ತನ್ನದೇ ಪಕ್ಷದ ಕಾರ್ಪೊರೇಟರ್ ಪುತ್ರಿ ನೇಹಾ ಕೊಲೆಯಾದರೂ ಕಾಂಗ್ರೆಸ್ ಸರ್ಕಾರ ಅವರಿಗೆ ಧೈರ್ಯ ತುಂಬಿಲ್ಲ : ನಳಿನ್ ಕುಮಾರ್
Tuesday, April 23rd, 2024ಮಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣದ ಕುಟುಂಬಸ್ಥರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಬೇಕು, ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲು ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಳಿನ್, ಅವರದೇ ಪಕ್ಷದ ಕಾರ್ಪೊರೇಟರ್ ಪುತ್ರಿ ನೇಹಾ ಕೊಲೆಯಾದರೂ ಕಾಂಗ್ರೆಸ್ ಸರ್ಕಾರ, ಮುಖಂಡರು ನೇಹಾ ಕುಟುಂಬಕ್ಕೆ ಇದುವರೆಗೆ ಧೈರ್ಯ ತುಂಬುವ ಕೆಲಸ ಮಾಡಿಲ್ಲ. ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಆತಂಕದ ವಾತಾವರಣ ಸೃಷ್ಟಿಯಾಗುತ್ತಿದೆ ಎಂದರು. ಹಿಂದೂಗಳ ಮೇಲೆ ಹಲ್ಲೆ, ಹತ್ಯೆಗಳು ನಡೆಯುತ್ತಿವೆ. […]