ಪತ್ರಕರ್ತರು ವ್ರತ್ತಿಪರ ಮೌಲ್ಯವನ್ನು ಕಾಪಾಡಿಕೊಳ್ಳುವುದು ಸವಾಲಿನ ಕಾರ್ಯ : ಡಾ. ಅಶ್ವಥ ನಾರಾಯಣ

Saturday, March 7th, 2020
journalist

ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಎರಡು ದಿನಗಳ ಕಾಲ  ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನ ದಲ್ಲಿ ನಡೆಯುತ್ತಿರುವ 35ನೇ ಸಮ್ಮೇಳನಕ್ಕೆ  ಚೆಂಡೆ, ವಾದ್ಯ ಘೋಷದೊಂದಿಗೆ  ಶನಿವಾರದ ಎಲ್ಲ ಪತ್ರಿಕೆಗಳು ಹಾಗೂ ಟಿವಿ ಮಾಧ್ಯಮಗಳ ಲೋಗೋಗಳನ್ನು ಪಲ್ಲಕ್ಕಿಯಲ್ಲಿರಿಸಿ ಮೆರವಣಿಗೆ ಮೂಲಕ ತಂದು ವೇದಿಕೆಯ ಮುಂಬಾಗದಲ್ಲಿರಿಸಿ,  ಆ ಮೂಲಕ ಸಮ್ಮೇಳನದ ಮಹತ್ವವನ್ನು ತಿಳಿಸಲಾಯಿತು. ಬಳಿಕ ವ್ಯಂಗ್ಯ ಚಿತ್ರ ಪ್ರದರ್ಶನವನ್ನು ಉಪ ಮುಖ್ಯ ಮಂತ್ರಿ ಸಿ.ಎನ್. ಅಶ್ವತ್ಥ ನಾರಾಯಣ ಉದ್ಘಾಟಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ […]

ಪ್ರಜಾಪ್ರಭುತ್ವ ಬಲಗೊಳಿಸುವಲ್ಲಿ ಪತ್ರಕರ್ತರ ಪಾತ್ರ ಹಿರಿದು- ಪಿ.ಬಿ.ಆಚಾರ್ಯ

Monday, July 1st, 2019
DKWJU

ಮಂಗಳೂರು: ಪ್ರಜಾಪ್ರಭುತ್ವ ಬಲಗೊಳಿಸುವಲ್ಲಿ ಮತ್ತು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಪತ್ರಕರ್ತರ ಪಾತ್ರ ಬಲು ಹಿರಿದಾದುದು ಎಂದು ನಾಗಾಲ್ಯಾಂಡ್ ರಾಜ್ಯಪಾಲ ಪಿ.ಬಿ.ಆಚಾರ್ಯ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾಮಾಜಿಕ ಮತ್ತು ಶೈಕ್ಷಣಿಕ ಕೊಡುಗೆ ನೀಡುವ ಮೂಲಕ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜನರು ಬಲು ದೊಡ್ಡ ಕೊಡುಗೆಯನ್ನು ನೀಡಿದ್ದಾರೆ. […]

ದ.ಕ. ಜಿಲ್ಲಾ ಮಟ್ಟದ ಪತ್ರಕರ್ತರ ಸಮ್ಮೇಳನದ ಆಮಂತ್ರಣ ಪತ್ರ ಬಿಡುಗಡೆ

Tuesday, June 18th, 2019
press-invitation

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಜು.1ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿರುವ ‘ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನ 2019’ರ ಆಮಂತ್ರಣ ಪತ್ರಿಕೆ ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಬಿಡುಗಡೆಗೊಂಡಿತು. ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಪತ್ರಿಕಾ ಬರವಣಿಗೆ ಮೂಲಕ ನಾಡನ್ನು ತಿದ್ದುವ, ಜನರಲ್ಲಿ ತಿಳಿವಳಿಕೆ ಮೂಡಿಸುವ ಪತ್ರಕರ್ತರಿಗೆ ಇಂದು ರಕ್ಷಣೆ ಬೇಕಾಗಿದೆ. ಒಳ್ಳೆಯ ವಿಚಾರವನ್ನು ಸಮಾಜದ ಮುಂದಿಡುವ ಜತೆಗೆ […]