ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

Tuesday, July 14th, 2020
PU Karnataka

ಬೆಂಗಳೂರು: ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದರು ಈ ವರ್ಷ ಒಟ್ಟಾರೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ಪ್ರಮಾಣ ಶೇಕಡಾ 61.80 ಆಗಿದೆ. ಕಳೆದ ವರ್ಷಕ್ಕಿಂತ ಶೇಕಡಾ 0.7ರಷ್ಟು ಫಲಿತಾಂಶ ಹೆಚ್ಚಾಗಿದ್ದು ಕಳೆದ ವರ್ಷ ಶೇಕಡಾ 61.73 ಫಲಿತಾಂಶ ಬಂದಿತ್ತು. ಶೇಕಡಾ 68.73ರಷ್ಟು ಫಲಿತಾಂಶ ಗಳಿಸಿ ಹುಡುಗಿಯರೇ ಮೇಲಗೈ ಸಾಧಿಸಿದ್ದಾರೆ. ರಾಜ್ಯದಲ್ಲಿ ತೇರ್ಗಡೆ ಹೊಂದಿದ ಒಟ್ಟಾರೆ ಹುಡುಗರ ಸಂಖ್ಯೆ […]

ವಿದ್ಯಾರ್ಥಿಗಳು ಬೇರೆ ಜಿಲ್ಲೆಗಳಲ್ಲಿ ಉಳಿದಿದ್ದರೆ ಅಲ್ಲಿಂದಲೇ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಅವಕಾಶ

Saturday, May 16th, 2020
suresh-kumar

ಬೆಂಗಳೂರು : ದ್ವಿತೀಯ ಪಿಯುಸಿ ಇಂಗ್ಲಿಷ್ ಭಾಷಾ ಪರೀಕ್ಷೆಯನ್ನು ಜೂನ್ ತಿಂಗಳಲ್ಲಿ ನಡೆಸಲು ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ಲಾಕ್‌ಡೌನ್‌ನಿಂದಾಗಿ ವಿದ್ಯಾರ್ಥಿಗಳು ಯಾವ ಯಾವ ಜಿಲ್ಲೆಗಳಲ್ಲಿ ಸಿಲುಕಿಕೊಂಡಿದ್ದಾರೋ  ಅಲ್ಲೇ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಶನಿವಾರ ಸುತ್ತೋಲೆ ಹೊರಡಿಸಿದೆ. ದೇಶದಲ್ಲಿ ಲಾಕ್‌ಡೌನ್ ಘೋಷಣೆಯಾಗುವ ಮುಂಚೆ ದ್ವಿತೀಯ ಪಿಯುಸಿ ಯ ಎಲ್ಲಾ ಪರೀಕ್ಷೆಗಳು ಮುಗಿದಿದ್ದವು. ಆದರೆ, ಆಂಗ್ಲ ಭಾಷೆ ಪತ್ರಿಕೆ ಮಾತ್ರ ಉಳಿದಿತ್ತು. ಈ ಸಂದರ್ಭದಲ್ಲಿ ಲಾಕ್‌ಡೌನ್‌ ಘೋಷಿಸಿದ ಪರಿಣಾಮ ಈ ಒಂದು ಪತ್ರಿಕೆಯ ಪರೀಕ್ಷೆಯನ್ನು […]