ದ.ಕ. ಜಿಲ್ಲೆಯಲ್ಲಿ 5,000ಕ್ಕೂ ಅಧಿಕ ಅಂಚೆ ಮತದಾನ: ಸಸಿಕಾಂತ್ ಸೆಂಥಿಲ್

Thursday, May 10th, 2018
election

ಮಂಗಳೂರು: ಚುನಾವಣಾ ಕರ್ತವ್ಯ ನಿರ್ವಹಿಸಲು ನಿಯೋಜಿಸಲಾದ ಮತಗಟ್ಟೆ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿ/ ಸಿಬ್ಬಂದಿಗೆ ಅಂಚೆ ಮತಪತ್ರಗಳನ್ನು ರವಾನಿಸಲಾಗಿದೆ. ಈಗಾಗಲೇ 5,000ಕ್ಕೂ ಅಧಿಕ ಮಂದಿ ಅಂಚೆ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಪೊಲೀಸ್ ಆಯುಕ್ತ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೊತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಅವರು ಚುನಾವಣೆಗೆ ಸಂಬಂಧಿಸಿದ ಮಾಹಿತಿ ನೀಡಿದರು. 12,837 ಮತಗಟ್ಟೆ ಅಧಿಕಾರಿಗಳು, 1,295 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ, 43 ಮಂದಿ […]

ಮತದಾರರ ಜಾಗೃತಿಗಾಗಿ ಮಾನವ ಸರಪಳಿ: ವಿದ್ಯಾರ್ಥಿಗಳ ಜತೆ ಮನಪಾ ಸಿಬ್ಬಂದಿ ಸಾಥ್

Friday, April 6th, 2018
mahanagara

ಮಂಗಳೂರು: ದ.ಕ. ಜಿಲ್ಲಾ ಸ್ವೀಪ್ ವತಿಯಿಂದ ಮತದಾರರ ಜಾಗೃತಿ ಅಂಗವಾಗಿ ಆಯೋಜಿಸಲಾದ ಮಾನವ ಸರಪಳಿಯಲ್ಲಿ ನಗರದ ಕಾಲೇಜು ವಿದ್ಯಾರ್ಥಿಗಳ ಜತೆ ಮಂಗಳೂರು ಮಹಾನಗರ ಪಾಲಿಕೆಯ ಸಿಬ್ಬಂದಿ ಹಾಗೂ ಅಧಿಕಾರಿಗಳು ಸಾಥ್ ನೀಡಿದರು. ಮನಪಾ ಕಚೇರಿ ಆವರಣದಲ್ಲಿ ಸಮಾವೇಶಗೊಂಡ ವಿದ್ಯಾರ್ಥಿಗಳು, ಸಿಬ್ಬಂದಿ, ಎನ್‌ಜಿಒ ಸಂಸ್ಥೆ ಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಆರಂಭದಲ್ಲಿ ಮತದಾನದ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ದ.ಕ. ಜಿಲ್ಲಾ ಸ್ವೀಪ್ ಅಧ್ಯಕ್ಷ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಂ.ಆರ್. ರವಿ, ಮನಪಾ ಆಯುಕ್ತ ಮುಹಮ್ಮದ್ ನಝೀರ್ […]

ಚುನಾವಣೆ ಘೋಷಣೆ: ಅರ್ಧಕ್ಕೆ ಮೊಟಕುಗೊಂಡ ಜಿಪಂ ಸಭೆ

Wednesday, March 28th, 2018
panchayath

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗಿ ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಪಂಚಾಯತ್‌ನ ಸಾಮಾನ್ಯ ಸಭೆ ಅರ್ಧದಲ್ಲಿಯೇ ಮೊಟಕುಗೊಂಡಿತು. ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅಧ್ಯಕ್ಷತೆಯಲ್ಲಿ ಸಭೆ ಸೇರಿತ್ತು. ಜಿಪಂ ಸಿಇಒ ಡಾ. ಎಂ.ಆರ್.ರವಿ ಅವರ ಗೈರಿನಲ್ಲಿ ಪ್ರಭಾರ ಉಪ ಕಾರ್ಯದರ್ಶಿ ಎಂ.ವಿ.ನಾಯಕ್ ಹಾಜರಾಗಿದ್ದರು. ಉಪಾಧ್ಯಕ್ಷೆ ಕಸ್ತೂರಿ ಪಂಜ ಉಪಸ್ಥಿತರಿದ್ದರು. ಅಷ್ಟರಲ್ಲೇ ರಾಜ್ಯದ ಚುನಾವಣಾ ದಿನಾಂಕ ಘೋಷಣೆಯಾಗಿತ್ತು. ಆದರೆ ಸಭೆಯ ಮೂಡ್‌ನಲ್ಲಿ ಮುಳುಗಿದ್ದ ಅಧಿಕಾರಿಗಳಿಗಾಗಲೀ, ಜನಪ್ರತಿನಿಧಿಗಳಿಗಾಗಲೀ ಈ ವಿಚಾರ ಗೊತ್ತಿರಲಿಲ್ಲ. ಗೊತ್ತಿದ್ದವರಿಗೆ ನೀತಿ ಸಂಹಿತೆ […]

ಕಳ್ಳಿಗೆ ಗ್ರಾಮ ಪಂಚಾಯತ್ ಕಾರ್ಯಾಲಯದ ನೂತನ ಕಚೇರಿ ಉದ್ಘಾಟನೆ

Friday, March 9th, 2018
ramanath-rai

ಬಂಟ್ವಾಳ: ಕಳ್ಳಿಗೆ ಗ್ರಾಮ ಆರ್ಥಿಕವಾಗಿ ಹಿಂದುಳಿದಿದ್ದು, ಈ ಗ್ರಾಮದ ಅಭಿವೃದ್ಧಿಗೆ ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಉಸ್ತವಾರಿ ಸಚಿವ ಬಿ.ರಮಾನಾಥ ರೈ ಭರವಸೆ ನಿಡಿದ್ದಾರೆ. ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮ ಪಂಚಾಯತ್ ಕಾರ್ಯಾಲಯದ ನೂತನ ಕಚೇರಿ ಉದ್ಘಾಟನೆ ಹಾಗೂ ಸ್ವಚ್ಛತಾ ಕರೆಗಂಟೆ ಅಳವಡಿಸಿ, ಮೊಳಗಿಸುವ ಮೂಲಕ ಕಾಲಿಂಗ್ಬೆಲ್ ಅಭಿಯಾನಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿ, ತಾಲೂಕಿನ 9 ಹೊಸ ಗ್ರಾಮ ಪಂಚಾಯತ್‌ಗಳಲ್ಲಿ ಕಳ್ಳಿಗೆ ಗ್ರಾಮ ಕೂಡಾ ಒಂದು. ಈ ಗ್ರಾಮದ ಶ್ರೇಯೋಭಿವೃದ್ಧಿಗೆ ಶ್ರಮಿಸಲಾಗುವುದು ಎಂದು […]

ಜನಸ್ನೇಹಿ ಚುನಾವಣೆಗೆ ಪರಿಶ್ರಮಿಸಲು ಪ್ರಾದೇಶಿಕ ಆಯುಕ್ತರ ಕರೆ

Friday, March 9th, 2018
Election-meeting

ಮಂಗಳೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಹೆಚ್ಚು ಆಸಕ್ತಿಯಿಂದ ಭಾಗವಹಿಸಲು ಜಿಲ್ಲಾಡಳಿತ ಪರಿಶ್ರಮಿಸಬೇಕು ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಶಿವಯೋಗಿ ಸಿ. ಕಳಸದ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚುನಾವಣಾ ಸಿದ್ಧತೆಗಳ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಬಂದ ಅರ್ಜಿಗಳನ್ನು ಜಾಗರೂಕತೆಯಿಂದ ಪರಿಶೀಲಿಸಬೇಕು. ಅರ್ಜಿಗಳನ್ನು ತಿರಸ್ಕರಿಸುವ ಸಂದರ್ಭ ಬಂದರೆ ಆ ಬಗ್ಗೆಯೂ ಹೆಚ್ಚು ಜಾಗರೂಕರಾಗಿರಬೇಕು. ಈಗಾಗಲೇ ಅಂತಿಮ ಮತದಾರರ ಪಟ್ಟಿ ಫೆಬ್ರವರಿ 24ರಂದು ಪ್ರಕಟವಾಗಿದೆ. […]

ದ.ಕ.ದಲ್ಲಿ ಮತದಾರರ ಜಾಗೃತಿಗಾಗಿ ಚುನಾವಣಾ ತಂಡ ರಚನೆ

Wednesday, February 28th, 2018
dakshina-kannda

ಮಂಗಳೂರು: ಮತದಾರರ ಜಾಗೃತಿಗಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಗ್ರಾಮ ಮಟ್ಟದ ಚುನಾವಣಾ ತಂಡಗಳನ್ನು ರಚಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಕುಮಾರ್ ತಿಳಿಸಿದ್ದಾರೆ. ನಗರದ ಪುರಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮತದಾರರ ಜಾಗೃತಿ ಕಾರ್ಯಕ್ರಮ ಹಾಗೂ ಆಶಾ ಕಾರ್ಯಕರ್ತಯರ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಗ್ರಾಮ ಲೆಕ್ಕಿಗರು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರನ್ನು ಒಳಗೊಂಡಂತಹ ಒಟ್ಟು 430 ತಂಡಗಳನ್ನು ರಚಿಸಲಾಗಿದೆ. ಆಯಾ ಗ್ರಾಮದಲ್ಲಿ ಚುನಾವಣೆಗೆ ಸಂಬಂಧಿಸಿದ ವಿವಿಧ ಜಾಗೃತಿ ಕಾರ್ಯಗಳನ್ನು ಅವರು ನಿರ್ವಹಿಸಲಿದ್ದಾರೆ. ಅವರಿಗೆ ಬೇಕಾದ […]

ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಮುಸ್ಲಿಂ ಧರ್ಮಗುರುಗಳಿಗೆ ಪತ್ರ

Thursday, February 1st, 2018
dakshina-kannada

ಮಂಗಳೂರು: ಮಾರ್ಚ್ ತಿಂಗಳಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಿದ್ದತೆ ಆರಂಭವಾಗಿದೆ. ರಾಜಕೀಯ ಪಕ್ಷಗಳು ಒಂದೆಡೆ ಚುನಾವಣೆಯ ಅಖಾಡಕ್ಕಿಳಿಯಲು ಸಿದ್ದರಾಗುತ್ತಿದ್ದರೆ , ಇನ್ನೊಂಡೆದೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷೆಯ ತಯಾರಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಪ್ರಯತ್ನ ಆರಂಭಿಸಿದೆ. ಈ ಕುರಿತು ಮುಸ್ಲಿಂ ಧರ್ಮಗುರುಗಳಿಗೆ ಪತ್ರವನ್ನೂ ಬರೆದಿದೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಎಂ.ಆರ್.ರವಿ ಹಾಗೂ ಶಿಕ್ಷಣ ಮತ್ತು […]

ಆಮಿಷಕ್ಕೆ ಬಲಿಯಾಗದೇ ಯೋಗ್ಯರಿಗೆ ಮತ ನೀಡಿ

Saturday, January 27th, 2018
rashtritya

ಮಂಗಳೂರು: ವಿದ್ಯಾದಾನ, ಅನ್ನದಾನಕ್ಕಿಂತಲೂ ಮತದಾನ ಶ್ರೇಷ್ಠವಾದುದು. ಮತದಾನವು ಒಂದು ದೇಶ, ರಾಜ್ಯವನ್ನು ಸುಸ್ಥಿತಿಗೆ ತರುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಕೆ.ಎಸ್. ಬೀಳಗಿ ಹೇಳಿದರು. ಜಿಲ್ಲಾಡಳಿತದ ವತಿಯಿಂದ ನಗರದ ಪುರಭವನದಲ್ಲಿ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಚುನಾವಣೆಯ ಸಂದರ್ಭದಲ್ಲಿ ಯೋಗ್ಯರನ್ನು ಗುರುತಿಸಿ, ಮತದಾನ ಮಾಡಬೇಕು. ಮುಖ್ಯವಾಗಿ ಮೂರು ರೀತಿಯ ವಿಚಾರಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಮತದಾನ ಮಾಡಬೇಕು. ವ್ಯಕ್ತಿ, ಪಕ್ಷದ ಚಾರಿತ್ರ್ಯ, ಮತದಾನದ ಸಂದರ್ಭದಲ್ಲಿ ಆಮಿಷಕ್ಕೆ […]

ಶಿರಾಡಿ ಕಾಮಗಾರಿ: ಪರ್ಯಾಯ ರಸ್ತೆ – ಡಿಸಿ ಸ್ಥಳ ಸಮೀಕ್ಷೆ

Wednesday, December 20th, 2017
minister-meeting

ಮಂಗಳೂರು :ಶಿರಾಡಿ ಘಾಟಿ ಎರಡನೇ ಹಂತದ ಕಾಮಗಾರಿ ಸಂದರ್ಭದಲ್ಲಿ ವಾಹನ ಸಂಚಾರಕ್ಕೆ ರಸ್ತೆ ಬಂದ್ ಮಾಡುವ ಕುರಿತು ಇಲ್ಲವೇ ಲಘು ವಾಹನಗಳಿಗೆ ಸಂಚಾರಕ್ಕೆ ಅನುವು ಮಾಡುವ ಬಗ್ಗೆ ಪರಿಶೀಲಿಸಲು ಜಿಲ್ಲಾಧಿಕಾರಿಗಳು ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮೀಕ್ಷೆ ನಡೆಸಿದ ಬಳಿಕ ತೀರ್ಮಾನಿಸಲಾಗುವುದು ಎಂದು ಅರಣ್ಯ ಪರಿಸರ ಹಾಗೂ ಜೀವಿಶಾಸ್ತ್ರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ತಿಳಿಸಿದ್ದಾರೆ. ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ […]