ಲೋಕಸಭಾ ಚುನಾವಣೆ ಯ ಅಭ್ಯರ್ಥಿಗಳ ಖರ್ಚು ವೆಚ್ಚಗಳ ಬಗ್ಗೆ ವಿಶೇಷ ನಿಗಾ

Friday, April 12th, 2024
election-officer

ಮಂಗಳೂರು : ಮುಕ್ತ ಹಾಗೂ ಪಾರದರ್ಶಕ ಚುನಾವಣೆಗೆ ಮಾದರಿ ನೀತಿ ಸಂಹಿತೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಹಾಗೂ ಪ್ರತಿಯೊಂದು ಘಟನೆಯನ್ನು ಸೂಕ್ಷ್ಮವಾಗಿ ಗಮನಿಸಿ ಅಭ್ಯರ್ಥಿಗಳ ವೆಚ್ಚದ ಬಗ್ಗೆ ನಿಗಾವಹಿಸಬೇಕು ಎಂದು ರಾಜ್ಯಕ್ಕೆ ನಿಯೋಜನೆಗೊಂಡ ವಿಶೇಷ ವೆಚ್ಚ ವೀಕ್ಷಕ ಬಿ. ಮುರಳೀ ಕುಮಾರ್ ಅವರು ನಿರ್ದೇಶನ ನೀಡಿದರು. ಅವರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏ.12ರ ಶುಕ್ರವಾರ 17- ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ […]

ಸ್ಥಳೀಯ ಮಾರುಕಟ್ಟೆಗಳಲ್ಲಿ ದಿನಸಿ ಸಾಮಾಗ್ರಿಗಳು, ತರಕಾರಿಗೆ ಗ್ರಾಹಕರಿಂದ ಹೆಚ್ಚು ಹಣ ವಸೂಲಿ, ದೂರು

Monday, May 31st, 2021
vegetable

ಮಂಗಳೂರು : ಲಾಕ್ ಡೌನ್ ಸಂದರ್ಭದಲ್ಲಿ ಗ್ರಾಹಕ ರಿಂದ ಕೆಲವೊಂದು ದಿನಸಿ ಸಾಮಾಗ್ರಿಗಳು, ತರಕಾರಿ, ಹಣ್ಣು ಹಂಪಲುಗಳ ವರ್ತಕರು ಸಿಕ್ಕಿದ್ದೇ ಲಾಭ ಎಂಬಂತೆ ಮನ ಬಂದಂತೆ ಹಣ ವಸೂಲಿ ಮಾಡುತ್ತಿರುವ  ಹಿನ್ನಲೆಯಲ್ಲಿ ಸಾರ್ವಜನಿಕರು  ಜಿಲ್ಲಾಧಿಕಾರಿಗಳಿಗೆ ದೂರು ನೀಡಿರುವುದರಿಂದ,  ಅಂತಹ ವರ್ತಕರನ್ನು ಪತ್ತೆ ಹಚ್ಚಲು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಡ್19 ಸೋಂಕು ಪ್ರಸರಣದ ಸರಪಳಿಯನ್ನು ತುಂಡರಿಸುವ ಸಲುವಾಗಿ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತದ ವತಿಯಿಂದ ಕಾಲಕಾಲಕ್ಕೆ ಎಲ್ಲಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಸರಣದ ಸರಪಳಿಯನ್ನು ತುಂಡರಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಲಾಕ್‍ಡೌನ್‍ನ […]

ಹಣಕಾಸು ಸಂಸ್ಥೆಗಳವರು ಸಾಲ ಮರುಪಾವತಿಸಲು ಪೀಡಿಸಿದರೆ ದೂರು ಕೊಡಿ

Friday, May 28th, 2021
KV Rajendra

ಮಂಗಳೂರು :  ಮೈಕ್ರೋ ಫೈನಾನ್ಸ್‌ಗಳು, ಸಹಕಾರಿ ಸಂಘಗಳು, ಇತರೆ ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿಗಾಗಿ ಸಾಲಗಾರರನ್ನು ಒತ್ತಾಯಿಸುವಂತಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೆ ಅದರ ಮೇಲ್ವಿಚಾರಣೆಗಾಗಿ ಇಬ್ಬರು ನೋಡಲ್ ಅಧಿಕಾರಿಗಳನ್ನೂ ಕೂಡ ಜಿಲ್ಲಾಧಿಕಾರಿ ನೇಮಿಸಿದ್ದಾರೆ. ಯಾವುದೇ ಮೈಕ್ರೋ ಫೈನಾನ್ಸ್, ಸಹಕಾರಿ ಸಂಘಗಳು, ಇತರೆ ಹಣಕಾಸು ಸಂಸ್ಥೆಗಳವರು ಸಾಲ ಮರುಪಾವತಿಸಲು ಒತ್ತಡ ಹಾಕಿದರೆ ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರವೀಣ್ (9449860916), ಸಹಕಾರಿ ಸಂಘಗಳ ಉಪನಿಬಂಧಕ ಪ್ರವೀಣ್ ಬಿ.ನಾಯಕ್ (9448633338)ಅವರನ್ನು ಸಂಪರ್ಕಿಸಿ ದೂರು ನೀಡಬಹುದಾಗಿದೆ. ಅವರು ಸಾಲಗಾರರ ಅಹವಾಲು ಸ್ವೀಕರಿಸಿ ಸೂಕ್ತ ಕ್ರಮ […]

ಇಂದಿರಾ ಕ್ಯಾಂಟೀನ್‌ಗಳಲ್ಲಿ ಮೂರು ಹೊತ್ತು ಉಚಿತ ಊಟ, ಉಪಹಾರ – ಮೇಯರ್

Friday, May 21st, 2021
Indira Canteen

ಮಂಗಳೂರು : ಪಾಲಿಕೆ ವ್ಯಾಪ್ತಿಯ 5 ಪ್ರದೇಶಗಳಲ್ಲಿನ ಇಂದಿರಾ ಕ್ಯಾಂಟೀನ್‌ಗಳಲ್ಲಿ ಕೂಲಿ ಕಾರ್ಮಿಕರು, ವಲಸಿಗರು, ದುರ್ಬಲ ವರ್ಗದವರು ಹಾಗೂ ಸಂಕಷ್ಟಗೊಳಗಾದ ಸ್ಥಳೀಯರಿಗೆ ಅನುಕೂಲವಾಗುವಂತೆ ಉಚಿತವಾಗಿ ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟವನ್ನು ಉಚಿತವಾಗಿ ನೀಡಲಾಗುತ್ತಿದೆ. ನಗರದಲ್ಲಿ ಕಂಡುಬರುವ ನಿರ್ಗತಿಕರಿಗೆ ಪಾಲಿಕೆಯ ಡೇ ನಲ್ಮ್ ಯೋಜನೆಯಡಿ ಬಂದರಿನಲ್ಲಿ (ಪುರುಷರು), ಉರ್ವಾದಲ್ಲಿ (ಮಹಿಳೆಯರು) ಆರಂಭಿಸಿರುವ ರಾತ್ರಿ ವಸತಿರಹಿತ ಆಶ್ರಯ ಕೇಂದ್ರಗಳಿಗೆ ತಲುಪಿಸಿ ಆರೈಕೆ ಮಾಡಲಾಗುತ್ತಿದೆ ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ಹೇಳಿದರು. ಪಾಲಿಕೆಯ ಕಚೇರಿಯಲ್ಲಿ ಮಾತನಾಡಿದ ಅವರು ನಗರದ 10 ಆರೋಗ್ಯ […]

ದಕ್ಷಿಣ ಕನ್ನಡದಲ್ಲಿ18 ರಿಂದ 44 ವರ್ಷದೊಳಗಿನವರಿಗೆ ಲಸಿಕೆ ನೀಡುವ ಕಾರ್ಯ ಆರಂಭ

Tuesday, May 11th, 2021
vaccination

ಮಂಗಳೂರು :  ದ.ಕ. ಜಿಲ್ಲೆಯಲ್ಲಿ ಮಂಗಳವಾರ 18 ರಿಂದ 44 ವರ್ಷದೊಳಗಿನವರಿಗೆ ಲಸಿಕೆ ನೀಡುವ ಕಾರ್ಯ ಆರಂಭಗೊಂಡಿದೆ. ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಂಡವರಿಗೆ ಪ್ರಥಮ ಹಂತವಾಗಿ ನಗರದ ವೆನ್ಲಾಕ್ ಆಸ್ಪತ್ರೆ ಹಾಗೂ ನಾಲ್ಕು ತಾಲ್ಲೂಕು ಆಸ್ಪತ್ರೆ ಗಳಲ್ಲಿ ಮಂಗಳವಾರ ಲಸಿಕೆ ನೀಡಲಾಗುತ್ತಿದೆ. ಮಂಗಳವಾರ ವೆನ್ಲಾಕ್ ನಲ್ಲಿ  250 ಮಂದಿ 18 ರಿಂದ 44 ವರ್ಷದವರಿಗೆ ಆನ್ ಲೈನ್  ನೋಂದಣಿ ಪಡೆದವರಿಗೆ ಲಸಿಕೆ ನೀಡಲಾಗುತ್ತಿದ್ದು ಯುವಕರು ಉತ್ಸಾಹದಿಂದ ಕೇಂದ್ರಕ್ಕೆ ಲಸಿಕೆ ಪಡೆಯಲು ಬರುತ್ತಿದ್ದಾರೆ ಎಂದು ಕೋವಿಡ್ ಲಸಿಕೀಕರಣದ ಜಿಲ್ಲಾ […]

ಅಪಾಯದ ಮಟ್ಟಕ್ಕೆ ಮುಟ್ಟಿದ ಕುಮಾರಧಾರ ಹಾಗೂ ನೇತ್ರಾವತಿ ನದಿ ನೀರಿನ ಹರಿಯು

Thursday, August 8th, 2019
Bantwala-Natravati

ಮಂಗಳೂರು : ದ.ಕ. ಜಿಲ್ಲೆಯ ಕುಮಾರಧಾರ ಹಾಗೂ ನೇತ್ರಾವತಿ ನದಿ ಅಪಾಯದ ಮಟ್ಟದ ಸನಿಹದಲ್ಲಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚನೆ ನೀಡಿದ್ದಾರೆ. ಬಂಟ್ವಾಳದಲ್ಲಿ ನೇತ್ರಾವತಿ ನದಿ ನೀರಿನ ಹರಿಯು 8.4 ಕ್ಕೆ ಮುಟ್ಟಿದ್ದು, ಅಪಾಯದ ಮಟ್ಟ 8.5 ಆಗಿದೆ. ಉಪ್ಪಿನಂಗಡಿ ಯಲ್ಲಿ ನೇತ್ರಾವತಿ ನದಿ ನೀರಿನ ಹರಿಯು ಗರಿಷ್ಟ 29.5 ಇದ್ದು ಈಗ  30.00 ಕ್ಕೆ ಮುಟ್ಟಿದ್ದು ಅಪಾಯದ ಮಟ್ಟ ಮೀರಿದೆ. ಉಪ್ಪಿನಂಗಡಿ ಯಲ್ಲಿ ಕುಮಾರಧಾರ ನದಿ  ನೀರಿನ ಹರಿಯು ಗರಿಷ್ಟ 28.5 ಇದ್ದು ಈಗ  […]