ಕೊವೀಡ್-19 ಸಂದಿಗ್ಧ ಪರಿಸ್ಥಿತಿಯಲ್ಲಿ ಪೌರಕಾರ್ಮಿಕರ ಸೇವೆ ಅವಿಸ್ಮರಣೀಯ – ದಿವಾಕರ್ ಪಾಂಡೇಶ್ವರ್ 

Wednesday, October 7th, 2020
Paura-Karmika-Dinacharane

ಮಂಗಳೂರು : ಕೊವೀಡ್-19 ಸಂದಿಗ್ಧ ಪರಿಸ್ಥಿತಿಯಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡ ಪೌರಕಾರ್ಮಿಕರ ಸೇವೆ ಅವಿಸ್ಮರಣೀಯ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ್ ಹೇಳಿದರು. ಬುಧವಾರ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮಂಗಳೂರು ಮಹಾನಗರಪಾಲಿಕೆ ವತಿಯಿಂದ ನಡೆದ ಪೌರಕಾರ್ಮಿಕರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಗರವನ್ನು ಪ್ರತಿನಿತ್ಯ ಸ್ವಚ್ಛವಾಗಿರಿಸಿಕೊಳ್ಳುವಲ್ಲಿ ಪೌರಕಾರ್ಮಿಕರ ಕೊಡುಗೆ ಅಪಾರ. ಕೋವಿಡ್-19 ಸಂಕಷ್ಟದ ಸಮಯದಲ್ಲಿ ತಮ್ಮ ದೈನಂದಿನ ಕೆಲಸದಲ್ಲಿ ಸೇವೆ ಸಲ್ಲಿಸಿದ ಎಲ್ಲಾ ಪೌರಕಾರ್ಮಿಕರಿಗೆ ಅಭಿನಂದನೆಗಳು. ಅವರ ಬೇಡಿಕೆಗಳನ್ನು ಈಡೇರಿಸುವಲ್ಲಿ ಪಾಲಿಕೆ ಪ್ರಾಮಾಣಿಕ ಪ್ರಯತ್ನ […]

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್, ಕಟೌಟ್ ತೆರವುಗೊಳಿಸಲು ಸೂಚನೆ

Thursday, September 17th, 2020
banner

ಮಂಗಳೂರು: ಸಾರ್ವಜನಿಕರಿಂದ ಅನೇಕ ದೂರುಗಳು ಬಂದ  ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಾಕಲಾದ ವಿವಿಧ ಫ್ಲೆಕ್ಸ್, ಬ್ಯಾನರನ್ನು ತೆರವುಗೊಳಿಸುವಂತೆ  ಮೇಯರ್ ದಿವಾಕರ್ ಪಾಂಡೇಶ್ವರ್ ಅವರು ವಿನಂತಿಸಿದ್ದಾರೆ. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಹಾಕಲಾದ ವಿವಿಧ ಖಾಸಗಿ ಮತ್ತು ಸಾರ್ವಜನಿಕ ಸಂಬಂಧಿತ ಅನಧಿಕೃತ ಕಟೌಟ್, ಫ್ಲೆಕ್ಸ್ ಗಳನ್ನು ಮುಂದಿನ ಮೂರು ದಿನಗಳೊಳಗಾಗಿ ತೆರವುಗೊಳಿಸುವಂತೆ ಅವರು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ. ಮುಂದಿನ ದಿನಗಳಲ್ಲಿ ಯಾವುದೇ ಬ್ಯಾನರ್, ಫ್ಲೆಕ್ಸ್ ಅಳವಡಿಕೆಗೆ ಮಂಗಳೂರು ಮಹಾನಗರ ಪಾಲಿಕೆಯ ಅನುಮತಿ ಕಡ್ಡಾಯವಾಗಿದೆ. ಈ ಸೂಚನೆ ತಪ್ಪಿದಲ್ಲಿ ಮಹಾನಗರ ಪಾಲಿಕೆಯಿಂದಲೇ ಫ್ಲೆಕ್ಸ್ ತೆರವು […]