ಜುಲೈ 5 ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರ್ಬಂಧ ಮತ್ತು ಸಡಿಲಿಕೆ ಹೇಗಿರಲಿದೆ ನೋಡಿ !

Sunday, July 4th, 2021
Mask

ಮಂಗಳೂರು : ಜಿಲ್ಲಾಧಿಕಾರಿಯವರ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರ್ಬಂಧ ಮತ್ತು ಸಡಿಲಿಕೆ ಹೀಗಿರಲಿದೆ.  ಜುಲೈ 5 ರಿಂದ ಜಿಲ್ಲೆಯ ದೇವಾಲಯಗಳು ಸಾರ್ವಜನಿಕ ಪ್ರವೇಶಕ್ಕೆ ಮುಕ್ತವಾಗಲಿವೆ. ದೇವಾಲಯಗಳ ಆವರಣ ಸ್ವಚ್ಛಗೊಳಿಸುವ, ಸ್ಯಾನಿಟೈಸ್ ಮಾಡುವ ಕಾರ್ಯ ಭಾನುವಾರ ಭರದಿಂದ ನಡೆಯಿತು. ಜಿಲ್ಲೆಯ ಪ್ರಮುಖ ದೇವಾಲಯಗಳಾದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು ದುರ್ಗಾಪರಮೇಶ್ವರಿ ದೇವಾಲಯಗಳು, ನಗರದ ಕುದ್ರೋಳಿ ಗೋಕರ್ಣನಾಥೇಶ್ವರ, ಕದ್ರಿ ದೇವಾಲಯಗಳಲ್ಲಿ ಆವರಣವನ್ನು ಸ್ವಚ್ಛಗೊಳಿಸಿ, ಭಕ್ತರ ಪ್ರವೇಶಕ್ಕೆ ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ದೇವರ ದರ್ಶನಕ್ಕೆ ಮಾತ್ರ ಅವಕಾಶ ಒದಗಿಸಲಾಗಿದ್ದು, ಸೇವೆಗಳಿಗೆ ಅವಕಾಶ […]

ರಾಜ್ಯದ ಅರ್ಚಕರಿಗೆ 3 ತಿಂಗಳುಗಳ ಮುಂಗಡ ಭತ್ಯೆ ಮತ್ತು ದಿನಸಿ ಕಿಟ್‌ಗಳ ಘೋಷಣೆ

Thursday, May 20th, 2021
purohith

ಬೆಂಗಳೂರು:  ರಾಜ್ಯ ಸರ್ಕಾರ  ರಾಜ್ಯದಲ್ಲಿನ  27000 ದೇವಾಲಯಗಳ ಅರ್ಚಕರಿಗೆ 3 ತಿಂಗಳುಗಳ ಮುಂಗಡ ಭತ್ಯೆ (ತಸ್ತಿಕ್) ಬಿಡುಗಡೆ ಮಾಡಿ ಆದೇಶಿಸಿದೆ. ಅಲ್ಲದೆ ‘ಸಿ’ ದರ್ಜೆ ದೇವಾಲಯಗಳ ಸಿಬ್ಬಂದಿಗಳಿಗೆ ದಿನಸಿ ಕಿಟ್‌ಗಳ ನೀಡುವಂತೆ ಆದೇಶ ಹೋರಡಿಸಲಾಗಿದೆ. ಅದರಂತೆ ರಾಜ್ಯದಲ್ಲಿನ 50 ಸಾವಿರ ಅರ್ಚಕರಿಗೆ ಫುಡ್ ಕಿಟ್ ವಿತರಿಸಲು ಮುಜರಾಯಿ ಇಲಾಖೆ ತೀರ್ಮಾನಿಸಿದ್ದು ಸರ್ಕಾರದಿಂದ ಒಟ್ಟು ನಾಲ್ಕೂವರೆ  ಕೋಟಿ ಹಣ ಬಿಡುಗಡೆಯಾಗದೆ ಎಂದು  ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಕೋವಿಡ್ 19 ಹಿನ್ನೆಲೆಯಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ ಬ್ರಾಹ್ಮಣ ಸಮುದಾಯದ […]

ಪಾಕಿಸ್ತಾನದಲ್ಲಿ 1,300 ವರ್ಷಗಳ ಹಿಂದೆ ನಿರ್ಮಿಸಲಾದ ಶ್ರೀವಿಷ್ಣುವಿನ ದೇವಾಲಯ ಪತ್ತೆ

Saturday, November 21st, 2020
Pakistaan Temple

ಪೇಶಾವರ್ : ವಾಯುವ್ಯ ಪಾಕಿಸ್ತಾನದ ಸ್ವಾತ್ ಜಿಲ್ಲೆಯ ಪರ್ವತ ಪ್ರಾಂತ್ಯದಲ್ಲಿ 1,300 ವರ್ಷಗಳ ಹಿಂದೆ ನಿರ್ಮಿಸಲಾಗಿದೆ ಎನ್ನಲಾದ ಶ್ರೀವಿಷ್ಣುವಿಗೆ ಸೇರಿದ ಹಿಂದೂ ದೇವಾಲಯವು ಪತ್ತೆಯಾಗಿದೆ. ಪಾಕಿಸ್ತಾನ ಹಾಗೂ ಇಟಾಲಿಯನ್ ಪುರಾತತ್ವ ತಜ್ಞರು ಈ ದೇವಾಲಯವನ್ನು ಪತ್ತೆ ಹಚ್ಚಿದ್ದಾರೆ. ಬ್ಯಾರಿಕೋಟ್ ಘುಂಡೈನಲ್ಲಿ ಉತ್ಖನನ ನಡೆಸಿದಾಗ ಈ ದೇವಾಲಯ ಪತ್ತೆಯಾಗಿದೆ. ಇದೊಂದು ವಿಷ್ಣುವಿನ ದೇವಾಲಯವಾಗಿದ್ದು ಇದನ್ನು ಹಿಂದೂಶಾಹಿ ಅವಧಿಯಲ್ಲಿ1,300 ವರ್ಷಗಳ ಹಿಂದೆ ನಿರ್ಮಾಣ ಮಾಡಿದ್ದಾಗಿ ಖೈಬರ್ ಪಖ್ತುನ್ಖ್ವಾ ಪುರಾತತ್ವ ವಿಭಾಗದ ಫಜಲ್ ಖಲೀಕ್ ಹೇಳಿದ್ದಾರೆ. ಹಿಂದೂ ಶಾಹಿಸ್ ಅಥವಾ ಕಾಬೂಲ್ […]

ಸೋಮವಾರದಿಂದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಸೇವೆಗಳು ಆರಂಭ

Sunday, September 13th, 2020
sarpasamskara

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಸ್ಥಗಿತಗೊಂಡಿದ್ದ ವಿವಿಧ ಸೇವೆಗಳು ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ಎಲ್ಲಾ ಸೇವೆಗಳು  ಸೋಮವಾರದಿಂದ ಆರಂಭವಾಗಲಿದೆ. ಕೊರೊನಾ ಹಿನ್ನೆಲೆಯಲ್ಲಿ ಕೆಲವೊಂದು ಷರತ್ತುಗಳನ್ನು ಪೂಜಾ ವಿಧಿ ವಿಧಾನಗಳಿಗೆ ಸಂಬಂಧಿಸಿದಂತೆ ಅನ್ವಯ ಮಾಡಲಾಗುತ್ತದೆ ಎಂದು ದೇವಾಲಯದ ಆಡಳಿತಾಧಿಕಾರಿ ತಿಳಿಸಿದ್ದಾರೆ. ದೇಗುಲವು ಬೆಳಗ್ಗೆ 6.30 ರಿಂದ ಮಧ್ಯಾಹ್ನ 1.30ರವರೆಗೆ ಮತ್ತು 3.30 ರಿಂದ ರಾತ್ರಿ 8ಗಂಟೆಯವರೆಗೆ ಮಾತ್ರ ತೆರೆದಿರುತ್ತದೆ. ಪ್ರತಿದಿನ ಮೂವತ್ತು ಭಕ್ತರಿಗೆ ಮಾತ್ರ ಸರ್ಪ ಸಂಸ್ಕಾರ, ಆಶ್ಲೇಷ ಬಲಿ ನಡೆಸಲು ಅವಕಾಶ ನೀಡಲಾಗುತ್ತಿದೆ. ಸೇವಾರ್ಥಿಗಳಿಗೆ ಮಾತ್ರ ಭೋಜನ […]

ವಿನಾಯಕನ ದೇವಾಲಯದ ಬಾಗಿಲಿಗೆ ಮಂಗಳೂರು “ಬೀಡಿ ಕಂಪೆನಿಯೊಂದರ ಬೋರ್ಡ್‌”

Wednesday, July 22nd, 2020
beedi

ಬೇಲೂರು : ಸ್ಥಳೀಯ ಪುರಸಭೆ ಅಂಗಳದಲ್ಲಿರುವ ಶ್ರೀ ವರಸಿದ್ಧಿ ವಿನಾಯಕ ಸ್ವಾಮಿ ದೇವಸ್ಥಾನದ ಬಾಗಿಲಿಗೆ ಬೀಡಿಯೊಂದರ ನಾಮಫಲಕ ಅಳವಡಿಸಿದ್ದಕ್ಕೆ ಭಕ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಾಮಾನ್ಯವಾಗಿ ದೇವಾಲಯಕ್ಕೆ ದೇಣಿಗೆ ಕೊಟ್ಟಿರುವ ದಾನಿಗಳ ಹೆಸರು ಹಾಕಿಸುತ್ತಾರೆ. ಆದರೆ ಸಾರ್ವಜನಿಕವಾಗಿ ಮತ್ತು ಸಾಮಾಜಿಕವಾಗಿ ಕೆಲವೊಂದು ಸ್ಥಳಗಳಲ್ಲಿ ನಿಷೇಧಿಸಲ್ಪಟ್ಟಿರುವ ಬೀಡಿಯೊಂದರ ಹೆಸರಿನ ನಾಮಫಲಕವನ್ನು ದೇವಾಲಯಕ್ಕೆ ಹಾಕಿರುವುದು ಸರಿಯಲ್ಲ ಎಂಬುದು ಭಕ್ತರ ವಾದವಾಗಿದೆ. ಈ ಬಗ್ಗೆ ದೇವಸ್ಥಾನಕ್ಕೆ ಈ ರೀತಿ ಫಲಕ ಹಾಕಿರುವುದು ಸರಿಯಲ್ಲ ಎಂದು ಭಕ್ತರು ಆಡುವ ಮಾತು. ಈ ಬಗ್ಗೆ ದೇವಾಲಯದ […]

ದೇವಾಲಯಗಳಲ್ಲಿ ಸಿಸಿಟಿವಿ ಕಡ್ಡಾಯ- ಜಿಲ್ಲಾಧಿಕಾರಿ

Monday, July 13th, 2020
Dharmika-Datthi-Elakhe

ಮಂಗಳೂರು : ದೇವಾಲಯಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮರಾಗಳನ್ನು ಒಳಗೊಂಡಿರಬೇಕು ಮತ್ತು ಅವುಗಳು ಕಾರ್ಯನಿರ್ವಹಿಸುತ್ತಿದೆಯೇ ಎಂಬುದನ್ನು ನಿತ್ಯ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಹೇಳಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿನ ಆಭರಣಗಳನ್ನು ಸಂರಕ್ಷಣೆ ಹಾಗೂ ಮೌಲ್ಯಮಾಪನ ಮಾಡುವ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಾದ ಸಭೆಯನ್ನುದ್ಧೇಶಿಸಿ ಅವರು ಮಾತನಾಡಿದರು. ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಅನಾದಿ ಕಾಲದ ವಿಗ್ರಹ, ಚಿನಬೆಳ್ಳಿ ಮತ್ತು ಇನ್ನಿತರ ಅಮೂಲ್ಯ […]

ದೇವಾಲಯಗಳ ಇತಿಹಾಸ, ಶಾಸನಗಳ ಪ್ರಾಚೀನತೆ ಬಿಂಬಿಸಿದ ಗೋಷ್ಠಿ

Monday, March 2nd, 2020
ujire

ಧರ್ಮಸ್ಥಳ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಇತಿಹಾಸ ವಿಭಾಗದ ಸಹಯೋಗದೊಂದಿಗೆ ಧರ್ಮಸ್ಥಳದ ವಸಂತ ಮಹಲ್ ಸಭಾಭವನದಲ್ಲಿ ಆಯೋಜಿತವಾದ ಶಾಸನ ಶಾಸ್ತ್ರ ಸಂಘದ 45ನೇ ಮತ್ತು ಸ್ಥಳ ನಾಮ ಸಂಘದ 39ನೇ ಜಂಟಿ ಅಧಿವೇಶನದಲ್ಲಿ ದೇವಾಲಯಗಳ ಇತಿಹಾಸ ಮತ್ತು ಶಾಸನಗಳ ಪ್ರಾಚೀನ ವೈಶಿಷ್ಟ್ಯತೆ ಕುರಿತ ವಿಸ್ತೃತ ವಿಚಾರಗಳು ಪ್ರಸ್ತುತಪಡಿಸಲ್ಪಟ್ಟವು. ನಾಗರಿಕ ಸಂಹಿತೆ ಮತ್ತು ಪೋರ್ಚುಗಿಸ್ ಶಾಸನಗಳು, ನಾಗಾವ್‌ ಶಾಸನದ ಸಾಮಾಜಿಕ ಸಂಕೇತ, ಆಂಧ್ರದ ಇತ್ತೀಚಿನ ಬ್ರಾಹ್ಮೀ ಶಾಸನಗಳು, ಎರಡನೇ ಹೊಯ್ಸಳ ವೀರಬಲ್ಲಾಳ, ಸೂರ್ಯದೇವ ಮತ್ತು ಅವನ ದೇವಾಲಯದ […]

ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಸಂಸದ ನಳಿನ್‌ ಕುಮಾರ್‌ ಕಟೀಲು : ರಾಜ್ಯಾಧ್ಯಕ್ಷ ಸ್ಥಾನ ಹುದ್ದೆಯಾಗಿ ಅಲ್ಲ, ಜವಾಬ್ದಾರಿಯಾಗಿ ಸ್ವೀಕರಿಸುತ್ತೇನೆ

Thursday, August 22nd, 2019
Nalin-kumar

ಮಂಗಳೂರು : ಯಾವುದೇ ಪದವಿ ನಿರೀಕ್ಷಿಸದೆ ಪಕ್ಷಕ್ಕಾಗಿ ದುಡಿದಿದ್ದೇನೆ. ಪಕ್ಷದ ನಾಯಕರು ಮತ್ತು ಹಿರಿಯರು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದು, ಅದನ್ನು ಹುದ್ದೆಯಾಗಿ ಅಲ್ಲ, ಜವಾಬ್ದಾರಿಯಾಗಿ ಸ್ವೀಕರಿಸುತ್ತೇನೆ ಎಂದು ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು. ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಬುಧವಾರ ಬಿಜೆಪಿ ಕಚೇರಿಗೆ ಆಗಮಿಸಿ, ನಾಯಕರು, ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ಚಿಕ್ಕಂದಿನಲ್ಲೇ ಸಂಘ ಪರಿವಾರದ ಕಾರ್ಯಕರ್ತನಾಗಿ ಹಲವು ಸವಾಲುಗಳ ಮಧ್ಯೆ ಈಜುತ್ತಲೇ ಇಲ್ಲಿವರೆಗೆ ಬಂದಿದ್ದೇನೆ. ಭಾರತ ಮಾತೆಯ ಗೌರವವನ್ನು […]

ವರ್ಷದ ಮೊದಲ ದಿನ: ಕದ್ರಿ, ಕುದ್ರೋಳಿ ಸೇರಿ ಹಲವು ದೇವಾಲಯಗಳಲ್ಲಿ ಭಕ್ತರಿಂದ ಪೂಜೆ

Monday, January 1st, 2018
Temple

ಮಂಗಳೂರು: ಹಳೆ ವರ್ಷ ಕಳೆದು ಹೊಸ ವರ್ಷಕ್ಕೆ ಕಾಲಿಟ್ಟಿದ್ದೇವೆ. ಇಡೀ ವರ್ಷ ಆರೋಗ್ಯ, ನೆಮ್ಮದಿ, ಯಶಸ್ಸು, ಐಶ್ವರ್ಯ ದಯಪಾಲಿಸಲಿ ಎಂಬುದು ಎಲ್ಲರ ಅಭಿಲಾಸೆ. ಯಾವುದೇ ಕಾರ್ಯವನ್ನು ಜನ ಇಂದು ದೇವರ ದರ್ಶನದ ಮೂಲಕ ಆರಂಭಿಸುತ್ತಾರೆ. ಹಾಗೆಯೇ ಮಂಗಳೂರಿನಲ್ಲೂ ಮಂಗಳಾದೇವಿ, ಕದ್ರಿ ಮಂಜುನಾಥ ದೇವಸ್ಥಾನ, ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯ ಸೇರಿದಂತೆ ಎಲ್ಲಾ ದೇವಸ್ಥಾನಗಳಲ್ಲೂ ಭಕ್ತರು ಮುಗಿಬಿದ್ದು ಪೂಜೆ ಸಲ್ಲಿಸುತ್ತಿರುವ ದೃಶ್ಯ ಕಂಡುಬಂತು. ಬಹುತೇಕ ಎಲ್ಲಾ ದೇವಸ್ಥಾನಗಳಲ್ಲೂ ಇಂದು ವಿಶೇಷ ಪೂಜೆ ನೆರವೇರಿತು. ಭಕ್ತರು ಸಾಮೂಹಿಕ ಸತ್ಯನಾರಾಯಣ ಪೂಜೆ ಕೈಗೊಂಡು […]