ಎಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ

Monday, April 8th, 2024
sunil-kumar

ಮಂಗಳೂರು: ಎಪ್ರಿಲ್ 14ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಗೆ ಸಂಜೆ 3ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಕರ್ನಾಟಕ ಚುನಾವಣಾ ಪ್ರವಾಸದ ಹಿನ್ನೆಲೆಯಲ್ಲಿ ಆಗಮಿಸುತ್ತಿರುವ ನರೇಂದ್ರ ಮೋದಿ ಎ.14ರಂದು ಮಂಗಳೂರಿನ ಕಾರ್ಯಕ್ರಮ ಮುಗಿಸಿ ಸಂಜೆ 5.30ಕ್ಕೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ರೋಡ್ ಶೋ ದಲ್ಲಿ ಭಾಗವಹಿಸಲಿದ್ದಾರೆ ಎಂದು ಸುನಿಲ್ […]

17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ: ಅಂತಿಮ ಕಣದಲ್ಲಿ 9 ಅಭ್ಯರ್ಥಿಗಳು

Monday, April 8th, 2024
Brijesh Padmaprasad

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧೆ ಬಯಸಿ ಉಮೇದುವಾರಿಕೆ ಸಲ್ಲಿಸಿರುವ ಅಭ್ಯರ್ಥಿಗಳ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಏ.8ರ ಸೋಮವಾರ ಪಕ್ಷೇತರ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ್ದ ಸತೀಶ್ ಬೂಡುಮಕ್ಕಿ ಅವರು ನಾಮಪತ್ರ ಹಿಂಪಡೆದುಕೊಂಡಿದ್ದಾರೆ. ಅದರೊಂದಿಗೆ ಅಂತಿಮವಾಗಿ 9 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ. ಅಭ್ಯರ್ಥಿಗಳ ವಿವರ ಇಂತಿದೆ. ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿ ಕಾಂತಪ್ಪ ಅಲಂಗಾರ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ […]

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 76.67 ಮತದಾನ

Friday, April 18th, 2014
lok sabha Dakshin Kannada

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಗುರುವಾರ ನಡೆದ ಚುನಾವಣೆ ಸಂಪೂರ್ಣ ಶಾಂತಿಯುತವಾಗಿದ್ದು ಶೇ. 76.67 ಮತದಾನವಾಗಿದೆ. ಒಟ್ಟು 15,64,114 ಮತದಾರನಲ್ಲಿ 11,96,531 ಮಂದಿ ಮತದಾನ ಮಾಡಿದ್ದಾರೆ. ಒಂದೆರಡು ಕಡೆ ಮತಯಂತ್ರಗಳ ತಾಂತ್ರಿಕ ದೋಷದಿಂದ ಸ್ವಲ್ಪ ವಿಳಂಬ‌ ವಾದ ಬಗ್ಗೆ ವರದಿಯಾಗಿದೆ. ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮಂಗಳೂರಿನ ಲೇಡಿಹಿಲ್ ನ ಮತಗಟ್ಟೆಯೊಂದರಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದರು. ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜನಾರ್ದನ ಪೂಜಾರಿ ಬೆಳಗ್ಗೆಯೇ ಬಂಟ್ವಾಳದಲ್ಲಿನ ಮತದಾನ ಕೇಂದ್ರವೊಂದರಲ್ಲಿ ಸರತಿ ಸಾಲಿನಲ್ಲಿ […]