ರಾಜ್ಯ ಸರಕಾರಕ್ಕೆ ತಾಲೂಕು ಪಂಚಾಯತ್ ವ್ಯವಸ್ಥೆಯನ್ನು ರದ್ದುಪಡಿಸುವ ಅಧಿಕಾರವಿಲ್ಲ : ಯು.ಟಿ ಖಾದರ್

Thursday, January 14th, 2021
ut Khader

ಮಂಗಳೂರು : ಸುಳ್ಯ ಶಾಸಕ ಎಸ್. ಅಂಗಾರ ಸಚಿವರಾಗಿರುವುದು ಸಂತೋಷದ ವಿಷಯ. ಕೋಟ ಶ್ರೀನಿವಾಸ ಪೂಜಾರಿ ಕೂಡಾ ಉತ್ತಮವಾಗಿ ಕಾರ್ಯನಿರ್ವಹಿಸಿದ್ದು, ಅವರನ್ನೇ ಉಸ್ತುವಾರಿ ಸಚಿವರನ್ನಾಗಿ ಮುಂದುವರಿಸುವುದಕ್ಕೆ ನನ್ನ ಅಭ್ಯಂತರವಿಲ್ಲ. ಆದರೆ ಅವರನ್ನು ಉಡುಪಿಯ ಬದಲು ದ.ಕ. ಜಿಲ್ಲೆಗೆ ಉಸ್ತುವಾರಿಯನ್ನಾಗಿ ಮಾಡಿರುವುದರ ಉದ್ದೇಶವೇನು ಎಂಬುದನ್ನು ಸರಕಾರ ಸ್ಪಷ್ಟಪಡಿಸಲಿ ಎಂದು ಶಾಸಕ ಯು.ಟಿ  ಖಾದರ್  ಪ್ರಶ್ನಿಸಿದ್ದಾರೆ. ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಸಕ ಸುನೀಲ್ ಕುಮಾರ್ ಕೂಡಾ ‘ನನಗೆ ಪಕ್ಷ ನಿಷ್ಠೆ ಗೊತ್ತು, ಬ್ಲಾಕ್ ಮೇಲ್ ಗೊತ್ತಿಲ್ಲ’ […]

ಮೂಡುಬಿದಿರೆಯ ತಾಲೂಕು : ತಾಲೂಕು ಪಂಚಾಯತ್‌ ಸದಸ್ಯನ ಅಪಹರಣ, ದೂರು

Tuesday, August 4th, 2020
sukumar

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ತಾಲೂಕು ಪಂಚಾಯತ್‌ ಚುನಾವಣೆ ವೇಳೆ ತನ್ನನು ಅಪಹರಣ ಮಾಡಲಾಗಿದೆ ಎಂದು ಸದಸ್ಯರೋರ್ವರು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮೂಡುಬಿದಿರೆ ತಾಲೂಕಿನ ಕಲ್ಲಮುಂಡ್ಕೂರು ತಾಪಂ ಸದಸ್ಯ ಸುಕುಮಾರ್ ಸನಿಲ್ ಅಪಹರಣಕ್ಕೊಳಗಾದವರು. ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಸುಕುಮಾರ್ ಸನಿಲ್ ಸೋಮವಾರ ಮೂಡುಬಿದಿರೆ ತಾಲೂಕು ಕಚೇರಿಯಲ್ಲಿ ನಡೆಯಬೇಕಿದ್ದ ತಾಪಂ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕಿತ್ತು. ಆದರೆ ಅದನ್ನು ತಡೆಯಲು ನನ್ನನ್ನು ಅಪಹರಣಗೈದು ಉಡುಪಿಗೆ ತಂದು ಬಿಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. […]

ಕಾಂಗ್ರೆಸ್ ಬಿಜೆಪಿ ಮೈತ್ರಿ ಮಾಡಿಕೊಂಡು ಕಲಬುರಗಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು ಹೀಗೆ !

Tuesday, July 14th, 2020
Rukmini-Bhimashankar

ಕಲಬುರಗಿ: ಕಾಂಗ್ರೆಸ್ ಬಿಜೆಪಿಗರ ಕಚ್ಚಾಟ ಪ್ರತಿದಿನ ಇದ್ದದೇ ಬಿಡಿ, ಆದರೆ ಇದೆಲ್ಲವನ್ನು ಮರೆತು ಇಬ್ಬರು ನಾಯಕರು ಪ್ರೀತಿಗೆ ಶಕ್ತಿ ರಾಜಕೀಯಕ್ಕಿಂತಲೂ ಹೆಚ್ಚಿನ ಶಕ್ತಿ ಇದೆ ಎಂದು ತೋರಿಸಿಕೊಟ್ಟಿದ್ದಾರೆ. ಅಫಜಲಪುರ ತಾಲೂಕು ಪಂಚಾಯತ್ ಅಧ್ಯಕ್ಷೆ ಮತ್ತು ಉಪಾಧ್ಯಕ್ಷ ತಮ್ಮ ರಾಜಕೀಯವನ್ನು ಮೀರಿ ಇಬ್ಬರೂ ಕೂಡಾ ವಿವಾಹ ಬಂಧನಕ್ಕೊಳಗಾಗಿದ್ದಾರೆ. ಜಿಲ್ಲೆಯ ಆಳಂದ ತಾಲೂಕಿನ ಜಿಡಗಾ ಮಠದಲ್ಲಿ ಇಂದು ನಡೆದ ಸರಳ ವಿವಾಹದಲ್ಲಿ ದಂಪತಿ ನೂತನ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಫಜಲಪುರ ತಾಲೂಕು ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ ಜಮಾದಾರ್ ಮತ್ತು ತಾಲೂಕು ಪಂಚಾಯತ್ ಉಪಾಧ್ಯಕ್ಷ ಭೀಮಾಶಂಕರ್ ಹೊನ್ನಿಕೇರಿ […]

ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಕೊರಗಪ್ಪ ನಾಯ್ಕ ರಿಗೆ ಅಭಿನಂದನೆ

Saturday, May 31st, 2014
Naika

ಬಂಟ್ವಾಳ: 20ತಿಂಗಳ ಕಾಲ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಕೊರಗಪ್ಪ ನಾಯ್ಕ್ ಅವರನ್ನು ತಾಲೂಕು ಪಂಚಾಯತ್ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭ ಜಿಲ್ಲಾ ಉಪಕಾರ್ಯದರ್ಶಿ ಉಮೇಶ್, ತಾ.ಪಂ ಅಧ್ಯಕ್ಷೆ ಲಲಿತಾ ಶಿವಪ್ಪ ನಾಯ್ಕ, ಉಪಾಧ್ಯಕ್ಷ ಆನಂದ ಎ.ಶಂಭೂರು, ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ಸಿಪ್ರೀಯಂ ಮಿರಾಂಡಾ, ಜಿಲ್ಲಾ ಪಂ.ಅಧಿಕಾರಿ ಮಂಜುಳಾ, ಮ್ಯಾನೇಜರ್ ನಾಗೇಶ್, ಗೂಕುಲದಾಸ ಭಕ್ತ, ಇಂಜಿನಿಯರ್ ಗಿರೀಶ್ ಮಂಜು ವಿಟ್ಲ, ಕುಶಾಲಪ್ಪ ಗೌಡ ಉಪಸ್ಥಿತರಿದ್ದರು.

ಆಶಾ ಕಾರ್ಯಕರ್ತೆಯರ ಸಮಸ್ಯೆಯನ್ನು ಆಲಿಸಿದ ಆರೋಗ್ಯ ಸಚಿವರು

Saturday, September 14th, 2013
khader

ಮಂಗಳೂರು : ಕೇಂದ್ರ ಸರ್ಕಾರದ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನದಡಿ ಆಶಾ ಕಾರ್ಯಕರ್ತರಿಗೆ ನೀಡುವ ಸಂಭಾವನೆಯಷ್ಟೇ ಮ್ಯಾಚಿಂಗ್ ಗ್ರ್ಯಾಂಟ್ ನ್ನು ರಾಜ್ಯ ಸರ್ಕಾರದಿಂದ ನೀಡಲು ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀ ಯು ಟಿ ಖಾದರ್ ಅವರು ಹೇಳಿದರು. ಅವರಿಂದು ಮಂಗಳೂರು ತಾಲೂಕು ಪಂಚಾಯಿತಿಯ ಸಾಮಥ್ರ್ಯ ಸೌಧದಲ್ಲಿ ಆಶಾ ಕಾರ್ಯಕರ್ತೆಯರಿಗೆ ಆಯೋಜಿಸಲಾದ ತರಬೇತಿ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕರ್ತೆಯರ ಸಮಸ್ಯೆಗಳನ್ನು ಆಲಿಸಿ ಸ್ಪಂದಿಸುವ ಭರವಸೆ ನೀಡಿದರು. ಆಶಾ ಕಾರ್ಯಕರ್ತೆಯರ ಸಮಸ್ಯೆಗಳ […]

ಜಿಲ್ಲಾ ಮಟ್ಟದ ಶಿಕ್ಷಕ ದಿನಾಚರಣೆ ಹಾಗೂ ಗುರುವಂದನಾ ಸಮಾರಂಭ : ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು

Friday, September 6th, 2013
bantwal-rai

ಮಂಗಳೂರು : ಸಂಪೂರ್ಣ ಸಾಕ್ಷರ ಜಿಲ್ಲೆ; ಬುದ್ದಿವಂತರ ಜಿಲ್ಲೆ ಎಂದು ದಕ್ಷಿಣ ಕನ್ನಡ ಜಿಲ್ಲೆ ಹೆಸರಾಗಿದ್ದು ಇದರಲ್ಲಿ ಶಿಕ್ಷಕರ ಕೊಡುಗೆ ಅಪಾರ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರೂ ಆಗಿರುವ ಶ್ರೀ ಬಿ. ರಮಾನಾಥ ರೈ ಅವರು ಹೇಳಿದರು. ಅವರಿಂದು ಜಿಲ್ಲಾ ಮಟ್ಟದ ಶಿಕ್ಷಕ ದಿನಾಚರಣೆ ಹಾಗೂ ಗುರುವಂದನಾ ಸಮಾರಂಭವನ್ನು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪ ಸಭಾಂಗಣ, ಬಂಟ್ವಾಳದಲ್ಲಿ ಉದ್ಘಾಟಿಸಿ ಮಾತನಾಡುತ್ತಿದ್ದರು. ಶಿಕ್ಷಕರು ಸಮಾಜಕ್ಕೆ ಮಾದರಿಯಾಗಿರಬೇಕು. ಆರೋಗ್ಯವಂತ […]

ಸಶಕ್ತ ಕಾರ್ಯನಿರ್ವಹಣೆಗೆ ಸಂಪನ್ಮೂಲ ಕ್ರೋಢೀಕರಣ ಅಗತ್ಯ: ಎ ಜೆ ಕೂಡ್ಗಿ

Friday, December 3rd, 2010
ಎ ಜೆ ಕೂಡ್ಗಿ

ಮಂಗಳೂರು  : ಅಧಿಕಾರ ವಿಕೇಂದ್ರೀಕರಣ ಪರಿಣಾಮಕಾರಿ ಅನುಷ್ಠಾನಕ್ಕೆ ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಗಳು ಸ್ವತಂತ್ರವಾಗಿ ಸಂಪನ್ಮೂಲ ಕ್ರೋಢೀಕರಿಸಲು ಅವಕಾಶ ಕಲ್ಪಿಸಬೇಕೆಂದು 3ನೇ ರಾಜ್ಯ ಹಣಕಾಸು ಆಯೋಗ ಶಿಫಾರಸ್ಸುಗಳ ಅನುಷ್ಠಾನ ಕಾರ್ಯಪಡೆ ಅಧ್ಯಕ್ಷರಾದ ಶ್ರೀ ಎ.ಜೆ. ಕೂಡ್ಗಿ ಅವರು ತಿಳಿಸಿದ್ದಾರೆ. ಅವರಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನಲ್ಲಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡುತ್ತಾ, 3ನೇ ಹಣಕಾಸು ಆಯೋಗ ಸ್ಥಳೀಯ ಸಂಸ್ಥೆಗಳ ಸಬಲೀಕರಣಕ್ಕೆ ಶಿಫಾರಸ್ಸು ಮಾಡಿರುವುದಾಗಿ ಹೇಳಿದರು. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಯಥೇಚ್ಛವಾಗಿ ಹಣದ ನೆರವು […]