ಮಗನ ಮೇಲೆ ಶೂಟೌಟ್ : ಆರೋಪಿ ರಾಜೇಶ್ ಪ್ರಭುವಿಗೆ ನ್ಯಾಯಾಂಗ ಬಂಧನ

Sunday, October 10th, 2021
Rajesh Prabhu

ಮಂಗಳೂರು : ಮೋರ್ಗನ್ಸ್‌ಗೇಟ್‌ನ ವೈಷ್ಣವಿ ಎಕ್ಸ್‌ಪ್ರೆಸ್ ಕಾರ್ಗೊ ಮಾಲಕ  ಹಾಗೂ ಶೂಟೌಟ್ ಪ್ರಕರಣದ ಆರೋಪಿ ರಾಜೇಶ್ ಪ್ರಭುನನ್ನು ರವಿವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ವೈಷ್ಣವಿ ಎಕ್ಸ್‌ಪ್ರೆಸ್ ಕಾರ್ಗೊ ಸಂಸ್ಥೆಯ ಎದುರು ಇಬ್ಬರು ನೌಕರರ ಜತೆ ನಡೆದ ಸಂಘರ್ಷದ ಸಂದರ್ಭದಲ್ಲಿ ರಾಜೇಶ್ ಪ್ರಭು ಪಿಸ್ತೂಲ್‌ನಲ್ಲಿ ಹಾರಿಸಿದ್ದ ಗುಂಡು ಪುತ್ರ ಸುಧೀಂದ್ರನ ತಲೆಗೆ ಹೊಕ್ಕಿತ್ತು. ಪರಿಣಾಮವಾಗಿ ಸುಧೀಂದ್ರ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

ಡಿ ಕೆ ಶಿವಕುಮಾರ್ ಗೆ ಅಕ್ಟೋಬರ್ 15 ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Tuesday, October 1st, 2019
DKShi

ನವದೆಹಲಿ : ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಅವರ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 15 ವರೆಗೆ ವಿಸ್ತರಿಸಲಾಗಿದೆ. ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಗೆ ಇಡಿ ಅಧಿಕಾರಿಗಳು ಇಂದು ಡಿಕೆ ಶಿವಕುಮಾರ್ ಅವರನ್ನು ಹಾಜರುಪಡಿಸಿದರು. ಕೋರ್ಟ್ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿದೆ. ಅಕ್ಟೋಬರ್ 4 ಮತ್ತು 5ರಂದು ಇಡಿ ಅಧಿಕಾರಿಗಳು ಡಿಕೆಶಿ ಅವರನ್ನು ವಿಚಾರಣೆ ನಡೆಸಲು ಕೋರ್ಟ್ ಅವಕಾಶ ನೀಡಿದೆ.  

ಸೆಕ್ಸ್ ವೀಡಿಯೊ ಹಂಚಿಕೆ ಪ್ರಕರಣ ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Friday, July 5th, 2019
Group-sex

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯ ಮೇಲೆ ಗ್ರೂಪ್ ಸೆಕ್ಸ್ ಮಾಡಿದ, ಅಶ್ಲೀಲ ವೀಡಿಯೊವನ್ನು ಸಮಾಜಿಕ ಜಾಲತಾಣಗಳಲ್ಲಿ ಹಂಚಿಕೆ ಮಾಡಿದ ಆರೋಪದಲ್ಲಿ ಪುತ್ತೂರು ನಗರ ಪೊಲೀಸರು ಕಬಕ ನಿವಾಸಿ ಚಂದ್ರಶೇಖರ ಮಯ್ಯ, ಮುರಳೀ ಪರ್ಲಡ್ಕ, ಪವನ್ ಕರ್ಲ್ಲರ್ಪೆ, ದೈಹಿಕ ಶಿಕ್ಷಣ ಶಿಕ್ಷಕ ಪೂವಪ್ಪ ಮತ್ತು ಶ್ರೇಯಾ ಎಂಬವರನ್ನು ಐಟಿ ಕಾಯ್ದೆಯಡಿ ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ಪುತ್ತೂರು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯಕ್ಕೆ ಗುರುವಾರ ಸಂಜೆ ಹಾಜರುಪಡಿಸಿದಾಗ ಆರೋಪಿಗಳಿಗೆ ಒಂದು ದಿನದ ನ್ಯಾಯಾಂಗ ಬಂಧನ ನೀಡಿ ನ್ಯಾಯಾಲಯ ಆದೇಶಿಸಿತು. ಒಂದು ದಿನದ […]

ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ ಆರೋಪಿ ವಿಕ್ಟೋರಿಯಾಗೆ ನ್ಯಾಯಾಂಗ ಬಂಧನ

Friday, May 17th, 2019
Victoria

ಮಂಗಳೂರು :  ಶ್ರೀಮತಿ ಶೆಟ್ಟಿ (35) ಕೊಲೆ ಪ್ರಕರಣದಲ್ಲಿ ಬಂಧಿತ ಎರಡನೇ ಆರೋಪಿ ವಿಕ್ಟೋರಿಯಾ ಮಥಾಯಿಸ್‌ಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆಕೆಗೆ ಮೇ 29ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಮುಖ ಆರೋಪಿ ಜೋನಸ್ ಜೂಲಿನ್ ಸ್ಯಾಮ್ಸನ್ (36) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇನ್ನೂ ನಾಲ್ಕೈದು ದಿನಗಳ ಕಾಲ ಚಿಕಿತ್ಸೆ ನೀಡಿ ಗುಣಮುಖನಾದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಈತನ ಪತ್ನಿ ವಿಕ್ಟೋರಿಯಾ ಮಥಾಯಿಸ್ ನೀಡಿದ ಹೇಳಿಕೆಯ ಪ್ರಕಾರ ಆತನಿಂದ ಕೆಲವೊಂದು ಸೊತ್ತುಗಳನ್ನು ವಶಪಡಿಸಿಕೊಳ್ಳಲು ಬಾಕಿ ಇದೆ ಎಂದು […]

ಸುಪಾರಿ ಕೇಸ್; ರವಿ ಬೆಳೆಗೆರೆಗೆ 14 ದಿನಗಳ ನ್ಯಾಯಾಂಗ ಬಂಧನ

Monday, December 11th, 2017
ravi-belegere

ಬೆಂಗಳೂರು: ಸಹೋದ್ಯೋಗಿ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ್ದ ಪ್ರಕರಣದಲ್ಲಿ ಹಾಯ್ ಬೆಂಗಳೂರು ವಾರ ಪತ್ರಿಕೆ ಸಂಪಾದಕ ರವಿ ಬೆಳೆಗೆರೆಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಸೋಮವಾರ ಆದೇಶ ನೀಡಿದೆ. ರವಿ ಬೆಳೆಗೆರೆಯ ಪೊಲೀಸ್ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು 1ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದರು. ಬೆಳೆಗೆರೆ ಪರ ವಕೀಲರಾದ ದಿನಕರ್ ಅವರು ಕೋರ್ಟ್ ಗೆ ಆಗಮಿಸಲು ತಡವಾಗಿದ್ದ ಹಿನ್ನೆಲೆಯಲ್ಲಿ ವಿಚಾರಣೆ ಆರಂಭಿಸಿದ ಕೆಲ ಹೊತ್ತಿನಲ್ಲಿಯೇ ನ್ಯಾಯಾಧೀಶರು […]

ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ

Thursday, February 2nd, 2017
Ganja

ಮಂಗಳೂರು: ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ನಗರದ ಕೂಳೂರು ಬಳಿ ಕಾವೂರು ಪೊಲೀಸರು ಬಂಧಿಸಿದ್ದಾರೆ. ಕೋಡಿಕಲ್ ನಿವಾಸಿಗಳಾದ ಬಿ.ಸಿ.ರೋಡ್ ಟೋಲ್‌ಗೇಟ್‌ನಲ್ಲಿ ಕೆಲಸ ಮಾಡುವ ಕಾರ್ತಿಕ್‌ರಾಜ್ (21) ಹಾಗೂ ನಗರದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಪೃಥ್ವಿ (20) ಬಂಧಿತರು. ಗಾಂಜಾ ಸೇವನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಕಾವೂರು ಠಾಣಾ ಪೊಲೀಸರು, ಕಾರ್ಯಾಚರಣೆ ನಡೆಸಿದ್ದಾರೆ. ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ […]

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Thursday, November 17th, 2016
Muhammad

ಮಂಗಳೂರು: ಕೊಣಾಜೆ ಠಾಣೆ ವ್ಯಾಪ್ತಿಯ ಹರೇಕಳ ಗ್ರಾಮದ ನ್ಯೂಪಡ್ಪು ಎಂಬಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಕೊಣಾಜೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಂಜನಾಡಿ ಮಸೀದಿ ಸಮೀಪದ ನಿವಾಸಿ ಮಹಮ್ಮದ್(40) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ 250 ಗ್ರಾಂ ತೂಕದ ಗಾಂಜಾ ಮತ್ತು ಗಾಂಜಾವನ್ನು ಅಡಗಿಸಿಟ್ಟಿದ್ದ ಸ್ಕೂಟರ್‌ನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ವಿಮಾನ ನಿಲ್ದಾಣ ಮೂಲಕ ದುಬೈಯಿಂದ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸಿದ ಆರೋಪಿ ಬಂಧನ

Saturday, October 1st, 2016
smuggling-in-mia

ಮಂಗಳೂರು: ವಿಮಾನ ನಿಲ್ದಾಣ ಮೂಲಕ ದುಬೈಯಿಂದ ಅಕ್ರಮವಾಗಿ 32.91 ಲಕ್ಷ ರೂ. ಮೌಲ್ಯದ 1.05 ಕೆ.ಜಿ. ಚಿನ್ನ ಸಾಗಿಸಲು ಯತ್ನಿಸಿದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಏರ್ ಇಂಡಿಯಾ ವಿಮಾನದ ಮೂಲಕ ಆಗಮಿಸಿದ ಆರೋಪಿ ಸೆ. 27ರಂದು ಬಜ್ಪೆ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸಲೆತ್ನಿಸಿದ್ದ. ಅನುಮಾನ ಬಂದು ತಪಾಸಣೆ ನಡೆಸಿದಾಗ ಆತನ ಬಳಿ ಸಿಲಿಂಡರ್ ರೂಪದ ಚಿನ್ನದ ರಾಡ್ ಪತ್ತೆಯಾಗಿತ್ತು. ಇದನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಸ್ತಾಂತರಿಸಿದ್ದು, […]

ಬಾಳಿಗಾ ಕೊಲೆ ಪ್ರಕರಣ: ಜಾಮೀನು ಪಡೆದಿದ್ದ ನರೇಶ್ ಶೆಣೈ ಬಿಡುಗಡೆ

Tuesday, September 20th, 2016
naresh-shenoy

ಮಂಗಳೂರು: ನಗರದ ಆರ್.ಟಿ.ಐ ಕಾರ್ಯಕರ್ತ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ನಮೋ ಬ್ರಿಗೇಡ್ ಸ್ಥಾಪಕ ನರೇಶ್ ಶೆಣೈ ಬಿಡುಗಡೆಗೊಂಡಿದ್ದಾರೆ. ಶನಿವಾರ ಹೈಕೋರ್ಟ್ ಜಾಮೀನು ನೀಡಿತ್ತು. ಆದರೆ ಜೈಲು ಅಧೀಕ್ಷಕರಿಗೆ ಬಿಡುಗಡೆಯ ಆದೇಶ ಪತ್ರ ತಲುಪಿರಲಿಲ್ಲ ಆದ್ದರಿಂದ ತಡವಾಗಿತ್ತು. ಭಾನುವಾರ ರಜಾ ಕಾರಣ ಎರಡು ದಿನ ಜೈಲಿನಲ್ಲೇ ಇರುವಂತಾಯಿತು. ಅಂತಿಮವಾಗಿ ಸೋಮವಾರ ಸಂಜೆ ಬಿಡುಗಡೆಗೊಂಡರು. ಜೈಲಿನಿಂದ ಹೊರಬಂದ ಅವರನ್ನು ಆಪ್ತರು ಕಾರಿನಲ್ಲಿ ಗುಪ್ತಸ್ಥಳಕ್ಕೆ ಕರೆದೊಯ್ದರು. ಈ ಸಂದರ್ಭ ವಾಗ್ಮಿ ಚಕ್ರವರ್ತಿ ಸೂಲಿಬೆಲೆ, ನಾಗರಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಹನುಮಂತ […]

ಯಾಸ್ಮಿನ್ ನ್ಯಾಯಾಂಗ ಬಂಧನ ಅವಧಿ ಸೆ.6 ರ ತನಕ ವಿಸ್ತರಣೆ

Wednesday, August 10th, 2016
Yashmin

ಕಾಸರಗೋಡು: ಐಸಿಸ್ ಉಗ್ರಗಾಮಿ ಸಂಘಟನೆಯೊಂದಿಗೆ ನಂಟು ಹೊಂದಿದ ಶಂಕೆಯಿಂದ ಬಂಧಿತಳಾದ ಬಿಹಾರ ನಿವಾಸಿ ಯಾಸ್ಮಿನ್ ಮೊಹಮ್ಮದ್ ಸಾನೀದ್(28)ಳಿಗೆ ನ್ಯಾಯಾಂಗ ಬಂಧನ ಅವಧಿಯನ್ನು ಕಾಸರಗೋಡು ಜಿಲ್ಲಾ ಸೆಶನ್ಸ್ ನ್ಯಾಯಾಲಯ ಸೆ.6 ರ ವರೆಗೆ ಮತ್ತೆ ವಿಸ್ತರಿಸಿದೆ. ದಿಲ್ಲಿಯಿಂದ ಬಂಧಿತಳಾಗಿ ನ್ಯಾಯಾಂಗ ಬಂಧನಕ್ಕೊಳಗಾದ ಯಾಸ್ಮಿನ್‌ಳನ್ನು ಹೆಚ್ಚಿನ ತನಿಖೆಗಾಗಿ ಪೊಲೀಸರು ಜಿಲ್ಲಾ ಸೆಶನ್ಸ್ ನ್ಯಾಯಾಲಯಕ್ಕೆ ಮಾಡಿದ ಮನವಿಯಂತೆ ನ್ಯಾಯಾಲಯ ಮೂರು ದಿನಗಳ ತನಕ ಪೊಲೀಸ್ ಕಸ್ಟಡಿಗೆ ಬಿಟ್ಟು ಕೊಟ್ಟಿತ್ತು. ಕಸ್ಟಡಿ ಅವಧಿ ಪೂರ್ಣಗೊಂಡ ಬಳಿಕ ಪೊಲೀಸರು ಆಕೆಯನ್ನು ನ್ಯಾಯಾಲಯಕ್ಕೆ ಮತ್ತೆ ಹಾಜರುಪಡಿಸಿದಾಗ […]