ಕೊಡಗು ಪ್ರವೇಶದ ಚೆಕ್ ಪೋಸ್ಟ್‌ಗಳಲ್ಲಿ ಪೊಲೀಸ್ ಕಣ್ಗಾವಲು

Friday, November 8th, 2019
sumana

ಮಡಿಕೇರಿ  :  ಈದ್ ಮಿಲಾದ್, ಟಿಪ್ಪು ಜಯಂತಿ ಹಾಗೂ ಸಧ್ಯದಲ್ಲಿಯೇ ಅಯೋಧ್ಯೆ ವಿವಾದದ ತೀರ್ಪು ಹೊರ ಬರಲಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಅಗತ್ಯ ಭದ್ರತಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಕೊಡಗು ಪ್ರವೇಶದ ಚೆಕ್ ಪೋಸ್ಟ್‌ಗಳಲ್ಲಿ ಪೊಲೀಸ್ ಕಣ್ಗಾವಲು ಇರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಸುಮನ ತಿಳಿಸಿದ್ದಾರೆ. ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌ಪಿ, ಕೇರಳ ರಾಜ್ಯದ ಕಣ್ಣೂರು, ವಯನಾಡು, ಕಾಸರಗೂಡು ಹಾಗೂ ಹಾಸನ, ಮೈಸೂರು ಜಿಲ್ಲೆಗಳ ಗಡಿಭಾಗಗಳಿಗೆ ಹೊಂದಿಕೊಂಡಂತೆ ೧೪ ಚೆಕ್ ಪೋಸ್ಟ್‌ಗಳನ್ನು ತೆರೆದಿದ್ದು, ವಾಹನ […]

ಟಿಪ್ಪು ಜಯಂತಿಯನ್ನು‌ ಕದ್ದು ಮುಚ್ಚಿ ಆಚರಿಸುವ ಪರಿಸ್ಥಿತಿಯಲ್ಲಿ ನಾವಿದ್ದೇವೆ: ಹರೀಶ್ ಕುಮಾರ್

Saturday, November 10th, 2018
harish-kumar-2

ಮಂಗಳೂರು: ಟಿಪ್ಪು ಜಯಂತಿಯನ್ನು‌ ಕದ್ದು ಮುಚ್ಚಿ ಆಚರಿಸುವ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಇದು ಆಗಬಾರದು ಎಂದು ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಹೇಳಿದ್ದಾರೆ. ದ.ಕ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ದಕ ಜಿಪಂನ ನೇತ್ರಾವತಿ ಸಭಾಂಗಣದಲ್ಲಿ ಇಂದು ಬೆಳಗ್ಗೆ ನಡೆದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯಲ್ಲಿ ಅವರು ಮಾತನಾಡಿದರು. ಇದು ಸಾರ್ವಜನಿಕ ಜಯಂತಿ ಆಗಬೇಕಾದರೆ ಮುಂದಿನ ದಿನಗಳಲ್ಲಾದರೂ ಇದು ಪುರಭವನದಲ್ಲಿ ಆಚರಿಸುವಂತಾಗಬೇಕು. ಆಗ ಅರ್ಥಪೂರ್ಣ ಆಚರಣೆ ಆಗುತ್ತದೆ ಎಂದರು. ಈ ಸಂದರ್ಭ […]

ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಮುತ್ತಿಗೆ ಯತ್ನ: ಮಂಗಳೂರಲ್ಲಿ ಕಾರ್ಯಕರ್ತರ ಬಂಧನ

Saturday, November 10th, 2018
bajarangdal

ಮಂಗಳೂರು: ನಗರದಲ್ಲಿ ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ವಿಶ್ವ ಹಿಂದೂ ಪರಿಷತ್, ಬಜರಂಗದಳ, ಶ್ರೀರಾಮಸೇನೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಉರ್ವಸ್ಟೋರ್ನಲ್ಲಿರುವ ದ.ಕ. ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆಯುವ ಟಿಪ್ಪು ಜಯಂತಿ ಆಚರಣೆಯನ್ನು ವಿರೋಧಿಸಿ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಬಂಧಿಸಿದ್ದಾರೆ. ಮೆರವಣಿಗೆ ಮೂಲಕ ಟಿಪ್ಪು ವಿರುದ್ಧ ಘೋಷಣೆ ಕೂಗುತ್ತಾ ಮುತ್ತಿಗೆಗೆ ಯತ್ನಿಸಿದ ಕಾರ್ಯಕರ್ತರನ್ನು ಉರ್ವ ಪೊಲೀಸ್ ಠಾಣೆ ಮುಂಭಾಗದಲ್ಲಿ ಬಂಧಿಸಲಾಯಿತು. ಬಳಿಕ ಮತ್ತೊಂದು ಮೆರವಣಿಗೆ ಮೂಲಕ ಬಂದ ಶ್ರೀರಾಮಸೇನೆ ಕಾರ್ಯಕರ್ತರನ್ನು […]

ಬಿಜೆಪಿ ಶಾಸಕ ರಘುಪತಿ ಭಟ್ ಅಧ್ಯಕ್ಷತೆಯಲ್ಲಿ ನವೆಂಬರ್ 10 ರಂದು ಉಡುಪಿಯಲ್ಲಿ ಟಿಪ್ಪು ಜಯಂತಿ ಆಚರಣೆ

Wednesday, November 7th, 2018
Raghupathi

ಉಡುಪಿ : ದಕ್ಷಿಣ ಕನ್ನಡದಲ್ಲಿ ಶಾಸಕರು ಟಿಪ್ಪು ಜಯಂತಿಗೆ ವಿರೋಧ ವ್ಯಕ್ತ ಪಡಿಸುತ್ತಿದ್ದರೂ ಉಡುಪಿಯಲ್ಲಿ ಮಾತ್ರ ಬಿಜೆಪಿ ಶಾಸಕರ ಅಧ್ಯಕ್ಷತೆಯಲ್ಲಿಯೇ ಟಿಪ್ಪು ಜಯಂತಿ ಆಚರಣೆ ನಡೆಯಲಿದೆ. ಉಡುಪಿಯಲ್ಲಿ ನವೆಂಬರ್ 10 ರಂದು  ಶಾಸಕ ರಘುಪತಿ ಭಟ್ ಅಧ್ಯಕ್ಷತೆಯಲ್ಲಿ ಟಿಪ್ಪು ಜಯಂತಿ ನಡೆಯಲಿದೆ. ಟಿಪ್ಪು ಜಯಂತಿಯ ಬಗ್ಗೆ ತೀವೃ ವಿರೋಧ ವ್ಯಕ್ತ ಪಡಿಸುತ್ತಿರುವ ಬಿಜೆಪಿಯ ಸಂಸದೆ ಶೋಭಾ ಕರಂದ್ಲಾಜೆ ಮುಖ್ಯ ಅತಿಥಿಯಾಗಿದ್ದಾರೆ. ಅವರ ಜೊತೆ ಬಿಜೆಪಿ ಶಾಸಕ ರಾದ  ಕುಂದಾಪುರ ವಿಧಾನ ಸಭಾ ಕ್ಷೇತ್ರದ ಹಾಲಾಡಿ ಶ್ರೀನಿವಾಸ ಶೆಟ್ಟಿ, […]

ಟಿಪ್ಪು ಜಯಂತಿ ಮತ್ತು ಬಿಜೆಪಿ ವತಿಯಿಂದ ಪರಿವರ್ತನಾ ಯಾತ್ರೆಗೆ ಬಿಗು ಬಂದೋಬಸ್ತ್ 

Wednesday, November 8th, 2017
agdp

ಮಂಗಳೂರು : ಟಿಪ್ಪು ಜಯಂತಿ ಮತ್ತು ಬಿಜೆಪಿ ವತಿಯಿಂದ ಪರಿವರ್ತನಾ ಯಾತ್ರೆ ಏಕ ಕಾಲದಲ್ಲಿ ನಡೆಯುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ  ಶಾಂತಿ, ಸುವ್ಯವಸ್ಥೆಗಾಗಿ ಪೊಲೀಸ್ ಇಲಾಖೆ ಸಕಲ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಕಮಲ್ ಪಂತ್, ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಬಂದೋಬಸ್ತ್‌ಗೆ ಸೂಚಿಸಿದ್ದಾರೆ. ಪತ್ರಿಕಾ ಗೋಷ್ಠಿಯಲ್ಲಿ  ಮಾತನಾಡಿದ ಅವರು, ಬಂದೋಬಸ್ತ್‌ಗಾಗಿ ಪೊಲೀಸ್ ಇಲಾಖೆ ಸಕಲ ಕ್ರಮ ತೆಗೆದುಕೊಂಡಿದೆ. ನಗರ ಹಾಗೂ ಜಿಲ್ಲಾ ಪೊಲೀಸ್ ಜತೆಗೆ 2 ಸಾವಿರ ಹೆಚ್ಚುವರಿ ಪೊಲೀಸ್, 13 ಕೆಎಎಸ್‌ಆರ್‌ಪಿ ತುಕಡಿ, […]

ಟಿಪ್ಪು ಜಯಂತಿ ಆಚರಿಸದಂತೆ ಹಿಂದುತ್ವವಾದಿ ಸಂಘಟನೆಗಳ ವತಿಯಿಂದ ಪುತ್ತೂರಿನಲ್ಲಿ ಪ್ರತಿಭಟನೆ

Thursday, November 2nd, 2017
putturu

ಮಂಗಳೂರು: ಟಿಪ್ಪು ಜಯಂತಿ ಆಚರಿಸದಂತೆ ರಾಜ್ಯ ಸರಕಾರವನ್ನು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿ ಹಾಗೂ ಸ್ಥಳೀಯ ಸಮಸ್ತ ಹಿಂದುತ್ವವಾದಿ ಸಂಘಟನೆಗಳ ವತಿಯಿಂದ ಪುತ್ತೂರಿನ ಬಸ್ ನಿಲ್ದಾಣದ ಬಳಿಯಿರುವ ಗಾಂಧಿ ಕಟ್ಟೆಯ ಮುಂಭಾಗದಲ್ಲಿ ಬೆಳಿಗ್ಗೆ ಶಂಖನಾದದೊಂದಿಗೆ ಪ್ರತಿಭಟನೆ ಆರಂಭವಾಯಿತು. ಶಂಖನಾದವನ್ನು ಹಿಂದೂ ಜನಜಾಗೃತಿ ಸಮಿತಿಯ ಶ್ರೀ ದಯಾನಂದ ಹೆಗ್ಡೆ ಮಾಡಿದರು. ಪ್ರತಿಭಟನೆಯ ನಂತರ ಕರ್ನಾಟಕದ ರಾಜ್ಯಪಾಲರಿಗೆ ಸಹಾಯಕ ಕಮಿಷನರ್ ಮೂಲಕ ಮನವಿ ನೀಡಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಹಿಂದೂ ಜನಜಾಗೃತಿ ಸಮಿತಿಯ ಸಮನ್ವಯಕ ಶ್ರೀ ಜನಾರ್ದನ ಗೌಡ, ಹಿಂದೂ ಮುಖಂಡರಾದ […]

“ಸುಲ್ತಾನ” ಅಲ್ಲ “ಕ್ರೂರಿ” ಆಗಿದ್ದ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿ !, ಹಿಂದೂಗಳ ಒಮ್ಮತ ಬೇಡಿಕೆ

Thursday, November 2nd, 2017
hindu jagarana vedike

ಮಂಗಳೂರು : ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯ ನಂತರ ಕರ್ನಾಟಕದ ರಾಜ್ಯಪಾಲರಿಗೆ ಅಪರ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಹಿಂದೂ ಜನಜಾಗೃತಿ ಸಮಿತಿಯ ಉಡುಪಿ ಜಿಲ್ಲಾ ಸಮನ್ವಯಕರಾದ ಶ್ರೀ ವಿಜಯ್ ಕುಮಾರ್, ಹಿಂದೂ ಮಹಾಸಭಾದ ಶ್ರೀ ಧರ್ಮೇಂದ್ರ, ಹಿಂದೂ ಯುವಸೇನೆಯ ಜಿಲ್ಲಾಧ್ಯಕ್ಷರಾದ ಶ್ರೀ ವೀರಪ್ಪ ಮೂಡುಶೆಡ್ಡೆ ಮಾತನಾಡಿದರು. ಹಿಂದೂಗಳ ಹತ್ಯೆ ಮತ್ತು ಮತ್ತು ಮತಾಂತರಿಸುವ ಕ್ರೂರ ಟಿಪ್ಪು ಸುಲ್ತಾನದ ಜಯಂತಿಯನ್ನು ಆಚರಿಸುವುದು, ಹಿಂದೂಗಳ ಗಾಯದ ಮೇಲೆ ಬರೆ ಎಳೆದಂತೆಯೇ ಸರಿ. ಹಿಂದೂಗಳ […]

ಟಿಪ್ಪು ಜಯಂತಿ ರದ್ದುಪಡಿಸಲು ಬಿಜೆಪಿ ಯುವ ಮೋರ್ಚಾದ ವತಿಯಿಂದ ಜಿಲ್ಲಾಧಿಕಾರಿಯವರಿಗೆ ಮನವಿ

Wednesday, October 25th, 2017
Tippu jayanti

ಮಂಗಳೂರು: ಬಿಜೆಪಿ ಯುವ ಮೋರ್ಚಾದ ವತಿಯಿಂದ ಮುಂದಿನ ತಿಂಗಳು ನಡೆಯುವ ಟಿಪ್ಪು ಜಯಂತಿಯನ್ನು ತತ್‌ಕ್ಷಣ ರದ್ದುಪಡಿಸಬೇಕು ಎಂದು ಆಗ್ರಹಿಸಿ ಜಿಲ್ಲಾ  ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು. ಟಿಪ್ಪು ಜಯಂತಿ ಆಚರಿಸುತ್ತಿರುವ ರಾಜ್ಯ ಸರಕಾರದ ಕ್ರಮ ಸರಿಯಲ್ಲ. ಆಚರಣೆಯನ್ನು ರದ್ದುಪಡಿಸದಿದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ಮನವಿಯಲ್ಲಿ ತಿಳಿಸಲಾಯಿತು. ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಹರೀಶ್‌ ಪೂಂಜ, ಹರೀಶ್‌ ಮೂಡುಶೆಡ್ಡೆ, ದಯಾನಂದ ಕೊಣಾಜೆ, ಸುದರ್ಶನ್‌ ಪೂಜಾರಿ, ಮಹೇಶ್‌, ಸಂದೀಪ್‌ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು

ಟಿಪ್ಪು ಜಯಂತಿ ಸರ್ಕಾರದ ವತಿಯಿಂದ ಮಾಡುತ್ತೇವೆ: ಸಿದ್ದರಾಮಯ್ಯ

Monday, October 23rd, 2017
tippu jayanthi

ಮಂಗಳೂರು:  ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಮಾಡಿಯೇ ಮಾಡುತ್ತೇವೆ,  ಬಿಜೆಪಿ ರಾಜಕೀಯ ಕಾರಣದಿಂದ ಟಿಪ್ಪು ಜಯಂತಿ ವಿರೋಧಿಸುತ್ತಿದೆಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆಗಾಗಿ ಆಗಮಿಸಿದ ಅವರು ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿ, ಯಡಿಯೂರಪ್ಪ ಕೆಜೆಪಿಯಲ್ಲಿದ್ದಾಗ ಟಿಪ್ಪು ಜಯಂತಿ ಆಚರಿಸಿದ್ದಾರೆ. ಶೋಭಾ ಕೂಡಾ ಅವರಿಗೆ ಸಾಥ್ ನೀಡಿದ್ದರು. ಟೊಪ್ಪಿ ಹಾಕಿ ಖಡ್ಗ ಝಳಪಿಸಿ ಅಂದು ಯಡಿಯೂರಪ್ಪ ಫೋಸ್ ನೀಡಿದ್ದರು ಎಂದು ವ್ಯಂಗ್ಯವಾಡಿದರು. ಸಚಿವ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿ ಪ್ರೋಟೊಕಾಲ್ ಪ್ರಕಾರ […]

ಶಿಕ್ಷಣ ಸಚಿವರು ತಕ್ಷಣ ರಾಜೀನಾಮೆ ನೀಡಬೇಕು: ಸುಲೋಚನಾ ಜಿ.ಕೆ.ಭಟ್

Saturday, November 12th, 2016
bjp-mahila-morcha-

ಮಂಗಳೂರು: ನೈತಿಕ ಮೌಲ್ಯವನ್ನು ಎತ್ತಿ ಹಿಡಿಯಬೇಕಾದ ಶಿಕ್ಷಣ ಸಚಿವರು ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮದಲ್ಲಿ ಯುವತಿಯೋರ್ವಳ ಅರೆನಗ್ನ ಚಿತ್ರ ವೀಕ್ಷಿಸುವ ಮೂಲಕ ಸಮಾಜವೇ ತಲೆತಗ್ಗಿಸುವ ಕೆಲಸ ಮಾಡಿದ್ದಾರೆ. ಅವರು ತಕ್ಷಣ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ರಾಜೀನಾಮೆ ನೀಡದಿದ್ದರೆ ಮುಖ್ಯಮಂತ್ರಿಯವರೇ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಬಿಜೆಪಿ ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ.ಭಟ್ ಆಗ್ರಹಿಸಿದ್ದಾರೆ. ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರೆನಗ್ನ ಚಿತ್ರಗಳ ವೀಕ್ಷಣೆಯಲ್ಲಿ ಮಗ್ನವಾಗಿದ್ದ ಸೇಠ್ ಅವರು ಪರೋಕ್ಷವಾಗಿ ಟಿಪ್ಪು ಜಯಂತಿಗೆ […]