ಬಂಟ್ವಾಳ : ಶುದ್ಧ ಕುಡಿಯುವ ನೀರಿನ ಯೋಜನೆಯನ್ನು ಉದ್ಘಾಟಿಸಿದ ಸಚಿವ ಕೆ.ಎಸ್. ಈಶ್ವರಪ್ಪ

Friday, November 8th, 2019
shudda-kudiyuva-niru

ಬಂಟ್ವಾಳ : ದ.ಕ. ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮಂಗಳೂರು ವಿಭಾಗ ಸಹಯೋಗದೊಂದಿಗೆ ಮಾಣಿ ಮತ್ತು 51 ಜನವಸತಿಗಳ ಬಹುಗ್ರಾಮ ಶುದ್ಧ ಕುಡಿಯುವ ನೀರಿನ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಮಧ್ಯಾಹ್ನ ನಡೆಯಿತು. ಪೆರಾಜೆ ಗ್ರಾಪಂ ಗಡಿಯಾರದಲ್ಲಿರುವ ನೀರು ಶುದ್ದೀಕರಣ ಘಟಕವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಉದ್ಘಾಟಿಸಿದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ […]

ವಿದ್ಯಾರ್ಥಿಗಳನ್ನು ಸಮಾಜದಲ್ಲಿ ಸತ್ಪ್ರಜೆಗಳನ್ನಾಗಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿರುತ್ತದೆ : ಯು ಟಿ ಖಾದರ್

Thursday, September 5th, 2019
UT-Kadar

ಮಂಗಳೂರು : ವಿದ್ಯಾರ್ಥಿಗಳನ್ನು ಸಮಾಜದಲ್ಲಿ ಸತ್ಪ್ರಜೆಗಳನ್ನಾಗಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾದದ್ದು, ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನ ಶಿಕ್ಷಕರಿಗೆ ವಿಶೇಷ ಸ್ಥಾನವಿದೆ ಎಂದು ಮಾಜಿ ಸಚಿವ ಯು ಟಿ ಖಾದರ್ ಹೇಳಿದರು. ದ.ಕ.ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮಂಗಳೂರು ದಕ್ಷಿಣ ವಲಯ, ದ.ಕ. ಸಾರ್ವಜನಿಕ ಶಿಕ್ಷಣ ಇಲಾಖೆ, ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ ಜಿಲ್ಲಾ ಮಟ್ಟದ ಮತ್ತು ಮಂಗಳೂರು ದಕ್ಷಿಣ ವಲಯ ಮಟ್ಟದ ಶಿಕ್ಷಕ ದಿನಾಚರಣೆಯನ್ನು ನಗರದ ಪುರಭವನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಅವರು […]

ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಜಯಭೇರಿ

Tuesday, January 4th, 2011
ದ.ಕ.ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆ ಫಲಿತಾಂಶ

ಮಂಗಳೂರು : ಡಿ.31ರಂದು ನಡೆದ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಕ್ಷೇತ್ರಗಳ ಚುನಾವಣೆಯ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು , ದಕ್ಷಿಣ ಕನ್ನಡ ಮತ್ತು ಉಡುಪಿಯ ಜಿ.ಪಂ., ತಾ.ಪಂ. ಕ್ಷೇತ್ರಗಳಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ ಮೇಲುಗೈ ಸಾಧಿಸಿದೆ ಇಂದು ಬೆಳಿಗ್ಗೆ ಮತ ಎಣಿಕೆ ಮುಗಿದಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ 24 ಸ್ಥಾನಗಳನ್ನು  ತನ್ನದಾಗಿಸಿಕೊಂಡಿದೆ, ಕಾಂಗ್ರೆಸ್ 11 ಸ್ಥಾನಗಳನ್ನು ಪಡೆಯಿತು. ಬಂಟ್ವಾಳದಲ್ಲಿ ಜಿ.ಪಂ. ಕ್ಷೇತ್ರದಲ್ಲಿ 6ಸ್ಥಾನಗಳಲ್ಲಿ ಬಿಜೆಪಿ ,ಕಾಂಗ್ರೆಸ್ 3 ಸ್ಥಾನಗಳನ್ನು ಗಳಿಸಿದೆ. ಗೋಳ್ತಮಜಲು ಕ್ಷೇತ್ರದಲ್ಲಿ […]

ಅಂಗವಿಕಲರಲ್ಲೂ ವಿಶೇಷ ಪ್ರತಿಭೆ ಇದೆ: ಪಾಲೆಮಾರ್

Friday, December 3rd, 2010
ಜೆ. ಕೃಷ್ಣ ಪಾಲೆಮಾರ್

ಮಂಗಳೂರು: ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್ ಮಂಡಳಿ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು, ಅಂಗವಿಕಲರ ಹಾಗೂ ಹಿರಿಯ ನಾಗರಿಕ ಕಲ್ಯಾಣ ಇಲಾಖೆ, ಅಂಗವಿಕಲರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ದ.ಕ ಹಾಗೂ ಲಯನ್ಸ್ ಕ್ಲಬ್ ಮಂಗಳೂರು, ಗಾಂಧಿನಗರ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ 2010′ ಕಾರ್ಯಕ್ರಮವನ್ನು ಇಂದು, ಬೆಳಿಗ್ಗೆ ನಗರದ ಪುರಭವನದಲ್ಲಿ ಆಚರಿಸಲಾಯಿತು. ಸಮಾರಂಭದ ಉದ್ಘಾಟನೆಯನ್ನು ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ. ಕೃಷ್ಣ ಪಾಲೆಮಾರ್ ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು. […]

ಕಾನೂನಿನ ಅರಿವು ಪಂಚಾಯತ್ ಪ್ರತಿನಿಧಿಗಳಿಗೆ ಇರಬೇಕು: ನ್ಯಾ.ಮೂ ನಾಗಮೋಹನ್

Saturday, November 13th, 2010
ಕಾನೂನು ಅರಿವು ಕಾರ್ಯಗಾರ

ಮಂಗಳೂರು: ದ.ಕ ಜಿಲ್ಲಾ ಪಂಚಾಯತ್ ಮತ್ತು ದ.ಕ ಜಿಲ್ಲಾ ಕಾನೂನು ಸೇವೆಗಳ  ಪ್ರಾಧಿಕಾರ ಇದರ ವತಿಯಿಂದ ಮಂಗಳೂರು ತಾಲೂಕಿನ ಗ್ರಾಮ ಪಂಚಾಯತ್ ಜಿನಪ್ರತಿನಿಧಿಗಳಿಗೆ ಕಾನೂನು ಅರಿವು ಕಾರ್ಯಗಾರವು ಇಂದು ಬೆಳಿಗ್ಗೆ ನಗರದ ಪುರಭವನದಲ್ಲಿ ನಡೆಯಿತು. ಕಾರ್ಯಗಾರದ ಉದ್ಘಾಟನೆಯನ್ನು  ಕರ್ನಾಟಕದ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಸನ್ಮಾನ್ಯ ಶ್ರೀ ಎಚ್. ಎನ್ ನಾಗಮೋಹನ್ ದಾಸ್ ಇವರು ದೀಪ ಬೆಳಗಿಸುವುದರ ಮೂಲಕ ನೆರವೇದಿಸಿದರು. ಇದೇ ವೇಳೆ ಅವರು ರಚಿಸಿದ ಪುಸ್ತಕ “ಗ್ರಾಮ ರಾಜ್ಯ” (ಮಹಾತ್ಯಾ ಗಾಂಧಿಯವರ ಕಲ್ಪನೆ) ಇದರ ಬಿಡುಗಡೆಯನ್ನು ಸನ್ಮಾನ್ಯ […]