ಐಎಂಎ ವಂಚನೆ ಪ್ರಕರಣ : ಮನ್ಸೂರ್ ಖಾನ್ ನ್ಯಾಯಾಂಗ ಬಂಧನಕ್ಕೆ ಕೋರ್ಟ್​ ಆದೇಶ

Tuesday, September 24th, 2019
IMA-Mansoon-khan

ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶಿಸಿದೆ. ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಸಿಬಿಐ ಕಸ್ಟಡಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಮನ್ಸೂರ್‌ನನ್ನು ಸಿಟಿ ಸಿವಿಲ್ ಕೋರ್ಟ್‌ನ ಆವರಣದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ‌ ಹಾಜರು ಪಡಿಸಲಾಗಿತ್ತು. ಮನ್ಸೂರ್ ಖಾನ್ ಸಿಬಿಐ ವಿಚಾರಣೆ ಹೆಚ್ಚಿನ ಅವಶ್ಯಕತೆ ಇರದ ಹಿನ್ನೆಲೆ ಸೆ. 30 ರವರೆಗೂ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ […]

ಮಂಗಳೂರು : ‘ಗಿರಿಗಿಟ್’ ಚಿತ್ರದ ಆಕ್ಷೇಪಾರ್ಹ ದೃಶ್ಯ ತೆಗೆಯಲು ಚಿತ್ರ ತಂಡ ಒಪ್ಪಿಗೆ

Friday, September 13th, 2019
girgit

ಮಂಗಳೂರು : ಗಿರಿಗಿಟ್ ಚಿತ್ರದ ವಿವಾದ ಕೊನೆಗೂ ನಿರ್ಣಾಯಕ ಹಂತ ತಲುಪಿದೆ. ಚಿತ್ರದಲ್ಲಿ ನ್ಯಾಯಾಂಗ ನಿಂದನೆ ಮತ್ತು ವಕೀಲ ಸಮುದಾಯದ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ ಎಂಬ ಅಂಶ ಇರುವ ಭಾಗಗಳನ್ನು ಬೇಷರತ್ತಾಗಿ ತೆಗೆದು ಹಾಕಲು ಗಿರಿಗಿಟ್ ಚಿತ್ರ ತಂಡ ಒಪ್ಪಿಕೊಂಡಿದೆ. ಮಂಗಳೂರಿನ ಪ್ರಧಾನ ಕಿರಿಯ ಸಿವಿಲ್ ನ್ಯಾಯಾಧೀಶರ ಮುಂದೆ ಚಿತ್ರತಂಡದ ಪರ ವಾದ ಮಂಡಿಸಿದ ಗಿರಿಗಿಟ್ ಪರ ವಕೀಲರು ಚಿತ್ರ ಪ್ರದರ್ಶನ ಮುಂದುವರಿಸಲು ಅನುಮತಿ ಯಾಚಿಸಿದರು. ತಾಂತ್ರಿಕ ಕಾರಣಗಳಿಂದ ಚಿತ್ರ ಪ್ರದರ್ಶನ ಮುಂದುವರಿಯುತ್ತಿದ್ದು, ಚೆನ್ನೈನಲ್ಲಿ ಚಲನಚಿತ್ರದ ಭಾಗಗಳನ್ನು […]

ಕರ್ನಾಟಕ ಅಲ್ಪಸಂಖ್ಯಾತರ ಆಯೋಗಕ್ಕೆ ರಾಜ್ಯ ಸರ್ಕಾರವು ನ್ಯಾಯಾಂಗ ಅಧಿಕಾರ ನೀಡಿದೆ: ಬಲ್ಕೀಸ್ ಬಾನು

Thursday, August 18th, 2016
Balkis-Banu

ಮಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಆಯೋಗಕ್ಕೆ ರಾಜ್ಯ ಸರ್ಕಾರವು ನ್ಯಾಯಾಂಗ ಅಧಿಕಾರ ನೀಡಿದೆ ಎಂದು ಆಯೋಗದ ಅಧ್ಯಕ್ಷೆ ಬಲ್ಕೀಸ್ ಬಾನು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದುವರೆಗೆ ಇತರೆ ಆಯೋಗಗಳಿಗೆ ಈ ಅಧಿಕಾರವಿದ್ದರೂ ಅಲ್ಪಸಂಖ್ಯಾತರ ಆಯೋಗಕ್ಕೆ ಇರಲಿಲ್ಲ. ಈ ಬಗ್ಗೆ ಇತ್ತೀಚೆಗೆ ಸರ್ಕಾರ ಆಯೋಗಕ್ಕೆ ನ್ಯಾಯಾಂಗ ಅಧಿಕಾರ ನೀಡಿ ಆದೇಶ ಹೊರಡಿಸಿದೆ. ಇದರಿಂದ ಅಗತ್ಯಬಿದ್ದವರಿಗೆ ಸಮನ್ಸ್ ಸೇರಿದಂತೆ ಸಿವಿಲ್ ಅಧಿಕಾರವನ್ನು ಆಯೋಗವು ಹೊಂದಲಿದೆ ಎಂದು ಹೇಳಿದರು. ಅಲ್ಪಸಂಖ್ಯಾತರ ಶಾಲೆಗಳ ಪ್ರಮಾಣಪತ್ರ ನೀಡುವಲ್ಲಿ ಸಮಸ್ಯೆಗಳುಂಟಾಗಿರುವುದು ತನ್ನ ಗಮನಕ್ಕೆ ಬಂದಿದೆ. ಅಲ್ಪಸಂಖ್ಯಾತರ […]