ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭವತಿ ಮಾಡಿದ ಆರೋಪಿಗೆ 10 ವರ್ಷ ಜೈಲು

Friday, April 1st, 2022
Pregnant

ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭವತಿಯಾಗಿ ಮಗುವಿಗೆ ಜನ್ಮ ನೀಡಲು ಕಾರಣನಾದ ಆರೋಪಿಗೆ 10 ವರ್ಷ ಜೈಲು ಮತ್ತು 30,000 ರೂ. ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ ಹಾಗೂ 2ನೇ ತ್ವರಿತಗತಿ ವಿಶೇಷ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ. ಸುರತ್ಕಲ್‌ ಸಮೀಪದ ಸಸಿಹಿತ್ಲು ನಿವಾಸಿ ವಾಮನ ಪೂಜಾರಿ (59) ಶಿಕ್ಷೆಗೊಳಗಾದ  ಆರೋಪಿ. 2016ರ ಸೆಪ್ಟಂಬರ್‌ ತಿಂಗಳಲ್ಲಿ  ಹಗಲು ಹೊತ್ತಿನಲ್ಲಿ 16 ವರ್ಷ ಪ್ರಾಯದ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ […]

ವಿದ್ಯುತ್ ಬಿಲ್ ವಿನಾಯಿತಿ ಅರ್ಜಿಗೆ 50 ಸಾವಿರ ರೂಪಾಯಿ ದಂಡ ವಿಧಿಸಿ ಆಘಾತಕಾರಿ ತೀರ್ಪು

Sunday, April 12th, 2020
vasanth-achari

ಮಂಗಳೂರು :  ಲಾಕ್‌ ಡೌನ್ ಇರುವುದರಿಂದ ರಾಜ್ಯದಲ್ಲಿ ವಿದ್ಯುತ್ ಬಿಲ್ ಪಾವತಿಸುವುದನ್ನು ತಾತ್ಕಾಲಿಕವಾಗಿ ಮೂರು ತಿಂಗಳು ಮುಂದೂಡಲು ಸರಕಾರ ಮತ್ತು ವಿದ್ಯುತ್ ನಿಯಂತ್ರಣ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಅರ್ಜಿಯೊಂದನ್ನು ವಜಾಗೊಳಿಸಿರುವ ಹೈಕೋರ್ಟ್ ಅರ್ಜಿದಾರರಿಗೆ 50 ಸಾವಿರ ರೂಪಾಯಿಗಳ ದಂಡ ವಿಧಿಸಿದೆ. ಇದು ಅಘಾತಕಾರಿಯಾದ ತೀರ್ಪು ಎಂದು ಸಿಪಿಐ(ಎಂ) ದ.ಕ. ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ತಿಳಿಸಿದ್ದಾರೆ. ಅರ್ಜಿದಾರರು ವಿನಾಯಿತಿ ಏನೂ ಕೇಳಿಲ್ಲ. ಆದರೆ ತಾತ್ಕಾಲಿಕವಾಗಿ ಮೂರು ತಿಂಗಳು ಮುಂದೂಡಲು ನಿರ್ದೇಶನ ನೀಡಬೇಕೆಂದು […]

ಅಯೋದ್ಯೆಯ ವಿವಾದಿತ ಸ್ಥಳದ ತೀರ್ಪು ಅಲಹಾಬಾದ್ ಹೈಕೋರ್ಟಿನಿಂದ ಪ್ರಕಟ

Thursday, September 30th, 2010
ಅಲಹಾಬಾದ್ ಹೈಕೋರ್ಟ್

ಲಖನೌ  : ರಾಮಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ವಿವಾದದ ತೀರ್ಪು ಹೊರಬಿದ್ದಿದೆ. 60 ವರ್ಷಗಳ ವಿವಾದಿತ 2.7 ಎಕರೆ ಭೂಮಿಯನ್ನು  ಮೂರು ವಿಭಾಗಗಳನ್ನಾಗಿ ಮಾಡಿ ಮೂರು ಅರ್ಜಿದಾರರಿಗೆ ಹಂಚಲು  ಅಲಹಾಬಾದ್ ಹೈಕೋರ್ಟಿನ ಮೂರು ನ್ಯಾಯ ಮೂರ್ತಿಗಳ ಪೀಠ ಸೂಚಿಸಿದೆ. ರಾಮಲಲ್ಲಾನ ವಿಗ್ರಹ ಇರುವ ಇರುವ ಸ್ಥಳ ರಾಮಮಂದಿರ ನಿರ್ಮಾಣಕ್ಕೆ ಬಿಡಬೇಕು ಇನ್ನುಳಿದ ಒಂದು ಭಾಗವನ್ನು ಸುನ್ನಿ ವಕ್ಫ್ ಮಂಡಳಿ ಮತ್ತು  ಮೂರನೇ ಒಂದು ಭಾಗವನ್ನು ನಿರ್ಮೋಹಿ ಅಖಾಡಕ್ಕೆ ನೀಡಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ ಸಿಬಘತ್ ಉಲ್ಲಾ ಖಾನ್, […]

ಅಯೋಧ್ಯೆಯ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ತೀರ್ಪು ಸೆಪ್ಟೆಂಬರ್ 30 ಕ್ಕೆ

Tuesday, September 28th, 2010
ರಾಮ ಜನ್ಮಭೂಮಿ - ಬಾಬ್ರಿ ಮಸೀದಿ

ನವದೆಹಲಿ : ಅಯೋಧ್ಯೆಯ ರಾಮ ಜನ್ಮಭೂಮಿ – ಬಾಬ್ರಿ ಮಸೀದಿ ತೀರ್ಪು ಮುಂದೂಡಲು ರಮೇಶ್ ಚಂದ್ರ ತ್ರಿಪಾಠಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ತ್ರಿಸದಸ್ಯ ವಿಶೇಷ ಪೀಠವು ಸೆಪ್ಟೆಂಬರ್ 30ರಂದು ಗುರುವಾರ ತನ್ನ ಮಹತ್ವದ ತೀರ್ಪನ್ನು ಪ್ರಕಟಿಸಲಿದೆ. ಸೆಪ್ಟೆಂಬರ್ 24ರಂದು ಅಲಹಾಬಾದ್ ಹೈಕೋರ್ಟ್ ಪ್ರಕಟಿಸಬೇಕಿದ್ದ ತೀರ್ಪಿನ ತಾತ್ಕಾಲಿಕ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತೆರವುಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಎಸ್.ಎಚ್. ಕಪಾಡಿಯಾ, ಅಫ್ತಾಬ್ ಆಲಂ ಮತ್ತು ಕೆ.ಎಸ್. ರಾಧಾಕೃಷ್ಣನ್ ನೇತೃತ್ವದ ಸರ್ವೋಚ್ಚ ನ್ಯಾಯಾಲಯದ […]

ಅಯೋಧ್ಯ ವಿವಾದದ ತೀರ್ಪು ಮುಂದಕ್ಕೆ : ಜಿಲ್ಲಾಡಳಿತ ಹೊರಡಿಸಿರುವ ಆದೇಶ ರದ್ದು

Thursday, September 23rd, 2010
ಅಯೋಧ್ಯೆ

ಮಂಗಳೂರು : ರಾಮ ಜನ್ಮಭೂಮಿ- ಬಾಬ್ರಿ ಮಸೀದಿ ವಿವಾದದ ತೀರ್ಪನ್ನು ಸರ್ವೋಚ್ಚ ನ್ಯಾಯಾಲಯವು ತಡೆಹಿಡಿದ ಹಿನ್ನಲೆಯಲ್ಲಿ ಶುಕ್ರವಾರ ಪ್ರಕಟವಾಗಬೇಕಿದ್ದ ತೀರ್ಪು ಸೆಪ್ಟೆಂಬರ್ 28 ಕ್ಕೆ ಮುಂದೂಡಲಾಗಿದೆ. ರಮೇಶ್ ಚಂದ್ರ ತ್ರಿಪಾಠಿ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಹಿನ್ನಲೆಯಲ್ಲಿ ಅಲಹಾಬಾದ್ ಹೈಕೋರ್ಟಿನ ಲಕ್ನೋ ವಿಶೇಷ ಪೀಠವು ಶುಕ್ರವಾರ ಅಪರಾಹ್ನ ಪ್ರಕಟಿಸ ಬೇಕಿದ್ದ ತೀರ್ಪನ್ನು ಮುಂದೂಡಿದೆ. ತ್ರಿಪಾಠಿಯ  ಅರ್ಜಿಯನ್ನು ಮತ್ತೊಂದು ಪೀಠವು ವಿಚಾರಣೆ ನಡೆಸಲಿದ್ದು.  ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 28ಕ್ಕೆ ನ್ಯಾಯಾಲಯ ಮುಂದೂಡಿ, ಆ ತನಕ ಅಲಹಾಬಾದ್ ಹೈಕೋರ್ಟ್ ತೀರ್ಪು […]