ಮುಡಿಪುವಿನಲ್ಲಿ ನಿರ್ಮಿಸಲಾಗುತ್ತಿರುವ ಜಿಲ್ಲಾ ಕೇಂದ್ರ ಕಾರಾಗೃಹದ ಕಾಮಗಾರಿ ಎರಡು ವರ್ಷದಲ್ಲಿ ಪೂರ್ಣ : ಅಲೋಕ್‌ ಮೋಹನ್‌

Tuesday, March 2nd, 2021
Alok Mohan

ಮಂಗಳೂರು: ಬಂಟ್ವಾಳ ತಾಲೂಕಿನ ಮುಡಿಪುವಿನಲ್ಲಿ ನಿರ್ಮಿಸಲಾಗುತ್ತಿರುವ ಜಿಲ್ಲಾ ಕೇಂದ್ರ ಕಾರಾಗೃಹದ ಕಾಮಗಾರಿ ಎರಡು ವರ್ಷದಲ್ಲಿ ಪೂರ್ಣವಾಗಲಿದೆ ಎಂದು ಬಂದೀಖಾನೆ ಡಿಜಿಪಿ ಅಲೋಕ್‌ ಮೋಹನ್‌ ಹೇಳಿದರು. ಮಂಗಳವಾರ ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಟ್ವಾಳದಲ್ಲಿ ನಿರ್ಮಿಸುತ್ತಿರುವ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಸುರಕ್ಷತೆಯ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಾಮಗಾರಿ ತ್ವರಿತಗತಿಯಲ್ಲಿ ನಡೆಯುತ್ತಿದೆ ಎಂದರು. ಈಗಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹ ಚಿಕ್ಕದಾಗಿದ್ದು, ಸುಮಾರು 300 ಕೈದಿಗಳನ್ನು ಇರಿಸಬಹುದಾಗಿದೆ. ವಿಚಾರಣಾಧೀನ ಕೈದಿಗಳನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ ಎಂದರು. […]

ಗೋ ಹಂತಕರ ವಿರುದ್ಧ ಕಠಿಣ ಕ್ರಮ ತೆಗದುಕೊಳ್ಳುವ ಜರೂರಿದೆ: ಯೋಗಿ ಆದಿತ್ಯನಾಥ

Wednesday, December 5th, 2018
yogi-adityanath

ಉತ್ತರಪ್ರದೇಶ: ಅಕ್ರಮ ಕಸಾಯಿಖಾನೆ ವಿರುದ್ಧ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಇನ್ಸ್ಪೆಕ್ಟರ್ವೋರ್ವರನ್ನು ಬಲಿಪಡೆದ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರು ಈ ಬಗ್ಗೆ ದೃಢ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಪ್ರಕರಣ ಸಂಬಂಧ ಪ್ರಧಾನ ಕಾರ್ಯದರ್ಶಿ, ಡಿಜಿಪಿ, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ಎಡಿಜಿಪಿ ಅವರೊಂದಿಗೆ ಮಂಗಳವಾರ ರಾತ್ರಿ ಸಭೆ ನಡೆಸಿದ ಅವರು, ಗೋ ಹತ್ಯೆ ಮಾಡುವವರನ್ನು ನಿರ್ದಾಕ್ಷಿಣ್ಯವಾಗಿ ಬಂಧಿಸಿ ಎಂದು ಪೊಲೀಸರಿಗೆ ಆದೇಶಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಮೂಲಕ ಮಾಹಿತಿ ನೀಡಿರುವ […]

ಕನ್ನಡ ಮಾಧ್ಯಮ ಶಾಲೆಯಲ್ಲಿ ಓದಿದ ಮರ್ಡಿ ಹಿ.ಪ್ರ. ಡಿಜಿಪಿ

Monday, January 15th, 2018
narendra-modi

ಉಡುಪಿ: ಹಿಮಾಚಲ ಪ್ರದೇಶ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ)ರಾಗಿ ಅಧಿಕಾರ ಸ್ವೀಕರಿಸಿರುವ ಹಿರಿಯ ಐಪಿಎಸ್‌ ಅಧಿಕಾರಿ ಚೇರ್ಕಾಡಿ ಮೂಲದ ಸೀತಾರಾಮ ಮರ್ಡಿ ಅವರು ಓದಿದ್ದು ಕನ್ನಡ ಮಾಧ್ಯಮ ಶಾಲೆಯಲ್ಲಿ. ಕುಂಜಾಲು ಹಿ.ಪ್ರಾ. ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಚೇರ್ಕಾಡಿ ಶಾರದಾ ಪ್ರೌಢ ಶಾಲೆಯಲ್ಲಿ ಪ್ರೌಢಶಿಕ್ಷಣ, ಉಡುಪಿ ಎಂಜಿಎಂ ಕಾಲೇಜಿನಲ್ಲಿ ಪದವಿ, ಮೈಸೂರು ವಿ.ವಿ.ಯಿಂದ ಎಂಎಸ್‌ಸಿ (ಸಂಖ್ಯಾಶಾಸ್ತ್ರ) ಚಿನ್ನದ ಪದಕ ಗಳಿಸಿದ ಮರ್ಡಿಯವರು ಹಿಮಾಚಲ ಪ್ರದೇಶ ಶ್ರೇಣಿಯ 1986ರ ಬ್ಯಾಚ್‌ ಐಪಿಎಸ್‌ ಅಧಿಕಾರಿ. ಅವರು ಈಗಲೂ […]