ಮಹಿಳೆಯೊಬ್ಬಳನ್ನು ಬೆತ್ತಲೆಯಾಗಿಸಿ ಪೂಜೆ ಮಾಡುತ್ತಿದ್ದ ಮಾಂತ್ರಿಕ ಸಹಿತ ಆರು ಮಂದಿ ಬಂಧನ

Thursday, November 11th, 2021
Nidhi

ರಾಮನಗರ :  ಮಹಿಳೆಯೊಬ್ಬಳನ್ನು ಬೆತ್ತಲೆಯಾಗಿಸಿ ಪೂಜೆ ಮಾಡುತ್ತಿದ್ದ ತಮಿಳುನಾಡಿನ ಆರು ಆರೋಪಿಗಳನ್ನು ಸಾತನೂರು ಪೊಲೀಸರು ಪೊಲೀಸರು ಬಂಧಿಸಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಭೂಹಳ್ಳಿ ಗ್ರಾಮದಲ್ಲಿ ಈ ಆರೋಪಿಗಳನ್ನು ಬಂಧಿಸಲಾಗಿದೆ. ನಿಮ್ಮ ಮನೆಯಲ್ಲಿ ನಿಧಿ ಇದೆ ಎಂದು ಭೂಹಳ್ಳಿ ಗ್ರಾಮದ ಶ್ರೀನಿವಾಸ್ ಎಂಬುವರನ್ನು ನಂಬಿಸಿ ವಾಮಾಚಾರ ಮಾಡುತ್ತಿದ್ದ ತಮಿಳುನಾಡು ಮೂಲದ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳವಾರ ತಡರಾತ್ರಿ ಶ್ರೀನಿವಾಸ್‌ರವರ ನೂರು ವರ್ಷಗಳಷ್ಟು ಹಳೆಯ ಮನೆಯಲ್ಲಿ ಮಹಿಳೆ ಒಬ್ಬಳನ್ನು ಬೆತ್ತಲೆಯಾಗಿಸಿ ವಾಮಾಚಾರದಲ್ಲಿ ತೊಡಗಿದ್ದಾಗ ದಾಳಿ ಮಾಡಿದ ಸಾತನೂತು ಪೊಲೀಸರು, […]

ಮೇಕೆದಾಟು ಯೋಜನೆ ಜಾರಿ ಮಾಡಿಯೇ ಮಾಡುತ್ತೇವೆ : ಗೃಹ ಸಚಿವ ಬಸವರಾಜ ಬೊಮ್ಮಾಯಿ 

Tuesday, July 6th, 2021
Bommai

ಬೆಂಗಳೂರು : ಕಾವೇರಿ ಕಣಿವೆಯಲ್ಲಿನ ಕರ್ನಾಟಕ ರಾಜ್ಯದ ರೈತರ ಹಕ್ಕಿನ ಸಲುವಾಗಿ ತಮಿಳುನಾಡು ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ. ಈ ಹೋರಾಟದಲ್ಲಿ ಗೆಲ್ಲುವ ಸಂಪೂರ್ಣ ವಿಶ್ವಾಸ ಇದೆ. ಮೇಕೆದಾಟು ಯೋಜನೆಯನ್ನು ಜಾರಿ ಮಾಡಿಯೇ ಮಾಡುತ್ತೇವೆ. ಇವು ರಾಜ್ಯದ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಅವರ ಆತ್ಮವಿಶ್ವಾಸದ ನುಡಿಗಳು. ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಇಂದು-ನಿನ್ನೆಯದಲ್ಲ. ಹಲವಾರು ವರ್ಷಗಳ ಹಿಂದೆ ಈ ಯೋಜನೆ ಸಿದ್ಧವಾಗಿದೆ. ಇದು ವಿದ್ಯುತ್ಚ್ಛಕ್ತಿ, […]

ತಮಿಳುನಾಡು ಸಣ್ಣ ವಿಷಯಗಳನ್ನು ದೊಡ್ಡದಾಗಿ ಬಿಂಬಿಸುವ ಮೂಲಕ ರಾಜಕೀಯ ಸಾಹಸ ಪ್ರದರ್ಶನ ಮಾಡುತ್ತಿದೆ : ಕಾನೂನು ಸಚಿವ ಬಸವರಾಜ ಬೊಮ್ಮಾಯಿ

Sunday, July 4th, 2021
Basavaraja Bommai

ಬೆಂಗಳೂರು : ತಮಿಳುನಾಡು ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಸರ್ಕಾರ ಸಣ್ಣ ವಿಷಯಗಳನ್ನು ದೊಡ್ಡದಾಗಿ ಬಿಂಬಿಸುವ ಮೂಲಕ ರಾಜಕೀಯ ಸಾಹಸ ಪ್ರದರ್ಶನ ಮಾಡುತ್ತಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು. ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಮಿಳುನಾಡು ನೀರಿನ ವಿಷಯವಾಗಿ ಯಾವಾಗಲೂ ಕರ್ನಾಟಕದೊಂದಿಗೆ ತಕರಾರು ಮಾಡುತ್ತಲೇ ಬಂದಿದೆ ಎಂದರು. ಅದು ಕಾವೇರಿ ನದಿನೀರು ಹಂಚಿಕೆ ಇರಬಹುದು, ಕಾವೇರಿ ಕಣಿವೆಯಲ್ಲಿ ನಡೆಯುತ್ತಿರುವ ನೀರಾವರಿ ಯೋಜನೆಗಳೇ ಆಗಿರಬಹುದು. ಅವುಗಳ ಬಗ್ಗೆ ತಮಿಳುನಾಡು […]

ತಮಿಳುನಾಡು ವಿಧಾನಸಭೆ ಚುನಾವಣೆ : ಅಣ್ಣಾಮಲೈ ಹಾಗೂ ನಟಿ ಖುಷ್ಬೂ ಸುಂದರ್ ಅವರಿಗೆ ಟಿಕೆಟ್

Sunday, March 14th, 2021
Annamalai

ಚೆನ್ನೈ:  ತಮಿಳುನಾಡು ವಿಧಾನಸಭೆ ಚುನಾವಣೆಯ 20 ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸುತ್ತಿದೆ. ಪಕ್ಷ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಹಾಗೂ ನಟಿ ಖುಷ್ಬೂ ಸುಂದರ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಇದೀಗ ಒಟ್ಟೂ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದರು. ಅಣ್ಣಾಮಲೈ ಅವರು ಅರವಕುರಿಚಿ ಕ್ಷೇತ್ರದಿಂದಲೂ ಖುಷ್ಬೂ ಥೌಸಂಡ್ ಲೈಟ್ಸ್ ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ. ಇನ್ನೊಂದೆಡೆ ಕಾರೈಕುಡಿ […]

ಸಮುದ್ರ ಮದ್ಯದಲ್ಲಿ ಸಿಲಿಂಡರ್‌ ಸ್ಫೋಟ, ದೋಣಿಯಲ್ಲಿದ್ದ 11 ಮೀನುಗಾರರ ರಕ್ಷಣೆ

Sunday, January 10th, 2021
cylinder blast

ಮಂಗಳೂರು: ಮೀನುಗಾರಿಕೆಗೆಂದು ತೆರಳಿದ್ದ ತಮಿಳುನಾಡು ಮೂಲದ ಈ ಮೀನುಗಾರಿಕಾ ದೋಣಿಯೊಂದರಲ್ಲಿ ಅರಬ್ಬಿ ಸಮುದ್ರ  ಮದ್ಯದಲ್ಲಿ ಸಿಲಿಂಡರ್‌ ಸ್ಫೋಟಗೊಂಡಿದ್ದು, ತಕ್ಷಣ ಬೋಟ್ನಲ್ಲಿದ್ದ 11 ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆಯವರು  ರಕ್ಷಿಸಿದ್ದಾರೆ. ಮಂಗಳೂರಿನಿಂದ ಸುಮಾರು 140 ನಾಟಿಕಲ್ ಮೈಲಿ ದೂರದಲ್ಲಿ ಮೀನುಗಾರಿಕೆಯಲ್ಲಿ ತೊಡಗಿತ್ತು. ಈ ಸಂದರ್ಭ ಬೋಟ್ನಲ್ಲಿದ್ದ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ದೋಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಗಾಯಗೊಂಡಿರುವ ಓರ್ವ ಮೀನುಗಾರ ಹಾಗೂ ಇತರ ಮೀನುಗಾರರನ್ನು ನವಮಂಗಳೂರು ಬಂದರಿಗೆ ಕರೆತರಲಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ನಗರದ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ […]

ಚಾಮರಾಜನಗರದಲ್ಲಿ ಸೆರೆಯಾದ ಪುಂಡಾನೆಯನ್ನು ತಮಿಳುನಾಡಿಗೆ ಬಿಟ್ಟ ಅಧಿಕಾರಿಗಳು

Thursday, October 24th, 2019
Pundane

ಚಾಮರಾಜನಗರ : ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು  ಬನ್ನಿತಾಳಪುರ ಸಮೀಪ  ಕಳೆದ ಮೂರು ದಿನಗಳಿಂದ ರೈತರಲ್ಲಿ ಆತಂಕ ಹುಟ್ಟಿಸಿದ್ದ ಪುಂಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ತಮಿಳುನಾಡಿನಲ್ಲಿ ಈ ಆನೆ 8  ಜನರನ್ನು  ಕೊಂದಿತ್ತು.  ಇಬ್ಬರು ರೈತರಿಗೆ ಗಾಯ ಮಾಡಿತ್ತು,  3 ಹಸುಗಳನ್ನು ತುಳಿದು ಸಾಯಿಸಿ ತ್ತು . ತಮಿಳುನಾಡಿನ ಮಧುಮಲೈ ಅರಣ್ಯದಿಂದ ಬಂದಿದ್ದ ಆನೆ ಬನ್ನಿತಾಳಪುರ ದಲ್ಲಿ ರೈತರ ಹೊಲದಲ್ಲಿ ರಂಪಾಟ ನಡೆಸಿತ್ತು. ಅರಣ್ಯ ಇಲಾಖೆಯ ಸಿಬ್ಬಂದಿಗಳು ಅರವಳಿಕೆ ನೀಡಿ ಆನೆ ನೆ ಸೆರೆಹಿಡಿಯಲು ಯಶಸ್ವಿಯಾಗಿದ್ದಾರೆ.  ಅಭಿಮನ್ಯು, ಕೃಷ್ಣ, ಗೋಪಾಲಸ್ವಾಮಿ, […]

ವಿಷ ಪ್ರಸಾದ ಪ್ರಕರಣ: ವಿಷ ಹಾಕಿದವನ ಕುರಿತು ಸಿಕ್ಕಿತು ಮಹತ್ವದ ಸುಳಿವು

Monday, December 17th, 2018
poison

ಚಾಮರಾಜನಗರ: ಇಲ್ಲಿನ ಮಾರಮ್ಮ ದೇಗುಲದಲ್ಲಿ ನಡೆದ ವಿಷ ಪ್ರಸಾದ ದುರಂತಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವೊಂದು ಲಭ್ಯವಾಗಿದೆ. ಈ ದುರಂತದಲ್ಲಿ ಪ್ರಭಾವಿ ವ್ಯಕ್ತಿಯ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಇದರ ಕಿಂಗ್ಪಿನ್ಗಾಗಿ ಶೋಧಕಾರ್ಯ ಆರಂಭವಾಗಿದೆ. ತಮಿಳುನಾಡು ಮೂಲದ ವ್ಯಕ್ತಿಗಾಗಿ ಪೊಲೀಸರು ಬೇಟೆ ಕಾರ್ಯ ಮುಂದುವರಿಸಿದ್ದಾರೆ. ಈ ನಿಟ್ಟಿನಲ್ಲಿ ತಡರಾತ್ರಿ ತಮಿಳುನಾಡಿನ ಧರ್ಮಪುರಿಗೆ ತೆರಳಿರುವ ರಾಜ್ಯ ಪೊಲೀಸರ ಒಂದು ತಂಡದಿಂದ ಗಡಿಯಂಚಿನ ಗ್ರಾಮಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಬಂಧಿತರನ್ನ ನಿರಂತರ ವಿಚಾರಣೆಗೆ ಒಳಪಡಿಸಿರುವ ತನಿಖಾಧಿಕಾರಿಗಳು, ಈ ಸಂಜೆವರೆಗೆ ಮತ್ತಷ್ಟು ಜನರನ್ನು ಹೆಡೆಮುರಿ ಕಟ್ಟುವ […]

ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ವಿಧಿವಶ

Tuesday, August 7th, 2018
Karunanidhi

ಚೆನ್ನೈ:  ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಕಳೆದ 10 ದಿನಗಳಿಂದ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ 94 ವರ್ಷದ ಕರುಣಾನಿಧಿ ಅವರ ಆರೋಗ್ಯ ಇಂದು ಮತ್ತಷ್ಟು ಕ್ಷೀಣಿಸಿತ್ತು. ಅಂಗಾಂಗಳ ಕಾರ್ಯನಿರ್ವಹಣೆಯೂ ಕ್ಷೀಣಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ. ಡಿಎಂಕೆ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಆಸ್ಪತ್ರೆ ಬಳಿ ಜಮಾಯಿಸಿದ್ದು,  ಆಸ್ಪತ್ರೆ ಒಳಗೆ ಮತ್ತು ಹೊರಗೆ […]

ದೇಶದಲ್ಲಿ ಉತ್ತಮ ಆಡಳಿತ ನೀಡುವ ರಾಜ್ಯಗಳಲ್ಲಿ ಕರ್ನಾಟಕ ನಾಲ್ಕನೇ ಸ್ಥಾನ..!

Monday, July 23rd, 2018
vidhana-souda

ಬೆಂಗಳೂರು: ದೇಶದಲ್ಲಿ ಉತ್ತಮ ಆಡಳಿತ ನೀಡುವ ರಾಜ್ಯಗಳಲ್ಲಿ ಕರ್ನಾಟಕ ನಾಲ್ಕನೇ ಸ್ಥಾನ ಪಡೆದಿದೆ. ಪಕ್ಕದ ಕೇರಳ ಪ್ರಥಮ ಸ್ಥಾನ ಪಡೆದರೆ, ಬಿಹಾರ ಕೊನೆ ಸ್ಥಾನದಲ್ಲಿದೆ. ಬೆಂಗಳೂರು ಮೂಲದ ಪಬ್ಲಿಕ್ ಅಫೇರ್ಸ್ ಸೆಂಟರ್ (ಪಿಎಸಿ) ಉತ್ತಮ ಆಡಳಿತದ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 2016ರಿಂದಲೂ ಪಿಎಸಿ ಅತ್ಯುತ್ತಮ ಆಡಳಿತ ನಡೆಸುವ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತಿದೆ. ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಯನ್ನು ಆಧರಿಸಿ, ಲಭ್ಯವಾದ ದತ್ತಾಂಶಗಳ ಚೌಕಟ್ಟಿನಲ್ಲಿ ರಾಜ್ಯಗಳ ಆಡಳಿತವನ್ನು ಈ ಸಂಸ್ಥೆ ಪಟ್ಟಿ ಮಾಡುತ್ತಿದೆ. ಕಳೆದ ಮೂರು […]

ಜಿಲ್ಲೆಯಲ್ಲಿ ಮೀನಿಗೆ ರಾಸಾಯನಿಕ ಬಳಕೆ ಮಾಡಿ ಮಾರಾಟ ವದಂತಿ..ಮೀನು ಮಾರಾಟಗಾರರು ಸಂಕಷ್ಟ!

Tuesday, June 26th, 2018
fish

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೀನಿಗೆ ರಾಸಾಯನಿಕ ಬಳಕೆ ಮಾಡಿ ಮಾರಾಟ ಮಾಡುತ್ತಾರೆ ಎನ್ನುವ ವದಂತಿ ಸಾಮಾಜಿಕ ಜಾಲತಾಣಗಳ ಮೂಲಕ ಹರಡುತ್ತಿರುವುದರಿಂದ ಮೀನು ಮಾರಾಟಗಾರರು ಸಂಕಷ್ಟಕ್ಕೀಡಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಮೀನಿಗೆ ರಾಸಾಯನಿಕ ಸಿಂಪಡಣೆ ಮಾಡಿ ಮಾರಾಟ ಮಾಡುತ್ತಾರೆ ಎನ್ನುವ ಆಕ್ಷೇಪಣೆಯನ್ನು ಮಾಡುವ ಓರ್ವ ಗ್ರಾಹಕ ಮೀನು ಮಾರಾಟಗಾರರ ಬಳಿ ವಾಗ್ವಾದ ಮಾಡುವುದನ್ನು ಒಳಗೊಂಡ ವಿಡಿಯೋವೊಂದನ್ನು ವಾಟ್ಸಪ್ ಗುಂಪಿನಲ್ಲಿ ಹರಿಯಬಿಡಲಾಗಿದೆ. ಈ ಸಂಭಾಷಣೆಯಲ್ಲಿ ಗ್ರಾಹಕರು ಮೀನು ಮಾರಾಟಗಾರರನ್ನು ಆಕ್ಷೇಪಿಸುತ್ತಿದ್ದಾರೆ. ಮೀನು ಮಾರಾಟಗಾರ ತಾನು ಆ […]