದರ್ಶಿಯಾಗಿ ಆಯ್ಕೆಯಾದ ಬಳಿಕ ಅವರಿಂದ ತೆರವಾದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಬೈಂದೂರಿನ ಮಾಜಿ ಶಾಸಕ, ಬೆಂಗಳೂರಿನಲ್ಲಿ ಹೊಟೇಲ್ ಉದ್ಯಮಿ […]