ಪೋಲಿಯೋ ದಿನಾಚರಣೆ: ಪೋಲಿಯೋ ಮುಕ್ತ ಭಾರತ ಅಭಿಯಾನ

Wednesday, October 24th, 2018
rotary-club

ಮಂಗಳೂರು: ಪೋಲಿಯೋ ದಿನಾಚರಣೆಯ ಅಂಗವಾಗಿ ಪೋಲಿಯೋ ಮುಕ್ತ ಭಾರತ ಅಭಿಯಾನವನ್ನು ರೋಟರಿ ಸಂಸ್ಥೆಯು ಇಂದು ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಆಯೋಜಿಸಿತ್ತು. ಇದಕ್ಕೂ ಮುನ್ನ ಜ್ಯೋತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಜಾಥಾ ನಡೆಯಿತು. ಈ ಸಂದರ್ಭ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಮಾತನಾಡಿ, ನಮ್ಮ ದೇಶ 2014ರಿಂದ ಪೋಲಿಯೋ ಮುಕ್ತ ಭಾರತವೆಂದು ಘೋಷಣೆಗೊಂಡಿತು. ಕಳೆದ ಏಳು ವರ್ಷಗಳಿಂದ ನಮ್ಮ ದೇಶದಲ್ಲಿ ಯಾವುದೇ ಪೋಲಿಯೋ ಪ್ರಕರಣಗಳು ಕಂಡುಬಂದಿಲ್ಲ. ನಮ್ಮ ನೆರೆಯ ರಾಷ್ಟ್ರವಾದ ಪಾಕಿಸ್ತಾನ, ಅಫ್ಘಾನಿಸ್ತಾನದಲ್ಲಿ ಇನ್ನೂ ಪೋಲಿಯೋ […]

“ಸ್ವಚ್ಛ ಗೆಳತಿ ಋತುಸ್ರಾವ ಜಾಗೃತಿ” ಕಾರ್ಯಕ್ರಮಕ್ಕೆ ಚಾಲನೆ

Saturday, July 28th, 2018
ravi-ZP

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವಚ್ಛ ಭಾರತ್ ಮಿಷನ್, ರಾಷ್ಟ್ರೀಯ ಸೇವಾ ಯೋಜನೆ, ಮಂಗಳೂರು ವಿಶ್ವ ವಿದ್ಯಾನಿಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಭಾಗಿತ್ವದಲ್ಲಿ “ಸ್ವಚ್ಛ ಗೆಳತಿ ಋತುಸ್ರಾವ ಜಾಗೃತಿ” ಅಭಿಯಾನ ಕಾರ್ಯಕ್ರಮಕ್ಕೆ ಜುಲೈ 28 ರಂದು ಮಂಗಳೂರು ತಾಲೂಕಿನ ಕೋಣಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿಶ್ವ ಮಂಗಳ ವಿದ್ಯಾ ಸಂಸ್ಥೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಮೀನಾಕ್ಷಿ ಶಾಂತಿಗೋಡು ಇವರು ದೀಪ ಬೆಳಗಿಸುವ ಮೂಲಕ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ನಿಫಾ ವೈರಸ್ ಈ ತನಕ ಪತ್ತೆಯಾಗಿಲ್ಲ: ಡಾ.ರಾಮಕೃಷ್ಣ ರಾವ್

Saturday, June 2nd, 2018
nipha-virus

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ನಿಫಾ ವೈರಸ್ ಈ ತನಕ ಪತ್ತೆಯಾಗಿಲ್ಲ. ಆತಂಕ ಪಡುವುದು ಬೇಡ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ರಾವ್ ಹೇಳಿದರು. ಮಂಗಳೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ.ಕ. ಜಿಲ್ಲೆಯಲ್ಲಿ ನಿಫಾ ವೈರಸ್‌ನ ಶಂಕಿತ ಪ್ರಕರಣಗಳು ಕೂಡ ದಾಖಲಾಗಿಲ್ಲ. ಜನರು ಭಯ ಪಡುವ ಅಗತ್ಯವಿಲ್ಲ ಎಂದರು. ಕೇರಳ ಸೇರಿದಂತೆ ಹಲವೆಡೆ ನಿಫಾ ವೈರಸ್‌ನಿಂದ ಜನ ಆತಂಕಕ್ಕೀಡಾಗಿದ್ದಾರೆ. ಈ ಬಗ್ಗೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುತ್ತಿದೆ.

ವೆನ್ಲಾಕ್‌ನಲ್ಲಿ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ವಿಭಾಗಕ್ಕೆ ಶಿಲಾನ್ಯಾಸ, ಎಚ್‌ಎಲ್‌ಎಲ್‌ಎಂಆರ್‌ಐ ವಿಭಾಗದ ಲೋಕಾರ್ಪಣ

Saturday, March 10th, 2018
ramanath-rai

ಮಂಗಳೂರು: ದ.ಕ. ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ ಇವುಗಳ ಸಹಭಾಗಿತ್ವದಲ್ಲಿ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಸೂಪರ್ ಸ್ಪೆಶಾಲಿಟಿ ವೈದ್ಯಕೀಯ ವಿಭಾಗ, ವೆನ್ಲಾಕ್ ಮಕ್ಕಳ ಆರೋಗ್ಯ ಕೇಂದ್ರ, ಜಿಲ್ಲಾ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ಮತ್ತು ವೆನ್ಲಾಕ್ ಜಿಲ್ಲಾ ಸಂಯುಕ್ತ ಆಯುಷ್ ಆಸ್ಪತ್ರೆ ಕಟ್ಟಡಗಳಿಗೆ ಶಿಲಾನ್ಯಾಸ ಹಾಗೂ ಎಚ್‌ಎಲ್‌ಎಲ್‌ಎಂಆರ್‌ಐ ವಿಭಾಗದ ಲೋಕಾರ್ಪಣೆ ಕಾರ್ಯಕ್ರಮ ಇಂದು ಬೆಳಗ್ಗೆ ನಗರದ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಜರುಗಿತು. ಶಿಲಾನ್ಯಾಸ ಹಾಗೂ ಲೋಕಾರ್ಪಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ. […]