ಅಹಿಂಸೆ, ಶಾಂತಿ ಸಂದೇಶ ಸಾರಲು ರಾಜ್ಯಪಾಲರ ಕರೆ

Monday, March 14th, 2022
Governer Gehlot

ಮಂಗಳೂರು : ವಿಶ್ವಕ್ಕೆ ಶಾಂತಿ ಹಾಗೂ ಅಹಿಂಸೆಯ ಸಂದೇಶ ಸಾರಿದ ಭಾರತದ ಕೀರ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸುವಂತೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು. ಅವರು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪಟ್ಟಣದ 18 ಜೈನ ದೇವಾಲಯಗಳಲ್ಲಿ ಪ್ರಮುಖವಾದ ಸಾವಿರ ಕಂಬಗಳ ಬಸದಿಯಾದ ತ್ರಿಭುವನ ತಿಲಕ ಚೂಡಾಮಣಿ ದೇವಾಲಯಕ್ಕೆ ಮಾ.14ರ ಸೋಮವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಅವರು, ನಮ್ಮ ದೇಶ ಮಾನವೀಯ ಮೌಲ್ಯಗಳು, ಶಾಂತಿ, ಅಹಿಂಸೆಯ ಮಹತ್ವ […]

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟದಲ್ಲಿರುವ 29 ಮಂತ್ರಿಗಳ ವಿವರ

Wednesday, August 4th, 2021
BSB-team

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟ ರಚನೆಯಾಗಿದ್ದು ಮೊದಲಿಗೆ 29 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದ್ದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು. ಜಗದೀಶ್ ಶೆಟ್ಟರ್, ಸುರೇಶ್ ಕುಮಾರ್, ಅರವಿಂದ ಲಿಂಬಾವಳಿ, ಲಕ್ಷ್ಮಣ ಸವದಿ, ಸಿಪಿ ಯೋಗೇಶ್ವರ್, ಶಂಕರ್, ಶ್ರೀಮಂತ್ ಪಾಟೀಲ್ ರನ್ನು ಸಂಪುಟದಿಂದ ಕೈಬಿಡಲಾಗಿದೆ. ಬೆಂಗಳೂರು ನಗರಕ್ಕೆ 7 ಸಚಿವ ಭಾಗ್ಯ ಸಿಕ್ಕಿದೆ.  13 ಜಿಲ್ಲೆಗಳಿಗೆ ಯಾವುದೇ ಪ್ರಾತಿನಿಧ್ಯವಿಲ್ಲ – ಮೈಸೂರು, ಕಲ್ಬುರ್ಗಿ, […]

ಟೋಕಿಯೊ ಒಲಂಪಿಕ್ಸ್: ಭಾರತ ಪುರುಷ ಹಾಕಿ ತಂಡಕ್ಕೆ ಆತ್ಮ ಸ್ಥೈರ್ಯ ತುಂಬಿದ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್

Tuesday, August 3rd, 2021
Thwar chand

ಬೆಂಗಳೂರು : ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಸೆಮಿಫೈನಲ್ ವರೆಗೆ ಮುನ್ನುಗ್ಗಿ, ಫೈನಲ್ ಪ್ರವೇಶಿಸಲು ಹಿನ್ನೆಡೆ ಅನುಭವಿಸಿದ ಭಾರತ ಪುರುಷ ಹಾಕಿ ತಂಡಕ್ಕೆ ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಆತ್ಮ ಸ್ಥೈರ್ಯ ತುಂಬಿದ್ದಾರೆ. ಮಂಗಳವಾರ ನಡೆದ ಭಾರತ-ಬೆಲ್ಜಿಯಂ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಪುರುಷರ ಹಾಕಿ ತಂಡಕ್ಕೆ 2-5 ಗೋಲುಗಳ ಅಂತರದಲ್ಲಿ ಸೋಲು ಉಂಟಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು, “ಕ್ರೀಡೆಯಲ್ಲಿ ಸೋಲು, ಗೆಲುವು ಸಹಜ. […]

ನಿಯೋಜಿತ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಸ್ವಾಗತಿಸಿದ ಕಂದಾಯ ಸಚಿವ ಆರ್ ಅಶೋಕ

Sunday, July 11th, 2021
R Ashoka

ಬೆಂಗಳೂರು  : ಕರ್ನಾಟಕ ಸರ್ಕಾರದ ಪರವಾಗಿ ಕಂದಾಯ ಸಚಿವ ಶ್ರೀ ಆರ್ ಅಶೋಕ ಅವರು ಶನಿವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಯೋಜಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಸ್ವಾಗತಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ, “ಶ್ರೀ ಗೆಹ್ಲೋಟ್ ಒಬ್ಬ ಅನುಭವಿ ರಾಜಕಾರಣಿ ಮತ್ತು ಈ ಹಿಂದೆ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಬಡ ಜನರ ಬಗ್ಗೆ ಅಪಾರ ಕಾಳಜಿಯನ್ನು ಹೊಂದಿದ್ದು, ರಾಜ್ಯದ ಕುರಿತಂತೆ ಮಾಹಿತಿ ಉಳ್ಳವರಾಗಿದ್ದಾರೆ. ಆದ್ದರಿಂದ ಅವರನ್ನು ಕರ್ನಾಟಕದ ರಾಜ್ಯಪಾಲರನ್ನಾಗಿ ಮಾಡುವುದು […]