ಕಡಲೆಕಾಯಿ, ತರಕಾರಿ ಮಾರಾಟ ಮಾಡುತ್ತಿದ್ದ ವ್ಯಕ್ತಿ ಮಾಮೂಲಿ ಕೊಡಲಿಲ್ಲ ಎಂದು ಸುಳ್ಳು ಪ್ರಕರಣ ದಾಖಲಿಸಿದ ಮಹಿಳಾ ಇನ್ಸ್‌ಪೆಕ್ಟರ್‌, ಸೇರಿ ಮೂವರು ಅಮಾನತು

Friday, July 23rd, 2021
Parvatamma

ಬೆಂಗಳೂರು: ಕಡಲೆಕಾಯಿ, ತರಕಾರಿ ಮಾರಾಟ ಮಾಡುತ್ತಿದ್ದ ವ್ಯಕ್ತಿ ಮಾಮೂಲಿ ಕೊಡಲಿಲ್ಲ ಎಂಬ ಕಾರಣಕ್ಕೆ ಸುಳ್ಳು ಪ್ರಕರಣ ದಾಖಲಿಸಿದ್ದ ಮಹಿಳಾ ಇನ್ಸ್‌ಪೆಕ್ಟರ್‌, ಸೇರಿ ಮೂವರು ಪೊಲೀಸರನ್ನು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಅಮಾನತುಗೊಳಿಸಿದ್ದಾರೆ. ಆರ್‌ಎಂಸಿ ಯಾರ್ಡ್‌ ಠಾಣೆಯ ಇನ್‌ಸ್ಪೆಕ್ಟರ್‌ ಪಾರ್ವತಮ್ಮ ಮತ್ತು ಸಬ್‌ ಇನ್‌ಸ್ಪೆಕ್ಟರ್‌ ಆಂಜಿನಪ್ಪ ತರಕಾರಿ, ಸೊಪ್ಪು ಮಾರುವ ಶಿವರಾಜ್‌ ಎಂಬಾತನ ವಿರುದ್ಧ ಗಾಂಜಾ ಸೇವಿಸಿದ ಸುಳ್ಳು ಪ್ರಕರಣ ದಾಖಲಿಸಿ ದೈಹಿಕವಾಗಿ ಹಿಂಸೆ ನೀಡಿದ್ದರಿಂದ ಆತ ಆತ್ಮಹತ್ಯೆಗೆ ಯತ್ನಿಸಿದ್ದ. ಈ ಸಂಬಂಧ ವರದಿ ನೀಡುವಂತೆ ಡಿಸಿಪಿಗೆ […]

ಬಡವರಿಗೆ ಫಾರಂ ಕೋಳಿ ಮತ್ತು ತರಕಾರಿ ವಿತರಣೆ ಮಾಡಿದ ಬಿಬಿಎಂಪಿ ಮಾಜಿ ಸದಸ್ಯೆ

Thursday, June 10th, 2021
Manjula

ಬೆಂಗಳೂರು : ಉದ್ಯೋಗವಿಲ್ಲದೆ ಆರ್ಥಿಕ ಸಂಕಷ್ಟದಲ್ಲಿರುವ ಬಡವರಿಗೆ ಶಿವನಗರ ವಾರ್ಡ್ನಲ್ಲಿ ಬಿಬಿಎಂಪಿ ಮಾಜಿ ಸದಸ್ಯೆ ಮಂಜುಳಾ ವಿಜಯಕುಮಾರ್ ಗುರುವಾರ ಬಡವರಿಗೆ ಫಾರಂ ಕೋಳಿ ಮತ್ತು 21 ಬಗೆಯ ತರಕಾರಿ ವಿತರಣೆ ಮಾಡಿದರು. ಬಡವರು ಲಾಕ್ ಡೌನ್ ಜಾರಿಯಿಂದ ಉದ್ಯೋಗವಿಲ್ಲದೆ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಕಷ್ಟಕರ ಸನ್ನಿವೇಶದಲ್ಲಿ ಅವರಿಗೂ ಮಾಂಸಹಾರ ಸೇವನೆ ಮಾಡಬೇಕು ಎಂದು ಆಸೆ ಇರುತ್ತದೆ. ಅದ್ದರಿಂದ, ಪ್ರತಿಯೊಬ್ಬರಿಗೂ ಒಂದು ಕೋಳಿ ಮತ್ತು ಪೌಷ್ಟಿಕಾಂಶ ತರಕಾರಿ ವಿತರಿಸಲಾಗಿದೆ ಎಂದು ಮಂಜುಳಾ ವಿಜಯಕುಮಾರ್ ತಿಳಿಸಿದ್ದಾರೆ. ಶ್ರೀಮಂತರಿಗೆ ಹಣ ಇರುತ್ತದೆ ಉತ್ತಮ ಆಹಾರ […]

ಸ್ಥಳೀಯ ಮಾರುಕಟ್ಟೆಗಳಲ್ಲಿ ದಿನಸಿ ಸಾಮಾಗ್ರಿಗಳು, ತರಕಾರಿಗೆ ಗ್ರಾಹಕರಿಂದ ಹೆಚ್ಚು ಹಣ ವಸೂಲಿ, ದೂರು

Monday, May 31st, 2021
vegetable

ಮಂಗಳೂರು : ಲಾಕ್ ಡೌನ್ ಸಂದರ್ಭದಲ್ಲಿ ಗ್ರಾಹಕ ರಿಂದ ಕೆಲವೊಂದು ದಿನಸಿ ಸಾಮಾಗ್ರಿಗಳು, ತರಕಾರಿ, ಹಣ್ಣು ಹಂಪಲುಗಳ ವರ್ತಕರು ಸಿಕ್ಕಿದ್ದೇ ಲಾಭ ಎಂಬಂತೆ ಮನ ಬಂದಂತೆ ಹಣ ವಸೂಲಿ ಮಾಡುತ್ತಿರುವ  ಹಿನ್ನಲೆಯಲ್ಲಿ ಸಾರ್ವಜನಿಕರು  ಜಿಲ್ಲಾಧಿಕಾರಿಗಳಿಗೆ ದೂರು ನೀಡಿರುವುದರಿಂದ,  ಅಂತಹ ವರ್ತಕರನ್ನು ಪತ್ತೆ ಹಚ್ಚಲು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಡ್19 ಸೋಂಕು ಪ್ರಸರಣದ ಸರಪಳಿಯನ್ನು ತುಂಡರಿಸುವ ಸಲುವಾಗಿ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತದ ವತಿಯಿಂದ ಕಾಲಕಾಲಕ್ಕೆ ಎಲ್ಲಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಸರಣದ ಸರಪಳಿಯನ್ನು ತುಂಡರಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಲಾಕ್‍ಡೌನ್‍ನ […]

ಹಿರಿಯ ಕಲ್ಲಂಗಡಿ ಕೃಷಿಕ, ಶತಾಯುಷಿ ಕೆ.ಸೇಸು ಸಪಲ್ಯ ನಿಧನ

Monday, March 15th, 2021
Sesu Sapalya

ಬಂಟ್ವಾಳ: ಇಲ್ಲಿನ ಕರಿಯಂಗಳ ಗ್ರಾಮದ ಪೊಳಲಿ ಸಮೀಪದ ಕಂಚೇಶ್ವರ ನಿವಾಸಿ, ಹಿರಿಯ ಕಲ್ಲಂಗಡಿ ಕೃಷಿಕ ಶತಾಯುಷಿ ಕೆ.ಸೇಸು ಸಪಲ್ಯ (102) ಇವರು ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಪಾಣೆಮಂಗಳೂರು ಸುಮಂಗಲಾ ಕ್ರೆಡಿಟ್ ಸೊಸೈಟಿ ಮಾಜಿ ಅಧ್ಯಕ್ಷ ಎಸ್.ಎ. ವಿಶ್ವನಾಥ್ ಬಿ.ಸಿ.ರೋಡು ಸಹಿತ ಮೂವರು ಪುತ್ರರು ಮತ್ತು ಏಳು ಮಂದಿ ಪುತ್ರಿಯರು ಇದ್ದಾರೆ. ಮೃತರು ಪ್ರಗತಿಪರ ಕೃಷಿಕರಾಗಿ, ತರಕಾರಿ ಮತ್ತು ಕಲ್ಲಂಗಡಿ ಕೃಷಿ ಜೊತೆಗೆ ಜಾನಪದ ಕ್ರೀಡೆ ಕಂಬಳ ಪ್ರೇಮಿಯಾಗಿ, ಪೊಳಲಿ ವಲಯ ಗಾಣಿಗ […]

ಕೆ.ಎಂ.ಎಫ್ ಹಾಲು ಕೇಂದ್ರದಲ್ಲಿ ಹೂವು, ಹಣ್ಣು, ತರಕಾರಿ ಮಾರಾಟಕ್ಕೆ ಅವಕಾಶ

Tuesday, April 28th, 2020
kmf-veg

ಮಂಗಳೂರು :  ಪ್ರಸಕ್ತ ಕೋವಿಡ್‍ನ ಸಂದಿಗ್ದ ಪರಿಸ್ಥಿತಿಯಲ್ಲಿ ರೈತರಿಗೆ ನೆರವಾಗಲು, ರೈತರು ಮತ್ತು ರೈತ ಸಂಘ ಸಂಸ್ಥೆಯವರು ತಾವು ಬೆಳೆದ ಹೂವು, ಹಣ್ಣು, ತರಕಾರಿಗಳನ್ನು ನೇರ ಮಾರಾಟ ಮಾಡಲು ಕೆ.ಎಂ.ಎಫ್. ಮಳಿಗೆಗಳಲ್ಲಿ ಸ್ಥಳಾವಕಾಶ ಒದಗಿಸಿಕೊಡಲು ಕೆ.ಎಂ.ಎಫ್. ರವರು ಒಪ್ಪಿರುತ್ತಾರೆ. ರೈತರು ತಾವು ಬೆಳೆದ ಹೂವು, ಹಣ್ಣು, ತರಕಾರಿಗಳನ್ನು ಕರ್ನಾಟಕ ಸಹಕಾರಿ ಹಾಲು ಉತ್ಪಾದಕ ಮಹಾಮಂಡಳಿ ನಿಯಮಿತ ಮಳಿಗೆಗಳ ಹತ್ತಿರ ಮಾರಾಟ ಮಾಡಲು ಕೆ.ಎಂ.ಎಫ್. ಮತ್ತು ತೋಟಗಾರಿಕೆ ಇಲಾಖೆ ರವರ ಸಹಯೋಗದೊಂದಿಗೆ ಅವಕಾಶ ಕಲ್ಪಿಸಲಾಗಿದ್ದು, ಆಸಕ್ತ ರೈತರು ಮತ್ತು ರೈತ […]

ಸೆಂಟ್ರಲ್‌ ಮಾರ್ಕೆಟ್‌ನ ತರಕಾರಿ ಮತ್ತು ಹಣ್ಣು ಹಂಪಲುಗಳ ವ್ಯಾಪಾರ ಬೈಕಂಪಾಡಿ ಯಲ್ಲಿಯೇ ಫಿಕ್ಸ್

Friday, April 17th, 2020
apmc

ಮಂಗಳೂರು: ಸೆಂಟ್ರಲ್‌ ಮಾರ್ಕೆಟ್‌ನ ತರಕಾರಿ ಮತ್ತು ಹಣ್ಣು ಹಂಪಲುಗಳ ಸಗಟು ವ್ಯಾಪಾರವನ್ನು ಬೈಕಂಪಾಡಿ ಎಪಿಎಂಸಿ ಯಾರ್ಡ್‌ಗೆ ಸ್ಥಳಾಂತರಿಸಲಾಗಿದ್ದು, 3 ತಿಂಗಳ ಕಾಲ ಯಾವುದೇ ಬಾಡಿಗೆ ಅಥವಾ ತೆರಿಗೆಯನ್ನು ವಸೂಲು ಮಾಡುವುದಿಲ್ಲ. ಆದರೆ ಇಲ್ಲಿ ವಹಿವಾಟು ನಡೆಸಲು ಆಸಕ್ತಿ ಇರುವ ಎಲ್ಲರೂ ಲೈಸನ್ಸ್‌ ಪಡೆಯುವ ಬಗ್ಗೆ ಈಗಿಂದೀಗಲೇ ಅರ್ಜಿ ಸಲ್ಲಿಕೆ ಮತ್ತಿತರ ಪ್ರಕ್ರಿಯೆಗಳನ್ನು ಆರಂಭಿಸಬೇಕು. 3 ತಿಂಗಳ ಬಳಿಕ ಅಧಿಕೃತವಾಗಿ ಲೈಸನ್ಸ್‌ ಪಡೆದು ವ್ಯವಹಾರ ನಡೆಸಬಹುದು ಎಂದು ಸ್ಥಳೀಯ ಶಾಸಕ ಡಾ| ವೈ. ಭರತ್‌ ಶೆಟ್ಟಿ ತಿಳಿಸಿದ್ದಾರೆ. ಆದರೆ  ಇಲ್ಲಿ  ರಿಟೇಲ್‌ […]

ಮಂಗಳೂರು ಮಾರ್ಕೆಟ್ ನಲ್ಲಿ ಅಗತ್ಯ ವಸ್ತು ಖರೀದಿಗೆ ಮುಗಿಬಿದ್ದ ಜನತೆ

Tuesday, March 31st, 2020
Market

ಮಂಗಳೂರು: ಮಂಗಳವಾರ ಜನತೆ ಅಗತ್ಯ ವಸ್ತು ಖರೀದಿಗೆ ಕೊರೋನಾ ವೈರಸ್ ಹರಡುವಿಕೆಯ ನಿಯಮ ಪಾಲಿಸದೇ, ಅಂತರ ಕಾಯ್ದುಕೊಳ್ಳದೆ ಕೇಂದ್ರ ಮಾರುಕಟ್ಟೆಯಲ್ಲಿ ಮುಗಿಬಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ದಿನಗಳ ಸಂಪೂರ್ಣ ಬಂದ್ ನಂತರ ಮಂಗಳವಾರ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಿದ್ದುದರ, ಪರಿಣಾಮ ಮಂಗಳವಾರ ಬೆಳ್ಳಂಬೆಳಗ್ಗೆ ಮನೆಯಿಂದ ಭಾರೀ ಸಂಖ್ಯೆಯಲ್ಲಿ ಜನರು ಹೊರಬರುತ್ತಿದ್ದಾರೆ. ದಿನಸಿ, ತರಕಾರಿ ಅಂಗಡಿಗಳ ಮುಂದೆ ಜನರು ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯಗಳು ಕಂಡುಬಂದಿದೆ. ಮಂಗಳೂರಿನ ಕೇಂದ್ರ ಮಾರುಕಟ್ಟೆ, ಮಲ್ಲಿಕಟ್ಟೆ ಮಾರ್ಕೆಟ್ ನಲ್ಲಿ ಭಾರೀ […]