“ಕಾಂಗ್ರೆಸ್ ಸರಕಾರದಿಂದ ಜನರಿಗೆ ತೊಂದರೆ” -ಶಾಸಕ ಡಿ.ವೇದವ್ಯಾಸ ಕಾಮತ್

Friday, November 3rd, 2023
Vedavyas-Kamath

ಮಂಗಳೂರು: ಮಂಗಳೂರಿನಲ್ಲಿ ಸಂಪ್ರದಾಯಿಕ ಮರಳುಗಾರಿಕೆ ನಿಲ್ಲಿಸಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ 7 ಮಂದಿ ತಜ್ಞರ ವರದಿಯನ್ನು ತಯಾರಿಸಿ ಈಗಾಗಲೇ ಸಂಬಂಧಪಟ್ಟ ಇಲಾಖೆಗಳಿಗೆ ರವಾನಿಸಲಾಗಿದೆ. ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಪ್ರತ್ಯೇಕ ಮರಳು ನೀತಿಯನ್ನು ಜಾರಿ ಮಾಡುವುದಾಗಿ ಹೇಳಿದ್ದರೂ ಇಲ್ಲಿಯವರೆಗೆ ಆ ಬಗ್ಗೆ ಕ್ರಮ ಕೈಗೊಳ್ಳಲಿಲ್ಲ. ಇದರಿಂದ ಮರಳುಗಾರಿಕೆಯನ್ನೇ ನಂಬಿರುವ ವ್ಯಾಪಾರಿಗಳು, ಕೂಲಿ ಕಾರ್ಮಿಕರು ಕಂಗಾಲಾಗಿದ್ದಾರೆ. ಮರಳನ್ನು ಬ್ಲ್ಯಾಕ್ ಮಾರ್ಕೆಟ್ ನಲ್ಲಿ ದುಪ್ಪಟ್ಟು ಹಣ ಕೊಟ್ಟು ಖರೀದಿ ಮಾಡುವ ಪರಿಸ್ಥಿತಿ ಒದಗಿದೆ” ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ […]

ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

Thursday, September 28th, 2023
Ranna-Sugar

ಬೆಂಗಳೂರು : ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಯನ್ನು ಪುನಶ್ಚೇತನಗೊಳಿಸಲು ಅಲ್ಪಾವಧಿ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಅವರು ಇಂದು ಮುಧೋಳ ತಾಲ್ಲೂಕಿನ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 2023- 24 ನೇ ಸಾಲಿಗೆ ಕಬ್ಬು ಅರೆಯುವ ಕಾರ್ಯವನ್ನು ಲೀಸ್ ಮೂಲಕ ಪುನರಾರಂಭಿಸುವ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು. ಕಬ್ಬು ಅರೆಯುವ ಕಾರ್ಯ ಪ್ರಾರಂಭ ವಾಗಬೇಕು. ಪುನಶ್ಚೇತನದಿಂದ ರೈತರಿಗೂ ಅನುಕೂಲ ವಾಗಬೇಕು. ಅಲ್ಪಮಟ್ಟದ ಹೂಡಿಕೆಗೆ ಸಿದ್ದವಿರುವ ಸಂಸ್ಥೆಗಳು ಟೆಂಡರ್ ನಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದರು. ಜವಳಿ, […]

ಕಾಂಗ್ರೆಸ್ ಅವಧಿಯಲ್ಲಿ ಆರಂಭಿಸಿದ ಕೆಲಸಗಳನ್ನೇ ಬಿಜೆಪಿ ಶಾಸಕರು ತಮ್ಮದೆಂದು ಬಿಂಬಿಸಿಕೊಳ್ಳುತ್ತಿದ್ದಾರೆ : ವಿಪಕ್ಷ ನಾಯಕ

Monday, October 19th, 2020
Ravoof

ಮಂಗಳೂರು : ನಗರದ 8 ಮಾರುಕಟ್ಟೆಗಳಿಗೆ 2017ರಲ್ಲಿಯೇ ಟೆಂಡರ್ ಕರೆದು ಕಾರ್ಯಾದೇಶ ನೀಡಲಾಗಿತ್ತು ಅಳಕೆ ಮಾರುಕಟ್ಟೆ ಶಿಲಾನ್ಯಾಸ ಮಾತ್ರ ಹಿಂದಿನ ಅವಧಿಯಲ್ಲಿ ನಡೆದಿರುವುದು ಎಂಬುದಾಗಿ ಮಂಗಳೂರು ದಕ್ಷಿಣ ಶಾಸಕರು ನೀಡಿರುವ ಹೇಳಿಕೆ ಅಪ್ಪಟ್ಟ ಸುಳ್ಳು’’ ಎಂದು ಮಂಗಳೂರು ಮಹಾನಗರ ಪಾಲಿಕೆ ವಿಪಕ್ಷ ನಾಯಕ ಅಬ್ದುಲ್ ರವೂಫ್ ಹೇಳಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕರಾದವರು  ಜನರನ್ನು ದಾರಿತಪ್ಪಿಸುವ ಹೇಳಿಕೆ ನೀಡಬಾರದು ಅಳಕೆ ಮಾರುಕಟ್ಟೆ ಮಾತ್ರವಲ್ಲದೆ ಸುರತ್ಕಲ್, ಕಾವೂರು, ಉರ್ವಾ, ಜೆಪು, ಬಿಜೈ, ಕಂಕನಾಡಿ ಹಾಗೂ ಕದ್ರಿ ಸೇರಿ […]

ಮಂಗಳೂರು ವಿಮಾನ ನಿಲ್ದಾಣ ಟರ್ಮಿನಲ್‌ ಬಿಲ್ಡಿಂಗ್‌ ವಿಸ್ತರಣೆ

Wednesday, April 4th, 2018
terminal

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ ಬಿಲ್ಡಿಂಗ್‌ನ ವಿಸ್ತರಣಾ ಯೋಜನೆಯನ್ನು 132 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದ್ದು, ಕಟ್ಟಡವು ಹೊಸ ಅರೈವಲ್‌ ಹಾಲ್‌ ಒಳಗೊಂಡಿರುತ್ತದೆ. ವಿಸ್ತರಣಾ ಕಟ್ಟಡದ ಕಾಮಗಾರಿಗೆ ಟೆಂಡರ್‌ ವಹಿಸಿಕೊಡಲಾಗಿದ್ದು, ಶೀಘ್ರವೇ ಕೆಲಸ ಆರಂಭವಾಗಲಿದೆ. ಎರಡು ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ವಿಮಾನ ನಿಲ್ದಾಣದ ನಿರ್ದೇಶಕ ವಿ.ವಿ. ರಾವ್‌ ಅವರು ಮಂಗಳವಾರ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು. ವಿಸ್ತರಣಾ ಕಟ್ಟಡದ ಪ್ರಥಮ ಮಹಡಿ ಯನ್ನು ನಿರ್ಗಮನ ಹಾಗೂ ಎರಡನೇ ಮಹಡಿಯನ್ನು ಆಗಮನಕ್ಕೆ ಮೀಸಲಿಡಲಾಗುವುದು. ಅರೈವಲ್‌ ಹಾಲ್‌ ನಿರ್ಮಾಣದಿಂದ ವಿಶೇಷ ವಾಗಿ […]

ಒಂದು ಇಲಿ ಹಿಡಿಯೋಕ್ಕೆ 10,000 ರೂ.

Wednesday, July 9th, 2014
Rat

ಬೆಂಗಳೂರು : ಬಿಬಿಎಂಪಿ ಕೇಂದ್ರ ಕಚೇರಿ ಮತ್ತು ವಲಯ ಕಚೇರಿಯಲ್ಲೂ ಇಲಿಗಳ ಹಾವಳಿ ಹೆಚ್ಚಾಗಿದೆ. 6 ತಿಂಗಳಿಂದ ಇಲಿಗಳ ಕಾಟವನ್ನು ತಡೆಯಲು ಸಾಧ್ಯವಾಗದೇ ಬಿಬಿಎಂಪಿ ಅಧಿಕಾರಿಗಳು ತತ್ತರಿಸಿಹೋಗಿದ್ದಾರೆ. ಇಲಿಗಳನ್ನು ಹಿಡಿಯಲು ಬೆಕ್ಕುಗಳನ್ನು ಸಾಕುವುದಂತೂ ಬಿಬಿಎಂಪಿಗೆ ಸಾಧ್ಯವಾಗದ ಕೆಲಸ. ಹೀಗಾಗಿ ಇಲಿಗಳನ್ನು ಹಿಡಿಯಲು ಮೂರು ಕಂಪನಿಗಳಿಗೆ ಟೆಂಡರ್ ನೀಡಲಾಗಿದ್ದು, ಒಂದು ಇಲಿ ಹಿಡಿಯಲು 10 ಸಾವಿರ ರೂ. ಖರ್ಚು ಮಾಡಲಾಗುತ್ತಿದೆ. 6 ತಿಂಗಳಲ್ಲಿ ಹಿಡಿಯಲಾದ ಇಲಿಗಳ ಸಂಖ್ಯೆ ಕೇವಲ 20 ಎಂದು ಹೇಳಲಾಗುತ್ತಿದೆ. 20 ಇಲಿಗಳನ್ನು ಹಿಡಿಯಲು ಸುಮಾರು […]