ಎಬಿವಿಪಿ ಯಿಂದ ಡಾ| ಬಿ.ಆರ್ ಅಂಬೇಡ್ಕರ್ ರವರ ಪುಣ್ಯ ತಿಥಿ ಸಾಮರಸ್ಯ ಕಾರ್ಯಕ್ರಮ

Saturday, December 7th, 2019
abvp

ಮಂಗಳೂರು  :  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ನಗರದ ವತಿಯಿಂದ ಡಾ| ಬಿ.ಆರ್ ಅಂಬೇಡ್ಕರ್ ರವರ ಪುಣ್ಯ ತಿಥಿಯ ದಿನವಾದ ಡಿಸೆಂಬರ್ 6 ರಂದು ಸಾಮಾಜಿಕ ಸಾಮರಸ್ಯ ಕಾರ್ಯಕ್ರಮವನ್ನು ಕೆ.ಪಿ.ಟಿಯ ಡಿ. ದೇವರಾಜ್ ಅರಸು ಹಿಂದುಳಿದ ವರ್ಗಗಳ ವಸತಿ ನಿಲಯ ಟೌನ್ ಹಾಲಿನ ಅಂಬೇಡ್ಕರ್ ಪ್ರತಿಮೆಯ ಬಳಿ ಹಾಗೂ ಅಶೋಕ ನಗರದ ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕೆಪಿಟಿ, ಬಿಸಿಎಂ ವಿದ್ಯಾರ್ಥಿನಿಲಯದಲ್ಲಿ ಮುಂಜಾನೆ ಸಾಮಾಜಿಕ ಸಾಮರಸ್ಯದ ಕುರಿತು ಹಾಗೂ ಅಂಬೇಡ್ಕರ್‌ರವರ ಜೀವನದ […]

ಸಂವಿಧಾನದ ಮಹತ್ವವನ್ನು ಪ್ರತಿಯೊಬ್ಬರು ತಿಳಿದುಕೊಳ್ಳಿ : ನ್ಯಾಯಾಧೀಶ ವಿ.ವಿ.ಮಲ್ಲಾಪುರ ಸಲಹೆ

Wednesday, November 27th, 2019
Madikeri

ಮಡಿಕೇರಿ : ಇಡೀ ಜಗತ್ತಿನಲ್ಲಿಯೇ ಬೃಹತ್ ಲಿಖಿತ ಸಂವಿಧಾನ ಹೊಂದಿರುವ ರಾಷ್ಟ್ರದಲ್ಲಿ, ಸಂವಿಧಾನವು ಪವಿತ್ರ ಮಹಾಗ್ರಂಥವಾಗಿದ್ದು, ಸಂವಿಧಾನದ ಮಹತ್ವವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ವೀರಪ್ಪ ವೀರಭದ್ರಪ್ಪ ಮಲ್ಲಾಪುರ ಅವರು ಹೇಳಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಎಫ್‌ಎಂಕೆಎಂಸಿ ಕಾಲೇಜು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಂಯುಕ್ತಾಶ್ರಯದಲ್ಲಿ ನಗರದ ಎಫ್‌ಎಂಕೆಎಂಸಿ ಕಾಲೇಜಿನಲ್ಲಿ ಮಂಗಳವಾರ ನಡೆದ ’ಸಂವಿಧಾನ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಷ್ಟ್ರದ ಸಂವಿಧಾನದಲ್ಲಿ 25 ವಿಭಾಗಗಳಲ್ಲಿ […]

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅ.23 ರಂದು ಲೋಕಾಯುಕ್ತರಿಂದ ಸಾರ್ವಜನಿಕರ ದೂರಿನ ಅರ್ಜಿ ಸ್ವೀಕಾರ

Wednesday, October 16th, 2019
lokayukta

ಮಂಗಳೂರು : ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರುಗಳು ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡದ ವಿವಿಧ ತಾಲೂಕುಗಳಲ್ಲಿ ಭೇಟಿ ನೀಡಿ, ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಅಕ್ಟೋಬರ್ 23 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕು ಕಚೇರಿ ಹಾಗೂ ಬಂಟ್ವಾಳ ತಾಲೂಕು ಕಚೇರಿ, ಅ.24 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪುತ್ತೂರು ತಾಲೂಕು ಕಚೇರಿ, ಅ. 25 ರಂದು ಬೆಳಗ್ಗೆ 11 ಗಂಟೆಯಿಂದ […]

ದೇಶವನ್ನು ಬಲಿಷ್ಠಗೊಳಿಸುವುದೇ ನನ್ನ ಗುರಿ: ನೌಹೀರಾ ಶೇಕ್

Friday, March 30th, 2018
nouhera-shiekh

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಕಂಡ ಕನಸನ್ನು ನನಸು ಮಾಡುವುದರ ಮೂಲಕ ಭಾರತವನ್ನು ಬಲಿಷ್ಠ ರಾಷ್ಟ್ರವನ್ನಾಗಿ ರೂಪಿಸುವುದೇ ತಮ್ಮ ಗುರಿಯಾಗಿದೆ ಎಂದು ಎಂಇಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಡಾ. ನೌಹೀರಾ ಶೇಕ್ ಹೇಳಿದ್ದಾರೆ. ಮುರುಗೇಶ್ ಪಾಳ್ಯದಲ್ಲಿ ದಲಿತ ಸಂಘರ್ಷ ಸಮಿತಿ ಹಾಗೂ ನಾರ್ತ್ ಈಸ್ಟ್ ಪೀಪಲ್ಸ್ ವಾಯ್ಸ್ ಜಂಟಿಯಾಗಿ ಆಯೋಜಿಸಿದ್ದ ಜನಶಕ್ತಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಎಲ್ಲ ಭಾರತೀಯರು ತಲೆ ಎತ್ತಿ ಗೌರವ, ಸ್ವಾಭಿಮಾನದಿಂದ ಬದುಕಬೇಕು ಎಂಬುದೇ ಅಂಬೇಡ್ಕರ್ ಅವರ […]

ಜೆಡಿಎಸ್ ಅಧಿಕಾರಕ್ಕೆ ಬಂದರೆ ನಾನು ನೆಪಮಾತ್ರಕ್ಕೆ ಸಿಎಂ: ಹೆಚ್‌ಡಿಕೆ

Tuesday, March 6th, 2018
JDs-mangaluru

ಮಂಗಳೂರು: ಜೆಡಿಎಸ್ ಅಧಿಕಾರಕ್ಕೆ ಬಂದರೆ ನಾನು ನೆಪಮಾತ್ರಕ್ಕೆ ಸಿಎಂ. ರಾಜ್ಯದ ಆರೂವರೆ ಕೋಟಿ ಜನರೇ ನಿಜವಾದ ಮುಖ್ಯಮಂತ್ರಿಗಳು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮಂಗಳೂರಿನಲ್ಲಿ ಬಲ್ಲವರೊಡನೆ ಬೌದ್ಧಿಕ ಸಂವಾದ ನಡೆಸಿದ ಅವರು, ಕೇವಲ ಅಧಿಕಾರಿಗಳ ಸಲಹೆಯನ್ನು ಅನುಸರಿಸಿ ರಾಜ್ಯಾಡಳಿತ ಮಾಡುವುದಲ್ಲ. ಜನರ ಸಲಹೆಗೆ ಮನ್ನಣೆ ಕೊಡುವುದೇ ಜೆಡಿಎಸ್‌ನ ಕಲ್ಪನೆ ಎಂದರು. ಎತ್ತಿನಹೊಳೆ ಯೋಜನೆಯ ಬಗ್ಗೆ ತಮ್ಮ ನಿಲುವೇನು ಎಂದು ಪರಿಸರವಾದಿ ದಿನೇಶ್ ಹೊಳ್ಳ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು […]

ಅಂಬೇಡ್ಕರ್ ಪ್ರತಿಮೆ ಸ್ಥಳಾಂತರಕ್ಕೆ ಒಪ್ಪಿದ ಸರ್ಕಾರ

Wednesday, February 27th, 2013
Ambedkar statue shifted

ಬೆಂಗಳೂರು : ಇಲ್ಲಿನ ವಿಧಾನಸೌಧ ಮುಂಭಾಗದ ಅಂಬೇಡ್ಕರ್ ಪ್ರತಿಮೆಯನ್ನು ತಾತ್ಕಾಲಿಕವಾಗಿ ಸ್ಥಳಾಂತರ ಮಾಡಲು ಸರ್ಕಾರ ಒಪ್ಪಿಕೊಂಡಿದ್ದು ಈ ಮೂಲಕ  ವಿವಾದದ ಸ್ವರೂಪ ಪಡೆದುಕೊಂಡಿದ್ದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಸ್ಥಳಾಂತರ ವಿವಾದಕ್ಕೆ ಹೈಕೋರ್ಟ್ ಸೋಮವಾರ ಮಂಗಳ ಹಾಡಿದೆ. ಅಮರನಾಥನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹಿಂದಿನ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ನೇತೃತ್ವದ ವಿಭಾಗೀಯ ಪೀಠ, `ಪ್ರತಿಮೆಯನ್ನು 15 ದಿನಗಳಲ್ಲಿ ತಾತ್ಕಾಲಿಕವಾಗಿ ಸ್ಥಳಾಂತರ ಮಾಡಬೇಕು’ ಎಂದು ಡಿಸೆಂಬರ್ 12ರಂದು ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಕೆಲವು ದಲಿತ ಸಂಘಟನೆಗಳು […]