ಕರಾವಳಿಯಾದ್ಯಂತ ಮೊಂತಿ ಹಬ್ಬ ಮತ್ತು ತೆನೆ ಹಬ್ಬ ಆಚರಣೆ

Tuesday, September 8th, 2020
montifest

ಮಂಗಳೂರು : ಕರಾವಳಿಯಾದ್ಯಂತ  ಕ್ರಿಶ್ಚಿಯನ್ ಬಾಂಧವರು ಮಂಗಳವಾರ ಮೊಂತಿ  ಹಬ್ಬ ಮತ್ತು ತೆನೆ ಹಬ್ಬವನ್ನು ಜೊತೆಯಾಗಿ ಆಚರಿಸಿದರು. ಯೇಸುಕ್ರಿಸ್ತರ ತಾಯಿ ಮೇರಿ ಮಾತೆಯ ಜನ್ಮದಿನವಾದ ಸೆ. 8ಅನ್ನು ಮೊಂತಿ ಫೆಸ್ತ್ ಹಬ್ಬವಾಗಿ ಆಚರಿಸಲಾಗುತ್ತದೆ. ಚರ್ಚ್‌ಗಳಲ್ಲಿ ಹಬ್ಬದ ಬಲಿಪೂಜೆ ನೆರವೇರಿಸಲಾಯಿತು. ಮೇರಿ ಮಾತೆಗೆ ಹೂವುಗಳನ್ನು ಅರ್ಪಿಸಿ ನಮಿಸಿ ಪ್ರಾರ್ಥನೆ ಸಲ್ಲಿಸಲಾಯಿತು. ಕೊರೊನಾ ಹಿನ್ನೆಲೆಯಲ್ಲಿ ಹಬ್ಬವನ್ನು ಸರಳವಾಗಿ ಆಚರಿಸಲಾಯಿತು. ಮಂಗಳೂರಿನ ರೊಜಾರಿಯೋ ಕೆಥೆಡ್ರಲ್‌ನಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್‌ ವಂ| ಡಾ| ಪೀಟರ್‌ ಪಾವ್ಲ್ ಸಲ್ಡಾನ್ಹಾ ಅವರು ಪ್ರಧಾನ ಬಲಿಪೂಜೆ ನೆರವೇರಿಸಿದರು. ರೊಸಾರಿಯೊ […]

ಮೇರಿ ಮಾತೆಯ ಜನ್ಮದಿನದ ಪ್ರತೀಕವಾಗಿ ತೆನೆ ಹಬ್ಬ ಆಚರಿಸಿದ ಕ್ರೈಸ್ತ ಭಾಂಧವರು

Friday, September 8th, 2017
Monti Fest

ಮಂಗಳೂರು: ಮೇರಿ ಮಾತೆಯ ಜನ್ಮದಿನದ ಪ್ರತೀಕವಾಗಿ ಮೊಂತಿ ಫೆಸ್ಟ್ (ತೆನೆ ಹಬ್ಬ) ವನ್ನು  ಕರಾವಳಿ ಭಾಗದ ಕ್ರೈಸ್ತ ಭಾಂಧವರು ಅತ್ಯಂತ ಶ್ರದ್ಧೆಯಿಂದ ಆಚರಿಸಿದರು. ಪ್ರತಿ ವರ್ಷ ತೆನೆ ಹಬ್ಬ ಸೆಪ್ಟಂಬರ್ ತಿಂಗಳಲ್ಲಿ 8 ಬರುತ್ತದೆ. ಈ ಸಮಯದಲ್ಲಿ ಮಳೆಗಾಲದ ಕೊನೆಯಾಗುತ್ತಿದ್ದು, ಪ್ರಕೃತಿಯ ಹಚ್ಚ ಹಸಿರಿನಿಂದ ಕಂಗೊಳಿಸಿರುತ್ತದೆ. ಭತ್ತದ ಹೊಸ ತೆನೆಯನ್ನು ಕೊಯ್ದು ದೇವಾಲಯಕ್ಕೆ ಕೊಂಡೊಯ್ಯಲಾಗುತ್ತದೆ. ಬಳಿಕ ಅಲ್ಲಿ ಆಶೀರ್ವದಿಸಿ ನಂತರ ಮನೆಗೆ ತಂದು ಆ ಅಕ್ಕಿಯನ್ನು ಸುಲಿದು ಪಾಯಸ ಮಾಡಿ ಕುಟುಂಬದ ಎಲ್ಲಾ ಸದಸ್ಯರು ಸವಿಯುವುದೇ ಈ ಹಬ್ಬದ […]