27ರಿಂದ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ: ನಿಷೇಧಾಜ್ಞೆ ಜಾರಿ

Saturday, September 25th, 2021
sslc exam

ಮಂಗಳೂರು : ಇದೇ ಸೆ. 27 ರಿಂದ 29ರ ವರೆಗೆ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಗಳು ನಡೆಯಲಿರುವ ಹಿನ್ನಲೆಯಲ್ಲಿ ಆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳೂ ಆದ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಸೆ. 27 ರಿಂದ 29ರ ವರೆಗೆ ಜಿಲ್ಲೆಯ 17 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ ಸುಸೂತ್ರವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲು […]

ಮತ ಎಣಿಕಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ : ಜಿಲ್ಲಾಧಿಕಾರಿ

Tuesday, December 29th, 2020
KV Rajendra

ಮಂಗಳೂರು :  ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ-2020 ರ ಸಂಬಂಧ ಎಲ್ಲಾ ಮತ ಎಣಿಕಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಡಿಸೆಂಬರ್ 29 ರಂದು ಮಧ್ಯರಾತ್ರಿ 12 ಗಂಟೆಯಿಂದ ಡಿಸೆಂಬರ್ 30 ರ ಮಧ್ಯರಾತ್ರಿ 12 ಗಂಟೆಯವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಂತೆ ನಿಷೇಧಾಜ್ಞೆಯನ್ನು ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ […]

ಶಿವಮೊಗ್ಗ: ಆಸ್ಪತ್ರೆಗೆ ಬಂದಿದ್ದ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದ ಸಾಮೂಹಿಕ ಅತ್ಯಾಚಾರ

Sunday, December 6th, 2020
Rape

ಶಿವಮೊಗ್ಗ: ತಾಯಿಯನ್ನು ನೋಡಿಕೊಳ್ಳಲು  ಆಸ್ಪತ್ರೆಗೆ ಬಂದಿದ್ದ ಬಾಲಕಿಗೆ ಊಟ ಕೊಡಿಸುವುದಾಗಿ ಹೇಳಿ ಕಾರಿನಲ್ಲಿ ಕರೆದೊಯ್ದ ಮೆಗ್ಗಾನ್ ಆಸ್ಪತ್ರೆ ವಾರ್ಡ್ ಬಾಯ್ ಮತ್ತು ಆತನ ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬಾಲಕಿ ತಾಯಿ ಆರೋಗ್ಯ ಸಮಸ್ಯೆ ಹಿನ್ನೆಲೆ  ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೈಕೆ ಮಾಡಲು ಬಾಲಕಿ ಕೆಲ ದಿನದಿಂದ ಆಸ್ಪತ್ರೆಯಲ್ಲಿದ್ದಳು. ತಾಯಿಯನ್ನು ವಾರ್ಡ್ ಗೆ ಕರೆದೊಯ್ಯುವುದು, ಚಿಕಿತ್ಸೆಗೆ ಕರೆದೊಯ್ಯುವಾಗ ವಾರ್ಡ್ ಬಾಯ್ ಮನೋಜ್ ಎಂಬಾತನ ಪರಿಚಯವಾಗಿದೆ. ವೀಲ್ ಚೇರ್ ತಂದು ಬಾಲಕಿಯ ತಾಯಿಯನ್ನು […]

ಕಾಸರಗೋಡು ಜಿಲ್ಲೆಯಲ್ಲಿ ನವಂಬರ್ 15 ರ ತನಕ 144 ನಿಷೇಧಾಜ್ಞೆ ವಿಸ್ತರಣೆ

Saturday, October 31st, 2020
Sajith Babu

ಕಾಸರಗೋಡು : ಜಿಲ್ಲೆಯಲ್ಲಿ  ಅಕ್ಟೋಬರ್ 3 ರಿಂದ ಜಾರಿಯಲ್ಲಿರುವ 144 ನಿಷೇಧಾಜ್ಞೆಯನ್ನು ನವಂಬರ್ 15 ರ ತನಕ ವಿಸ್ತರಿಸಿ ಜಿಲ್ಲಾಧಿಕಾರಿ ಡಾ .ಡಿ ಸಜಿತ್ ಬಾಬು ಆದೇಶ ಹೊರಡಿಸಿದ್ದಾರೆ. ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖ ಆಗದ ಕಾಣದ ಹಿನ್ನಲೆಯಲ್ಲಿ ಇನ್ನೂ 15 ದಿನಗಳ ಕಾಲ ನಿಷೇಧಾಜ್ಞೆಯನ್ನು ವಿಸ್ತರಿಸಲಾಗಿದೆ. ಮಂಜೇಶ್ವರ, ಕುಂಬಳೆ, ಬದಿಯಡ್ಕ, ಕಾಸರಗೋಡು, ವಿದ್ಯಾನಗರ, ಮೇಲ್ಪರಂಬ, ಬೇಕಲ, ಹೊಸದುರ್ಗ, ನೀಲೇಶ್ವರ, ಚಂದೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಪ್ಪ, ಒಡೆಯಂಚಾಲ್, ಪನತ್ತಡಿ ಪೇಟೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಸ್ತರಿಸಲಾಗಿದೆ. ಸೋಂಕು ನಿಯಂತ್ರಣದ […]

ಕಾಸರಗೋಡು ಜಿಲ್ಲೆಯಲ್ಲಿ ಅಕ್ಟೋಬರ್ 31ರ ವರೆಗೆ ನಿಷೇಧಾಜ್ಞೆ ವಿಸ್ತರಣೆ

Friday, October 23rd, 2020
Kasaragodu DC

ಕಾಸರಗೋಡು : ಕೊರೋನ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಹಂತಹಂತವಾಗಿ ಜಾರಿಗೆ ತರಲಾಗಿದ್ದ ನಿಷೇಧಾಜ್ಞೆಯನ್ನು ಅಕ್ಟೋಬರ್ 31ರ ತನಕ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಸಜಿತ್ ಬಾಬು ಆದೇಶ ಹೊರಡಿಸಿದ್ದಾರೆ. ಸೋಂಕು ನಿಯಂತ್ರಣದ ದ್ರಷ್ಟಿಯಿಂದ ಅಕ್ಟೋಬರ್ 3ರಿಂದ ಸೆಕ್ಷನ್ 144ರಂತೆ ನಿಷೇಧಾಜ್ಞೆಯನ್ನು ಕೇರಳದಲ್ಲಿ ಜಾರಿಗೆ ತರಲಾಗಿತ್ತು. ಆದರೆ ಕಾಸರಗೋಡು ಜಿಲ್ಲೆಯಲ್ಲಿ ಹಂತಹಂತವಾಗಿ ನಿಷೇದಾಜ್ಞೆ ಜಾರಿಗೆ ತರಲಾಗಿತ್ತು. ಮಂಜೇಶ್ವರ, ಕುಂಬಳೆ, ಬದಿಯಡ್ಕ, ಕಾಸರಗೋಡು, ವಿದ್ಯಾನಗರ, ಮೇಲ್ಪರಂಬ, ಬೇಕಲ, ಹೊಸದುರ್ಗ, ನೀಲೇಶ್ವರ, ಚಂದೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಪ್ಪ, ಒಡೆಯಂಚಾಲ್, ಪನತ್ತಡಿ ಪೇಟೆ […]

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಾ. 31ರ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ

Monday, March 23rd, 2020
SindhuB Roopesh

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಾ. 22ರ ರಾತ್ರಿ 9 ಗಂಟೆಯಿಂದ ಮಾ. 31ರ ಮಧ್ಯರಾತ್ರಿ 12 ಗಂಟೆಯವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರನ್ವಯ ನಿಷೇಧಾಜ್ಞೆ ವಿಧಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಆದೇಶಿಸಿದ್ದಾರೆ. ಕೋವಿಡ್‌- 19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ನಿಷೇಧಾಜ್ಞೆ ವೇಳೆ ಸಾರ್ವಜನಿಕರು ತುರ್ತು ಮತ್ತು ಆವಶ್ಯಕ ಕಾರ್ಯಗಳನ್ನು ಹೊರತುಪಡಿಸಿ ಇನ್ನಾವುದೇ ಕಾರಣಗಳಿಗೆ ಮನೆಗಳಿಂದ ಹೊರಬರುವುದನ್ನು ಕಡ್ಡಾಯ ವಾಗಿ ನಿರ್ಬಂಧಿಸಲಾಗಿದೆ. ಸಾರ್ವಜನಿಕರು ತಮ್ಮ […]

ನಾಳೆ ಮಂಗಳೂರು ಮಹಾನಗರ ಪಾಲಿಕೆ ಚುನಾವಣಾ ಮತ ಎಣಿಕೆ

Wednesday, November 13th, 2019
MCC

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಗೆ ನ.12ರಂದು ನಡೆದ ಚುನಾವಣೆಯ ಮತ ಎಣಿಕೆ ನಾಳೆ ನ.14ರಂದು ನಗರದ ರೊಸಾರಿಯೊ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಎಣಿಕೆ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಕಲಂ 144 ಸಿಆರ್‌ಪಿಸಿ ಅನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭಗೊಳ್ಳಲಿದೆ. ಚುನಾವಣೆಯಲ್ಲಿ ಸ್ಪರ್ಧಿಸಿದ ವಿವಿಧ ಪಕ್ಷಗಳ ಅಭ್ಯರ್ಥಿಗಳು, ಪಕ್ಷಗಳ ಅಭಿಮಾನಿಗಳು, ಕಾರ್ಯಕರ್ತರು ಹೆಚ್ಚಿನಸಂಖ್ಯೆಯಲ್ಲಿ ಮತ ಎಣಿಕೆ ಕೇಂದ್ರದ ಸುತ್ತ […]

ಮಂಜೇಶ್ವರ ತಾಲೂಕಿನಲ್ಲಿ ಮುಂದುವರಿದ ನಿಷೇಧಾಜ್ಞೆ

Friday, January 4th, 2019
Kerala-Hartal

ಕಾಸರಗೋಡು : ಶಬರಿಮಲೆ ಹಿತ ರಕ್ಷಣಾ ಸಮಿತಿ ಹಾಗೂ ಹಿಂದೂ ಸಂಘಟನೆಗಳು ನೀಡಿದ  ಗುರುವಾರ ಕರೆ ನೀಡಲಾಗಿದ್ದ ಹರತಾಳದ ಸಂದರ್ಭ ಉದ್ವಿಗ್ನಗೊಂಡಿದ್ದ ಕಾಸರಗೋಡು ಜಿಲ್ಲೆ ಇಂದು ಸಹಜ ಸ್ಥಿತಿಯತ್ತ ಮರಳುತ್ತಿದೆ. ಶುಕ್ರವಾರ  ಬೆಳಗ್ಗೆಯಿಂದ ಜಿಲ್ಲಾದ್ಯಂತ ಜನಸಂಚಾರ, ವಾಹನಗಳ ಓಡಾಟ ಎಂದಿನಂತಿದ್ದು, ಅಂಗಡಿಮುಂಗಟ್ಟುಗಳು ತೆರೆದಿವೆ. ಹರತಾಳ ಮುಗಿದ ಬಳಿಕವೂ ಚೂರಿ ಇರಿತಗಳಂತಹ ಅಹಿತಕರ ಘಟನೆಗಳು ಮುಂದುವರಿದಿದ್ದ ಮಂಜೇಶ್ವರ ತಾಲೂಕಿನಲ್ಲೂ ಪರಿಸ್ಥಿತಿ ಶಾಂತವಾಗಿದ್ದು, ತಾಲೂಕಿನಾದ್ಯಂತ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಅದೇರೀತಿ ಇಂದು ತಾಲೂಕಿನ ಎಲ್ಲ […]

ವಿಧಾನಪರಿಷತ್ ಚುನಾವಣೆ: ನಿಷೇಧಾಜ್ಞೆ

Thursday, June 7th, 2018
Sasikanth Senthil

ಮಂಗಳೂರು : ವಿಧಾನಪರಿಷತ್ ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ದ.ಕ ಜಿಲ್ಲೆಯ ಒಟ್ಟು 37 (ಪದವೀಧರ ಕ್ಷೇತ್ರ-23 ಮತ್ತು ಶಿಕ್ಷಕರ ಕ್ಷೇತ್ರ-17) ಮತದಾನ ಕೇಂದ್ರಗಳ 500 ಮೀಟರ್ ವ್ಯಾಪ್ತಿಯಲ್ಲಿ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರನ್ವಯ ನಿಷೇಧಾಜ್ಞೆಯನ್ನು ವಿಧಿಸಿ ಜಿಲ್ಲಾಧಿಕಾರಿ ಡಾ. ಸಸಿಕಾಂತ್ […]

ಎಲ್ಲಾ ಅಹಿತಕರ ಘಟನೆಗಳ ಹಿಂದಿರುವ ಆರೋಪಿಗಳ ಬಗ್ಗೆ ಪ್ರಮುಖ ಮಾಹಿತಿಗಳು ನಮಗೆ ಸಿಕ್ಕಿದೆ : ಅಲೋಕ್ ಮೋಹನ್

Wednesday, July 12th, 2017
Alok Mohan

ಮಂಗಳೂರು : ಜಿಲ್ಲೆಯಲ್ಲಿ ಜನಜೀವನ ಮತ್ತೆ ಸಹಜ ಸ್ಥಿತಿಗೆ ಮರಳಿದೆ ಈ ಸಂದರ್ಭದಲ್ಲಿ ಸಾರ್ವಜನಿಕರು ಶಾಂತಿ ಸ್ಥಾಪನೆಗೆ ಸಹಕಾರ ನಿರಂತರವಾಗಿ ನೀಡಬೇಕಾಗಿದೆ . ಕಲ್ಲಡ್ಕ ಘಟನೆಗೆ ಸಂಬಂಧಿಸಿದಂತೆ ಒಟ್ಟು 6 ಪ್ರಕರಣ ದಾಖಲಾಗಿದೆ. 17 ಜನರನ್ನು ಬಂಧಿಸಲಾಗಿದೆ. ಎಲ್ಲಾ ಅಹಿತಕರ ಘಟನೆಗಳ ಹಿಂದಿರುವ ಆರೋಪಿಗಳ ಬಗ್ಗೆ ಪ್ರಮುಖ ಸುಳಿವು ದೊರೆತಿದೆ ಎಂದು ರಾಜ್ಯದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಜಿಲ್ಲಾಡಳಿತ ಜುಲೈ 21 ರ ವರೆಗೆ ನಿಷೇಧಾಜ್ಞೆ ಯನ್ನು ಮುಂದುವರಿಸಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ […]